ನಡೆದಿದ್ದೇನು?ಜಯನಗರದ 7ನೇ ಕ್ರಾಸ್‌ನ ನಿವಾಸಿಯೊಬ್ಬರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ವಿದ್ಯಾರ್ಥಿ ಎಂದಿನಂತೆ ಶಾಲೆಗೆ […]" /> ನಡೆದಿದ್ದೇನು?ಜಯನಗರದ 7ನೇ ಕ್ರಾಸ್‌ನ ನಿವಾಸಿಯೊಬ್ಬರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ವಿದ್ಯಾರ್ಥಿ ಎಂದಿನಂತೆ ಶಾಲೆಗೆ […]"> Cobra-ಶಾಲಾ ವಿದ್ಯಾರ್ಥಿಯ ಶೂನಲ್ಲಿ ಅವಿತಿದ್ದ 5 ಅಡಿ ಉದ್ದದ ನಾಗರಹಾವು..! - Nikhara News | Kannada News Website
Connect with us

ಸ್ಥಳೀಯ

Cobra-ಶಾಲಾ ವಿದ್ಯಾರ್ಥಿಯ ಶೂನಲ್ಲಿ ಅವಿತಿದ್ದ 5 ಅಡಿ ಉದ್ದದ ನಾಗರಹಾವು..!

Published

on

Ad Widget

Ad Widget

Ad Widget

Ad Widget

ಶಾಲೆಗೆ ಹೊರಡಲು ಸಿದ್ಧವಾಗುತ್ತಿದ್ದ ವಿದ್ಯಾರ್ಥಿಯೊಬ್ಬನ ಶೂನಲ್ಲಿ ಬರೋಬ್ಬರಿ ಐದು ಅಡಿ ಉದ್ದದ ನಾಗರಹಾವು ಪತ್ತೆಯಾಗಿರುವ ಆತಂಕಕಾರಿ ಘಟನೆ ಬುಧವಾರ (ಡಿ.24) ನಗರದ ಜಯನಗರ ‘ಎ’ ಬ್ಲಾಕ್‌ನಲ್ಲಿ ಸಂಭವಿಸಿದೆ.

Ad Widget

Ad Widget

Ad Widget

Ad Widget

ದಾವಣಗೆರೆ: ಶಾಲೆಗೆ ಹೊರಡಲು ಸಿದ್ಧವಾಗುತ್ತಿದ್ದ ವಿದ್ಯಾರ್ಥಿಯೊಬ್ಬನ ಶೂನಲ್ಲಿ ಬರೋಬ್ಬರಿ ಐದು ಅಡಿ ಉದ್ದದ ನಾಗರಹಾವು ಪತ್ತೆಯಾಗಿರುವ ಆತಂಕಕಾರಿ ಘಟನೆ ಬುಧವಾರ (ಡಿ.24) ನಗರದ ಜಯನಗರ ‘ಎ’ ಬ್ಲಾಕ್‌ನಲ್ಲಿ ಸಂಭವಿಸಿದೆ.

Ad Widget

Ad Widget alt="Ad Widget"/>

Ad Widget

ನಡೆದಿದ್ದೇನು?
ಜಯನಗರದ 7ನೇ ಕ್ರಾಸ್‌ನ ನಿವಾಸಿಯೊಬ್ಬರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ವಿದ್ಯಾರ್ಥಿ ಎಂದಿನಂತೆ ಶಾಲೆಗೆ ತೆರಳಲು ತನ್ನ ಶೂ ಹಾಕಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಶೂನೊಳಗೆ ಯಾವುದೋ ಅಲುಗಾಡುತ್ತಿರುವುದನ್ನು ಗಮನಿಸಿದ ಬಾಲಕ, ತಕ್ಷಣವೇ ಶೂ ಬಿಟ್ಟು ದೂರ ಸರಿದಿದ್ದಾನೆ. ಸೂಕ್ಷ್ಮವಾಗಿ ಗಮನಿಸಿದಾಗ ಅದರೊಳಗೆ ದೊಡ್ಡ ನಾಗರಹಾವು ಅವಿತಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ವಿದ್ಯಾರ್ಥಿಯ ಕಿರುಚಾಟ ಕೇಳಿ ಮನೆಯವರು ಧಾವಿಸಿ ಬಂದಿದ್ದು, ಹಾವನ್ನು ಕಂಡು ಗಾಬರಿಗೊಂಡಿದ್ದಾರೆ. ತಕ್ಷಣವೇ ಮನೆಯವರೆಲ್ಲರೂ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವಿನ ರಕ್ಷಣೆ:
ಸ್ಥಳೀಯರು ತಕ್ಷಣವೇ ಖ್ಯಾತ ಉರಗ ರಕ್ಷಕ ‘ಸ್ನೇಕ್ ಬಸವರಾಜ್’ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಬಸವರಾಜ್ ಅವರು ಅತ್ಯಂತ ಜಾಗರೂಕತೆಯಿಂದ ಶೂನಲ್ಲಿದ್ದ ಸುಮಾರು 5 ಅಡಿ ಉದ್ದದ ನಾಗರಹಾವನ್ನು ಹಿಡಿದು ಚೀಲಕ್ಕೆ ಹಾಕಿದ್ದಾರೆ. ನಂತರ ಹಾವನ್ನು ಜನವಸತಿ ಇಲ್ಲದ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.

Ad Widget

Ad Widget

ವಿದ್ಯಾರ್ಥಿ ಶೂ ಹಾಕಿಕೊಳ್ಳುವ ಮುನ್ನ ಹಾವನ್ನು ಗಮನಿಸಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಮಳೆಗಾಲ ಅಥವಾ ಚಳಿಗಾಲದ ಸಮಯದಲ್ಲಿ ಹಾವುಗಳು ಬೆಚ್ಚಗಿನ ಜಾಗ ಹುಡುಕಿ ಶೂ ಅಥವಾ ಮೂಲೆಗಳಲ್ಲಿ ಅಡಗಿರುತ್ತವೆ, ಆದ್ದರಿಂದ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಈ ಮೂಲಕ ತಿಳಿಯುತ್ತದೆ.

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್‌ ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!