ಆರೋಗ್ಯ
Eyebrow threading-ಬ್ಯೂಟಿ ಪಾರ್ಲರ್ಗೆ ಹೋಗುವ ಮುನ್ನ ಎಚ್ಚರ! ಹುಬ್ಬು ಏರಿಸುವ ಅಂದ (ಐಬ್ರೋ ಥ್ರೆಡ್ಡಿಂಗ್) ‘ಲಿವರ್ ಫೇಲ್ಯೂರ್’ಗೆ ಕಾರಣವಾಗಬಹುದು; ಸುರಕ್ಷಿತೆಗಾಗಿ ಈ ‘ಗೋಲ್ಡನ್ ರೂಲ್ಸ್’ ಪಾಲಿಸಿ
ಮುಖದ ಅಂದ ಹೆಚ್ಚಿಸಿಕೊಳ್ಳಲು, ಹುಬ್ಬುಗಳಿಗೆ ಆಕರ್ಷಕ ರೂಪ ನೀಡಲು ನಾವು ಸಲೀಸಾಗಿ ಬ್ಯೂಟಿ ಪಾರ್ಲರ್ಗೆ ಹೋಗುತ್ತೇವೆ. ಆದರೆ, ಅಲ್ಲಿ ನಾವು ಮಾಡಿಸಿಕೊಳ್ಳುವ ಸಾಮಾನ್ಯ ‘ಐಬ್ರೋ ಥ್ರೆಡ್ಡಿಂಗ್’ ನಮ್ಮ ಪ್ರಾಣಕ್ಕೇ ಕಂಟಕವಾಗಬಹುದು ಎಂಬ ಆಘಾತಕಾರಿ ಸತ್ಯವೊಂದು ಈಗ ಹೊರಬಿದ್ದಿದೆ. ಹುಬ್ಬು ತಿದ್ದುವ ದಾರವು ನಿಮ್ಮ ಯಕೃತ್ತನ್ನು (Liver) ಕಿತ್ತು ತಿನ್ನಬಹುದು ಎಂಬ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.
ಬೆಂಗಳೂರು: ಮುಖದ ಅಂದ ಹೆಚ್ಚಿಸಿಕೊಳ್ಳಲು, ಹುಬ್ಬುಗಳಿಗೆ ಆಕರ್ಷಕ ರೂಪ ನೀಡಲು ನಾವು ಸಲೀಸಾಗಿ ಬ್ಯೂಟಿ ಪಾರ್ಲರ್ಗೆ ಹೋಗುತ್ತೇವೆ. ಆದರೆ, ಅಲ್ಲಿ ನಾವು ಮಾಡಿಸಿಕೊಳ್ಳುವ ಸಾಮಾನ್ಯ ‘ಐಬ್ರೋ ಥ್ರೆಡ್ಡಿಂಗ್’ ನಮ್ಮ ಪ್ರಾಣಕ್ಕೇ ಕಂಟಕವಾಗಬಹುದು ಎಂಬ ಆಘಾತಕಾರಿ ಸತ್ಯವೊಂದು ಈಗ ಹೊರಬಿದ್ದಿದೆ. ಹುಬ್ಬು ತಿದ್ದುವ ದಾರವು ನಿಮ್ಮ ಯಕೃತ್ತನ್ನು (Liver) ಕಿತ್ತು ತಿನ್ನಬಹುದು ಎಂಬ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.
ನಡೆದಿದ್ದೇನು? ಬೆಚ್ಚಿಬೀಳಿಸುವ ಘಟನೆ!
ಇತ್ತೀಚೆಗೆ 28 ವರ್ಷದ ಯುವತಿಯೊಬ್ಬಳು ಅತಿಯಾದ ಸುಸ್ತು ಮತ್ತು ಕಾಮಾಲೆ ಲಕ್ಷಣಗಳೊಂದಿಗೆ (ಕಣ್ಣು ಹಳದಿಯಾಗುವುದು) ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಗೆ ಯಾವುದೇ ಕೆಟ್ಟ ಅಭ್ಯಾಸಗಳಿರಲಿಲ್ಲ. ಆದರೆ ಪರೀಕ್ಷಿಸಿದಾಗ ಆಕೆಯ ಲಿವರ್ ವೈಫಲ್ಯವಾಗಿರುವುದು ಕಂಡುಬಂದಿದೆ. ಇದರ ಮೂಲ ಕೆದಕಿದಾಗ ಸಿಕ್ಕಿದ್ದು ಶಾಕಿಂಗ್ ಮಾಹಿತಿ: ಆಕೆ ಇತ್ತೀಚೆಗೆ ಮಾಡಿಸಿಕೊಂಡಿದ್ದ ಥ್ರೆಡ್ಡಿಂಗ್!
