ಉದ್ಯೋಗ
Franchise Scheme 2.0-ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ: ‘ಫ್ರಾಂಚೈಸಿ ಯೋಜನೆ 2.0’ ಮೂಲಕ ತಿಂಗಳಿಗೆ ಸಾವಿರಾರು ರೂ. ಗಳಿಸಿ..!
ನಿಮ್ಮದೇ ಆದ ಒಂದು ಉದ್ಯಮವನ್ನು ಪ್ರಾರಂಭಿಸಬೇಕು ಎಂಬ ಹಂಬಲ ನಿಮಗಿದೆಯೇ? ಭಾರತೀಯ ಅಂಚೆ ಇಲಾಖೆಯು ನಿರುದ್ಯೋಗಿ ಯುವಕರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ಒಂದು ಸುವರ್ಣಾವಕಾಶವನ್ನು ತಂದಿದೆ. ‘ಆತ್ಮನಿರ್ಭರ ಭಾರತ’ ಮತ್ತು ‘ಡಿಜಿಟಲ್ ಇಂಡಿಯಾ’ ಅಭಿಯಾನದ ಅಡಿಯಲ್ಲಿ ಅಂಚೆ ಇಲಾಖೆಯು ತನ್ನ ಸೇವೆಯನ್ನು ವಿಸ್ತರಿಸಲು “ಹೊಸ ಫ್ರಾಂಚೈಸಿ ಯೋಜನೆ 2.0” ಅನ್ನು ಜಾರಿಗೆ ತಂದಿದೆ.
ನಿಮ್ಮದೇ ಆದ ಒಂದು ಉದ್ಯಮವನ್ನು ಪ್ರಾರಂಭಿಸಬೇಕು ಎಂಬ ಹಂಬಲ ನಿಮಗಿದೆಯೇ? ಭಾರತೀಯ ಅಂಚೆ ಇಲಾಖೆಯು ನಿರುದ್ಯೋಗಿ ಯುವಕರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ಒಂದು ಸುವರ್ಣಾವಕಾಶವನ್ನು ತಂದಿದೆ. ‘ಆತ್ಮನಿರ್ಭರ ಭಾರತ’ ಮತ್ತು ‘ಡಿಜಿಟಲ್ ಇಂಡಿಯಾ’ ಅಭಿಯಾನದ ಅಡಿಯಲ್ಲಿ ಅಂಚೆ ಇಲಾಖೆಯು ತನ್ನ ಸೇವೆಯನ್ನು ವಿಸ್ತರಿಸಲು “ಹೊಸ ಫ್ರಾಂಚೈಸಿ ಯೋಜನೆ 2.0” ಅನ್ನು ಜಾರಿಗೆ ತಂದಿದೆ.
ಏನಿದು ಫ್ರಾಂಚೈಸಿ ಯೋಜನೆ 2.0?
ಇದು ಅತ್ಯಂತ ಕಡಿಮೆ ಹೂಡಿಕೆಯೊಂದಿಗೆ ಅಂಚೆ ಸೇವೆಗಳನ್ನು ಒದಗಿಸುವ ಮೂಲಕ ಆದಾಯ ಗಳಿಸುವ ಯೋಜನೆಯಾಗಿದೆ. ಅಂಚೆ ಚೀಟಿಗಳ ಮಾರಾಟ, ಸ್ಪೀಡ್ ಪೋಸ್ಟ್ ಬುಕಿಂಗ್, ಇ-ಕಾಮರ್ಸ್ ಪಾರ್ಸೆಲ್ ವಿತರಣೆ ಮತ್ತು ಹಣಕಾಸು ಸೇವೆಗಳನ್ನು ನೀಡುವ ಮೂಲಕ ನೀವು ಆಕರ್ಷಕ ಕಮಿಷನ್ ಪಡೆಯಬಹುದು. ಸುಧಾರಿತ ‘ಎಪಿಟಿ 2.0’ ತಂತ್ರಜ್ಞಾನದ ಮೂಲಕ ಆನ್ಲೈನ್ ಟ್ರ್ಯಾಕಿಂಗ್ ಮತ್ತು ಡಿಜಿಟಲ್ ಪಾವತಿ ಸೌಲಭ್ಯಗಳನ್ನೂ ಇಲ್ಲಿ ಒದಗಿಸಬಹುದು.
