Connect with us

ಕಾರ್ಯಕ್ರಮಗಳು

Puttur-ಪುತ್ತೂರು: 33ನೇ ವರ್ಷದ ‘ಕೋಟಿ- ಚೆನ್ನಯ’ ಜೋಡುಕರೆ ಕಂಬಳದಲ್ಲಿ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ; ತಾಂತ್ರಿಕ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ

Published

on



Ad Widget

Ad Widget

Ad Widget

Ad Widget

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಮಾರು ಗದ್ದೆಯಲ್ಲಿ ಜನವರಿ 24 ರಂದು ನಡೆಯಲಿರುವ 33ನೇ ವರ್ಷದ ‘ಕೋಟಿ-ಚೆನ್ನಯ ಜೋಡುಕರೆ ಕಂಬಳ’ದ ಅಂಗವಾಗಿ ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆಯ ಪೂರ್ವಸಿದ್ಧತಾ ಸಭೆ ಇತ್ತೀಚೆಗೆ ನಡೆಯಿತು. ದರ್ಬೆ ಬಳಿ ನಡೆದ ಈ ತಾಂತ್ರಿಕ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ವಹಿಸಿದ್ದರು.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಮಾರು ಗದ್ದೆಯಲ್ಲಿ ಜನವರಿ 24 ರಂದು ನಡೆಯಲಿರುವ 33ನೇ ವರ್ಷದ ‘ಕೋಟಿ-ಚೆನ್ನಯ ಜೋಡುಕರೆ ಕಂಬಳ’ದ ಅಂಗವಾಗಿ ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆಯ ಪೂರ್ವಸಿದ್ಧತಾ ಸಭೆ ಇತ್ತೀಚೆಗೆ ನಡೆಯಿತು. ದರ್ಬೆ ಬಳಿ ನಡೆದ ಈ ತಾಂತ್ರಿಕ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ವಹಿಸಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಸ್ಪರ್ಧೆಯ ನಿಯಮಗಳು:
ಕಳೆದ ವರ್ಷ ರಾಜ್ಯದ ವಿವಿಧೆಡೆಯಿಂದ ಸುಮಾರು 106 ಸ್ಪರ್ಧಿಗಳು ಭಾಗವಹಿಸಿ ಯಶಸ್ವಿಯಾಗಿದ್ದ ಈ ಕ್ರೀಡಾಕೂಟವನ್ನು ಈ ಬಾರಿಯೂ ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ವೈಯಕ್ತಿಕ ವಿಭಾಗದ ಸ್ಪರ್ಧೆಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ರಿಲೇ ಸ್ಪರ್ಧೆಯಲ್ಲಿ ಮಾತ್ರ ರಾಜ್ಯದ ಆಹ್ವಾನಿತ ಎಂಟು ತಂಡಗಳಿಗೆ ಮಾತ್ರ ಪ್ರವೇಶ ಸೀಮಿತಗೊಳಿಸಲಾಗಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

Ad Widget

Ad Widget <> Ad Widget

ಸಭೆಯಲ್ಲಿ ಉಪಸ್ಥಿತರಿದ್ದವರು:
ಸಭೆಯಲ್ಲಿ ಕೋಟಿ ಚೆನ್ನಯ ಕಂಬಳ ಸಮಿತಿಯ ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು, ತಾಂತ್ರಿಕ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ್ ಕುಮಾರ್ ಕೂಡಮರ, ದಯಾನಂದ ರೈ ಕೋರ್ಮಂಡ, ಎವರೆಸ್ಟ್ ರೊಡ್ರಿಗಸ್ ಸೇರಿದಂತೆ ಪ್ರಮುಖರಾದ ಯತೀಶ್ ಕುಮಾರ್, ಡಾ| ಪ್ರಕಾಶ್ ಡಿ’ಸೋಜ, ಚಿದಾನಂದ, ವಿಜೇತ್, ಮುಹಮ್ಮದ್ ಅಶ್ರಫ್, ದೇವದಾಸ್, ನವೀನ್ ಮತ್ತು ಶ್ರೀನಿಧಿ ಉಪಸ್ಥಿತರಿದ್ದರು.



Ad Widget
Ad Widget
Click to comment

Leave a Reply

ಕಾರ್ಯಕ್ರಮಗಳು

Praveen Capital-ಪ್ರವೀಣ್ ಕ್ಯಾಪಿಟಲ್ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ: 2030ರ ವೇಳೆಗೆ 100 ಶಾಖೆ ಸ್ಥಾಪನೆಯ ಗುರಿ; ಸತ್ಯ ಶಂಕರ್ ಅವರ ಸಾಧನೆಯನ್ನು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಉಲ್ಲೇಖಿಸುತ್ತೇನೆ – ಅಶೋಕ್ ರೈ

