ಕಾರ್ಯಕ್ರಮಗಳು
Puttur-ಪುತ್ತೂರು ಜಿ.ಎಲ್ ವನ್ ಮಾಲ್ ಉತ್ಸವ ಪ್ರಯುಕ್ತ ಡಿ.28ರಂದು ಚಿತ್ರಕಲಾ ಸ್ಪರ್ಧೆ : ದಿವ್ಯಾಂಗ ಕಲಾವಿದರ ವಿಭಾಗ ಸೇರಿ ವಿವಿಧ ವಿಭಾಗಗಳಿಗೆ ಅವಕಾಶ
ಲಾ ಆಸಕ್ತರಿಗೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಪುತ್ತೂರಿನಲ್ಲಿ ಉತ್ತಮ ಅವಕಾಶವೊಂದು ಒದಗಿ ಬಂದಿದೆ. GL ONE ರೋಟರಿ, ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಜಿಲ್ ಮಾಲ್ ಉತ್ಸವ ಪ್ರಯುಕ್ತ ಬೃಹತ್ ‘ಚಿತ್ರಕಲಾ ಸ್ಪರ್ಧೆ’ಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ಡಿಸೆಂಬರ್ 28, ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಪುತ್ತೂರಿನ ಜಿ.ಎಲ್. ವನ್ ಮಾಲ್ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ.
ಪುತ್ತೂರು: ಕಲಾ ಆಸಕ್ತರಿಗೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಪುತ್ತೂರಿನಲ್ಲಿ ಉತ್ತಮ ಅವಕಾಶವೊಂದು ಒದಗಿ ಬಂದಿದೆ. GL ONE ರೋಟರಿ, ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಜಿಲ್ ಮಾಲ್ ಉತ್ಸವ ಪ್ರಯುಕ್ತ ಬೃಹತ್ ‘ಚಿತ್ರಕಲಾ ಸ್ಪರ್ಧೆ’ಯನ್ನು ಆಯೋಜಿಸಲಾಗಿದೆ.
ಈ ಸ್ಪರ್ಧೆಯು ಡಿಸೆಂಬರ್ 28, ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಪುತ್ತೂರಿನ ಜಿ.ಎಲ್. ವನ್ ಮಾಲ್ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ.
ವಿವಿಧ ವಿಭಾಗಗಳು:
>ಪ್ರಾಥಮಿಕ, ಪ್ರೌಢ ಶಾಲಾ, ಪಿಯುಸಿ, ಪದವಿ ಕಾಲೇಜು, ಸ್ನಾತಕೋತ್ತರ ಕಾಲೇಜು
>ಸಾರ್ವಜನಿಕ ವಿಭಾಗ ಹಾಗೂ ದಿವ್ಯಾಂಗ ಕಲಾವಿದರಿಗೆ
> ವಿಶೇಷ ವಿಭಾಗ (15 ವರ್ಷ ಮೇಲ್ಪಟ್ಟು)
ಸ್ಪರ್ಧೆಯ ವಿಷಯಗಳು:
‘ರಸ್ತೆ ಸುರಕ್ಷತೆ’, ‘ನಮ್ಮೂರ ಜಾತ್ರೆ’ ಅಥವಾ ‘ಸ್ವಚ್ಛನಗರ’ – ಈ ಮೂರು ವಿಷಯಗಳಲ್ಲಿ ಒಂದನ್ನು ಸ್ಪರ್ಧಾ ಸ್ಥಳದಲ್ಲಿಯೇ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಗುವುದು.
ಬಹುಮಾನಗಳು:
ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಜೊತೆಗೆ ಎಲ್ಲಾ ಸ್ಪರ್ಧಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು.
ನೋಂದಣಿ ಪ್ರಕ್ರಿಯೆ:
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಡಿಸೆಂಬರ್ 26ರೊಳಗೆ ಗೂಗಲ್ ಫಾರ್ಮ್ (Google Form) ಮೂಲಕ ಕಡ್ಡಾಯವಾಗಿ ಹೆಸರು
ನೋಂದಾಯಿಸಿಕೊಳ್ಳಬೇಕು.
ಸ್ಪರ್ಧಾರ್ಥಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಸ್ಥಳದಲ್ಲಿ ಹಾಜರಿರಬೇಕು ಎಂದು ಸಂಘಟಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 94485 46663 ಅನ್ನು ಸಂಪರ್ಕಿಸಬಹುದು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
ಸ್ಥಳೀಯ
Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ
ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.
ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
-
ಶಿಕ್ಷಣ10 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ9 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಸ್ಥಳೀಯ9 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ8 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ9 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ9 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ9 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















