ಮಂಗಳೂರು
Mangalore-ರೂ 50 ಲಕ್ಷ ನಾವೇ ಕೊಡ್ತೇವೆ, ಮಗನನ್ನು ಮನೆ ಅಳಿಯನಾಗಿ ಕಳಿಸಿ: ಕೃಷ್ಣಾ ಜೆ ರಾವ್ ತಂದೆಗೆ ಪ್ರತಿಭಾ ಕುಳಾಯಿ ಖಡಕ್ ತಿರುಗೇಟು; ಡಾ.ಪ್ರಭಾಕರ ಭಟ್ ಊರಾದ ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ..!
ಪ್ರೀತಿಸಿ ಮಗು ಕರುಣಿಸಿದ ಬಳಿಕ ಮದುವೆಯಾಗಲು ನಿರಾಕರಿಸಿ ಯುವತಿಗೆ ಅನ್ಯಾಯ ಮಾಡಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಡಿಎನ್ಎ ಪರೀಕ್ಷೆಯಲ್ಲೇ ಮಗುವಿನ ತಂದೆ ಎಂಬುದು ಸಾಬೀತಾಗಿದ್ದರೂ, ಹಣದ ಬಲದಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿರುವುದಾಗಿ ಆರೋಪಿಸಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಆರೋಪಿಯ ಜಾಮೀನು ರದ್ದುಪಡಿಸಲು ಸಂತ್ರಸ್ತೆಯ ಪರವಾಗಿ ನ್ಯಾಯಾಲಯದ ಮೆಟ್ಟಿಲೇರಲು ಸಜ್ಜಾಗಿದ್ದಾರೆ.
ಮಂಗಳೂರು: ಪ್ರೀತಿಸಿ ಮಗು ಕರುಣಿಸಿದ ಬಳಿಕ ಮದುವೆಯಾಗಲು ನಿರಾಕರಿಸಿ ಯುವತಿಗೆ ಅನ್ಯಾಯ ಮಾಡಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಡಿಎನ್ಎ ಪರೀಕ್ಷೆಯಲ್ಲೇ ಮಗುವಿನ ತಂದೆ ಎಂಬುದು ಸಾಬೀತಾಗಿದ್ದರೂ, ಹಣದ ಬಲದಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿರುವುದಾಗಿ ಆರೋಪಿಸಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಆರೋಪಿಯ ಜಾಮೀನು ರದ್ದುಪಡಿಸಲು ಸಂತ್ರಸ್ತೆಯ ಪರವಾಗಿ ನ್ಯಾಯಾಲಯದ ಮೆಟ್ಟಿಲೇರಲು ಸಜ್ಜಾಗಿದ್ದಾರೆ.
ಶುಕ್ರವಾರ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಸಂತ್ರಸ್ತೆ ಪೂಜಾ ಮತ್ತು ಆಕೆಯ ಪೋಷಕರೊಂದಿಗೆ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಭಾ ಕುಳಾಯಿ ಅವರು ಆರೋಪಿ ಮತ್ತು ಆತನ ಕುಟುಂಬದ ವಿರುದ್ಧ ಗುಡುಗಿದರು. ಸಂಧಾನದ ಬಾಗಿಲು ಮುಚ್ಚಿದ್ದು, ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ಈ ಸಂದರ್ಭ ಅವರು ಹೇಳಿದರು.
50 ಲಕ್ಷ ನಾವೇ ಕೊಡ್ತೇವೆ, ಮಗನನ್ನು ಮನೆ ಅಳಿಯನಾಗಿ ಕಳಿಸಿ!
ಪ್ರಕರಣವನ್ನು ರಾಜೀ ಮಾಡಿಕೊಳ್ಳಲು ಆರೋಪಿ ಕೃಷ್ಣ ಜೆ. ರಾವ್ ತಂದೆ ಜಗನ್ನಿವಾಸ್ ರಾವ್ ವಿಲಕ್ಷಣ ಷರತ್ತುಗಳನ್ನು ಹಾಕಿರುವುದಾಗಿ ಆರೋಪಿಸಿದ ಅವರು, “ಮಗುವನ್ನು ಸಾಂತ್ವನ ಕೇಂದ್ರಕ್ಕೆ ಬಿಡಬೇಕು, ಮದುವೆಯಾಗಿ ಕೆಲವೇ ದಿನಗಳಲ್ಲಿ ಡೈವೋರ್ಸ್ ನೀಡಬೇಕು, ಇದಕ್ಕೆ ಪ್ರತಿಯಾಗಿ 50 ಲಕ್ಷ ರೂಪಾಯಿ ನೀಡುತ್ತೇವೆ ಪ್ರತಿಯಾಗಿ ಪೂಜಾ ಹಾಕಿರುವ ಕೇಸ್ ವಾಪಸ್ಸು ತೆಗೆದುಕೊಳ್ಳಬೇಕು ” ಎಂಬ ಬೇಡಿಕೆ ಇಟ್ಟಿರುವುದಾಗಿ ತಿಳಿಸಿದರು.
ಈ ಬೇಡಿಕೆಗಳ ಕುರಿತಾಗಿ ಬೆಂಕಿ ಉಗುಳಿರುವ ಪ್ರತಿಭಾ ಕುಳಾಯಿ “ನಿಮ್ಮ ಹಣಕ್ಕೆ ಇಲ್ಲಿ ಯಾರೂ ಬಿದ್ದಿಲ್ಲ. ಬೇಕಿದ್ದರೆ ಆ 50 ಲಕ್ಷ ರೂಪಾಯಿಯನ್ನು ನಾನೇ ಜಗನ್ನಿವಾಸ್ ರಾವ್ ಅವರಿಗೆ ಕೊಡುತ್ತೇನೆ. ಅವರು ತಮ್ಮ ಮಗನನ್ನು ಪೂಜಾಳ ಮನೆಗೆ ‘ಮನೆ ಅಳಿಯ’ನಾಗಿ ಕಳುಹಿಸಲಿ” ಎಂದು ಖಡಕ್ ಸವಾಲು ಹಾಕಿದ್ದಾರೆ.
ಪುತ್ತಿಲರೇ, ಪೂಜಾ ಕಲ್ಯಾಣ ಮಾಡಿಸಿ!
ಇದೇ ವೇಳೆ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೂ ಪ್ರತಿಭಾ ಕುಳಾಯಿ ಟಾಂಗ್ ನೀಡಿದ್ದಾರೆ. “ಶ್ರೀನಿವಾಸ ದೇವರಿಗೆ ಅದ್ದೂರಿ ಕಲ್ಯಾಣೋತ್ಸವ ಮಾಡಿಸಿರುವ ಪುತ್ತಿಲರು, ಸಂಕಷ್ಟದಲ್ಲಿರುವ ಈ ಹಿಂದೂ ಯುವತಿ ಪೂಜಾಳಿಗೆ ಕೃಷ್ಣ ಜೆ. ರಾವ್ ಜೊತೆ ಮದುವೆ ಮಾಡಿಸುವ ಮನಸ್ಸು ಮಾಡಲಿ. ಕರಾವಳಿಯ ನಾಯಕರು ಕೇವಲ ಒಗ್ಗಟ್ಟಿನ ಭಾಷಣ ಮಾಡುವುದಲ್ಲ, ಇಂತಹ ಅನ್ಯಾಯಕ್ಕೊಳಗಾದ ಹೆಣ್ಣುಮಕ್ಕಳ ಪರವಾಗಿ ನಿಲ್ಲಲಿ” ಎಂದು ಆಗ್ರಹಿಸಿದರು.
ಕೃಷ್ಣ ಜೆ. ರಾವ್ ಯುವತಿ ಜತೆ ವಿವಾಹ ಆಗಿ ಆ ಮಗುವಿಗೆ ತಂದೆಯ ಸ್ಥಾನಮಾನ ನೀಡುವ ಆಶಾಭಾವನೆಯೊಂದಿಗೆ ಆತನಿಗೆ ಜಾಮೀನು ದೊರಕಿ ಆತ ಆರಾಮವಾಗಿ ಓಡಾಡಿಕೊಂಡಿದ್ದರೂ, ನಾವು ಈವರೆಗೆ ಸುಮ್ಮನಿದ್ದೆವು. ಆತನ ತಾಯಿ ನನ್ನ ಮೇಲೆ ಹಾಗೂ ಯುವತಿಯ ತಾಯಿ ಮೇಲೆ ಮಾನ ಹಾನಿ ಮಾಡಿದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಆದರೆ ವಾಸ್ತವದಲ್ಲಿ ಇಲ್ಲಿ ಓರ್ವ ಯುವತಿ ಮತ್ತು ಆಕೆಯ ಕಟುಂಬದವರ ಮಾನ ಹರಾಜು ಹಾಕಲಾಗಿದೆ ಎಂದವರು ಹೇಳಿದರು.
ಕರಾವಳಿಯಲ್ಲಿ ಹಿಂದು ಸಮಾಜದ ಬಗ್ಗೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಃ ಇಂತಹ ಸನ್ನಿವೇಶದಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಧಾವಿಸುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಶಕ್ತಿ ಕೇಂದ್ರ ಆಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ಪ್ರತಿಭಾ ಕುಳಾಯಿ ಹೇಳಿದರು.
ಮಗುವಿನ ತಂದೆ ಕೃಷ್ಣ ಜೆ.ರಾವ್ ಯಾವ ಕಾರಣಕ್ಕೆ ಪೂಜಾಳನ್ನು ತಿರಸ್ಕರಿಸುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ ಅರ್ಥಮಾಡಿಕೊಂಡಿದ್ದ ಇವರಿಬ್ಬರ ಸರಸದಲ್ಲಿ ಮಗು ಜನಿಸಿದ ಬಳಿಕ ಮತ್ತೆ ಆಕೆಯನ್ನು ದೂರ ಮಾಡುವುದರಲ್ಲಿ ಅರ್ಥ ಇಲ್ಲ. ಆಕೆ ಯಾವುದೇ ಕಾರಣಕ್ಕೂ ಅಬಲೆ ಅಲ್ಲ, ಆಕೆಯೂ ನಿತ್ಯವೂ ನೊಂದುಕೊಳ್ಳುತ್ತಿದ್ದು, ಆತ್ಮಹತ್ಯೆಗೂ ಯೋಚಿಸಿದ್ದಾಳೆ. ಅವಳ ಬದುಕಿಗೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತಿದ್ದು, ಮುಂದೆ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿ ಮುಂದುವರಿಯುತ್ತೇವೆ ಎಂದು ಪ್ರತಿಭಾ ಕುಳಾಯಿ ಹೇಳಿದರು.
‘ಸಾಯಬೇಕು ಎನಿಸುತ್ತಿದೆ’ – ಸಂತ್ರಸ್ತೆಯ ಅಳಲು
“ನನ್ನಿಂದ ತಪ್ಪಾಗಿದೆ ನಿಜ, ಆದರೆ ಮಗುವಿನ ತಂದೆ ಯಾರು ಎಂದು ಕೇಳಿದಾಗ ಉತ್ತರಿಸಲಾಗದೆ ಸಾಯಬೇಕು ಎನಿಸುತ್ತಿದೆ” ಎಂದು ಸಂತ್ರಸ್ತೆ ಪೂಜಾ ಕಣ್ಣೀರಿಟ್ಟರೆ, “ನಮ್ಮ ಮಗಳಿಗೆ ನ್ಯಾಯ ಬೇಕು, ಆತ ಮದುವೆಯಾಗಿ ಸಂಸಾರ ನಡೆಸಬೇಕು” ಎಂದು ಸಂತ್ರಸ್ತೆಯ ತಾಯಿ ನಮಿತಾ ಆಗ್ರಹಿಸಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಬಿಗ್ ನ್ಯೂಸ್23 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು24 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಶಿಕ್ಷಣ24 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ5 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಮಂಗಳೂರು4 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ


















