ಶಿಕ್ಷಣ
Bannur-ಬನ್ನೂರು: ಕಜೆ ಬೇರಿಕೆ ಅಂಗನವಾಡಿಯಲ್ಲಿ ಸಂಭ್ರಮದ ‘ಮಕ್ಕಳ ಹಬ್ಬ-ಬಾಲಮೇಳ’
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ ಬೇರಿಕೆ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಹಾಗೂ ದಾನಿಗಳ ಸಂಯುಕ್ತ ಆಶ್ರಯದಲ್ಲಿ ಡಿ. 22ರ ಭಾನುವಾರದಂದು ‘ಮಕ್ಕಳ ಹಬ್ಬ – ಬಾಲಮೇಳ’ ಕಾರ್ಯಕ್ರಮವು ಅತ್ಯಂತ ಸಡಗರದಿಂದ ನಡೆಯಿತು.
ಬನ್ನೂರು: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ ಬೇರಿಕೆ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಹಾಗೂ ದಾನಿಗಳ ಸಂಯುಕ್ತ ಆಶ್ರಯದಲ್ಲಿ ಡಿ. 22ರ ಭಾನುವಾರದಂದು ‘ಮಕ್ಕಳ ಹಬ್ಬ – ಬಾಲಮೇಳ’ ಕಾರ್ಯಕ್ರಮವು ಅತ್ಯಂತ ಸಡಗರದಿಂದ ನಡೆಯಿತು.
ಗಣ್ಯರ ಉಪಸ್ಥಿತಿ ಮತ್ತು ಹಾರೈಕೆ:
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷ ಶೀನಪ್ಪ ಕುಲಾಲ್ ಬದಿಯಡ್ಕ, ಪಂಚಾಯತ್ ಸದಸ್ಯ ಶ್ರೀನಿವಾಸ ಪೆರ್ವೋಡಿ, ಖ್ಯಾತ ವಕೀಲ ಮನೋಹರ್ ಆರ್ವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಯಶೋಧ, ಸ್ವಚ್ಛತಾ ರಾಯಬಾರಿ ಶೀನಶೆಟ್ಟಿ ಹಾಗೂ ಕೃಷ್ಣ ಮೂಲ್ಯ, ಬೀರಿಗ ಅಂಗನವಾಡಿ ಕಾರ್ಯಕರ್ತೆ ಅರುಣಾ ಡಿ. ಮತ್ತು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಜಯಶ್ರೀ ಅವರು ಪುಟಾಣಿ ಮಕ್ಕಳ ಪ್ರತಿಭೆಗೆ ಸಾಕ್ಷಿಯಾಗಿ ಶುಭ ಹಾರೈಸಿದರು.

ಸಾಂಸ್ಕೃತಿಕ ವೈಭವ ಹಾಗೂ ಸನ್ಮಾನ:
ಬಾಲಮೇಳದ ಅಂಗವಾಗಿ ಪುಟಾಣಿ ಮಕ್ಕಳಿಂದ, ಪೋಷಕರಿಂದ, ಸಂಘದ ಸದಸ್ಯರಿಂದ ಹಾಗೂ ಹಳೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡು ಜನಮನ ಗೆದ್ದವು. ಇದೇ ಸಂದರ್ಭದಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಿ ನಿವೃತ್ತರಾದ ಆರೋಗ್ಯ ಕಾರ್ಯಕರ್ತೆ ಜಯಂತಿ ಹಾಗೂ ನಿವೃತ್ತ ಆಶಾ ಕಾರ್ಯಕರ್ತೆಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಅಂಗನವಾಡಿಗೆ ಕೊಡುಗೆ:
ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರು ಅಂಗನವಾಡಿಗೆ ಟೇಬಲ್‌ಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಮಾದರಿಯಾದರು. ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು, ಶ್ರೀಕೃಷ್ಣ ಯುವಕ ಮಂಡಲದ ಸದಸ್ಯರು, ಸದಾಶಿವ ಕಾಲೋನಿ ಸದಸ್ಯರು, ಶ್ರೀ ದುರ್ಗಾ ಭಜನಾ ಮಂದಿರದ ಸದಸ್ಯರು, ಬಾಲವಿಕಾಸ ಸಮಿತಿ ಸದಸ್ಯರಾದ ಸತೀಶ್ ಕುಲಾಲ್ ಬದಿಯಡ್ಕ, ಮೆಲ್ವಿನ್ ಮಸ್ಕರೇನಸ್ ಹಾಗೂ ಊರಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಭವ್ಯ ವಿಶ್ವನಾಥ್ ಅತಿಥಿಗಳನ್ನು ಸ್ವಾಗತಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಜಯಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆ ರೇಖಾ ವರದಿ ವಾಚಿಸಿದರು. ಕಾವ್ಯ ರಾಜೇಶ್ ಹಾಗೂ ಮಮತಾ ಲೋಕೇಶ್ ಬಹುಮಾನ ವಿಜೇತರ ಪಟ್ಟಿಯನ್ನು ಓದಿದರು. ಗಿರೀಶ್ ಕುಲಾಲ್ ಬದಿಯಡ್ಕ ಹಾಗೂ ರಮೇಶ್ ಅದೆಂಚಿಲಡ್ಕ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ಮಾಲತಿ ಸಹಕರಿಸಿದರು. ಕೊನೆಯಲ್ಲಿ ಗಿರೀಶ್ ಕುಲಾಲ್ ಬದಿಯಡ್ಕ ಧನ್ಯವಾದ ಸಮರ್ಪಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಮಂಗಳೂರು10 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ13 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ15 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್15 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್8 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು9 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಸಿನೆಮಾ14 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ8 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?


