Published

on



Ad Widget

Ad Widget

Ad Widget

Ad Widget

1994ರಿಂದ ಹಣಕಾಸು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ವಿಶ್ವಾಸ ಗಳಿಸಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿ ಅ.16ರಂದು ಪುತ್ತೂರಿನ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಂಡಿತು. ಶಾಸಕ ಅಶೋಕ್ ಕುಮಾರ್ ರೈ ಅವರು ದೀಪ ಬೆಳಗಿಸಿ ನವೀಕೃತ ಕಚೇರಿಯನ್ನು ಉದ್ಘಾಟಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: 1994ರಿಂದ ಹಣಕಾಸು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ವಿಶ್ವಾಸ ಗಳಿಸಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿ ಅ.16ರಂದು ಪುತ್ತೂರಿನ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಂಡಿತು. ಶಾಸಕ ಅಶೋಕ್ ಕುಮಾರ್ ರೈ ಅವರು ದೀಪ ಬೆಳಗಿಸಿ ನವೀಕೃತ ಕಚೇರಿಯನ್ನು ಉದ್ಘಾಟಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪುತ್ತೂರಿನ ಉದ್ಯಮಿಯೊಬ್ಬರು ಸುಮಾರು 3,500 ಕೋಟಿ ರೂ. ವ್ಯವಹಾರ ನಡೆಸುತ್ತಿರುವುದು ಹೆಮ್ಮೆಯ ಸಂಗತಿ. ಸಂಸ್ಥೆಯ ಆಡಳಿತ ನಿರ್ದೇಶಕ ಸತ್ಯ ಶಂಕರ್ ಅವರ ಸಾಧನೆಯನ್ನು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಉಲ್ಲೇಖಿಸುತ್ತೇನೆ. ನಡೆದು ಬಂದ ಹಾದಿಯನ್ನು ಮರೆಯದೆ ಮುನ್ನಡೆಯುತ್ತಿರುವ ಅವರು ಪುತ್ತೂರಿನಲ್ಲಿ ಇನ್ನೂ 1,000 ಮಂದಿಗೆ ಉದ್ಯೋಗ ನೀಡಬೇಕು ಎಂಬುದು ನನ್ನ ಕನಸು. ಯುವಜನರು ರಾಜಕೀಯಕ್ಕೆ ಪ್ರವೇಶಿಸಿ ಬದಲಾವಣೆ ಹಾಗೂ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು. ಪ್ರವೀಣ್ ಕ್ಯಾಪಿಟಲ್ ಸಂಸ್ಥೆ ಇನ್ನಷ್ಟು ದೊಡ್ಡದಾಗಿ ಬೆಳೆದು ಸಾವಿರಾರು ಜನರಿಗೆ ಉದ್ಯೋಗ ಹಾಗೂ ಬದುಕಿಗೆ ಆಸರೆಯಾಗಲಿ ಎಂದು ಶುಭ ಹಾರೈಸಿದರು.

Ad Widget

Ad Widget <> Ad Widget

ಕಮಿಟ್‌ಮೆಂಟ್ ಇದ್ದಾಗ ಸಂಸ್ಥೆ ಉತ್ತಮವಾಗಿ ಮುನ್ನಡೆಯುತ್ತದೆ
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ ಆಚಾರ್ಯ ಮಾತನಾಡಿ, ಸಂಸ್ಥೆಯು ಸಿಬ್ಬಂದಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಿ ಆಹ್ಲಾದಕರ ಕೆಲಸದ ವಾತಾವರಣ ನಿರ್ಮಿಸಿರುವುದು ಶ್ಲಾಘನೀಯ. ಹಣಕಾಸು ಕ್ಷೇತ್ರದಲ್ಲಿ ನೀಡಿದ ಸಾಲ ಮರುಪಾವತಿಯಾದಾಗ ಮಾತ್ರ ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ. ಸತ್ಯ ಶಂಕರ್ ಅವರು ವ್ಯವಹಾರದ ಬಗ್ಗೆ ನಿರಂತರವಾಗಿ ಚಿಂತಿಸುವ ಬದ್ಧತೆಯುಳ್ಳ ವ್ಯಕ್ತಿ. ಬದ್ಧತೆ ಇದ್ದಾಗ ಸಂಸ್ಥೆ ಉತ್ತಮವಾಗಿ ಮುನ್ನಡೆಯುತ್ತದೆ. ಪ್ರವೀಣ್ ಕ್ಯಾಪಿಟಲ್ ದೇಶಾದ್ಯಂತ ಶಾಖೆಗಳನ್ನು ಹೊಂದಿ ಪ್ರಥಮ ಸ್ಥಾನಕ್ಕೇರಲಿ ಎಂದು ಹಾರೈಸಿದರು.



