ನಿಧನ ವಾರ್ತೆ
Nelyadi-ನೆಲ್ಯಾಡಿ: ಸಾಲಬಾಧೆ ಹಾಗೂ ಮದ್ಯದ ವ್ಯಸನ – ಮನನೊಂದು ಯುವಕ ಆತ್ಮಹತ್ಯೆ
ನೆಲ್ಯಾಡಿ: ಸಾಲಬಾಧೆ ಹಾಗೂ ಅಮಲು ಪದಾರ್ಥಗಳ ವ್ಯಸನದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಯುವಕನೋರ್ವ ಇಲಿಪೇಸ್ಟ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಚಾಮತಮೂಲೆ ಎಂಬಲ್ಲಿ ನಡೆದಿದೆ. ಕೊಣಾಲು ಗ್ರಾಮದ ಚಾಮತಮೂಲೆ ನಿವಾಸಿ ಯತಿನ್ (27) ಮೃತಪಟ್ಟ ದುರ್ದೈವಿ.
ನೆಲ್ಯಾಡಿ: ಸಾಲಬಾಧೆ ಹಾಗೂ ಅಮಲು ಪದಾರ್ಥಗಳ ವ್ಯಸನದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಯುವಕನೋರ್ವ ಇಲಿಪೇಸ್ಟ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಚಾಮತಮೂಲೆ ಎಂಬಲ್ಲಿ ನಡೆದಿದೆ.
ಕೊಣಾಲು ಗ್ರಾಮದ ಚಾಮತಮೂಲೆ ನಿವಾಸಿ ಯತಿನ್ (27) ಮೃತಪಟ್ಟ ದುರ್ದೈವಿ.
ಘಟನೆಯ ಹಿನ್ನೆಲೆ:
ಮೃತ ಯತಿನ್ ಅವರು ವ್ಯವಹಾರ ನಡೆಸುವ ಉದ್ದೇಶಕ್ಕಾಗಿ ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದುಕೊಂಡಿದ್ದರು. ಆದರೆ, ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಬಾರದೆ ನಷ್ಟ ಉಂಟಾಗಿತ್ತು. ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಅವರು ವಿಪರೀತ ಮದ್ಯಪಾನದ ವ್ಯಸನಕ್ಕೂ ಒಳಗಾಗಿದ್ದರು ಎನ್ನಲಾಗಿದೆ. ಸಾಲದ ಹೊರೆ ಮತ್ತು ಜೀವನದಲ್ಲಿನ ಜಿಗುಪ್ಸೆಯಿಂದ ಮನನೊಂದು ಅವರು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆ ಎಂದು ತಿಳಿದುಬಂದಿದೆ.
ಚಿಕಿತ್ಸೆ ಫಲಕಾರಿಯಾಗದೆ ಸಾವು:
ಕಳೆದ ಶನಿವಾರ ಸಂಜೆ ಮನೆಯಲ್ಲಿದ್ದ ಸಂದರ್ಭದಲ್ಲಿ ಯತಿನ್ ಅವರು ಇಲಿಪೇಸ್ಟ್ ಸೇವಿಸಿ ಅಸ್ವಸ್ಥಗೊಂಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಅವರನ್ನು ಆಟೋ ರಿಕ್ಷಾ ಮೂಲಕ ನೆಲ್ಯಾಡಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಯತಿನ್, ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸಹೋದರ ಸಚಿನ್ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಗಮನಿಸಿ: ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ನಿಮಗೆ ಯಾವುದೇ ರೀತಿಯ ಮಾನಸಿಕ ಒತ್ತಡ ಅಥವಾ ಸಮಸ್ಯೆಗಳಿದ್ದಲ್ಲಿ ಸಹಾಯಕ್ಕಾಗಿ ಆಪ್ತ ಸಮಾಲೋಚಕರನ್ನು ಅಥವಾ ಸಹಾಯವಾಣಿಗಳನ್ನು ಸಂಪರ್ಕಿಸಿ. (ಸಹಾಯವಾಣಿ ಸಂಖ್ಯೆ: 104 ಅಥವಾ 080-25497777).
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು21 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ21 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ24 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ21 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ


















