Connect with us

Uncategorized

ವಿಶ್ವದಾದ್ಯಂತ ಕಮಾಲ್ ಮಾಡಿದ ನಾಯಿ-ಮನುಷ್ಯನ ಅವಿನಾಭಾವ ಒಡನಾಟದ ‘777ಚಾರ್ಲಿ’ : 100 ಕೋಟಿ ಕ್ಲಬ್ ಸೇರುವತ್ತ ದಾಪುಗಾಲಿಡುತ್ತಿದೆ ತುಳುನಾಡಿನ ಯುವಕರ ಸಿನಿಮಾ – 4ನೇ ದಿನದ ಗಳಿಕೆಯೆಷ್ಟು ಗೊತ್ತೇ..?

Published

on

Ad Widget

Ad Widget

Ad Widget

Ad Widget

ತುಳುನಾಡಿನ ನಟ ,ನಿರ್ಮಾಪಕ, ನಿರ್ದೇಶಕರ ತಂಡದ ‘777 ಚಾರ್ಲಿ’ ದೇಶಾದ್ಯಂತ ಸದ್ದು ಮಾಡುತ್ತಿದೆ. ನಾಯಿ-ಮನುಷ್ಯನ ಅವಿನಾಭಾವ ಸಂಬಂಧದ ಕಥೆ ಹೊಂದಿರುವ ಸಿನಿಮಾ ಇದಾಗಿದೆ. ನಿರ್ದೇಶಕ ಕಾಸರಗೋಡಿನ ಕಿರಣ್ ರಾಜ್ ಚೊಚ್ಚಲ ಸಿನಿಮಾದಲ್ಲೇ ಗೆದ್ದರೆ , ಉಡುಪಿಯ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ಸಿನಿಮಾ ಭರ್ಜರಿ ಗಳಿಕೆಯೊಂದಿಗೆ ಮುನ್ನುಗ್ಗುತ್ತಿದೆ.

Ad Widget

Ad Widget

Ad Widget

Ad Widget

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಸಾಮಾನ್ಯವಾಗಿ ಆರಂಭದ ಮೂರು ದಿನ ಉತ್ತಮ ಗಳಿಕೆ ಇದ್ದು, ನಂತರ ದಿನಗಳಲ್ಲಿ ಕಡಿಮೆ ಆಗುತ್ತ ಸಾಗುತ್ತದೆ. ಆದರೆ ‘..ಚಾರ್ಲಿ’ಗೆ ಸೋಮವಾರ ಕೂಡ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಬಹುತೇಕ ಕಡೆ ಸಿಂಗಲ್‌ ಸ್ಕ್ರೀನ್ ಚಿತ್ರಮಂದಿರಗಳು ಫುಲ್ ಆಗಿವೆ. ಜೂನ್ 10ರಂದು ತೆರೆಕಂಡ ಈ ಸಿನಿಮಾ ಮೊದಲ ಮೂರು ದಿನಗಳಿಗೆ ಎಷ್ಟು ಗಳಿಕೆ ಮಾಡಿರಬಹುದು ಎಂಬ ಕುತೂಹಲ ಎಲ್ಲರಲ್ಲಿಯೂ ಇದೆ. ಅದಕ್ಕೆ ಉತ್ತರ ಇಲ್ಲಿದೆ. ಮೊದಲ ಮೂರು ದಿನಕ್ಕೆ ಈ ಸಿನಿಮಾ ಬರೋಬ್ಬರಿ 20 ಕೋಟಿ ರೂ.ಗಳವರೆಗೂ ಗಳಿಕೆ ಮಾಡಿದೆ ಎಂಬ ಮಾಹಿತಿ ಸಿಕ್ಕಿದೆ.

Ad Widget

Ad Widget alt="Ad Widget"/>

Ad Widget

ರಕ್ಷಿತ್ ಶೆಟ್ಟಿ ನಟನೆಯ ಯಾವ ಸಿನಿಮಾವೂ ಮಾಡಿರದಂತಹ ಕಲೆಕ್ಷನ್ ‘777 ಚಾರ್ಲಿ’ಯಿಂದ ಸಿಕ್ಕಿದೆ. ‘777 ಚಾರ್ಲಿ’ ಸಿನಿಮಾಗೆ ವ್ಯಾಪಕ ಬೇಡಿಕೆ ಇದ್ದಿದ್ದರಿಂದ ರಿಲೀಸ್ ಒಂದು ದಿನ ಮೊದಲೇ ದೇಶಾದ್ಯಂತ ಪೇಯ್ಡ್ ಪ್ರೀಮಿಯರ್ ಮಾಡಲಾಗಿತ್ತು. ಕರ್ನಾಟಕದಲ್ಲೇ ನೂರಕ್ಕೂ ಅಧಿಕ ಪ್ರೀಮಿಯರ್ ಶೋ ಮಾಡಿ ದಾಖಲೆ ಬರೆದಿತ್ತು. ಆ ಪೇಯ್ಡ್ ಪ್ರೀಮಿಯರ್‌ನಿಂದಲೇ ಸುಮಾರು 1.10 ಕೋಟಿ ರೂ. ಗಳಿಕೆ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಶುಕ್ರವಾರದ (ಜೂನ್ 10) ಗಳಿಕೆ 4.90 ಕೋಟಿ ರೂ. ಆಗಿದ್ದರೆ, ಶನಿವಾರ (ಜೂನ್ 11) 6.25 ಕೋಟಿ ರೂ. ಗಳಿಕೆಯಾಗಿದೆ. ಭಾನುವಾರ (ಜೂನ್ 13) 7.50 ಕೋಟಿ ರೂ. ಗಳಿಕೆಯಾಗಿರುವುದು ವಿಶೇಷ. ಮೊದಲ ದಿನದಿಂದಲೂ ಕಲೆಕ್ಷನ್‌ನಲ್ಲಿ ಏರಿಕೆ ಆಗುತ್ತಲೇ ಇದೆ ವಿನಃ, ಕಡಿಮೆ ಆಗುತ್ತಿಲ್ಲ ಎಂಬುದು ಗಮನಿಸಬೇಕಾದ ಅಂಶ. ಪೇಯ್ಡ್ ಪ್ರೀಮಿಯರ್‌ನ ಗಳಿಕೆಯೂ ಸೇರಿ ಒಟ್ಟು 19.75 ಕೋಟಿ ರೂ. ಕಲೆಕ್ಷನ್‌ ಮೊದಲ ಮೂರು ದಿನಕ್ಕೆ ಸಿಕ್ಕಿದೆ.

