ಬಿಗ್ ನ್ಯೂಸ್
Puttur-ಪುತ್ತೂರು: ಮನೆ ಕಳೆದುಕೊಂಡ ವೃದ್ಧ ದಂಪತಿಯ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ – ಎಸಿ ಮನವೊಲಿಕೆ ಕಸರತ್ತು ಫೇಲ್..!
ಮನೆ ನೆಲಸಮವಾಗಿ ಬೀದಿಗೆ ಬಿದ್ದಿರುವ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿಗಳಾದ ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬ ವೃದ್ಧ ದಂಪತಿಗಳು ನ್ಯಾಯಕ್ಕಾಗಿ ಆಗ್ರಹಿಸಿ, ಪುತ್ತೂರು ತಾಲೂಕು ಆಡಳಿತ ಸೌಧದ ಮುಂದೆ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಪುತ್ತೂರು: ಮನೆ ನೆಲಸಮವಾಗಿ ಬೀದಿಗೆ ಬಿದ್ದಿರುವ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿಗಳಾದ ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬ ವೃದ್ಧ ದಂಪತಿಗಳು ನ್ಯಾಯಕ್ಕಾಗಿ ಆಗ್ರಹಿಸಿ, ಪುತ್ತೂರು ತಾಲೂಕು ಆಡಳಿತ ಸೌಧದ ಮುಂದೆ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಗುರುವಾರ ಬೆಳಿಗ್ಗೆ ಪ್ರತಿಭಟನಾ ಸ್ಥಳಕ್ಕೆ ದಲಿತ ಸಂಘಟನೆಗಳ ಮುಖಂಡರು ಭೇಟಿ ನೀಡಿ ಬೆಂಬಲ ಸೂಚಿಸಿದರು. ಸಂಜೆ ಪುತ್ತೂರು ಸಹಾಯಕ ಆಯುಕ್ತೆ (AC) ಸ್ಟೆಲ್ಲಾ ವರ್ಗೀಸ್ ಅವರು ಭೇಟಿ ನೀಡಿ ವೃದ್ಧ ದಂಪತಿಗಳ ಮನವೊಲಿಸಲು ನಡೆಸಿದ ಪ್ರಯತ್ನ ವಿಫಲವಾಯಿತು.

ತನಿಖೆ ನಡೆಯುತ್ತಿದೆ ಎಂದ ಎಸಿ:
ಹಿರಿಯ ನಾಗರಿಕ ದಂಪತಿಗಳ ಮನವೊಲಿಸಲು ಯತ್ನಿಸಿದ ಸಹಾಯಕ ಆಯುಕ್ತರು, “ನೀವು ನೀಡಿದ ಮನವಿಯ ಪರಿಶೀಲನೆ ನಡೆಸುತ್ತಿದ್ದೇವೆ. ವರದಿ ಸಲ್ಲಿಸಲು ಹದಿನೈದು ದಿನಗಳ ಕಾಲಾವಕಾಶ ನೀಡಲಾಗಿದ್ದು, ಇನ್ನು 11 ದಿನಗಳಷ್ಟೇ ಕಳೆದಿವೆ. ತನಿಖೆ ಪ್ರಗತಿಯಲ್ಲಿರುವಾಗ ಹೀಗೆ ಪ್ರತಿಭಟನೆಗೆ ಕುಳಿತುಕೊಳ್ಳುವುದು ಸರಿಯಲ್ಲ. ಅದರಲ್ಲೂ ನೀವು ಹಿರಿಯ ನಾಗರಿಕರಾಗಿದ್ದು, ಆರೋಗ್ಯದ ಬಗ್ಗೆ ಗಮನ ಹರಿಸಬೇಕು,” ಎಂದರು.
ನ್ಯಾಯ ಸಿಗದಿದ್ದರೆ ದಯಾಮರಣಕ್ಕೆ ಸಿದ್ಧ:
ಇದಕ್ಕೆ ಉತ್ತರಿಸಿದ ಹಿರಿಯ ದಂಪತಿ, “ಕಳೆದೊಂದು ವರ್ಷದಿಂದ ಮನವಿ ನೀಡುತ್ತಾ ಬಂದಿದ್ದೇವೆ. 2024ರ ನವೆಂಬರ್ನಲ್ಲಿ ಕಡಬ ತಹಸೀಲ್ದಾರ್ ಅವರು ನಾವು ವಾಸವಿದ್ದ ಮನೆಯನ್ನು ಕೆಡವಿ ಹಾಕಿದ್ದಾರೆ. ಇದರ ಬಗ್ಗೆ ಹಲವಾರು ಬಾರಿ ಗಮನ ಸೆಳೆದರೂ ಯಾವುದೇ ಸ್ಪಂದನೆ ದೊರಕಿಲ್ಲ. ಹೀಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ. ನೀವು ಹೇಳಿದ ಹದಿನೈದು ದಿನಗಳಿಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇದೆ. ಆ ನಾಲ್ಕು ದಿನಗಳಲ್ಲಿ ತೀರ್ಮಾನ ನೀಡಿ, ನಂತರವಷ್ಟೇ ನಾವು ಇಲ್ಲಿಂದ ಕದಲುತ್ತೇವೆ. ಅಲ್ಲಿಯೂ ನಮಗೆ ನ್ಯಾಯ ಸಿಗದಿದ್ದರೆ ದಯಾಮರಣಕ್ಕೆ ಅವಕಾಶ ಮಾಡಿಕೊಡಿ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಕ್ರಿಯಿಸಿದ ಸ್ಟೆಲ್ಲಾ ವರ್ಗೀಸ್, “ತನಿಖೆ ನಡೆಯುತ್ತಿರುವಾಗ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ನಿಮಗೆ ಮನೆ ಇಲ್ಲವೆಂದಾದರೆ ನಿರಾಶ್ರಿತರ ಶಿಬಿರಕ್ಕೆ ಕಳುಹಿಸಲು ವ್ಯವಸ್ಥೆ ಮಾಡುತ್ತೇನೆ,” ಎಂದರು.
ಮಗನ ಆಕ್ಷೇಪ:
ಸಂತ್ರಸ್ತ ದಂಪತಿಯ ಪುತ್ರ ಸುಬ್ರಹ್ಮಣ್ಯ ಮಾತನಾಡಿ, “ಅಧಿಕಾರಿಗಳು ನಮ್ಮ ಮನೆಯನ್ನು ಒಡೆದು ಹಾಕಿದ್ದಾರೆ ಎನ್ನುವುದು ನಮ್ಮ ದೂರು. ಈಗ ನಿರಾಶ್ರಿತರ ಶಿಬಿರಕ್ಕೆ ಕಳುಹಿಸುತ್ತೇವೆ ಎನ್ನುವುದು ಎಷ್ಟು ಸರಿ? 2005ರಿಂದಲೇ ನಾವು ಆ ಜಾಗದಲ್ಲಿ ವಾಸವಿದ್ದು, ಕೃಷಿ ಮಾಡಿಕೊಂಡಿದ್ದೆವು,” ಎಂದರು.
ಸಹಾಯಕ ಆಯುಕ್ತರು, “ಅದು ಸರ್ಕಾರಿ ಜಾಗ. 94ಸಿ ಅಡಿಯಲ್ಲಿ ಅರ್ಜಿ ನೀಡಿದ್ದೀರಾ? ಅದರ ಸ್ಥಿತಿಗತಿ ಏನಾಗಿದೆ?” ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಮುತ್ತುಸ್ವಾಮಿ, “ನಾವು ಮನೆ ಕಟ್ಟಿದ್ದರೂ ನಮ್ಮ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಆದರೆ ಪಕ್ಕದಲ್ಲೇ ಟೆಂಟ್ ಕಟ್ಟಿಕೊಂಡಿದ್ದವರ ಅರ್ಜಿಯನ್ನು ಪುರಸ್ಕರಿಸಿದ್ದಾರೆ. ನಮಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಬೇಕು,” ಎಂದು ಪಟ್ಟು ಹಿಡಿದರು.
ಸ್ಟೆಲ್ಲಾ ವರ್ಗೀಸ್ ಅವರು ಮಾತನಾಡಿ, “ನಿಮ್ಮ ಅರ್ಜಿಯ ಕುರಿತು ಸುಳ್ಯ ತಹಸೀಲ್ದಾರ್ ಅವರಿಂದ ವರದಿ ತರಿಸುತ್ತಿದ್ದೇನೆ. ಅಲ್ಲಿಯವರೆಗೆ ನೀವು ಕಾಯಬೇಕು. ಇಲ್ಲಿ ಕುಳಿತುಕೊಳ್ಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ,” ಎಂದರು. ಆದರೆ, ದಂಪತಿಗಳು ತಮಗೆ ಆನೆ ಕಾಟ ಇರುವ ಕಾರಣ ಮತ್ತು ನ್ಯಾಯ ಸಿಗುವವರೆಗೆ ಇಲ್ಲಿಯೇ ಇರುವುದಾಗಿ ಸ್ಪಷ್ಟಪಡಿಸಿದರು.
ವರದಿ ಬಂದ ಕೂಡಲೇ ಮುಂದಿನ ಕ್ರಮ
”ಕಡಬ ತಹಸೀಲ್ದಾರ್ ಮನೆ ಕೆಡವಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದ್ದರಿಂದ ಸುಳ್ಯ ತಹಸೀಲ್ದಾರ್ ಅವರು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ. ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು.” – ಸ್ಟೆಲ್ಲಾ ವರ್ಗೀಸ್, ಸಹಾಯಕ ಆಯುಕ್ತೆ, ಪುತ್ತೂರು
ದಲಿತ ಸಂಘಟನೆಗಳ ಬೆಂಬಲ
ಪ್ರತಿಭಟನಾ ಸ್ಥಳಕ್ಕೆ ದಲಿತ ಸಂಘಟನೆಯ ಮುಖಂಡರಾದ ಬಿ.ಕೆ. ಸೇಸಪ್ಪ ಬೆದ್ರಕಾಡು, ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ ಸೇರಿದಂತೆ ಹಲವು ಮುಖಂಡರು ಭೇಟಿ ನೀಡಿ ಬೆಂಬಲ ಸೂಚಿಸಿದರು. “ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ನೋವು ಕೇಳಬೇಕು ಮತ್ತು ಸರ್ಕಾರಕ್ಕೆ ಈ ಬಗ್ಗೆ ಮನವರಿಕೆ ಮಾಡಿಕೊಡಬೇಕು,” ಎಂದು ಒತ್ತಾಯಿಸಿದರು.
ಸಂತ್ರಸ್ತ ಸುಬ್ರಹ್ಮಣ್ಯ ಮಾತನಾಡಿ, “ಬೆಂಗಳೂರಿನಲ್ಲಿ ಮನೆ ಒಡೆದವರಿಗೆ ಮೂರು ದಿನದಲ್ಲಿ ಪರಿಹಾರ ಸಿಗುತ್ತದೆ. ಆದರೆ ಕಡಬದಲ್ಲಿ ಒಂದು ವರ್ಷ ಕಳೆದರೂ ಕ್ರಮವಿಲ್ಲ. ನಮಗೆ ನಮ್ಮ ಹಳೆಯ ಜಾಗವೇ ಬೇಕು ಮತ್ತು ಮನೆ ಒಡೆದ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು. ನಾಲ್ಕು ದಿನಗಳಲ್ಲಿ ನ್ಯಾಯ ಸಿಗದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು,” ಎಂದು ಎಚ್ಚರಿಸಿದರು.
ಪೊಲೀಸರಿಗೆ ಒತ್ತಡದ ಆರೋಪ?
ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಪ್ರತಿಭಟನಾಕಾರರು ಕಚೇರಿ ಆವರಣದ ಹೊರಗೆ ಇರುವುದರಿಂದ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಿರುವ ಕಾರಣ ಪೊಲೀಸ್ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎನ್ನಲಾಗಿದೆ.
ಹಿರಿಯ ನಾಗರಿಕರಿಗೆ ಅನ್ಯಾಯ:
ಹಿರಿಯ ನಾಗರಿಕರಿಗೆ ನ್ಯಾಯ ಒದಗಿಸಬೇಕಾದ ಸಹಾಯಕ ಆಯುಕ್ತರು, ನಾಲ್ಕು ದಿನಗಳಿಂದ ಬಿಸಿಲು-ಚಳಿಯ ನಡುವೆ ಧರಣಿ ನಡೆಸುತ್ತಿರುವ ದಂಪತಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಅಂತರ ರಾಜ್ಯ6 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!