Ad Widget

ಸಾವಿರಾರು ಮಂದಿಯ ಮಂದಿಯ ಜೀವನೋಪಾಯಕ್ಕೆ ಆಸರೆ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮಾತನಾಡಿ, ಗೋಸೇವೆಯಿಂದ ಆರಂಭಿಸಿ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಂಡು ದೇಶದಾದ್ಯಂತ ಗುರುತಿಸಿಕೊಂಡಿರುವ ಸತ್ಯ ಶಂಕರ್ ಅವರು ಉದ್ಯಮದಲ್ಲಿ ಪ್ರಾಮಾಣಿಕತೆಗೆ ಮಹತ್ವ ನೀಡಿದ್ದಾರೆ. ಉದ್ಯಮಗಳ ಬೆಳವಣಿಗೆಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಬಿಂದು ಸಂಸ್ಥೆ ಸಾವಿರಾರು ಮಂದಿಯ ಜೀವನೋಪಾಯಕ್ಕೆ ಆಸರೆಯಾಗಿದೆ. ಸಮಾಜಕ್ಕೆ ಸದ್ದಿಲ್ಲದೆ ನೆರವು ನೀಡುವ ಅವರ ಸೇವೆ ಶ್ಲಾಘನೀಯ ಎಂದು ಹೇಳಿದರು.

Ad Widget

Ad Widget

1994ರಲ್ಲಿ ಆರಂಭ, ಇಂದು 25 ಶಾಖೆಗಳು
ಎಸ್.ಜಿ. ಗ್ರೂಪ್‌ನ ಆಡಳಿತ ನಿರ್ದೇಶಕ ಸತ್ಯ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, 1994ರಲ್ಲಿ ಪ್ರವೀಣ್ ಫೈನಾನ್ಸ್ ಕಾರ್ಪೊರೇಷನ್ ಹೆಸರಿನಲ್ಲಿ ಸಂಸ್ಥೆಯನ್ನು ಆರಂಭಿಸಲಾಯಿತು. ಆಗ ಬ್ಯಾಂಕ್‌ಗಳಿಂದ ಸಾಲ ಪಡೆಯುವುದು ಕಷ್ಟವಾಗಿದ್ದ ಹಿನ್ನೆಲೆಯಲ್ಲಿ ವಾಹನ ಖರೀದಿಗೆ ಹಣಕಾಸಿನ ನೆರವು ಒದಗಿಸುವ ಉದ್ದೇಶದಿಂದ ಸಂಸ್ಥೆ ಕಾರ್ಯಾರಂಭಿಸಿತು. ಇಂದು ಕರ್ನಾಟಕದಾದ್ಯಂತ 25 ಶಾಖೆಗಳನ್ನು ಹೊಂದಿದ್ದು, ತಿಂಗಳಿಗೆ ಸುಮಾರು 400 ಗ್ರಾಹಕರಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಒಟ್ಟು 8,000 ಗ್ರಾಹಕರು ಸಂಸ್ಥೆಯೊಂದಿಗೆ ವ್ಯವಹರಿಸುತ್ತಿದ್ದಾರೆ. ಪ್ರಸಕ್ತ ವರ್ಷ 550 ಕೋಟಿ ರೂ. ವ್ಯವಹಾರದ ಗುರಿ ಹೊಂದಿದ್ದು, 200ಕ್ಕೂ ಅಧಿಕ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

1987ರ ಅವಧಿಯಲ್ಲಿ ಆಟೋಮೊಬೈಲ್ ಮತ್ತು ಟೈರ್ ವ್ಯಾಪಾರ ಆರಂಭಿಸಿದ ಅನುಭವದಿಂದ ವಾಹನ ಚಾಲಕರು ಹಾಗೂ ಮಾಲೀಕರ ಹಣಕಾಸಿನ ಅಗತ್ಯಗಳನ್ನು ಅರಿತುಕೊಳ್ಳಲಾಯಿತು. ಬಳಿಕ 1994ರಲ್ಲಿ ಹಳೆಯ ಹಾಗೂ ಸೆಕೆಂಡ್‌ಹ್ಯಾಂಡ್ ವಾಹನಗಳಿಗೆ ಸಾಲ ನೀಡುವ ಉದ್ದೇಶದಿಂದ ಪ್ರವೀಣ್ ಫೈನಾನ್ಸ್ ಕಾರ್ಪೊರೇಷನ್ ಸ್ಥಾಪಿಸಲಾಯಿತು. 2008ರಲ್ಲಿ ಸಂಸ್ಥೆಯನ್ನು ವಿಸ್ತರಿಸುವ ಉದ್ದೇಶದಿಂದ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಆಗಿ ಪರಿವರ್ತಿಸಲಾಯಿತು ಎಂದು ಅವರು ಸಂಸ್ಥೆಯ ಬೆಳವಣಿಗೆಯ ಹಾದಿಯನ್ನು ವಿವರಿಸಿದರು.

