ಶಿಕ್ಷಣ
Talent Festival-2025-ಮಾಣಿಯ ಬಾಲವಿಕಾಸ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಪ್ರತಿಭಾ ಕಲೋತ್ಸವ-2025
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮಾಣಿ ಸ್ಥಳೀಯ ಸಂಸ್ಥೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿ ಇವರ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಲೋತ್ಸವ–2025 ಡಿಸೆಂಬರ್ 23ರಂದು ಬಾಲವಿಕಾಸ ಆಡಿಟೋರಿಯಂನಲ್ಲಿ ಅದ್ಧೂರಿಯಾಗಿ ನಡೆಯಿತು.
ವಿಟ್ಲ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮಾಣಿ ಸ್ಥಳೀಯ ಸಂಸ್ಥೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿ ಇವರ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಲೋತ್ಸವ–2025 ಡಿಸೆಂಬರ್ 23ರಂದು ಬಾಲವಿಕಾಸ ಆಡಿಟೋರಿಯಂನಲ್ಲಿ ಅದ್ಧೂರಿಯಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರೂ ಹಾಗೂ ಬಾಲವಿಕಾಸ ಟ್ರಸ್ಟ್ ಅಧ್ಯಕ್ಷರೂ ಆದ ಪ್ರಹ್ಲಾದ ಶೆಟ್ಟಿ ಜೆ. ವಹಿಸಿದ್ದರು. ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ಭುವನೇಶ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಂಟ್ವಾಳ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ಪ್ರತಿಭಾ ಕಲೋತ್ಸವ ಸಮಿತಿ–2025ರ ಸಂಚಾಲಕ ಬದಿಗುಡ್ಡೆ ಜಗನ್ನಾಥ ಚೌಟ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕಿರಣ್ ಕುಮಾರ್ ಉಪಸ್ಥಿತರಿದ್ದು ಕಾರ್ಯಕ್ರಮದ ಸುವ್ಯವಸ್ಥಿತ ಆಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಶ್ಯಾಮಲಾ ಸ್ವಾಗತಿಸಿ, ಜಿಲ್ಲಾ ತರಬೇತಿ ಆಯುಕ್ತ ಪ್ರತೀಮ್ ಕುಮಾರ್ ವಂದಿಸಿದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮದ ನಿರೂಪಣೆಯನ್ನು ಮಾಣಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಬಾಲಕೃಷ್ಣ ಆಳ್ವ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೈಡ್ಸ್ ವಿಭಾಗದ ಜಿಲ್ಲಾ ಆಯುಕ್ತೆ ವಿಮಲ ರಂಗಯ್ಯ, ಜಿಲ್ಲಾ ತರಬೇತಿ ಆಯುಕ್ತರಾದ ಶಾಂತಾರಾಮ ಪ್ರಭು, ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಜಯವಂತಿ ಸೋನ್ಸ್, ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ದೇವರಮಜಲು, ಮಾಣಿ ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಇಬ್ರಾಹಿಂ ಹಾಗೂ ಕಾರ್ಯದರ್ಶಿ ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಶಾಲಾ -ಕಾಲೇಜುಗಳಿಂದ 1200 ಕಬ್ಸ್, ಬುಲ್ ಬುಲ್ಸ್, ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ದಿನ ನಡೆದ ಒಟ್ಟು 56 ಸ್ಪರ್ಧೆಗಳಿಗೆ ವಿವಿಧ ರಂಗಗಳಲ್ಲಿ ಪರಿಣಿತಿ ಪಡೆದ 36 ಅರ್ಹ ತೀರ್ಪುಗಾರರನ್ನು ಆಹ್ವಾನಿಸಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಕಾರ್ಯಕ್ರಮದ ಕೊನೆಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ್ದ ಶಾಲೆಗಳಿಗೆ ವಿಭಾಗವಾರು ಸಮಗ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಲೋತ್ಸವಕ್ಕೆ ಕಳೆ ತುಂಬಿದ ಪಿ. ಜಿ . ಆರ್. ಸಿಂಧ್ಯ ಆಗಮನ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಆಯುಕ್ತರಾದ ಪಿ. ಜಿ. ಆರ್ ಸಿಂಧ್ಯರವರು ಕಾರ್ಯಕ್ರಮಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಬಾಲವಿಕಾಸ ಶಾಲೆಯು ಅಳವಡಿಸಿಕೊಂಡ ತಂತ್ರಜ್ಞಾನದ ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿದರು. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಅಳವಡಿಸಿಕೊಂಡ RFID ಗೇಟ್ , ಕಲೋತ್ಸವದ ವಿಜೇತ ವಿದ್ಯಾರ್ಥಿಗಳಿಗೆ ನೀಡಿದ ಸ್ಕೌಟ್ಸ್ – ಗೈಡ್ ಲೋಗೋ ಆಕಾರದ ಅಚ್ಚಿನ ಪದಕಗಳು, ಸ್ಪರ್ಧಾ ವಿಜೇತರ ಭಾವಚಿತ್ರ ಸಮೇತವಾಗಿ ಮುದ್ರಣಗೊಳ್ಳುತ್ತಿದ್ದ ಪ್ರಶಸ್ತಿ ಪತ್ರಗಳನ್ನು ಬಹುವಾಗಿ ಮೆಚ್ಚಿಕೊಂಡರು. ಬಾಲವಿಕಾಸ ಶಾಲೆಯನ್ನು ಸಂಪೂರ್ಣವಾಗಿ ವೀಕ್ಷಿಸಿದ ಅವರು ಬಾಲವಿಕಾಸ ಶಾಲೆಯು ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ರು. ಈ ಸಂದರ್ಭದಲ್ಲಿ ಪಿ. ಜಿ. ಆರ್ ಸಿಂಧ್ಯರವರನ್ನು ಬಾಲವಿಕಾಸ ವಿದ್ಯಾಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ19 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು17 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು15 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ19 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ19 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ18 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ18 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ20 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















