Connect with us

ಅಂತರ ರಾಜ್ಯ

Unemployment-ನಿರುದ್ಯೋಗದ ಭೀಕರತೆ: 187 ಹೋಮ್‌ಗಾರ್ಡ್ ಹುದ್ದೆಗೆ 8,000 ಅಭ್ಯರ್ಥಿಗಳು; ರನ್‌ವೇಯಲ್ಲೇ ನಡೆಯಿತು ಪರೀಕ್ಷೆ..!

Published

on



Ad Widget

Ad Widget

Ad Widget

Ad Widget

ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟು ಭೀಕರ ಸ್ವರೂಪ ಪಡೆದಿದೆ ಎಂಬುದಕ್ಕೆ ಒಡಿಶಾದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಕೇವಲ 187 ಹೋಮ್‌ಗಾರ್ಡ್‌ ಹುದ್ದೆಗಳಿಗಾಗಿ ಬರೋಬ್ಬರಿ 8,000ಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಸ್ಥಳಾವಕಾಶದ ಕೊರತೆಯಿಂದಾಗಿ ವಿಮಾನ ನಿಲ್ದಾಣದ ರನ್‌ವೇಯನ್ನೇ ಪರೀಕ್ಷಾ ಕೇಂದ್ರವನ್ನಾಗಿ ಬಳಸಲಾಗಿದೆ.

Ad Widget

Ad Widget

Ad Widget

Ad Widget

ಭುವನೇಶ್ವರ: ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟು ಭೀಕರ ಸ್ವರೂಪ ಪಡೆದಿದೆ ಎಂಬುದಕ್ಕೆ ಒಡಿಶಾದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಕೇವಲ 187 ಹೋಮ್‌ಗಾರ್ಡ್‌ ಹುದ್ದೆಗಳಿಗಾಗಿ ಬರೋಬ್ಬರಿ 8,000ಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಸ್ಥಳಾವಕಾಶದ ಕೊರತೆಯಿಂದಾಗಿ ವಿಮಾನ ನಿಲ್ದಾಣದ ರನ್‌ವೇಯನ್ನೇ ಪರೀಕ್ಷಾ ಕೇಂದ್ರವನ್ನಾಗಿ ಬಳಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ರನ್‌ವೇ ಮೇಲೆ ಪರೀಕ್ಷೆ:
ಸಂಬಾಲ್ಪುರದ ರನ್‌ವೇ ಮೇಲೆ ಸಾವಿರಾರು ಅಭ್ಯರ್ಥಿಗಳು ನೆಲದ ಮೇಲೆಯೇ ಕುಳಿತು ಪರೀಕ್ಷೆ ಬರೆಯುತ್ತಿರುವ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಬಂದಿದ್ದರಿಂದ ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಡ್ರೋನ್ ಮತ್ತು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಬೇಕಾಯಿತು.

Ad Widget

Ad Widget <> Ad Widget

ಪದವೀಧರರ ಪರದಾಟ:
ಈ ಪರೀಕ್ಷೆಗೆ ಹಾಜರಾದವರಲ್ಲಿ ಎಂ.ಬಿ.ಎ (MBA) ಮತ್ತು ಎಂ.ಸಿ.ಎ (MCA) ನಂತಹ ಉನ್ನತ ಪದವಿ ಪಡೆದ ಯುವಕರೂ ಇರುವುದು ಆಘಾತಕಾರಿ ಸಂಗತಿ. ದಿನಕ್ಕೆ ಕೇವಲ 639 ರೂಪಾಯಿ ಭತ್ತೆ ಸಿಗುವ ಹೋಮ್‌ಗಾರ್ಡ್ ಕೆಲಸಕ್ಕಾಗಿ ಉನ್ನತ ಶಿಕ್ಷಣ ಪಡೆದವರು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸಾಲಿನಲ್ಲಿ ನಿಂತಿರುವುದು ದೇಶದ ಆರ್ಥಿಕ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.



Ad Widget

ರಾಜಕೀಯ ವಾಕ್ಸಮರ:
ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ತೃಣಮೂಲ ಕಾಂಗ್ರೆಸ್ (TMC) ಪಕ್ಷವು ಕೇಂದ್ರ ಮತ್ತು ಒಡಿಶಾದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ. “ಇದು ಯಾವುದೋ ಸಿನಿಮಾದ ದೃಶ್ಯವಲ್ಲ, ಇದು ಬಿಜೆಪಿ ಆಡಳಿತದ ‘ಡಬಲ್ ಇಂಜಿನ್’ ಸರ್ಕಾರದ ಕಟು ವಾಸ್ತವ. ಪದವಿಗಳೇನೋ ಇವೆ, ಆದರೆ ಉದ್ಯೋಗ ಎಲ್ಲಿಯೂ ಇಲ್ಲ. ಇದು ನಿರುದ್ಯೋಗದ ವಿರಾಟ್ ರೂಪದ ನಗ್ನ ಪ್ರದರ್ಶನ” ಎಂದು ಟಿಎಂಸಿ ಟೀಕಿಸಿದೆ.

ಅಂತರ ರಾಜ್ಯ

Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್

Published

on



Ad Widget

Ad Widget

Ad Widget

Ad Widget

ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget

Ad Widget

ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget alt="Ad Widget"/>

Ad Widget

ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.

Ad Widget

Ad Widget <> Ad Widget

ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.



Ad Widget

1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.

Ad Widget

Ad Widget

ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.

ಗಣ್ಯರಿಂದ ಸಂತಾಪ
ನಾನಾ ಪಾಟೇಕ‌ರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.

ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.

ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget

Ad Widget <> Ad Widget

ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.



Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

Continue Reading

ಅಂತರ ರಾಜ್ಯ

Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ

Published

on



Ad Widget

Ad Widget

Ad Widget

Ad Widget

ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್‌ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್‌ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Ad Widget

Ad Widget <> Ad Widget

ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.



Ad Widget

“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.

ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.

ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading