ಕಾರ್ಯಕ್ರಮಗಳು
‘Kalarṇava-2025’-ಪುತ್ತೂರಿನಲ್ಲಿ ವೈಭವದಿಂದ ಜರಗಿದ ‘ಕಲಾರ್ಣವ-2025’ : ಮಾಸ್ಟರ್ ಶಮಂತಕ ಭರತನಾಟ್ಯ ಮತ್ತು ಅಂತರಾಷ್ಟ್ರೀಯ ಬಾಲಕಲಾವಿದೆ ಗಂಗಾ ಶಶಿಧರನ್ ವಯಲಿನ್ ವಾದನಕ್ಕೆ ಫಿದಾ ಆದ ಜನತೆ
ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿ.20ರಂದು ಸಂಜೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಕಲಾರಾಧಕರನ್ನು ಮನಸೂರೆಗೊಳಿಸಿದೆ.
ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿ.20ರಂದು ಸಂಜೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಕಲಾರಾಧಕರನ್ನು ಮನಸೂರೆಗೊಳಿಸಿದೆ.
ಫೆಡರೇಶನ್ ಆಫ್ ಇಂಡಿಯಾದ ಯುವ ಕಲಾ ಪ್ರಶಸ್ತಿ ಪುರಸ್ಕೃತ ಬಾಲ ಕಲಾವಿದ ಮಾಸ್ಟರ್ ಶಮಂತಕ ಇವರಿಂದ ಭರತನಾಟ್ಯ ಪ್ರದರ್ಶನ, ಅದರ ಬಳಿಕ ಅಂತರಾಷ್ಟ್ರೀಯ ಬಾಲ ಕಲಾವಿದೆ ಕುಮಾರಿ ಗಂಗಾ ಶಶಿಧರನ್ ಅವರಿಂದ ವಯಲಿನ್ ವೈಭವ ನಡೆಯಿತು. ಆರಂಭದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಎಲ್ಲಾ ಭಾಷೆಗೆ ಒತ್ತು ಕೊಡುವ ಕೆಲಸ ಸರಕಾರ ಮಾಡುತ್ತಿದೆ:
ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರಾಧಿಕಾರದ ಮೂಲಕ ಕನ್ನಡಕ್ಕೆ ಒತ್ತು ಕೊಡುವ ಕೆಲಸ ಅಗುತ್ತಿದೆ. ಇದರ ಜೊತೆಗೆ ಎಲ್ಲಾ ಭಾಷೆಗೂ ಒತ್ತು ಕೊಡುವ ಕೆಲಸ ಸರಕಾರ ಮಾಡುತ್ತಿದೆ ಎಂದ ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಅಭಿವೃದ್ಧಿ ರೂ. 60 ಕೋಟಿಯಲ್ಲಿ ಆಗಲಿದೆ. ಎಲ್ಲರ ಸಹಕಾರ ಬೇಕೆಂದರು.
ಪ್ರಾಧಿಕಾರ ಗಡಿ ಭಾಗದಲ್ಲಿ ಕನ್ನಡವನ್ನು ಕಾಯುವ ಕೆಲಸ ಮಾಡುತ್ತಿದೆ:
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳು ನಿಂತ ನೀರಾಗದೆ ನಿರಂತರ ಚಲಿಸುತ್ತಿರಬೇಕು. ಇದಕ್ಕೆ ಸೂಕ್ತ ರೀತಿಯ ಪ್ರೋತ್ಸಾಹ ಸಿಗಬೇಕು. ಗಡಿ ಪ್ರದೇಶದಲ್ಲಿ ಕನ್ನಡವನ್ನು ಬೆಳೆಸಿ, ಉಳಿಸುವ ಕೆಲಸವನ್ನು ಪ್ರಾಧಿಕಾರ ಮಾಡುತ್ತಿರುವುದು ಸಂತೋಷದಾಯಕ. ಅಂತಾರಾಷ್ಟ್ರೀಯ ಖ್ಯಾತಿಯ ಬಾಲ ಕಲಾವಿದರಿಬ್ಬರು ಪುತ್ತೂರಿನಲ್ಲಿ ಪ್ರದರ್ಶನ ನೀಡುತ್ತಿರುವುದು ಶ್ಲಾಘನೀಯ ಎಂದ ಅವರು ಯಾವುದೇ ಕಲೆಯಲ್ಲಿ ನಾಟ್ಯ ಸಂಗೀತ ಒಳಗೊಂಡಿರುತ್ತದೆ. ಯುವ ಜನಾಂಗ ನಮ್ಮ ಸಂಸ್ಕೃತಿಯಿಂದ ವಿಮುಖರಾಗುತ್ತಿರುವುದು ನೊಡುತ್ತಿದ್ದೇವೆ. ಅವರನ್ನು ಮತ್ತೆ ನಮ್ಮ ಸಂಸ್ಕೃತಿಯ ಕಡೆ ಕರೆತರುವ ಕೆಲಸ ಇಂತಹ ಕಲೆಗಳ ಮೂಲಕ ಆಗಬೇಕಾಗಿದೆ ಎಂದರು.
ಸಮಿತಿಯಿಂದ ಎಲ್ಲಾ ಭಾರತೀಯ ಸಂಸ್ಕೃತಿಗೆ ಬೆಂಬಲ:
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಮಾತನಾಡಿ ಭರತ ನಾಟ್ಯ, ಶಾಸ್ತ್ರಿಯ ಸಂಗೀತಗಳು ಭಾರತೀಯ ಸಂಸ್ಕೃತಿಯ ಆಧಾರ ಸ್ತಂಭ. ಇಂತಹ ಸಂಸ್ಕೃತಿಗಳಿಗೆ ನಮ್ಮ ಸಮಿತಿಯು ಪೂರ್ಣ ಬೆಂಬಲ ನೀಡುತ್ತದೆ. ಇನ್ನು ಕೆಲವೆ ದಿನಗಳಲ್ಲಿ ದೇವಳದ ಜೀರ್ಣೋದ್ದಾರ ಕಾರ್ಯ ನಡೆಯುತ್ತದೆ. ಅದಕ್ಕೆ ಭಕ್ತರ ಸಹಕಾರ ಅಗತ್ಯವಾಗಿ ಬೇಕು. ಭಕ್ತರ ದುಡ್ಡು ದೇವಸ್ಥಾನದಲ್ಲಿ ಸರಿಯಾಗಿ ವಿನಿಯೋಗ ಆಗಬೇಕು. ಇಲ್ಲಿ ಈಶ್ವರ ಭಟ್ ತಪ್ಪು ಮಾಡಿದರೂ ತಿಳಿಸಬೇಕು. ಒಟ್ಟಿನಲ್ಲಿ ದೇವಸ್ಥಾನದಲ್ಲಿ ಭಕ್ತರ ಒಂದು ರೂಪಾಯಿ ಕೂಡಾ ದೇವರಿಗೆ ಸಲ್ಲಬೇಕೆಂದು ಹೇಳಿದರು.
ಕನ್ನಡ ಉಳಿಸಿ ಬೆಳೆಸುವಲ್ಲಿ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ ನಿರಂತರ:
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸಿ ಮಾತನಾಡಿ 2010 ರಲ್ಲಿ ಕಪ್ರಾಧಿಕಾರ ಹುಟ್ಟಿಕೊಂಡಿದೆ. ಅದರಲ್ಲೂ 6 ಗಡಿ ಪ್ರದೇಶದ ಕನ್ನಡಿಗರ ರಕ್ಷಣೆಗಾಗಿ ಹುಟ್ಟಿದೆ. ಗಡಿ ಭಾಗದ ಸಮಸ್ಯೆಗಳಿಗೆ ಸ್ಪಂದನೆ ಸರಕಾರದಿಂದ ಆಗುತ್ತಿದೆ. ಕೇರಳ, ಗೋವ ತಲಂಗಾಣ, ಗೋವ ಸಹಿತ 6 ರಾಜ್ಯದಲ್ಲಿ ಕನ್ನಡ ಮಾತನಾಡುವವರು ಇದ್ದಾರೆ. ಹೊರ ರಾಜ್ಯದಲ್ಲಿ 64 ಕನ್ನಡ ಶಾಲೆಗಳು ಆರಂಭ. ಕರ್ನಾಟಕದ ಒಳಗಿದ್ದವರು ಕನ್ನಡ ಮಾತನಾಡುವುದು ಸಹಜ. ಆದರೆ ಹೊರಗಿರುವ ಕನ್ನಡಿಗರು ಬಹಳಷ್ಟು ಗಟ್ಟಿಯಾಗಿ ಕನ್ನಡ ಮಾತಮಾಡುತ್ತಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪಿಯುಸಿಯಲ್ಲಿ ಕನ್ನಡ ಕಲಿಸುತ್ತಾರೆ. ಗೋವಾದಲ್ಲಿ 4 ಲಕ್ಷ ಜನ ಕನ್ನಡಿಗರಿದ್ದಾರೆ. ಕೇರಳದಲ್ಲಿ ಸಂಪೂರ್ಣವಾಗಿ ಕನ್ನಡಿಗರು ಕನ್ನಡ ಮಾತನಾಡುತ್ತಾರೆ. ಒಟ್ಟಿನಲ್ಲಿ ಗಡಿ ಭಾಗದಲ್ಲಿ ಕನ್ನಡಕ್ಕೆ ಹೆಚ್ಚು ಒತ್ತುಕೊಡುವ ಕೆಲಸ ಮಾಡುತ್ತಿದ್ದಾರೆ. ಎಲ್ಲೊ ಒಂದು ಕಡೆ ಬೇರೆ ಬಾಷೆಗಳಿಂದಾಗಿ ಕನ್ನಡ ಮರೆಯ ಬಾರದೆಂದು ಮತ್ತು ಕರ್ನಾಟಕದ ಎಲ್ಲಾ ಕಲಾ ತಂಡ ಉಳಿಯಬೇಕು ಹೊರ ತಂಡಗಳು ಉಳಿಯಬೇಕೆಂದು ಪ್ರಾಧಿಕಾರ ಕೆಲಸ ಮಾಡುತ್ತಿದೆ ಎಂದರು.
ಗಡಿ ಭಾಗದ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಿದೆ:
ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಗಡಿ ಅಭಿವೃದ್ಧಿ ಪ್ರಾಧಿಕಾರವು ಗಡಿ ಪ್ರದೇಶದ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಿದೆ. ಮಂಗಳೂರಿನಲ್ಲಿ ತುಳು ಭವನ, ಕಾಸರಗೋಡು ಕನ್ನಡ ಭವನಕ್ಕೆ ಅನುದಾನ ನೀಡಿದ್ದೇವೆ. ಮಂಗಳೂರಿನ ಬ್ಯಾರಿ ಭವನಕ್ಕೂ ಅನುದಾನ ನೀಡಲಾಗಿದೆ ಎಂದರು.ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್, ತಹಸೀಲ್ದಾರ್ ಬಿ ಎಸ್ ಕೂಡಲಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೃತ್ಯೋಪಾಸನಾ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ನಾಡಗೀತೆಯ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಶಾಲಿನಿ ಆತ್ಮಭೂಷನ್ ದಂಪತಿ ಶ್ರೀಗಳನ್ನು ಗೌರವಿಸಲಾಯಿತು. ಅಕಾಡೆಮಿ ಸ್ಥಾಪಕ ಟ್ರಸ್ಟಿ, ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಸ್ವಾಗತಿಸಿ, ಪತ್ರಕರ್ತ ಆತ್ಮಭೂಷಣ್ ವಂದಿಸಿದರು. ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಪ್ರೊ. ವಿಜಯಾ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಆರಂಭದಲ್ಲಿ ಜನಪದ ನೃತ್ಯ ಪ್ರದರ್ಶನ ನಡೆಯಿತು. ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕಲಾವಿದರನ್ನು ಗೌರವಿಸಿ ಶುಭ ಹಾರೈಸಿ ತೆರಳಿದರು.
ಜನಪದ ನೃತ್ಯದಲ್ಲಿ ತಮಟೆ ನೃತ್ಯ, ಜನಪದ ನೃತ್ಯ, ವೀರಗಾಸೆ, ಅಗೋರಿ ನೃತ್ಯ, ಪೂಜಾ ಕುಣಿತ ವಿಶೇಷ ಆಕರ್ಷಣೆಯಾಗಿತ್ತು.
ದೇಶ, ವಿದೇಶಗಳ ಸುಮಾರು 300ಕ್ಕೂ ಅಧಿಕ ವೇದಿಕೆಗಳಲ್ಲಿ ವಯಲಿನ್ ಕಛೇರಿ ನೀಡಿದ ಈ ಮಲಯಾಳಂ ಭಾಷಿಕ ಬಾಲ ಪ್ರತಿಭೆ ಅಂರ‍್ರಾಷ್ಟ್ರೀಯ ಖ್ಯಾತಿಯ ಕೇರಳ ಮಲಪುರಂನ ವಯಲಿನ್ ಕಲಾವಿದೆ ಕುಮಾರಿ ಗಂಗಾ ಶಶಿಧರನ್ ಇದೇ ಮೊದಲ ಬಾರಿಗೆ ಪುತ್ತೂರಿಗೆ ಆಗಮಿಸಿದ್ದರು. ಮಾಸ್ಟರ್ ಶಮಂತಕ ಧಾರವಾಡ ಮೂಲದ ಎಳೆ ಭರತನಾಟ್ಯ ಪ್ರತಿಭೆ. ತಬಲಾ, ಮೃದಂಗ ಹಾಗೂ ಯಕ್ಷಗಾನ ಕಲಾವಿದನಾಗಿಯೂ ಪ್ರಸಿದ್ಧಿ ಪಡೆದಿರುವ ಈ ಕಲಾವಿದರಿಬ್ಬರ ಕಲಾ ಪ್ರದರ್ಶನಕ್ಕೆ ಪುತ್ತೂರಿನ ಕಲಾರಾಧಕರು ಸುಮಾರು ಮೂರುವರೆ ಗಂಟೆಗಳ ತನಕ ಕಲೆಯನ್ನು ಆರಾಧಿಸಿದರು. ಹುಟ್ಟಿದರೆ ಕನ್ನಡ ನಾಡು ಹಾಡನ್ನು ವಯಲಿನ್ ನಲ್ಲಿ ನುಡಿಸಿದ ವೇಳೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಬಾಲ ಪ್ರತಿಭೆಗೆ ಕನ್ನಡ ಪೇಟ, ಶಾಲು ತೊಡಿಸಿ ಗೌರವಿಸಿದರು. ಬಳಿಕ ಗಂಗಾ ಶಶಿಧರನ್ ಅವರು ಕನ್ನಡಕ್ಕೆ ಗೌರವ ಕೊಡುವ ನಿಟ್ಟಿನಲ್ಲಿ ನಿಂತು ವಯಲಿನ್ ಬಾರಿಸಿದರು. ಇಬ್ಬರು ಬಾಲಕಲಾವಿದರಿಗೆ ನೃತ್ಯೋಪಸಾನ ಕಲಾಕೇಂದ್ರದ ವಿದ್ಯಾರ್ಥಿನಿ ಧನ್ಯಶ್ರೀ ಅವರು ರಚಿಸಿದ ಚಿತ್ರಪಟವನ್ನು ಕೊಡುಗೆಯಾಗಿ ನೀಡಿದರು.
