ಸುಳ್ಯ
Sullia-ಸುಳ್ಯ: 6 ತಿಂಗಳಿಂದ ವೇತನ ಬಾಕಿ : ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೀನಾಮೆ
ಸರ್ಕಾರದಿಂದ ಕಳೆದ ಆರು ತಿಂಗಳಿಂದ ಸರಿಯಾಗಿ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಸುಳ್ಯ: ಸರ್ಕಾರದಿಂದ ಕಳೆದ ಆರು ತಿಂಗಳಿಂದ ಸರಿಯಾಗಿ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಡಾ. ಕುಲದೀಪ್ ಎಂ.ಡಿ. ರಾವ್ ಅವರು ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ, ಕಳೆದ ಆರು ತಿಂಗಳಿಂದ ಅವರಿಗೆ ವೇತನ ಬಿಡುಗಡೆಯಾಗಿಲ್ಲ. ಇದರಿಂದಾಗಿ ವೈಯಕ್ತಿಕ ಜೀವನ ನಿರ್ವಹಣೆಗೆ ತೀವ್ರ ತೊಂದರೆಯಾಗುತ್ತಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬೇಸತ್ತು ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ (DHO) ರಾಜೀನಾಮೆ ಸಲ್ಲಿಸಿದ್ದಾರೆ.
ವ್ಯಾಪಕ ಆಕ್ರೋಶ:
ರಾಜ್ಯದ ವಿವಿಧೆಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ಅನೇಕ ಗುತ್ತಿಗೆ ವೈದ್ಯರಿಗೆ ಸರ್ಕಾರ ಕಳೆದ ಹಲವು ತಿಂಗಳಿಂದ ಸಂಬಳ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ. ಈ ನೌಕರರ ವೇತನ ವಿಳಂಬದ ಬಗ್ಗೆ ಈಗಾಗಲೇ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದ್ದು, ವಿರೋಧ ಪಕ್ಷಗಳು ಈ ವಿಚಾರವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿವೆ.
ಸೇವೆಯಲ್ಲಿರುವ ವೈದ್ಯರೇ ಆರ್ಥಿಕ ಅಡಚಣೆಯಿಂದ ರಾಜೀನಾಮೆ ನೀಡುತ್ತಿರುವುದು ಗ್ರಾಮೀಣ ಭಾಗದ ಆರೋಗ್ಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕಿದೆ ಎಂಬ ಆಗ್ರಹ ಕೇಳಿಬಂದಿದೆ.
ಸುಳ್ಯ
Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.
ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.
ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
-
Uncategorized20 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized22 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized21 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized22 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized24 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
ಅಂತರ ರಾಜ್ಯ6 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized21 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಬಿಗ್ ನ್ಯೂಸ್6 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















