ನಿಧನ ವಾರ್ತೆ
Siddharth Bhaiya-ಷೇರುಪೇಟೆಯ ‘ಮಾಂತ್ರಿಕ’ ಸಿದ್ಧಾರ್ಥ್ ಭಯ್ಯಾ ನಿಧನ: 10 ಲಕ್ಷವನ್ನು 4 ಕೋಟಿ ಮಾಡಿದ ಹೂಡಿಕೆ ಗುರುವಿಗೆ ಅಂತಿಮ ವಿದಾಯ
ಭಾರತೀಯ ಷೇರುಪೇಟೆಯ ಅತ್ಯಂತ ಯಶಸ್ವಿ ಹೂಡಿಕೆದಾರ ಹಾಗೂ ‘ಎಕ್ವಿಟಾಸ್’ (Aequitas) ಸಂಸ್ಥೆಯ ಸಂಸ್ಥಾಪಕ ಸಿದ್ಧಾರ್ಥ್ ಭಯ್ಯಾ (47) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಟುಂಬದೊಂದಿಗೆ ನ್ಯೂಜಿಲೆಂಡ್ ಪ್ರವಾಸದಲ್ಲಿದ್ದಾಗ ಡಿಸೆಂಬರ್ 31ರಂದು ಅವರು ವಿಧಿವಶರಾಗಿದ್ದಾರೆ ಎಂದು ಅವರ ಸಂಸ್ಥೆ ಅಧಿಕೃತವಾಗಿ ಪ್ರಕಟಿಸಿದೆ.
ಮುಂಬೈ: ಭಾರತೀಯ ಷೇರುಪೇಟೆಯ ಅತ್ಯಂತ ಯಶಸ್ವಿ ಹೂಡಿಕೆದಾರ ಹಾಗೂ ‘ಎಕ್ವಿಟಾಸ್’ (Aequitas) ಸಂಸ್ಥೆಯ ಸಂಸ್ಥಾಪಕ ಸಿದ್ಧಾರ್ಥ್ ಭಯ್ಯಾ (47) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಟುಂಬದೊಂದಿಗೆ ನ್ಯೂಜಿಲೆಂಡ್ ಪ್ರವಾಸದಲ್ಲಿದ್ದಾಗ ಡಿಸೆಂಬರ್ 31ರಂದು ಅವರು ವಿಧಿವಶರಾಗಿದ್ದಾರೆ ಎಂದು ಅವರ ಸಂಸ್ಥೆ ಅಧಿಕೃತವಾಗಿ ಪ್ರಕಟಿಸಿದೆ.
ಹೂಡಿಕೆದಾರರ ಪಾಲಿನ ಆಶಾಕಿರಣ:
ಸಿದ್ಧಾರ್ಥ್ ಭಯ್ಯಾ ಅವರು ಷೇರು ಮಾರುಕಟ್ಟೆಯಲ್ಲಿ ತಮ್ಮ ವಿಶಿಷ್ಟ ತಂತ್ರಗಳಿಂದಲೇ ಗುರುತಿಸಿಕೊಂಡವರು. ಕೇವಲ 13 ವರ್ಷಗಳಲ್ಲಿ ಹೂಡಿಕೆದಾರರ 10 ಲಕ್ಷ ರೂಪಾಯಿಯನ್ನು ಬರೋಬ್ಬರಿ 4 ಕೋಟಿ ರೂಪಾಯಿಗೆ ಬೆಳೆಸಿದ ಕೀರ್ತಿ ಇವರದ್ದು. 2013ರಲ್ಲಿ ಆರಂಭವಾದ ಇವರ ‘ಇಂಡಿಯಾ ಅಪಾರ್ಚುನಿಟೀಸ್ ಫಂಡ್’ ವಾರ್ಷಿಕವಾಗಿ ಸರಾಸರಿ 33% (CAGR) ಲಾಭ ನೀಡುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿತ್ತು.