2030ರ ವೇಳೆಗೆ 100 ಶಾಖೆಗಳ ಗುರಿ
ಪ್ರವೀಣ್ ಕ್ಯಾಪಿಟಲ್ ಪ್ರಸ್ತುತ ಕರ್ನಾಟಕದಲ್ಲಿ 25 ಶಾಖೆಗಳನ್ನು ಹೊಂದಿದ್ದು, ವಾಹನ ಸಾಲ, ಆಸ್ತಿ ಅಡಮಾನ ಸಾಲ, ಚಿನ್ನದ ಸಾಲ ಹಾಗೂ ಎಂಎಸ್‌ಎಂಇ ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಿಗೆ ಜಾಲ ವಿಸ್ತರಿಸುವುದರ ಜತೆಗೆ ದಕ್ಷಿಣ ಭಾರತದ ಇತರ ರಾಜ್ಯಗಳಿಗೂ ಕಾರ್ಯಾಚರಣೆ ವಿಸ್ತರಿಸುವ ಯೋಜನೆ ಹೊಂದಿದೆ.

2030ರ ವೇಳೆಗೆ ಕರ್ನಾಟಕದಲ್ಲಿ 100 ಶಾಖೆಗಳನ್ನು ಸ್ಥಾಪಿಸಿ 1,500 ಕೋಟಿ ರೂ. ವ್ಯವಹಾರ ಸಾಧಿಸುವ ಗುರಿ ಹೊಂದಲಾಗಿದೆ. ದೊಡ್ಡ ಗುರಿಗಳನ್ನು ಇಟ್ಟುಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡುವುದು, ವ್ಯವಹಾರದಲ್ಲಿ ನಿರಂತರತೆ ಕಾಪಾಡುವುದು, ಉದ್ಯೋಗಿಗಳಿಗೆ ಭದ್ರತೆ ಒದಗಿಸುವುದು ಹಾಗೂ ಸಾಮಾಜಿಕ ಸೇವೆಗೆ ಆದ್ಯತೆ ನೀಡುವುದರಿಂದ ಸಂಸ್ಥೆಯ ಬೆಳವಣಿಗೆ ಸಾಧ್ಯವಾಗಿದೆ ಎಂದು ಸತ್ಯ ಶಂಕರ್ ತಿಳಿಸಿದರು.

ಎಸ್.ಜಿ.ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್, ಮೇಘಾ ಶಂಕರ್, ಮಹಿಮಾ ಶಂಕರ್, ಮನಸ್ವಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೌರವಾರ್ಪಣೆ:
ಕಛೇರಿಯ ಸಿವಿಲ್ ಕೆಲಸ ನಿರ್ವಹಿಸಿರುವ ಸುದರ್ಶನ್, ಇಂಟೀರಿಯರ್ ಕೆಲಸ ನಿರ್ವಹಿಸಿರುವ ಪೂರ್ಣಿಮಾ, ಸಂಖ್ಯೆ ಆನಂದಾಶ್ರಮ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಡಾ.ಗೌರಿಪೈ, ಉದ್ಯಮಿ ಶಿವರಾಮ ಆಳ್ವ ಕುರಿಯ, ಎಸ್‌ಡಿಪಿ ರೆಮಿಡೀಸ್‌ನ ರೂಪಲೇಖ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ನವೀನ್ ಭಂಡಾರಿ ಹಾಗೂ ಗ್ರಾಹಕರಾದ ಅಬ್ದುಲ್ ರಝಾಕ್, ಸಂಜೀವ ಕಲ್ಲೇರಿ, ಅಬ್ದುಲ್ ಖಾದರ್ ಹಾಗೂ ಜಗದೀಶ್ ಅಮೀನ್ ರವರನ್ನು ಗೌರವಿಸಲಾಯಿತು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಜಿ.ಎಲ್. ಆಚಾರ್ಯ ಜ್ಯುವೆರ್ಲ್ಸನ ನಿರ್ದೇಶಕರಾದ ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ ಆಚಾರ್ಯ, ಎಸ್‌ಡಿಪಿ ರೆಮಿಡೀಸ್ನ ಡಾ.ಹರಿಕೃಷ್ಣ ಪಾಣಾಜೆ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ. ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ನಗರಸಭಾ ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್.ಗೌರಿ, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ, ಶಿವಶಂಕರ್ ಭಟ್ ಬೋನಂತಾಯ, ಗೋವಿಂದರಾಜ್ ಪಿ., ಹರಿಕೃಷ್ಣವಾಟೆ, ರಮೇಶ್ ಭಟ್, ಡಾ.ಕೃಷ್ಣಪ್ರಸಾದ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಮುಖ್ಯ ಲೆಕ್ಕಪತ್ರ ಅಧಿಕಾರಿ ಹೇಮಂತ್ ಪೈ, ಡಿಜಿಎಂ ಶ್ರೀವತ್ಸರಾಜ್ ಎಮ್.ಜಿ., ಎಜಿಎಮ್ ಕಾರ್ತಿಕ್ ಎಸ್.ಎನ್. ಸೇರಿದಂತೆ ಸಿಬ್ಬಂದಿಗಳು ಸಹಕರಿಸಿದರು. ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಬೆಳ್ಳಿಪ್ಪಾಡಿ ಅವೋಘ್ ಜೆ. ರೈ ವಂದಿಸಿದರು. ಚೇತನ್ ಶೆಟ್ಟಿ ಮಂಗಳೂರು ಕಾರ್ಯಕ್ರಮ ನಿರೂಪಿಸಿದರು.

ಪ್ರವೀಣ್ ಕ್ಯಾಪಿಟಲ್‌ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
‘ಪ್ರವೀಣ್‌ ಕ್ಯಾಪಿಟಲ್‌’ ಸಂಸ್ಥೆಯು 1994ರಲ್ಲಿ ಪ್ರಾರಂಭಗೊಂಡಿದ್ದು, ‘ಯುವರ್ ಡ್ರೀಮ್, ಅವರ್ ಕ್ಯಾಪಿಟಲ್’ ಅಂದರೆ ‘ನಿಮ್ಮ ಕನಸು ನಮ್ಮ ಬಂಡವಾಳ’ ಎನ್ನುವ ಧೈಯವಾಕ್ಯದೊಂದಿಗೆ ಕಾರ್ಯಾಚರಿಸುತ್ತಿದೆ. ಆರ್ ಬಿಐನಿಂದ ಅಧಿಕೃತ ಅನುಮೋದನೆ ಪಡೆದಿರುವ ಎನ್‌ಬಿಎಫ್‌ಸಿ ಸಂಸ್ಥೆಯಾಗಿದ್ದುಕೊಂಡು ನಿರಂತರವಾಗಿ ಗ್ರಾಹಕರ ನಂಬಿಕೆ, ಪ್ರೀತಿ, ವಿಶ್ವಾಸವನ್ನು ಗಳಿಸಿಕೊಂಡು ಬೆಳೆಯುತ್ತಾ ಬಂದಿದೆ. ಸಂಸ್ಥೆಯ ಪ್ರಧಾನ ಕಚೇರಿಯು ಪುತ್ತೂರಿನಲ್ಲಿದ್ದು, ನೋಂದಾಯಿತ ಕಚೇರಿಯು ಮಂಗಳೂರಿನಲ್ಲಿದೆ. ಸದ್ಯ ಕರ್ನಾಟಕದಲ್ಲಿ 25 ಶಾಖೆಗಳಿದ್ದು, ವಾಹನ ಸಾಲ, ಆಸ್ತಿ ಅಡಮಾನ ಸಾಲ, ಚಿನ್ನದ ಸಾಲದ ಜೊತೆಗೆ ಎಂಎಸ್ ಎಂಇ ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಸದ್ಯ ಪ್ರತೀ 70 ಕಿ.ಮೀ. ಗೆ ಒಂದರಂತೆ ಶಾಖೆಗಳನ್ನು ಹೊಂದಿದ್ದು, ಮುಂದಕ್ಕೆ ದಕ್ಷಿಣ ಭಾರತದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲಿ ವಿಸ್ತರಿಸಲು ಯೋಜನೆ ಇದೆ. ಉತ್ತಮ ನಿಯಮಬದ್ದ ಕಾರ್ಯನಿರ್ವಹಣೆ, ಕ್ಷಮತೆಯ ಮೂಲಕ ‘ಎನ್‌ಸಿಡಿ’ ಪ್ರೈವೇಟ್ ಪ್ಲೇಸ್‌ಮೆಂಟ್ ಮಾಡಿರುವ “ಜಿಲ್ಲೆಯ ಮೊದಲ ಖಾಸಗಿ ಹಣಕಾಸು ಸಂಸ್ಥೆ ಎನ್ನುವ ಹೆಗ್ಗಳಿಕೆಯೂ ‘ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್’ನದ್ದು.

