ಸ್ಥಳೀಯ
Dharmasthala-ಧರ್ಮಸ್ಥಳ ಬುರುಡೆ ಪ್ರಕರಣ: ಎಸ್‌ಐಟಿ ವರದಿಯ ಆದೇಶ ಡಿ. 29ಕ್ಕೆ ಮುಂದೂಡಿಕೆ
ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಕ್ರಮಕ್ಕಾಗಿ ಎಸ್‌ಐಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ವರದಿಯ ಮೇಲಿನ ವಿಚಾರಣೆ ಪೂರ್ಣಗೊಂಡಿದ್ದು ಡಿ. 26ಕ್ಕೆ ಕಾಯ್ದಿರಿಸಿದ್ದ ಆದೇಶದ ದಿನವನ್ನು ನ್ಯಾಯಾಲಯ ಡಿ. 29ಕ್ಕೆ ಮುಂದೂಡಿದೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಕ್ರಮಕ್ಕಾಗಿ ಎಸ್‌ಐಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ವರದಿಯ ಮೇಲಿನ ವಿಚಾರಣೆ ಪೂರ್ಣಗೊಂಡಿದ್ದು ಡಿ. 26ಕ್ಕೆ ಕಾಯ್ದಿರಿಸಿದ್ದ ಆದೇಶದ ದಿನವನ್ನು ನ್ಯಾಯಾಲಯ ಡಿ. 29ಕ್ಕೆ ಮುಂದೂಡಿದೆ.
3,923 ಪುಟಗಳ ಬೃಹತ್ ವರದಿ:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸಾಕ್ಷಿ ನುಡಿದಿರುವ ಅಪರಾಧಕ್ಕಾಗಿ (ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ) ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಎಸ್‌ಐಟಿ ಅಧಿಕಾರಿಗಳು 3,923 ಪುಟಗಳ ಸುದೀರ್ಘ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಚಿನ್ನಯ್ಯ ಸೇರಿದಂತೆ ಆರು ಮಂದಿಯನ್ನು ಆರೋಪಿಗಳನ್ನಾಗಿ ಉಲ್ಲೇಖಿಸಲಾಗಿದೆ. ಎಸ್‌ಐಟಿ ಪರ ಸಹಾಯಕ ಸರ್ಕಾರಿ ಅಭಿಯೋಜಕ ದಿವ್ಯರಾಜ್ ಹೆಗ್ಡೆ ಅವರು ಮಹತ್ವದ ವಾದ ಮಂಡಿಸಿ, ಮುಂದಿನ ಕಾನೂನು ಪ್ರಕ್ರಿಯೆಗಳ ಕುರಿತು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದಾರೆ.
ಆರೋಪಿ ಚಿನ್ನಯ್ಯ ಹಾಜರು:
ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಚಿನ್ನಯ್ಯ ಶುಕ್ರವಾರ ತನ್ನ ಪತ್ನಿ ಮಲ್ಲಿಕಾ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದನು. ವಿಚಾರಣೆಯ ಬಳಿಕ, ಜಾಮೀನು ಷರತ್ತಿನ ಅನ್ವಯ ಎಸ್‌ಐಟಿ ಕಚೇರಿಗೂ ತೆರಳಿ ಸಹಿ ಹಾಕಿ ಬಂದಿದ್ದಾನೆ.
ಮೊಬೈಲ್ ಬಿಡುಗಡೆಗೆ ಅರ್ಜಿ:
ಇದೇ ಪ್ರಕರಣದಲ್ಲಿ ಎಸ್‌ಐಟಿಯಿಂದ ವಶಕ್ಕೆ ಪಡೆಯಲಾದ ಗಿರೀಶ್ ಮಟ್ಟಣ್ಣನವರ್ ಮತ್ತು ಉಜಿರೆಯ ಗಣೇಶ್ ಶೆಟ್ಟಿ ಅವರ ಮೊಬೈಲ್ ಫೋನ್‌ಗಳನ್ನು ಬಿಡುಗಡೆ ಮಾಡುವಂತೆ ಅವರ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು, ಈ ಅರ್ಜಿಯ ಮೇಲಿನ ಆದೇಶವನ್ನೂ ಡಿ. 29ಕ್ಕೇ ಮುಂದೂಡಿದ್ದಾರೆ.
ವರದಿಯ ಪ್ರತಿ ಪಡೆದ ಜಯಂತ್ ಟಿ.:
ಇನ್ನೊಂದೆಡೆ, ಪ್ರಕರಣದ ಕುರಿತು ಎಸ್‌ಐಟಿ ಸಲ್ಲಿಸಿರುವ 3,923 ಪುಟಗಳ ವರದಿಯ ಪ್ರತಿಯನ್ನು ನೀಡುವಂತೆ ಜಯಂತ್ ಟಿ. ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನ್ಯಾಯಾಲಯವು ಅವರಿಗೆ ವರದಿಯ ಪೈಕಿ 1,100 ಪುಟಗಳ ಮಾಹಿತಿಯನ್ನು ನೀಡಿದೆ ಎಂದು ತಿಳಿದುಬಂದಿದೆ.
ಡಿಸೆಂಬರ್ 29ರಂದು ನ್ಯಾಯಾಲಯವು ಎಸ್‌ಐಟಿ ವರದಿಯ ಮೇಲೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized3 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized5 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized2 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized3 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized2 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
Uncategorized43 minutes ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ


