Ad Widget

Ad Widget <> Ad Widget

‘777 ಚಾರ್ಲಿ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದು, ಕರ್ನಾಟಕದಲ್ಲೇ ಅತೀ ಹೆಚ್ಚು ಗಳಿಕೆ ಮಾಡಿದೆ. ಮೂರು ದಿನಗಳಲ್ಲಿ 15.25 ಕೋಟಿ ರೂ. ಗಳಿಕೆ ಆಗಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣದಿಂದ 1.50 ಕೋಟಿ ರೂ., ಕೇರಳದಲ್ಲಿ 90 ಲಕ್ಷ ರೂ., ತಮಿಳುನಾಡಿನಲ್ಲಿ 60 ಲಕ್ಷ ರೂ. ಮತ್ತು ಭಾರತದ ಇತರೆ ಭಾಗಗಳಿಂದ 1.50 ಕೋಟಿ ರೂ. ಗಳಿಕೆ ಆಗಿದೆ. ಇದು ರಕ್ಷಿತ್ ಕರಿಯರ್‌ನ ದೊಡ್ಡ ದಾಖಲೆ ಆಗಿದೆ. ಈಚೆಗೆ ತೆರೆಕಂಡ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾವು ವಿಶ್ವಾದ್ಯಂತ ಸುಮಾರು 1200 ಕೋಟಿ ರೂ. ಗಳಿಗೂ ಅಧಿಕ ಗಳಿಕೆ ಮಾಡಿತ್ತು.

‘777 ಚಾರ್ಲಿ’ ಕೂಡ ಸುಮಾರು 50 ರಿಂದ 60 ಕೋಟಿ ರೂಪಾಯಿ ತನಕ ಗಳಿಕೆ ಮಾಡುವ ಸಾಧ್ಯತೆ ಎನ್ನಲಾಗುತ್ತಿದೆ. ಆ ಪ್ರಮಾಣದ ಗಳಿಕೆಯಾದರೆ, ‘777 ಚಾರ್ಲಿ’ ಬ್ಲಾಕ್ ಬಸ್ಟರ್ ಹಿಟ್ ಎನಿಸಿಕೊಳ್ಳುತ್ತದೆ. ಆದರೆ, ಈ ಚಿತ್ರತಂಡ ಈವರೆಗೂ ಎಲ್ಲಿಯೂ ಕೂಡ ಕಲೆಕ್ಷನ್ ಕುರಿತು ಮಾಹಿತಿ ಹಂಚಿಕೊಂಡಿಲ್ಲ.

Ad Widget

Ad Widget

ನಿರ್ದೇಶಕ ಕಿರಣ್‌ರಾಜ್‌ಗೆ ‘777 ಚಾರ್ಲಿ’ ಮೊದಲ ಸಿನಿಮಾ. ಅವರೀಗ ಮೊದಲ ಸಿನಿಮಾದಲ್ಲಿಯೇ ಭರ್ಜರಿ ಗೆಲುವು ಕಂಡಿದ್ದಾರೆ. ರಕ್ಷಿತ್ ಶೆಟ್ಟಿ ನಟನಾಗಿ ಮಾತ್ರವಲ್ಲದೆ, ನಿರ್ಮಾಪಕರಾಗಿಯೂ ಈ ಸಿನಿಮಾದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಸಂಗೀತಾ ಶೃಂಗೇರಿ, ದಾನೀಶ್‌ ಸೇಠ್, ಬಾಬಿ ಸಿಂಹ, ರಾಜ್‌ ಬಿ. ಶೆಟ್ಟಿ, ಭಾರ್ಗವಿ ನಾರಾಯಣ್, ಬೆಂಗಳೂರು ನಾಗೇಶ್, ಗೋಪಾಲ ಕೃಷ್ಣ ದೇಶಪಾಂಡೆ, ಬೇಬಿ ಶಾರ್ವರಿ ಮುಂತಾದವರು ನಟಿಸಿರುವ ಈ ಸಿನಿಮಾದಲ್ಲಿ ಚಾರ್ಲಿ (ಶ್ವಾನ) ಪ್ರಧಾನ ಪಾತ್ರ ನಿರ್ವಹಿಸಿದ್ದಾಳೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದು, ಅರವಿಂದ್ ಕಶ್ಯಪ್ ಛಾಯಾಗ್ರಾಹಣ ಮಾಡಿದ್ದಾರೆ.

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!