ಅಂಚೆ ಕಚೇರಿ ಫ್ರಾಂಚೈಸಿ ಯೋಜನೆಯ ಪ್ರಮುಖ ಅಂಶಗಳು
ಈ ಹೊಸ ಯೋಜನೆಯನ್ನು ಭಾರತ ಸರ್ಕಾರದ ‘ಡಿಜಿಟಲ್ ಇಂಡಿಯಾ’ ಮತ್ತು ‘ಸ್ಟಾರ್ಟ್ಅಪ್ ಇಂಡಿಯಾ’ ಗುರಿಗಳಿಗೆ ಪೂರಕವಾಗುವಂತೆ ಅತ್ಯಂತ ಸುಧಾರಿತವಾಗಿ ವಿನ್ಯಾಸಗೊಳಿಸಲಾಗಿದೆ.
ಸೇವೆಯ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶದಿಂದ, ಈಗ ಹೊಸ ನಗರ ಪ್ರದೇಶಗಳು, ದೊಡ್ಡ ಟೌನ್ಶಿಪ್ಗಳು, ಕೈಗಾರಿಕಾ ವಲಯಗಳು ಮತ್ತು ಶೈಕ್ಷಣಿಕ ಕ್ಯಾಂಪಸ್ಗಳಲ್ಲಿಯೂ ಫ್ರಾಂಚೈಸಿ ಆರಂಭಿಸಲು ಅವಕಾಶ ನೀಡಲಾಗಿದೆ.
ಎಪಿಟಿ 2.0 (APT 2.0) ಎಂಬ ನವೀನ ತಾಂತ್ರಿಕ ವೇದಿಕೆಯ ಮೂಲಕ ಆನ್ಲೈನ್ ಪಾರ್ಸೆಲ್ ಬುಕಿಂಗ್ ಮತ್ತು ಸ್ಮಾರ್ಟ್ ಲಾಕರ್ನಂತಹ ಆಧುನಿಕ ಡಿಜಿಟಲ್ ಸೇವೆಗಳನ್ನು ಜನರಿಗೆ ಒದಗಿಸಬಹುದು.
ಸಾಂಪ್ರದಾಯಿಕ ಅಂಚೆ ಸೇವೆಗಳ ಜೊತೆಗೆ ಇ-ಕಾಮರ್ಸ್ ಡೆಲಿವರಿ ಮತ್ತು ಇತರ ಆಧುನಿಕ ಸೇವೆಗಳನ್ನು ಸೇರ್ಪಡೆಗೊಳಿಸಿರುವುದರಿಂದ, ಫ್ರಾಂಚೈಸಿ ಮಾಲೀಕರು ಹೆಚ್ಚಿನ ಆದಾಯವನ್ನು ಗಳಿಸಲು ಉತ್ತಮ ಅವಕಾಶವಿದೆ.
ಪ್ರಯೋಜನಗಳೇನು?
ಭಾರತೀಯ ಅಂಚೆ ಇಲಾಖೆಯಂತಹ ಸರ್ಕಾರಿ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದುವುದರಿಂದ ಮಾರುಕಟ್ಟೆ ವೆಚ್ಚ ಕಡಿಮೆಯಾಗುತ್ತದೆ ಮತ್ತು ಗ್ರಾಹಕರಲ್ಲಿ ತಕ್ಷಣದ ವಿಶ್ವಾಸ ಮೂಡುತ್ತದೆ.
ಅಂಚೆ ಚೀಟಿಗಳು, ಸ್ಪೀಡ್ ಪೋಸ್ಟ್, ಪಾರ್ಸೆಲ್, ಮನಿ ಆರ್ಡರ್ ಮತ್ತು ಬಿಲ್ ಪಾವತಿಗಳಂತಹ ವಿವಿಧ ಸೇವೆಗಳ ಮೂಲಕ ಕಮಿಷನ್ ಗಳಿಸಬಹುದು; ಅಲ್ಲದೆ ಉತ್ತಮ ಕಾರ್ಯಕ್ಷಮತೆಗೆ ವಿಶೇಷ ಪ್ರೋತ್ಸಾಹಧನವೂ ದೊರೆಯುತ್ತದೆ.
ಅಂಚೆ ಇಲಾಖೆಯು ಫ್ರಾಂಚೈಸಿಗಳಿಗೆ ಪ್ರಮಾಣಿತ ತರಬೇತಿ, ಕಾರ್ಯವಿಧಾನದ ಮಾರ್ಗಸೂಚಿಗಳು ಮತ್ತು ನಿರಂತರ ಇಲಾಖಾ ಬೆಂಬಲವನ್ನು ಒದಗಿಸುತ್ತದೆ.
