ಸ್ಥಳೀಯ
ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಸೇವೆಗೆ ಒಂದು ವರ್ಷ. ಭಕ್ತರ ಅನುಕೂಲಕ್ಕಾಗಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಅತ್ಯಾಧುನಿಕ ತಂತ್ರಜ್ಞಾದೊಂದಿಗೆ ನಿರ್ಮಿಸಲ್ಪಟ್ಟಿದ್ದು, 2025ರ ಜನವರಿ 7ರಂದು ಉದ್ಘಾಟನೆಗೊಂಡಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಸೇವೆಗೆ ಒಂದು ವರ್ಷ. ಭಕ್ತರ ಅನುಕೂಲಕ್ಕಾಗಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಅತ್ಯಾಧುನಿಕ ತಂತ್ರಜ್ಞಾದೊಂದಿಗೆ ನಿರ್ಮಿಸಲ್ಪಟ್ಟಿದ್ದು, 2025ರ ಜನವರಿ 7ರಂದು ಉದ್ಘಾಟನೆಗೊಂಡಿತು. ಭಾರತದ ಗೌರವಾನ್ವಿತ ಮಾಜಿ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್ಕರ್ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಕಟ್ಟಡವನ್ನ ಉದ್ಭಾಟಿಸಿದ್ದರು. ಶ್ರೀ ಸಾನಿಧ್ಯ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಪ್ಲೆಕ್ಸ್ ಗೆ ಭೇಟಿ ನೀಡಿದ ಪೂಜ್ಯ ಹೆಗ್ಗಡೆಯವರು ದೀಪ ಬೆಳಗಿಸಿ ಶುಭ ಹಾರೈಸಿದರು.
ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ವಿಶೇಷತೆಗಳು
ಕಳೆದ 1 ವರ್ಷದಲ್ಲಿ ಲಕ್ಷಾಂತರ ಭಕ್ತರು ಈ ಕ್ಯೂಕಾಂಪ್ಲೆಕ್ಸ್ ಮೂಲಕ ಸಾಗಿ ಶ್ರೀ ಮಂಜುನಾಥನ ದರ್ಶನ ಪಡೆದಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಧರ್ಮಸ್ಥಳದ ಶ್ರೀ ಸಾನಿಧ್ಯ ಕಾಂಪ್ಲೆಕ್ಸ್ ಪ್ರವೇಶಿಸುತ್ತಿದ್ದಂತೆ ಭಕ್ತರಿಗೆ ಅದ್ಭುತ ಅನುಭವ ಸಿಗುತ್ತಿದ್ದು, ಕ್ಯೂ ಕಾಂಪ್ಲೆಕ್ಸ್ 2,75,177 ಚದರ ಅಡಿಯ ಬೃಹತ್ ಕಟ್ಟಡವಾಗಿದ್ದು, ಮೂರು ಮಹಡಿಗಳನ್ನ ಹೊಂದಿದೆ. ಇಲ್ಲಿ 16 ಹಾಲ್ ವ್ಯವಸ್ಥೆ ಇದ್ದು, ಒಟ್ಟು ಸಂಕೀರ್ಣದಲ್ಲಿ 10 ರಿಂದ 12 ಸಾವಿರ ಭಕ್ತಾದಿಗಳನ್ನ ಏಕಕಾಲದಲ್ಲಿ ನಿರ್ವಹಿಸಬಹುದಾಗಿದೆ.
ಶ್ರೀ ಸಾನಿಧ್ಯದ ಒಳಗಡೆ ಉಷ್ಣಾಂಶ ನಿಯಂತ್ರಿಸಲು ಫ್ರೆಶ್ ಏರ್ ತಂತ್ರಜ್ಞಾನದ ಜೊತೆಗೆ ಬೃಹತ್ ಹವಾನಿಯಂತ್ರಕ ಫ್ಯಾನ್ ವ್ಯವಸ್ಥೆ ಇಲ್ಲಿದೆ. ಸುಸಜ್ಜಿತ ಶೌಚಾಲಯ, ಮಗು ಆರೈಕೆ ಕೊಠಡಿ, ಕುಡಿಯುವ ನೀರು, ಕೆಫೆಟೇರಿಯಾ, ಡಿಜಿಟಲ್ ಟಿ.ವಿ ಹಾಗೂ ಆಡಿಯೋ ವ್ಯವಸ್ಥೆ, ಬಾಷ್ ಕಂಪನಿಯ ಕ್ಯೂ ಮ್ಯಾನೇಜ್ಮೆಂಟ್ ಸಿಸ್ಟಂ, ಎ.ಐ ತಂತ್ರಜ್ಞಾನಗಳುಳ್ಳ ಕ್ಯಾಮೆರಾ, ಭಕ್ತರ ನಿಖರ ಲೆಕ್ಕಹಾಕಿ ಕ್ಯೂ ನಿಯಂತ್ರಣ ವ್ಯವಸ್ಥೆ ಇಲ್ಲಿದೆ. ಭಕ್ತರ ದಟ್ಟಣೆ ಹೆಚ್ಚಾದ ಸಂದರ್ಭಗಳಲ್ಲಿ ಶ್ರೀಕ್ಷೇತ್ರದಿಂದ ಫಲಾಹಾರ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಶ್ರೀ ಸಾನಿಧ್ಯದ ಹೊಸ ಕ್ಯೂ ಕಾಂಪ್ಲೆಕ್ಸ್ ನಲ್ಲಿ 650 ಕಿಲೋ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದಿಸುವ ಸೋಲಾರ್ ಪ್ಯಾನೆಲ್-ಗಳನ್ನು ಅಳವಡಿಲಾಗಿದೆ. ಜೊತೆಗೆ ವಿದ್ಯುತ್ ಮತ್ತು ನೀರು ಪೋಲಾಗುವುದನ್ನು ತಪ್ಪಿಸಲು ಮಾನಿಟರಿಂಗ್ ತಂತ್ರಜ್ಞಾನ ಒಳಗೊಂಡ ಬಿಲ್ಡಿಂಗ್ ಮ್ಯಾನೇಜ್-ಮೆಂಟ್ ಸಿಸ್ಟಂ ಬಳಸಲಾಗುತ್ತಿದೆ. ನೀರಿನ ಪುನರ್ಬಳಕೆಗೂ ಇಲ್ಲಿ ಆದ್ಯತೆ ನೀಡಲಾಗಿದೆ. ಸ್ವಚ್ಛತೆಗೂ ಶ್ರೀ ಸಾನಿಧ್ಯ ಮಾದರಿಯಾಗಿದೆ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ22 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು20 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು17 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ21 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ21 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ21 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ17 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ21 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ




