ತುಳು ಭಾಷೆಗೆ ಸಹಕಾರ: ಶಾಸಕ ಮನವಿ
ಕರ್ನಾಟಕದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಆಂಧ್ರಪ್ರದೇಶದಲ್ಲಿ 2ನೇ ಭಾಷಾ ಪ್ರಕ್ರಿಯೆ ಮಾಡಲಾದ ವಿಧಾನವನ್ನು ಅಧ್ಯಯನ ಮಾಡಲು ಪರಿಣಿತರ ತಂಡ ಕಳುಹಿಸಲಾಗಿದ್ದು, ಕೊನೆಯ ಹಂತದಲ್ಲಿದೆ. ಗಡಿನಾಡಿನ ತುಳು ಭಾಷೆಗೆ ಮಾನ್ಯತೆ ದೊರಕಿಸುವಲ್ಲಿ ಸರಕಾರದ ಮಟ್ಟದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರವೂ ಸಹಕರಿಸಬೇಕು. -ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು
ಪುತ್ತೂರಿನಲ್ಲಿ ಕನ್ನಡ ಭವನ ನಿರ್ಮಿಸಲು ಶಾಸಕರ ಆಗ್ರಹ- ಪ್ರಾಧಿಕಾರದ ಅಧ್ಯಕ್ಷರಿಂದ ಭರವಸೆ
ಪುತ್ತೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ 9 ಸೆಂಟ್ಸ್ ಜಾಗ ಹೊಂದಿದೆ. ಇದರಲ್ಲಿ ಕನ್ನಡ ಭವನ ನಿರ್ಮಿಸಲು 2 ಕೋಟಿ ರೂ.ಅನುದಾನವನ್ನು ಪ್ರಾಧಿಕಾರ ನೀಡಬೇಕು ಎಂದವರು ಒತ್ತಾಯಿಸಿದರು. ಅದೇ ರೀತಿ ಪರ್ಲಡ್ಕದಲ್ಲಿರುವ ಡಾ. ಕೆ. ಶಿವರಾಮ ಕಾರಂತರ ಬಾಲವನ ಅಭಿವೃದ್ಧಿಗೆ 2 ಕೋಟಿ ರೂ. ನೀಡಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭ ಪುತ್ತೂರು ಕನ್ನಡ ಭವನ ನಿರ್ಮಣಕ್ಕೆ ಅನುದಾನ ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರಿಗೆ ಮನವಿ ಸಲ್ಲಿಸಿದರು. ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇಬಿನಮರದ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಮುಖ್ಯಮಂತ್ರಿಯವರು ಶಾಸಕರ ಮಾತು ಮಾತ್ರ ಕೇಳುವುದು. ಶಾಸಕರ ಮಾತಿಗೆ ಗೌರವೂ ಇದೆ. ಹಾಗಾಗಿ ಅಶೋಕ್ ರೈ ಅವರ ಮೂಲಕ ನಾನು ಪ್ರಾಧಿಕಾರಕ್ಕೆ ಹೆಚ್ಚು ಅನುದಾನ ಕೊಡುವುದಾದರೆ ಇನ್ನಷ್ಟು ಕೆಲಸ ಮಾಡಬಹುದು. ಅದರೂ ನಿಮ್ಮ ಮನವಿಗೆ ನಾನು ಕೈಲಾದ ಮಟ್ಟಿಗೆ ಅನುದಾನದ ಇತಿಮಿತಿ ನೋಡಿ ಅನುದಾನ ನೀಡುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು. ಇದರ ಜೊತೆಗೆ ಕೇರಳದಲ್ಲಿ ಎಸ್ಟಿ ಸಮುದಾಯ ಕರ್ನಾಟಕಕ್ಕೆ ಬರುವಾಗ ಅವರಿಗೆ ಮೀಸಲಾತಿಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂದು ಶಾಸಕರು ಉಲ್ಲೇಖಿಸಿದ ವಿಚಾರಕ್ಕೆ ಸಂಬಂಧಿಸಿ ಗಡಿ ಭಾಗದ ಕನ್ನಡಿಗರನ್ನು ಸೇರಿಸಿ ಸಭೆ ನಡೆಸಿದ್ದು, ಇದರ ಜೊತೆಗೆ 19 ಜಿಲ್ಲೆಗೆ ನೋಡೆಲ್ ಆಫೀಸರ್ ಗಳನ್ನು ನೇಮಕ ಮಾಡಿ. ಅದರ ಮೂಲಕ ಮುಂದೆ ಯಾವುದೆ ಸಮಸ್ಯೆ ಆಗದಂತೆ ಆದೇಶವನ್ನೂ ನೀಡಲಾಗಿದೆ. ಗಡಿ ಭಾಗದ ಅಧಿಕಾರಿ ವರ್ಗದವರು ತೊಂದರೆ ಕೊಡಬಾರದು ಎಂದು ಕಾನೂನು ಪುಸ್ತಕವನ್ಬು ಕನ್ನಡದಲ್ಲಿ ಪ್ರಕಟಿಸಿ ಎಲ್ಲಾ ಸಂಘ ಸಂಸ್ಥೆಗಳಿಗೆ ನೀಡುತ್ತೇವೆ ಎಂದು ತಿಳಿಸಿದರು
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
ಮಂಗಳೂರು18 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್16 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ16 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಅಪರಾಧ21 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಮಂಗಳೂರು17 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಸ್ಥಳೀಯ23 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್23 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ18 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