ಈ ಯೋಜನೆಯು ಯುವಕರು ಮತ್ತು ಉದ್ಯಮಿಗಳಿಗೆ ಸ್ವಾವಲಂಬಿಯಾಗಲು ಮತ್ತು ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉತ್ತಮ ವೇದಿಕೆಯಾಗಿದೆ.
ಫ್ರಾಂಚೈಸಿಗಳು ಕೇವಲ ಅಂಚೆ ಸೇವೆಗಳಿಗೆ ಸೀಮಿತವಾಗದೆ, ಹಣಕಾಸು ಸೇವೆಗಳು ಮತ್ತು ಇ-ಕಾಮರ್ಸ್ ಲಾಜಿಸ್ಟಿಕ್ಸ್ ಸೇರಿದಂತೆ ವ್ಯಾಪಕ ಶ್ರೇಣಿಯ ಸೇವೆಗಳನ್ನು ಗ್ರಾಹಕರಿಗೆ ನೀಡಬಹುದು.
ಅಂಚೆ ಇಲಾಖೆಯ ಸೇವೆಗಳು ಅತ್ಯಗತ್ಯ ಸೇವೆಗಳಾಗಿರುವುದರಿಂದ, ವರ್ಷವಿಡೀ ಗ್ರಾಹಕರ ಸಂಖ್ಯೆ ಸ್ಥಿರವಾಗಿರುತ್ತದೆ ಮತ್ತು ವ್ಯವಹಾರದಲ್ಲಿ ನಿರಂತರತೆ ಇರುತ್ತದೆ.
ಯಾರು ಅರ್ಹರು?
ಈ ಫ್ರಾಂಚೈಸಿ ಪಡೆಯಲು ಅರ್ಜಿದಾರರು ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಅವರಿಗೆ ಕಂಪ್ಯೂಟರ್ ಜ್ಞಾನ ಮತ್ತು ಸ್ಥಳೀಯ ಭಾಷೆಯ ಮೇಲೆ ಉತ್ತಮ ಹಿಡಿತವಿರಬೇಕು.
ಅರ್ಜಿದಾರರಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು, ಆದರೆ ಈ ಯೋಜನೆಗೆ ಯಾವುದೇ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿಲ್ಲ.
ಫ್ರಾಂಚೈಸಿ ನಡೆಸಲು ಜನನಿಬಿಡ ಪ್ರದೇಶಗಳಲ್ಲಿ ಸ್ವಂತ ಅಥವಾ ಬಾಡಿಗೆಗೆ ಪಡೆದ ಸಣ್ಣ ಮಳಿಗೆ ಅಥವಾ ಕಚೇರಿಯನ್ನು ಹೊಂದಿರಬೇಕು; ಇದಕ್ಕಾಗಿ ಸಣ್ಣ ಕಿರಾಣಿ ಅಂಗಡಿ ಅಥವಾ ಟೀ ಅಂಗಡಿ ಮಾಲೀಕರೂ ಸಹ ಅರ್ಜಿ ಸಲ್ಲಿಸಲು ಅವಕಾಶವಿದೆ.
ಕಚೇರಿಯಲ್ಲಿ ಕಡ್ಡಾಯವಾಗಿ ಲ್ಯಾಪ್ಟಾಪ್ ಅಥವಾ ಡೆಸ್ಕ್ಟಾಪ್, ಇಂಟರ್ನೆಟ್ ಸಂಪರ್ಕ, ತೂಕದ ಯಂತ್ರ, ಬಾರ್ಕೋಡ್ ಸ್ಕ್ಯಾನರ್ ಮತ್ತು ಪ್ರಿಂಟರ್ನಂತಹ ಮೂಲಸೌಕರ್ಯಗಳನ್ನು ಹೊಂದಿರಬೇಕು.
ಹೂಡಿಕೆ ಮತ್ತು ಆದಾಯ:
ಈ ಯೋಜನೆಯಡಿ ಫ್ರಾಂಚೈಸಿ ಪಡೆಯಲು ಸ್ಥಳ ಮತ್ತು ಒಪ್ಪಂದದ ಆಧಾರದ ಮೇಲೆ 5,000 ರೂ. ರಿಂದ 10,000 ರೂ. ವರೆಗೆ ಮರುಪಾವತಿಸಲ್ಪಡುವ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಪೀಠೋಪಕರಣಗಳು, ಕಂಪ್ಯೂಟರ್ ಮತ್ತು ಇತರ ತಾಂತ್ರಿಕ ಉಪಕರಣಗಳು ಸೇರಿದಂತೆ ಮೂಲಸೌಕರ್ಯ ಸಿದ್ಧಪಡಿಸಲು ಅಂದಾಜು 1 ಲಕ್ಷ ರೂ.ದಿಂದ 1.5 ಲಕ್ಷ ರೂ.ದವರೆಗೆ ಒಟ್ಟು ಹೂಡಿಕೆಯ ಅಗತ್ಯವಿರುತ್ತದೆ. ಫ್ರಾಂಚೈಸಿ ಮಾಲೀಕರು ತಮ್ಮ ಕಾರ್ಯಕ್ಷಮತೆಯ ಆಧಾರದ ಮೇಲೆ ಮಾಸಿಕ 20,000 ರೂ.ದಿಂದ 80,000 ರೂ.ಕ್ಕಿಂತ ಹೆಚ್ಚು ಆದಾಯವನ್ನು ಗಳಿಸಲು ಅವಕಾಶವಿದೆ.
ಸಿಗುವ ಕಮಿಷನ್ ಎಷ್ಟು?
ಕಮಿಷನ್ ದರಗಳ ಅನ್ವಯ, ಸ್ಪೀಡ್ ಪೋಸ್ಟ್ ಬುಕಿಂಗ್ ಮೇಲೆ ಒಟ್ಟು ಮಾಸಿಕ ವ್ಯವಹಾರದ 7% ರಿಂದ 25% ರಷ್ಟು ಪಾಲನ್ನು ಪಡೆಯಬಹುದು.
ಪ್ರತಿಯೊಂದು ನೋಂದಾಯಿತ ಪತ್ರದ ಮೇಲೆ 3.00 ರೂ. ಮತ್ತು 200 ರೂ. ಕ್ಕಿಂತ ಹೆಚ್ಚಿನ ಮೌಲ್ಯದ ಮನಿ ಆರ್ಡರ್ಗಳ ಮೇಲೆ 5.00 ರೂ. ರಷ್ಟು ಕಮಿಷನ್ ನಿಗದಿಪಡಿಸಲಾಗಿದೆ.
ಅಂಚೆ ಚೀಟಿಗಳು ಮತ್ತು ಸ್ಟೇಷನರಿ ಸಾಮಗ್ರಿಗಳ ಮಾರಾಟದ ಮೇಲೆ ಒಟ್ಟು ಮೊತ್ತದ 5% ರಷ್ಟು ಲಾಭಾಂಶ ದೊರೆಯುತ್ತದೆ.
ಎಲ್ಲಕ್ಕಿಂತ ಮುಖ್ಯವಾಗಿ, ಉತ್ತಮ ಪ್ರದರ್ಶನ ನೀಡುವ ಫ್ರಾಂಚೈಸಿಗಳಿಗೆ ಅವರ ಒಟ್ಟು ಗಳಿಕೆಯ ಮೇಲೆ 25% ರಿಂದ 30% ರಷ್ಟು ಹೆಚ್ಚುವರಿ ಪ್ರೋತ್ಸಾಹಧನವನ್ನುನೀಡಲಾಗುತ್ತದೆ.
(ಮಹಿಳಾ ಉದ್ಯಮಿಗಳಿಗೆ ಬಡ್ಡಿ ಸಹಾಯಧನ ಯೋಜನೆ)
ನೀಡಬಹುದಾದ ಪ್ರಮುಖ ಸೇವೆಗಳು
ಸ್ಪೀಡ್ ಪೋಸ್ಟ್ ಮತ್ತು ರಿಜಿಸ್ಟರ್ಡ್ ಪೋಸ್ಟ್ ಬುಕಿಂಗ್.
ಅಂಚೆ ಚೀಟಿಗಳು ಮತ್ತು ಲೇಖನ ಸಾಮಗ್ರಿಗಳ ಮಾರಾಟ.
ಅಂತಾರಾಷ್ಟ್ರೀಯ ಪಾರ್ಸೆಲ್ ಸೇವೆಗಳು.
ಕ್ಯಾಶ್ ಆನ್ ಡೆಲಿವರಿ ಸೌಲಭ್ಯ.
ಇ-ಕಾಮರ್ಸ್ ಪಾರ್ಸೆಲ್ ಪಿಕಪ್ ಮತ್ತು ವಿತರಣೆ.
ಡಿಜಿಟಲ್ ವ್ಯಾಲೆಟ್ ಪಾವತಿ ಮತ್ತು ರಿಯಲ್-ಟೈಮ್ ಟ್ರ್ಯಾಕಿಂಗ್.
