ಶಿಕ್ಷಣ
Vivekananda-ವಿವೇಕಾನಂದ ಫಾರ್ಮಾಸ್ಯೂಟಿಕಲ್ ಸೈನ್ಸಸ್ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ; ವ್ಯಕ್ತಿತ್ವ ನಿರ್ಮಾಣಕ್ಕೆ ಕ್ರೀಡೆ ಪೂರಕ: ಮುರಳಿಧರ ಕೆ. ಅಭಿಮತ
ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯೂಟಿಕಲ್ ಸೈನ್ಸಸ್ ಸಂಸ್ಥೆಯಲ್ಲಿ 2025–26ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವು ಶುಕ್ರವಾರ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮುರಳಿಧರ ಕೆ. ಅವರು ಉದ್ಘಾಟಿಸಿ ಮಾತನಾಡಿದರು.
ಪುತ್ತೂರು, ಜ.02: ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯೂಟಿಕಲ್ ಸೈನ್ಸಸ್ ಸಂಸ್ಥೆಯಲ್ಲಿ 2025–26ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವು ಶುಕ್ರವಾರ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮುರಳಿಧರ ಕೆ. ಅವರು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಅಕಾಡೆಮಿಕ್ ಸಾಧನೆಯ ಜೊತೆಗೆ ಕ್ರೀಡಾ ಮನೋಭಾವವನ್ನೂ ಬೆಳೆಸಿಕೊಳ್ಳಬೇಕು. ಕ್ರೀಡಾ ಶಿಸ್ತು, ತಂಡಭಾವನೆ, ಆತ್ಮವಿಶ್ವಾಸವನ್ನು ವೃದ್ಧಿಸಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಖಜಾಂಚಿಯಾದ ಮೂಲಚಂದ್ರ ಕೆ. ಅವರು ಮಾತನಾಡಿ, ಭಾರತೀಯ ಸಂಪ್ರದಾಯಿಕ ಕ್ರೀಡೆಗಳ ಮಹತ್ವವನ್ನು ವಿವರಿಸಿದರು. ಇಂದಿನ ಯುವ ಪೀಳಿಗೆ ನಮ್ಮ ದೇಶದ ಪಾರಂಪರಿಕ ಕ್ರೀಡೆಗಳತ್ತ ಗಮನಹರಿಸಬೇಕಾದ ಅಗತ್ಯವಿದೆ ಎಂದರು. ಇದೇ ಸಂದರ್ಭದಲ್ಲಿ ಪ್ಯಾರಾ ಆರ್ಚರಿಯಲ್ಲಿ ವಿಶ್ವಮಟ್ಟದಲ್ಲಿ ಸಾಧನೆ ಮಾಡಿದ ಶೀತಲ್ ದೇವಿ ಅವರ ಸಾಧನೆಯನ್ನು ಸ್ಮರಿಸಿ, ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮುರಳಿಧರ ಕೆ. ಅವರು ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಕಿರಣ್ ಎಸ್.ಎನ್. ಅವರಿಗೆ ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಿದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕಾಲೇಜಿನ ಕ್ರೀಡಾಪಟು ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ಗೌತಮಿ ಬಿ. ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಂಗವಾಗಿ ಪಥ ಸಂಚಲನದಲ್ಲಿ ವಿಜೇತರಾದ ದ್ವಿತೀಯ ಬಿ.ಫಾರ್ಮ್ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ನಂತರ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುವ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಉತ್ಸಾಹ ತುಂಬಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ.ಪಿ. ಅವರು ಸ್ವಾಗತಿಸಿ, ಕಾಲೇಜಿನ ಉಪನ್ಯಾಸಕರು ಹಾಗೂ ಕ್ರೀಡಾ ಸಂಯೋಜಕರಾದ ಶಾಂತನು ಕಾಮತ್ ಅವರು ವಂದಿಸಿದರು. ದ್ವಿತೀಯ ಬಿ.ಫಾರ್ಮ್ ವಿದ್ಯಾರ್ಥಿನಿಯಾದ ರಕ್ಷಿತಾ ಬಿ. ಹಾಗೂ ವಿಭಾ ಎನ್.ಎನ್. ಅವರು ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಬಿಗ್ ನ್ಯೂಸ್24 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ24 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ನಿಧನ ವಾರ್ತೆ6 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು5 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ6 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ5 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ6 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
Uncategorized7 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP


