ಪ್ರವೀಣ್ ಕ್ಯಾಪಿಟಲ್ಸ್‌ ಬೆಳೆದು ಬಂದ ಹಾದಿ..
‘1987ರ ಅವಧಿಯಲ್ಲಿ ಪುತ್ತೂರಿನಲ್ಲಿ ಆಟೋಮೊಬೈಲ್ ಶಾಪ್ ಮತ್ತು ಟೈರ್ ಶಾಪ್‌ನ್ನು ಆರಂಭಿಸಿದ್ದೆವು. ಆ ಸಮಯದಲ್ಲಿ ವಾಹನಗಳ ಚಾಲಕರು ಮತ್ತು ಮಾಲಕರುಗಳಿಗೆ ಹಣಕಾಸಿನ ಅವಶ್ಯಕತೆಗಳು ಇರುತ್ತಿದ್ದವು. ಇಂತಹ ಸಂದರ್ಭದಲ್ಲಿ ವಾಹನ ಚಾಲಕರಿಗೆ, ಮಾಲಕರಿಗೆ ವಾಹನದ ಬಿಡಿಭಾಗಗಳು ಮತ್ತು ಟೈರು ಸಾಲದ ರೂಪದಲ್ಲಿ ನೀಡುತ್ತಿದ್ದೆವು. ಇದೇ ಪರಿಕಲ್ಪನೆಯಲ್ಲಿ 1994ರಲ್ಲಿ ಪ್ರವೀಣ್ ಫೈನಾನ್ಸ್ ಕಾರ್ಪೊರೇಷನ್’ ಎಂದು ಖಾಸಗಿ ಹಣಕಾಸು ಸಂಸ್ಥೆಯನ್ನು ಆರಂಭಿಸಿದ್ದೆವು. ಈ ಮೂಲಕ ಹಳೆಯ/ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಸಾಲ ಸೌಲಭ್ಯ ನೀಡುವ ವ್ಯವಸ್ಥೆಯನ್ನು ಪುತ್ತೂರಿನಲ್ಲಿ ಆರಂಭಿಸಿದೆವು. 2008ರಲ್ಲಿ ‘ಪ್ರವೀಣ್‌ ಫೈನಾನ್ಸ್ ಕಾರ್ಪೊರೇಷನ್’ನ್ನು ಮತ್ತಷ್ಟು ಅಭಿವೃದ್ಧಿ, ವಿಸ್ತರಣೆ ಮಾಡುವ ಉದ್ದೇಶದಿಂದ ಎನ್‌ಬಿಎಫ್‌ಸಿ ಸಂಸ್ಥೆ ‘ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್’ನಾಗಿ ಪರಿವರ್ತಿಸಿದೆವು. ಈಗ ‘ಪ್ರವೀಣ್ ಕ್ಯಾಪಿಟಲ್‌ನ 25 ಶಾಖೆಗಳಿವೆ. 200ಕ್ಕೂ ಅಧಿಕ ಮಂದಿ ಉದ್ಯೋಗ ಪಡೆಯುವ ಮೂಲಕ ಜೀವನೋಪಾಯ ಕಂಡುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರವೀಣ್ ಕ್ಯಾಪಿಟಲ್‌ನ ಜಾಲವನ್ನು ವಿಸ್ತರಿಸುವ ಚಿಂತನೆ ಇದೆ. 2030ಕ್ಕೆ 100 ಶಾಖೆಗಳು ಕರ್ನಾಟಕದಲ್ಲಿ ಮತ್ತೆ 1,500 ಕೋಟಿ ರೂ.ಗಳ ವ್ಯವಹಾರದ ಗುರಿಯನ್ನು ಇಟ್ಟುಕೊಂಡಿದ್ದೇವೆ” ಎನ್ನುವುದು ಎಸ್.ಜಿ. ಗ್ರೂಪ್‌ನ ಆಡಳಿತ ನಿರ್ದೇಶಕರಾದ ಸತ್ಯ ಶಂಕರ್ ಅವರ ಮಾತು.

ದೊಡ್ಡ ಗುರಿ ಇಟ್ಟುಕೊಂಡರೆ ಯಶಸ್ಸು ಸಾಧ್ಯ:
2030ಕ್ಕೆ ಕರ್ನಾಟಕದಾದ್ಯಂತ 100 ಶಾಖೆಗಳನ್ನು ಮಾಡುವ ಯೋಚನೆ ಇದ್ದು 1500 ಕೋಟಿ ರೂ. ವ್ಯವಹಾರ ಮಾಡುವ ಗುರಿ ಹೊಂದಿದ್ದೇವೆ. ದೊಡ್ಡ ಗುರಿ ಇಟ್ಟುಕೊಂಡರೆ ಯಾವುದೇ ಸಂಸ್ಥೆ ಯಶಸ್ಸು ಕಾಣಲು ಸಾಧ್ಯ. ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುವುದು ಅಗತ್ಯ. ವ್ಯವಹಾರದಲ್ಲಿ ನಿರಂತರತೆ ಹಾಗೂ ಉದ್ಯೋಗಿಗಳಿಗೆ ಭದ್ರತೆ ಮುಖ್ಯ. ಅಲ್ಲದೆ ಸಾಮಾಜಿಕ ಸೇವೆ, ಜನರ ಸಹಕಾರ ಮುಖ್ಯ. ಇದನ್ನು ಅಳವಡಿಸಿಕೊಂಡ ಕಾರಣ ನಮ್ಮ ಸಂಸ್ಥೆ ಅಭಿವೃದ್ಧಿ ಹೊಂದಿದೆ.
-ಸತ್ಯ ಶಂಕರ್, ಆಡಳಿತ ನಿರ್ದೇಶಕರು, ಎಸ್.ಜಿ. ಗ್ರೂಫ್

ದಸರಾ, ದೀಪಾವಳಿ ಪ್ರಯುಕ್ತ ವಿಶೇಷ ಆಫರ್
ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ಸಂಸ್ಥೆಯಲ್ಲಿ ವಿಶೇಷ ಆಫ‌ರ್ ಆಯೋಜಿಸಲಾಗಿದೆ. ಅಕ್ಟೋಬರ್ 1 ರಿಂದ ನವೆಂಬರ್ 30ರವರೆಗೆ ಆಫರ್ ಲಭ್ಯವಿದ್ದು ಗರಿಷ್ಠ ಹಣಕಾಸಿನ ನೆರವು, ಸುಲಭ ಸಾಲ ಸೌಲಭ್ಯ, ಶೀಘ್ರ ಅನುಮೋದನೆ ವ್ಯವಸ್ಥೆ ಗ್ರಾಹಕರಿಗೆ ದೊರೆಯಲಿದೆ. ಜತೆಗೆ ಅದೃಷ್ಟ ಕೂಪನ್ ದೊರೆಯಲಿದೆ. ಲಕ್ಕಿ ಡ್ರಾದಲ್ಲಿ ಸ್ಟಾರ್ಟ್ ಟಿವಿ, ಫ್ರಿಡ್ಜ್, ಮುಂತಾದ ಅನೇಕ ಆಕರ್ಷಕ ಬಹುಮಾನ ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿಸಿಕೊಳ್ಳಬಹುದು ಎಂದು ಸಂಸ್ಥೆಯ ಸಿಇಒ ಹೇಳಿದರು.

Ad Widget
Continue Reading

ಕಾರ್ಯಕ್ರಮಗಳು

Mangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ರಾಜ್ಯದಲ್ಲೇ ವಿಶೇಷ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ರಾಜ್ಯದಲ್ಲೇ ವಿಶೇಷ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಂದು ಬೆಳಗ್ಗೆ 11.20ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ವ್ಯವಹಾರ, ಹಜ್ ಮತ್ತು ವಕ್ಸ್ ಸಚಿವ ಡಾ. ಯು.ಟಿ. ಖಾದರ್ ಫರೀದ್ ಅವರು ನೆರವೇರಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಸೋಮಯಾಜಿ ಎಸ್ಟೇಟ್ಸ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕ ಬಿ.ಆ‌ರ್. ಸೋಮಯಾಜಿ ಹಾಗೂ ಸಾಮಾಜಿಕ ಜಾಲತಾಣದ ಪ್ರಭಾವಿ ವ್ಯಕ್ತಿ ವಿ.ಜಿ. ವಿಖ್ಯಾತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

2004ರಲ್ಲಿ ಆರಂಭವಾದ ಸೇವಾ ಪಯಣವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹಾಗೂ ಸೇವಾ ಮನೋಭಾವ ಹೊಂದಿರುವ ಚೇತನ್ ಪ್ರಕಾಶ್ ಕಜೆ ಅವರು 2004ರಲ್ಲಿ ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯನ್ನು ಸ್ಥಾಪಿಸಿದರು.



Ad Widget

ಆರಂಭದಿಂದಲೇ ಜನಸಾಮಾನ್ಯರಿಗೆ ನಿಖರ, ತ್ವರಿತ, ವಿಶ್ವಾಸಾರ್ಹ ಹಾಗೂ ಪಾರದರ್ಶಕ ಪರೀಕ್ಷಾ ಸೇವೆಗಳನ್ನು ಒದಗಿಸುವ ಗುರಿಯೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಸಣ್ಣ ಮಟ್ಟದಲ್ಲಿ ಆರಂಭಗೊಂಡ ಪ್ರಯೋಗಾಲಯವು ಕಾಲಕ್ರಮೇಣ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ
ಮೂಲಕ ಬೆಳವಣಿಗೆ ಸಾಧಿಸಿದೆ.

Ad Widget

Ad Widget

2006ರಿಂದ ಸ್ವಯಂಚಾಲಿತ ಪರೀಕ್ಷಾ ವ್ಯವಸ್ಥೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಸಂಸ್ಥೆಯು, ಬಯೋಕೆಮಿಸ್ಟ್ರಿ, ಹೆಮಟಾಲಜಿ, ಮೈಕ್ರೋಬಯಾಲಜಿ, ಇಮ್ಯುನೊಅಸ್ಸೇ, ಹಾರ್ಮೋನ್ ಹಾಗೂ ಇತರ ವಿಶೇಷ ಪರೀಕ್ಷೆಗಳಿಗೆ ಸುಧಾರಿತ ಉಪಕರಣಗಳನ್ನು ಅಳವಡಿಸಿಕೊಂಡಿದೆ. ಅತ್ಯಾಧುನಿಕ ಅಲರ್ಜಿ ಪರೀಕ್ಷಾ ವ್ಯವಸ್ಥೆ ಆಸ್ಟ್ರಿಯಾದ ವಿಯೆನ್ನಾದಿಂದ ಆಮದು ಮಾಡಲಾದ ALEX Allergy Explorer ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವುದು ಸಂಸ್ಥೆಯ ಪ್ರಮುಖ ವಿಶೇಷತೆಗಳಲ್ಲಿ ಒಂದಾಗಿದೆ. ಈ ತಂತ್ರಜ್ಞಾನದ ಮೂಲಕ ವಿವಿಧ ಅಲರ್ಜಿ ಸಂಬಂಧಿತ ಅಂಶಗಳನ್ನು ಗುರುತಿಸಲು ನೆರವಾಗುವ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಪ್ರಸ್ತುತ ಸುಮಾರು 23ಕ್ಕೂ ಅಧಿಕ ಅತ್ಯಾಧುನಿಕ ವೈದ್ಯಕೀಯ ಪ್ರಯೋಗಾಲಯ ಉಪಕರಣಗಳನ್ನು ಹೊಂದಿರುವ ಸಂಸ್ಥೆಯು, ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಪ್ರಯೋಗಾಲಯಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 10 ಶಾಖೆಗಳ ಮೂಲಕ ಸೇವೆ ನೀಡುತ್ತಿರುವ ಸಂಸ್ಥೆ ಇದೀಗ ಮಂಗಳೂರಿನಲ್ಲಿ 11ನೇ ಶಾಖೆಯನ್ನು ಆರಂಭಿಸುವ ಮೂಲಕ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ.

ವಿವಿಧ ವೈದ್ಯಕೀಯ ಪರೀಕ್ಷೆಗಳ ಸೌಲಭ್ಯರಕ್ತದ ಸಾಮಾನ್ಯ ಪರೀಕ್ಷೆ (CBC), ಸಕ್ಕರೆ ಕಾಯಿಲೆ ಪರೀಕ್ಷೆ, ಥೈರಾಯ್ಡ್ ಪ್ರೊಫೈಲ್, ಲಿಪಿಡ್ ಪ್ರೊಫೈಲ್, ಮೂತ್ರ ಮತ್ತು ಮಲ ಪರೀಕ್ಷೆಗಳು ಸೇರಿದಂತೆ ವಿವಿಧ ಸಾಮಾನ್ಯ ಹಾಗೂ ವಿಶೇಷ ಪರೀಕ್ಷೆಗಳು ಇಲ್ಲಿ ಲಭ್ಯವಿವೆ. ಸಂಪೂರ್ಣ ಸ್ವಯಂಚಾಲಿತ ಪರೀಕ್ಷಾ ವ್ಯವಸ್ಥೆಗಳ ಮೂಲಕ ಗುಣಮಟ್ಟದ ರೋಗನಿರ್ಣಯ ಸೇವೆ ಒದಗಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ.

ಚೇತನ್ ಪ್ರಕಾಶ್ ಕಜೆಗೆ ಹೆಲ್ತ್ ಕೇರ್ ಎಕ್ಸಲೆನ್ಸ್‌ ಪ್ರಶಸ್ತಿ:
ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ ಕ್ಷೇತ್ರದಲ್ಲಿನ ಸಾಧನೆ ಹಾಗೂ ಬದ್ಧತೆಯನ್ನು ಗುರುತಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜಿ ಅವರಿಗೆ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಅವಾರ್ಡ್-2026’ ನೀಡಿ ಗೌರವಿಸಲಾಗಿದೆ.ಪುತ್ತೂರಿನ ದರ್ಬೆಯ ಧನ್ವಂತರಿ ಕಾಂಪ್ಲೆಕ್ಸ್‌ನಲ್ಲಿರುವ ಮುಖ್ಯ ಕಚೇರಿಯನ್ನು ಹೊಂದಿರುವ ಸಂಸ್ಥೆಯು ದರ್ಬೆ, ಬೊಳುವಾರು, ನೆಹರೂ ನಗರ, ವಿಟ್ಲ, ಕೆಯ್ಯರು, ಈಶ್ವರಮಂಗಲ, ಬೆಳ್ಳಾರೆ ಹಾಗೂ ಸುಳ್ಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಶಾಖೆಗಳ ಮೂಲಕ ಸೇವೆ ಸಲ್ಲಿಸುತ್ತಿದೆ.ಮಂಗಳೂರಿನ ಹೊಸ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಹಿತೈಷಿಗಳು ಆಗಮಿಸುವಂತೆ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಆಹ್ವಾನಿಸಿದ್ದಾರೆ.

ಉದ್ಘಾಟನಾ ಸ್ಥಳ: ಎಸ್ಸೆಲ್ ಟವರ್ಸ್, ಬಿಎಸ್-1, ಆಕ್ಸಿಸ್ ಬ್ಯಾಂಕ್ ಕೆಳಭಾಗ, ಬಂಟ್ಸ್ ಹಾಸ್ಟೆಲ್ ವೃತ್ತ, ಮಂಗಳೂರು-575003.
ಸಂಪರ್ಕ: 9180477075

Ad Widget
Continue Reading

ಕಾರ್ಯಕ್ರಮಗಳು

Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading