Connect with us

ಮಂಗಳೂರು

Mangalore-ಮಂಗಳೂರು: 2026ರ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಖಡಕ್ ಮಾರ್ಗಸೂಚಿ ಪ್ರಕಟ

Published

on



Ad Widget

Ad Widget

Ad Widget

Ad Widget

2026ರ ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮ ಆಯೋಜಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: 2026ರ ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮ ಆಯೋಜಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಾರ್ಗಸೂಚಿಯ ಪ್ರಮುಖ ಅಂಶಗಳು:
ಕಡ್ಡಾಯ ಅನುಮತಿ: ಸಾರ್ವಜನಿಕವಾಗಿ ಯಾವುದೇ ಹೊಸ ವರ್ಷದ ಕಾರ್ಯಕ್ರಮಗಳನ್ನು ಆಯೋಜಿಸಲು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಅನುಮತಿ ಇಲ್ಲದೆ ಆಚರಣೆ ನಡೆಸುವಂತಿಲ್ಲ.

Ad Widget

Ad Widget <> Ad Widget

ಜವಾಬ್ದಾರಿಯುತ ಸಂಭ್ರಮ: ಸಾರ್ವಜನಿಕರಿಗೆ ಯಾವುದೇ ರೀತಿಯ ಕಿರುಕುಳ ಅಥವಾ ತೊಂದರೆಯಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಿಸಲು ಸೂಚಿಸಲಾಗಿದೆ. ಅಸಭ್ಯ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು.



Ad Widget

ಅತಿವೇಗ ಮತ್ತು ವೀಲಿಂಗ್‌ಗೆ ನಿಷೇಧ: ಸಂಭ್ರಮಾಚರಣೆ ಹೆಸರಿನಲ್ಲಿ ಅತಿವೇಗದ ಚಾಲನೆ, ಅಪಾಯಕಾರಿ ವೀಲಿಂಗ್ ಅಥವಾ ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

Ad Widget

Ad Widget

ಬಿಗಿ ಬಂದೋಬಸ್ತ್: ನಗರದಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಪಿಸಿಆರ್ (PCR) ವಾಹನಗಳು, ಹೈವೇ ಪೆಟ್ರೋಲ್, ಚೆಕ್ ಪೋಸ್ಟ್ ಮತ್ತು ವಿಶೇಷ ಪಿಕೆಟಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ.

ಹೆಚ್ಚುವರಿ ಪಡೆಗಳ ನಿಯೋಜನೆ: ಸೂಕ್ಷ್ಮ ಪ್ರದೇಶಗಳಲ್ಲಿ ಕೆ.ಎಸ್.ಆರ್.ಪಿ (KSRP), ಎಫ್.ಎ.ಎಫ್ (FAF) ಮತ್ತು ಸಿಎಆರ್ (CAR) ತುಕಡಿಗಳನ್ನು ನಿಯೋಜಿಸಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.

ತುರ್ತು ಸಹಾಯಕ್ಕೆ ಕರೆ ಮಾಡಿ:
ಸಾರ್ವಜನಿಕರು ಯಾವುದೇ ದೂರು ಅಥವಾ ತುರ್ತು ಪರಿಸ್ಥಿತಿಯಲ್ಲಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ:
ತುರ್ತು ಸಂಖ್ಯೆ: 112
ಪೊಲೀಸ್ ನಿಯಂತ್ರಣ ಕೊಠಡಿ: 0824-2220800
ಮೊಬೈಲ್ ಸಂಖ್ಯೆ: 9480802321

“ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹೊಸ ವರ್ಷವನ್ನು ಬರಮಾಡಿಕೊಳ್ಳಬೇಕು” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading