ಉಡುಪಿ
Robbery-ಹೆಜಮಾಡಿ ಗರಡಿ ನೇಮೋತ್ಸವದಲ್ಲಿ ಮೂವರು ಕಳ್ಳಿಯರ ಕರಾಮತ್ತು: ಲಕ್ಷಾಂತರ ಮೌಲ್ಯದ ಬಂಗಾರ ಕಳವು – ಸಿಸಿ ಟಿವಿಯಲ್ಲಿ ಸೆರೆಯಾಯಿತು ಕಳ್ಳಿಯರ ಮುಖ
ಧಾರ್ಮಿಕ ಕಾರ್ಯಕ್ರಮದ ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಮೂವರು ಮಹಿಳಾ ಕಳ್ಳಿಯರು, ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಅಪಹರಿಸಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ನಡೆದಿದೆ.
ಉಡುಪಿ: ಧಾರ್ಮಿಕ ಕಾರ್ಯಕ್ರಮದ ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಮೂವರು ಮಹಿಳಾ ಕಳ್ಳಿಯರು, ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಅಪಹರಿಸಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ನಡೆದಿದೆ.
ಘಟನೆಯ ವಿವರ:
ಹೆಜಮಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನೇಮೋತ್ಸವ ಜರುಗುತ್ತಿದ್ದ ವೇಳೆ ಈ ಕಳ್ಳತನ ನಡೆದಿದೆ. ಸ್ಥಳೀಯ ನಿವಾಸಿಯಾದ ಕಮಲ ಎಂಬ ವೃದ್ಧೆಯು ಪೂಜೆಯಲ್ಲಿ ಪಾಲ್ಗೊಂಡಿದ್ದಾಗ, ಮೂವರು ಮಹಿಳಾ ಕಳ್ಳಿಯರು ಆಕೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು, ಗಂಟೆ ಬಾರಿಸುವ ನೆಪದಲ್ಲಿ ಅವರ ಗಮನ ಬೇರೆಡೆಗೆ ಸೆಳೆದಿದ್ದಾರೆ. ಈ ಗಡಿಬಿಡಿಯಲ್ಲೇ ವೃದ್ಧೆಯ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳಿಯರ ಮುಖ:
ಕಳ್ಳಿಯರ ಈ ಇಡೀ ಕರಾಮತ್ತು ಗರಡಿಯ ಸಿಸಿ ಕ್ಯಾಮೆರಾದಲ್ಲಿ ಅತ್ಯಂತ ಸ್ಪಷ್ಟವಾಗಿ ದಾಖಲಾಗಿದೆ. ಮೂವರು ಮಹಿಳೆಯರು ವ್ಯವಸ್ಥಿತವಾಗಿ ಯೋಜನೆ ರೂಪಿಸಿ ವೃದ್ಧೆಯನ್ನು ಮುತ್ತುವರಿಯುವ ಮತ್ತು ಸರ ಎಗರಿಸುವ ದೃಶ್ಯಗಳು ಈಗ ಪೊಲೀಸರ ಕೈ ಸೇರಿವೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಆರೋಪಿ ಮಹಿಳೆಯರ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ತಮ್ಮ ಒಡವೆಗಳ ಬಗ್ಗೆ ಎಚ್ಚರದಿಂದ ಇರಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಕ್ರೈಂ17 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ17 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು16 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ15 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ11 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್17 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ11 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ15 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















