Connect with us

ಸ್ಥಳೀಯ

Chitradurga-ಚಿತ್ರದುರ್ಗ: ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಖಾಸಗಿ ಬಸ್; 9 ಮಂದಿ ಸಜೀವ ದಹನ

Published

on

Ad Widget

Ad Widget

Ad Widget

Ad Widget

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವರಗೊಂಡನಹಳ್ಳಿ ಬಳಿ ಗುರುವಾರ (ಡಿ.25) ನಸುಕಿನ ಜಾವ 2 ಗಂಟೆಯ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಜೀವ ದಹನವಾಗಿದ್ದಾರೆ.

Ad Widget

Ad Widget

Ad Widget

Ad Widget

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವರಗೊಂಡನಹಳ್ಳಿ ಬಳಿ ಗುರುವಾರ (ಡಿ.25) ನಸುಕಿನ ಜಾವ 2 ಗಂಟೆಯ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಜೀವ ದಹನವಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ, ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ಹಾರಿ ಬಂದು ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿ ಉರಿದಿದೆ. ಈ ಘೋರ ದುರಂತದಲ್ಲಿ ಲಾರಿ ಚಾಲಕ ಕುಲದೀಪ್ ಹಾಗೂ ಬಸ್‌ನಲ್ಲಿದ್ದ ಎಂಟು ಪ್ರಯಾಣಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad Widget

Ad Widget <> Ad Widget

ಅಪಘಾತದಲ್ಲಿ ಸುಮಾರು 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಿರಿಯೂರು ಹಾಗೂ ಶಿರಾದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಗಂಭೀರ ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಬಸ್‌ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಕೆಲವು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ಹೊರ ಜಿಗಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟ್ರಾಫಿಕ್ ಜಾಮ್:
ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 30 ಕಿ.ಮೀ ವರೆಗೆ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಶಿರಾವರೆಗೂ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು.

Ad Widget

Ad Widget

ಅಧಿಕಾರಿಗಳ ಭೇಟಿ:
ವಿಷಯ ತಿಳಿದ ತಕ್ಷಣ ಪೂರ್ವ ವಲಯ ಐಜಿ ರವಿಕಾಂತೇ ಗೌಡ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. “ಪ್ರಾಥಮಿಕ ತನಿಖೆಯ ಪ್ರಕಾರ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಅಪಘಾತದ ವೇಳೆ ಪಕ್ಕದಲ್ಲೇ ಇದ್ದ ಶಾಲಾ ಪ್ರವಾಸದ ಬಸ್ಸಿಗೆ ಯಾವುದೇ ಹಾನಿಯಾಗಿಲ್ಲ,” ಎಂದು ಐಜಿ ರವಿಕಾಂತೇ ಗೌಡ ತಿಳಿಸಿದ್ದಾರೆ.

ದುರಂತಕ್ಕೀಡಾದ ಬಸ್‌ನಲ್ಲಿ ಒಟ್ಟು 32 ಮಂದಿ ಪ್ರಯಾಣಿಕರಿದ್ದರು. ಇವರಲ್ಲಿ ಗೋಕರ್ಣದ 25 ಮಂದಿ ಸೇರಿದ್ದರು ಎಂದು ತಿಳಿದುಬಂದಿದೆ. ಸದ್ಯ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಗ್ನಿಶಾಮಕ ದಳ ಮತ್ತು ಎಫ್‌ಎಸ್‌ಎಲ್ ಅಧಿಕಾರಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್‌ ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!