ಶಿಕ್ಷಣ
Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಗಣಿತ ದಿನಾಚರಣೆ ಕಾರ್ಯಕ್ರಮ; ಮೊಬೈಲ್ ವೀಕ್ಷಣೆಯಷ್ಟೇ ಆಸಕ್ತಿ ಗಣಿತದಲ್ಲೂ ಇದ್ದರೆ ಯಶಸ್ಸು ಖಚಿತ : ವೀಣಾ ಸರಸ್ವತಿ
ಮೊಬೈಲ್, ಚಲನಚಿತ್ರ ಇತ್ಯಾದಿಗಳನ್ನು ಸಾಕಷ್ಟು ತಲ್ಲೀನರಾಗಿ, ಕುತೂಹಲ ಆಸಕ್ತಿಯಿಂದ ಉತ್ಸಾಹಭರಿತವಾಗಿ ವೀಕ್ಷಿಸುತ್ತೇವೆ. ಆಗ ಯಾರಿಗೂ ಪೋಷಕರ ಸಹಾಯ ಬೇಕಾಗುವುದಿಲ್ಲ. ಅಷ್ಟೇ ಆಸಕ್ತಿಯಿಂದ ಗಣಿತವನ್ನೂ ಕಲಿತರೆ ಅದು ಕರಗತವಾಗಿಬಿಡುತ್ತದೆ. ಆದರೆ ತಲ್ಲೀನತೆ, ಕುತೂಹಲ, ಆಸಕ್ತಿ, ಉತ್ಸಾಹ ಇವುಗಳನ್ನೆಲ್ಲ ಖರೀದಿಸಲು ಸಾಧ್ಯವಾಗುವುದಿಲ್ಲ, ನಾವೇ ಬೆಳೆಸಿಕೊಳ್ಳಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಗಣಿತ ಶಿಕ್ಷಕಿ ವೀಣಾ ಸರಸ್ವತಿ ಹೇಳಿದರು.
ಪುತ್ತೂರು: ಮೊಬೈಲ್, ಚಲನಚಿತ್ರ ಇತ್ಯಾದಿಗಳನ್ನು ಸಾಕಷ್ಟು ತಲ್ಲೀನರಾಗಿ, ಕುತೂಹಲ ಆಸಕ್ತಿಯಿಂದ ಉತ್ಸಾಹಭರಿತವಾಗಿ ವೀಕ್ಷಿಸುತ್ತೇವೆ. ಆಗ ಯಾರಿಗೂ ಪೋಷಕರ ಸಹಾಯ ಬೇಕಾಗುವುದಿಲ್ಲ. ಅಷ್ಟೇ ಆಸಕ್ತಿಯಿಂದ ಗಣಿತವನ್ನೂ ಕಲಿತರೆ ಅದು ಕರಗತವಾಗಿಬಿಡುತ್ತದೆ. ಆದರೆ ತಲ್ಲೀನತೆ, ಕುತೂಹಲ, ಆಸಕ್ತಿ, ಉತ್ಸಾಹ ಇವುಗಳನ್ನೆಲ್ಲ ಖರೀದಿಸಲು ಸಾಧ್ಯವಾಗುವುದಿಲ್ಲ, ನಾವೇ ಬೆಳೆಸಿಕೊಳ್ಳಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಗಣಿತ ಶಿಕ್ಷಕಿ ವೀಣಾ ಸರಸ್ವತಿ ಹೇಳಿದರು.
ಅವರು ಸಂಸ್ಥೆಯಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಗಣಿತದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸೋಮವಾರ ಮಾತನಾಡಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಮಾತನಾಡಿ ಗಣಿತ ಅನ್ನುವುದು ಎಲ್ಲಾ ವಿಷಯಕ್ಕೂ ಅಡಿಪಾಯ ಇದ್ದ ಹಾಗೆ. ನಾವು ಪ್ರಕೃತಿಯಲ್ಲಿ ಗಣಿತವನ್ನು ಗುರುತಿಸದಿರುವುದೇ ಗಣಿತ ಕಷ್ಟವಾಗಲು ಕಾರಣ. ಗಣಿತದ ಮೂಲಧಾತುವಾದ ಮಗ್ಗಿಯನ್ನು ಗಟ್ಟಿಮಾಡಿಕೊಂಡಲ್ಲಿ ಗಣಿತವು ಸುಲಭವೆನಿಸುತ್ತದೆ ಎಂದರು.
ಆರನೇ ತರಗತಿಯ ವಿದ್ಯಾರ್ಥಿನಿ ಪ್ರಣಮ್ಯ ಅವರು ರಾಮಾನುಜನ್ ಕುರಿತಾಗಿ ಮಾತನಾಡಿದರು. ನಾಲ್ಕನೇಯ ತರಗತಿಯ ವಿದ್ಯಾರ್ಥಿ ಅನ್ಶ್ ಕಾಮತ್ ನಿಜ ಜೀವನದಲ್ಲಿನ ಗಣಿತದ ಉಪಯೋಗವನ್ನು ತಿಳಿಸಿಕೊಟ್ಟರು. ವಿದ್ಯಾಭಾರತಿಯ ರಾಷ್ಟ್ರೀಯ ಮಟ್ಟದ ಗಣಿತ ಮಾದರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ೯ನೇ ತರಗತಿಯ ಸಾತ್ವಿಕ್ ಜಿ ಅವರು ತನ್ನ ಮಾದರಿಯನ್ನು ಪ್ರದರ್ಶಿಸಿ ವಿವರಿಸಿದರು.
ವೇದಿಕೆಯಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ ಉಪಸ್ಥಿತರಿದ್ದರು. ಏಳನೆಯ ತರಗತಿಯ ವಿದ್ಯಾರ್ಥಿ ಸಂಹಿತ್ ಸ್ವಾಗತಿಸಿ, ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಐಶಾನೀ ರೈ ವಂದಿಸಿದರು. ಎಂಟನೇ ತರಗತಿ ವಿದ್ಯಾರ್ಥಿನಿ ಪೂರ್ವಿ ವಿ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿದ್ಯಾಲಯದ ಶಿಕ್ಷಕಿ ಕೃತ್ತಿಕಾ ಸಹಕರಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Uncategorized18 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್12 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು16 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized16 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ16 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ17 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ16 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್17 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