ಮಲ್ಟಿಬ್ಯಾಗರ್ ಷೇರುಗಳ ಅನ್ವೇಷಕ:
ಅವಂತಿ ಫೀಡ್ಸ್ನಂತಹ ಕಂಪನಿಯಲ್ಲಿ ಹೂಡಿಕೆ ಮಾಡಿ 100 ಪಟ್ಟು ಲಾಭ ಗಳಿಸಿದ್ದ ಭಯ್ಯಾ ಅವರು, ಸ್ಮಾಲ್ಕ್ಯಾಪ್ ಮತ್ತು ಮಿಡ್ಕ್ಯಾಪ್ ಷೇರುಗಳನ್ನು ಆರಂಭಿಕ ಹಂತದಲ್ಲೇ ಗುರುತಿಸುವಲ್ಲಿ ನಿಪುಣರಾಗಿದ್ದರು. ಅಪಾರ್ ಇಂಡಸ್ಟ್ರೀಸ್, ಜೆಎಸ್ಎಲ್ ಮತ್ತು ಫಿನೋಲೆಕ್ಸ್ ಕೇಬಲ್ಸ್ನಂತಹ ಷೇರುಗಳು ಇವರಿಗೆ ಭಾರಿ ಲಾಭ ತಂದುಕೊಟ್ಟಿದ್ದವು.
ದೀರ್ಘದೃಷ್ಟಿ ಮತ್ತು ದಿಟ್ಟ ನಿರ್ಧಾರ:
ಮಾರುಕಟ್ಟೆಯ ಏರಿಳಿತವನ್ನು ಮೊದಲೇ ಊಹಿಸುವ ಅದ್ಭುತ ಕಲೆ ಸಿದ್ಧಾರ್ಥ್ ಅವರಿಗೆ ಸಿದ್ಧಿಸಿತ್ತು. 2024ರ ನವೆಂಬರ್ನಲ್ಲಿ ಮಾರುಕಟ್ಟೆಯು ಗರಿಷ್ಠ ಮಟ್ಟದಲ್ಲಿದ್ದಾಗ, “ಇದೊಂದು ದೊಡ್ಡ ಗುಳ್ಳೆ (Bubble)” ಎಂದು ಎಚ್ಚರಿಸಿದ್ದ ಅವರು, ತಮ್ಮ ಪೋರ್ಟ್ಫೋಲಿಯೊದ ಶೇ. 80ರಷ್ಟು ಹಣವನ್ನು ನಗದಾಗಿ ಮತ್ತು ಚಿನ್ನದ ಇಟಿಎಫ್ಗಳಿಗೆ ವರ್ಗಾಯಿಸಿದ್ದರು. ಈ ದೀರ್ಘದೃಷ್ಟಿಯಿಂದಾಗಿಯೇ ನವೆಂಬರ್ 2025ರ ವೇಳೆಗೆ ಅವರ ಫಂಡ್ ಶೇ. 36ರಷ್ಟು ವಾರ್ಷಿಕ ಲಾಭದೊಂದಿಗೆ ಮಾರುಕಟ್ಟೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿತ್ತು.
ಸಾಧನೆಯ ಹಾದಿ:
ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಸಿದ್ಧಾರ್ಥ್ ಭಯ್ಯಾ, ಈ ಹಿಂದೆ ನಿಪ್ಪಾನ್ ಇಂಡಿಯಾ ಮ್ಯೂಚುವಲ್ ಫಂಡ್ನಲ್ಲಿ ಅತ್ಯಂತ ಕಿರಿಯ ಫಂಡ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು. ಜನವರಿ 2026ರ ಹೊತ್ತಿಗೆ ಅವರ ‘ಎಕ್ವಿಟಾಸ್’ ಸಂಸ್ಥೆಯು ಸುಮಾರು 7,700 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು (AUM) ನಿರ್ವಹಿಸುತ್ತಿತ್ತು.
ಷೇರು ಮಾರುಕಟ್ಟೆಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಇಂತಹ ಅಪರೂಪದ ತಜ್ಞನ ಅಗಲಿಕೆಯು ಹೂಡಿಕೆದಾರರ ವಲಯದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ.
ನಿಧನ ವಾರ್ತೆ
Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.
ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಬಿಗ್ ನ್ಯೂಸ್24 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ7 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ7 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















