Connect with us

Uncategorized

Puttur Buntara Yuva Sangha| ಪುತ್ತೂರು ತಾಲೂಕು ಬಂಟರ ಸಂಘದ ಯುವ ವಿಭಾಗ – ನೂತನ ಅಧ್ಯಕ್ಷರಾಗಿ ಭಾಗ್ಯೇಶ್ ರೈ, ಕ್ರಿಕೆಟ್ ಸಂಚಾಲಕರಾಗಿ ಕಾರ್ತಿಕ್ ರೈ ಆಯ್ಕೆ

Published

on

Ad Widget

Ad Widget

Ad Widget

Ad Widget


ಅಧ್ಯಕ್ಷ ಸ್ಥಾನಕ್ಕೆ ವಿದ್ಯಾಮಾತಾ ಅಕಾಡಮಿಯ ಮೂಲಕ ಯುವ ಜನರನ್ನು ಉದ್ಯೋಗಿಗಳನ್ನಾಗಿ ಮಾಡುವಲ್ಲಿ ತೊಡಗಿಸಿಕೊಂಡಿರುವ, 50 ವರ್ಷಗಳ ಇತಿಹಾಸವಿರುವ ಜೆಸಿಐ ಪುತ್ತೂರಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವೀ ಯುವ ನಾಯಕ ಭಾಗ್ಯೇಶ್ ರೈ ಅವರನ್ನು ನೇಮಕಗೊಳಿಸಲಾಗಿದೆ

Ad Widget

Ad Widget

Ad Widget

Ad Widget

Puttur Buntara Yuva Sangha ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಯುವ ವಿಭಾಗಕ್ಕೆ ನೂತನ ಸಾರಥಿಗಳ ನೇಮಕವಾಗಿದ್ದು, ನೂತನ ಅಧ್ಯಕ್ಷರಾಗಿ ಭಾಗ್ಯೇಶ್ ರೈ ಹಾಗೂ 2025-26ರ ಸಾಲಿನ ಕ್ರಿಕೆಟ್ ಟೂರ್ನಮೆಂಟ್ ಸಂಚಾಲಕರಾಗಿ ಕಾರ್ತಿಕ್ ರೈ ಬೆಳಿಯೂರು ಕಟ್ಟೆ ಅವರನ್ನು ನೇಮಕ ಮಾಡಲಾಗಿದೆ.

Ad Widget

Ad Widget alt="Ad Widget"/>

Ad Widget

ತಾಲೂಕು ಬಂಟರ ಸಂಘದ ಶಿಫಾರಸಿನಂತೆ, ಸಂಘದ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ಅವರು ಈ ಮಹತ್ವದ ನೇಮಕಾತಿಯನ್ನು ಘೋಷಿಸಿದ್ದಾರೆ.

Ad Widget

Ad Widget <> Ad Widget

ಅನುಭವಿ ನಾಯಕತ್ವಕ್ಕೆ ಮಣೆ:
ಕಳೆದ ಎರಡು ವರ್ಷಗಳಿಂದ ಪುತ್ತೂರು ತಾಲೂಕು ಯುವ ಬಂಟರ ಸಂಘವನ್ನು ಗ್ರಾಮ ಮಟ್ಟದಲ್ಲಿ ಸಂಘಟಿಸಿ, ಯುವ ಸಮುದಾಯಕ್ಕೆ ಪ್ರೇರಣಾ ಶಕ್ತಿಯಾಗಿ ಕಾರ್ಯನಿರ್ವಹಿಸಿದ್ದ ಯುವ ಉದ್ಯಮಿ ಹರ್ಷ ಕುಮಾರ್ ರೈ ಮಾಡವು ಅವರ ಅವಧಿ ಮುಕ್ತಾಯಗೊಂಡಿದೆ. ಅವರ ಅವಧಿಯಲ್ಲಿ ಸಂಘಟನೆಯು ಅದ್ಭುತ ಬೆಳವಣಿಗೆಯನ್ನು ಕಂಡಿತ್ತು. ಇದೀಗ ಅವರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ವಿದ್ಯಾಮಾತಾ ಅಕಾಡಮಿಯ ಮೂಲಕ ಯುವ ಜನರನ್ನು ಉದ್ಯೋಗಿಗಳನ್ನಾಗಿ ಮಾಡುವಲ್ಲಿ ತೊಡಗಿಸಿಕೊಂಡಿರುವ, 50 ವರ್ಷಗಳ ಇತಿಹಾಸವಿರುವ ಜೆಸಿಐ ಪುತ್ತೂರಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವೀ ಯುವ ನಾಯಕ ಭಾಗ್ಯೇಶ್ ರೈ ಅವರನ್ನು ನೇಮಕಗೊಳಿಸಲಾಗಿದೆ.

ಕ್ರಿಕೆಟ್ ಸಂಚಾಲಕರಾಗಿ ಕಾರ್ತಿಕ್ ರೈ:
ಅನೇಕ ವರ್ಷಗಳಿಂದ ನಡೆಯುತ್ತಿರುವ ಪ್ರತಿಷ್ಠಿತ ಯುವ ಬಂಟರ ವಿಭಾಗದ ಕ್ರಿಕೆಟ್ ಪಂದ್ಯಾಟದ 2025-26ನೇ ಸಾಲಿನ ಸಂಚಾಲಕರನ್ನಾಗಿ ಉತ್ತಮ ಕ್ರಿಕೆಟ್ ಆಟಗಾರರು, ಯುವ ಉದ್ಯಮಿ, ಟಾಟಾ ಪವರ್ ಸೋಲಾರ್ ರೂಫ್ ಡೀಲರ್ ಲಿಶಿ ಪವರ್ ಸೊಲ್ಯೂಷನ್ ಮಾಲಕ ಕಾರ್ತಿಕ್ ರೈ ಬೆಳಿಯೂರು ಕಟ್ಟೆ ಅವರನ್ನು ನೇಮಕಗೊಳಿಸಲಾಗಿದೆ ಎಂದು ಬಂಟರ ಸಂಘದ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Click to comment

Leave a Reply

Uncategorized

ಕಾರ್ಯಕರ್ತರ ಶ್ರಮದಲ್ಲಿ ನೆಲಪ್ಪಾಲು ವೀರಾಂಜನೇಯ ಕ್ಷೇತ್ರ ನಿರ್ಮಾಣ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಶ್ರೀ ಪಂಚಮುಖಿ ಆಂಜನೇಯ ಯಾಗದ ಅಂಗವಾಗಿ ಧರ್ಮಸಭೆ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ಹಿಂದೂ ಆರಾಧನಾ ಕೇಂದ್ರಗಳು ಸಮಾಜದ ಎಲ್ಲ ವರ್ಗಗಳ ಜನರ ಶ್ರದ್ಧೆ ಮತ್ತು ಬದ್ಧತೆಯಿಂದ ನಿರ್ಮಾಣವಾಗುತ್ತವೆ. ಕಾರ್ಯಕರ್ತರ ಪರಿಶ್ರಮದ ಫಲವಾಗಿ ದೇವಸ್ಥಾನ ನಿರ್ಮಾಣಗೊಂಡಿರುವುದು ನೆಲಪ್ಪಾಲಿನ ವಿಶೇಷ. ಆಂಜನೇಯ ಹಿಂದೂ ಸಮಾಜಕ್ಕೆ ಆದರ್ಶ ವ್ಯಕ್ತಿತ್ವವಾಗಿದ್ದು, ಅವರ ಆರಾಧನೆಯ ಮೂಲಕ ಧರ್ಮದ ಕುರಿತು ಜಾಗೃತಿ ಮೂಡಿಸಲು ಸಾಧ್ಯ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.

Ad Widget

Ad Widget alt="Ad Widget"/>

Ad Widget

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಶ್ರೀಗುರುಕೃಷ್ಣ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಪಂಚಮುಖಿ ಆಂಜನೇಯ ಯಾಗದ ಅಂಗವಾಗಿ ಆಯೋಜಿಸಲಾದ ಧರ್ಮಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

Ad Widget

Ad Widget <> Ad Widget

ಅಯೋಧ್ಯೆ ರಾಮಮಂದಿರ ನಿರ್ಮಾಣದ ಉಸ್ತುವಾರಿ ಗೋಪಾಲ್ ಜೀ ಮಾತನಾಡಿ, ಹನುಮಂತನ ಆರಾಧನೆ ಮತ್ತು ಅನುಗ್ರಹ ದೊರೆತಾಗ ರಾಮನ ದರ್ಶನ ಸಾಧ್ಯವಾಗುತ್ತದೆ. ಸಮಾಜದ ಮೇಲಿನ ಆಕ್ರಮಣಗಳನ್ನು ಕಂಡು ಮೌನವಾಗಿರುವವರು ನಿಜವಾದ ಹನುಮ ಭಕ್ತರಾಗಲು ಸಾಧ್ಯವಿಲ್ಲ. ಪರಾಕ್ರಮ ಪ್ರದರ್ಶಿಸಿದಾಗ ಮಾತ್ರ ಹನುಮಂತನ ಆರಾಧನೆಗೆ ನಿಜವಾದ ಅರ್ಥ ಬರುತ್ತದೆ. ಶ್ರದ್ಧಾ ಕೇಂದ್ರಗಳಲ್ಲಿ ಯುವಕರಿಗಾಗಿ ವ್ಯಾಯಾಮ ಶಾಲೆಗಳನ್ನು ಆರಂಭಿಸುವ ಕಾರ್ಯವಾಗಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಕೀಲ ಡಾ. ಅರುಣ್ ಶ್ಯಾಮ್, ಯಾಗ ಸಮಿತಿ ಸಂಚಾಲಕ ಜೀವಂದರ ಜೈನ್, ಪ್ರಧಾನ ಕಾರ್ಯದರ್ಶಿ ಮುರಳೀಕೃಷ್ಣ ಹಸಂತಡ್ಕ ಮತ್ತಿತರರು ಉಪಸ್ಥಿತರಿದ್ದರು.

Ad Widget

Ad Widget

ಪುನೀತ್ ಅತ್ತಾವರ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಸ್ತಾವನೆಗೈದರು. ಶ್ರೀಧರ್ ತೆಂಕಿಲ ವಂದಿಸಿದರು.

Ad Widget
Continue Reading

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.

ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.

Ad Widget

Ad Widget

ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ  ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!