ಅರ್ಜಿ ಸಲ್ಲಿಸುವ ವಿಧಾನ:
ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ indiapost.gov.in ನಿಂದ ‘Form A’ ಡೌನ್ಲೋಡ್ ಮಾಡಿ ಅಥವಾ ಹತ್ತಿರದ ಅಂಚೆ ವಿಭಾಗೀಯ ಕಚೇರಿಯಲ್ಲಿ ಪಡೆಯಿರಿ.
ಅರ್ಜಿಯೊಂದಿಗೆ ನಿಮ್ಮ ವ್ಯಾಪಾರ ಯೋಜನೆ (Business Plan) ಮತ್ತು ಅಗತ್ಯ ದಾಖಲೆಗಳನ್ನು (ಆಧಾರ್, ಪ್ಯಾನ್, ಶೈಕ್ಷಣಿಕ ದಾಖಲೆ, ಮಳಿಗೆ ದಾಖಲೆ) ಲಗತ್ತಿಸಿ.
ಭರ್ತಿ ಮಾಡಿದ ಅರ್ಜಿಯನ್ನು ನಿಮ್ಮ ಜಿಲ್ಲೆಯ ಅಂಚೆ ವಿಭಾಗೀಯ ಕಚೇರಿಗೆ ಸಲ್ಲಿಸಿ.
ಅರ್ಜಿ ಸಲ್ಲಿಸಿದ 14 ದಿನಗಳ ಒಳಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಾರೆ. ಎಲ್ಲವೂ ಸರಿಯಾಗಿದ್ದರೆ ಒಪ್ಪಂದಕ್ಕೆ ಸಹಿ ಹಾಕಿ ನಿಮ್ಮ ಕೇಂದ್ರವನ್ನು ಆರಂಭಿಸಬಹುದು.
ಅಗತ್ಯವಿರುವ ದಾಖಲೆಗಳೇನು?
ವಯಸ್ಸಿನ ಪುರಾವೆ: ಅರ್ಜಿದಾರರು ತಮ್ಮ ವಯಸ್ಸನ್ನು ದೃಢೀಕರಿಸಲು ಜನ್ಮ ಪ್ರಮಾಣಪತ್ರ ಅಥವಾ ಶಾಲಾ ವರ್ಗಾವಣೆ ಪ್ರಮಾಣಪತ್ರವನ್ನು ಸಲ್ಲಿಸಬೇಕು.
ಗುರುತಿನ ಚೀಟಿ: ಅರ್ಜಿದಾರರ ಅಧಿಕೃತ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್ ನೀಡುವುದು ಕಡ್ಡಾಯವಾಗಿದೆ.
ವಿಳಾಸದ ಪುರಾವೆ: ಅರ್ಜಿದಾರರ ವೈಯಕ್ತಿಕ ವಾಸಸ್ಥಳದ ವಿಳಾಸ ಮತ್ತು ಫ್ರಾಂಚೈಸಿ ನಡೆಸಲು ಉದ್ದೇಶಿಸಿರುವ ವ್ಯವಹಾರದ ಸ್ಥಳದ ವಿಳಾಸಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಬೇಕು.
ಶೈಕ್ಷಣಿಕ ಅರ್ಹತೆ: ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸಾಗಿರುವುದಕ್ಕೆ ಪೂರಕವಾಗಿ ಸಂಬಂಧಿಸಿದ ಶೈಕ್ಷಣಿಕ ಅಂಕಪಟ್ಟಿ ಅಥವಾ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು.
ಆಸ್ತಿ ದಾಖಲೆಗಳು: ಫ್ರಾಂಚೈಸಿ ನಡೆಸುವ ಸ್ಥಳವು ಸ್ವಂತದ್ದಾಗಿದ್ದರೆ ಅದರ ಮಾಲೀಕತ್ವದ ಪತ್ರ ಅಥವಾ ಬಾಡಿಗೆಗೆ ಪಡೆದ ಸ್ಥಳವಾಗಿದ್ದರೆ ಅಧಿಕೃತ ಬಾಡಿಗೆ ಒಪ್ಪಂದದ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್ಚಾರ್ಜ್, ಅಕ್ಸಿಡೆಂಟ್ ಸೂಪರ್ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್ಬಾಗ್ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್ಲೋಡ್ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್ಸೈಟ್ನಿಂದ ತಮ್ಮ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್ಆರ್ಪಿ, ಕೆಎಸ್ಐಎಸ್ಎಫ್ ಹಾಗೂ ಐಆರ್ಬಿ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
ನಿಧನ ವಾರ್ತೆ15 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್9 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ14 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ15 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ15 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್10 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ15 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ13 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