ದಾರದ ಮೂಲಕ ಲಿವರ್ಗೆ ಹಾನಿ ಹೇಗೆ?
ಥ್ರೆಡ್ಡಿಂಗ್ ಎಂಬುದು ಕೇವಲ ಕೂದಲು ತೆಗೆಯುವ ಪ್ರಕ್ರಿಯೆಯಲ್ಲ. ಈ ಸಂದರ್ಭದಲ್ಲಿ ಸಂಭವಿಸುವ ಸಣ್ಣ ತಪ್ಪುಗಳು ಪ್ರಾಣಕ್ಕೆ ಕಂಟಕವಾಗಬಹುದು:
- ಮೈಕ್ರೋ ಕಟ್ಸ್ (ಸಣ್ಣ ಗಾಯಗಳು): ದಾರದಿಂದ ಕೂದಲು ಕಿತ್ತುಬರುವಾಗ ಚರ್ಮದ ಮೇಲೆ ನಮಗೆ ತಿಳಿಯದಂತೆ ಅತಿಸೂಕ್ಷ್ಮ ಗಾಯಗಳಾಗುತ್ತವೆ.
- ವೈರಸ್ಗಳ ಪ್ರವೇಶ: ಪಾರ್ಲರ್ನಲ್ಲಿ ಸೋಂಕಿತ ವ್ಯಕ್ತಿಗೆ ಬಳಸಿದ ಅದೇ ದಾರವನ್ನು ಮರುಬಳಕೆ ಮಾಡಿದರೆ ಅಥವಾ ಅಶುದ್ಧವಾದ ದಾರ ಬಳಸಿದರೆ, ಅದರಲ್ಲಿದ್ದ ಹೆಪಟೈಟಿಸ್ ಬಿ, ಸಿ ಅಥವಾ HIV ವೈರಸ್ಗಳು ಈ ಸೂಕ್ಷ್ಮ ಗಾಯಗಳ ಮೂಲಕ ನೇರವಾಗಿ ರಕ್ತವನ್ನು ಸೇರುತ್ತವೆ.
- ಮೌನ ಕೊಲೆಗಡುಕ: ಈ ವೈರಸ್ಗಳು ತಕ್ಷಣವೇ ರೋಗ ಲಕ್ಷಣ ತೋರಿಸುವುದಿಲ್ಲ. ರಕ್ತ ಸೇರಿದ ವಾರಗಳ ನಂತರ ಇವು ನೇರವಾಗಿ ಲಿವರ್ ಮೇಲೆ ದಾಳಿ ಮಾಡಿ, ಲಿವರ್ ಫೇಲ್ಯೂರ್ಗೆ ಕಾರಣವಾಗುತ್ತವೆ.
ಸುರಕ್ಷಿತವಾಗಿರಲು ಈ ‘ಗೋಲ್ಡನ್ ರೂಲ್ಸ್’ ಪಾಲಿಸಿ:
ಕೇವಲ ಅಂದಕ್ಕೆ ಮರುಳಾಗಬೇಡಿ, ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಪಾರ್ಲರ್ಗೆ ಹೋದಾಗ ಈ ಕೆಳಗಿನವುಗಳನ್ನು ತಪ್ಪದೇ ಗಮನಿಸಿ:
- ಹೊಸ ದಾರ ಮಾತ್ರ: ನಿಮ್ಮ ಕಣ್ಣ ಮುಂದೆಯೇ ಹೊಸ ಪ್ಯಾಕೆಟ್ನಿಂದ ದಾರ ತೆಗೆಯುವಂತೆ ಸೂಚಿಸಿ. ಬಳಸಿದ ದಾರವನ್ನು ಮತ್ತೆ ಬಳಸಲು ಬಿಡಬೇಡಿ.
- ನೈರ್ಮಲ್ಯದ ತಪಾಸಣೆ: ಪಾರ್ಲರ್ನ ಶುಚಿತ್ವವನ್ನು ಗಮನಿಸಿ. ಸಿಬ್ಬಂದಿಗಳು ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡಿದ್ದಾರೆಯೇ ಎಂದು ನೋಡಿ.
- ಲಕ್ಷಣಗಳ ಮೇಲೆ ನಿಗಾ ಇರಲಿ: ಥ್ರೆಡ್ಡಿಂಗ್ ಮಾಡಿದ ಕೆಲವು ದಿನಗಳ ನಂತರ ವಿಪರೀತ ಆಯಾಸ, ವಾಕರಿಕೆ ಅಥವಾ ಕಣ್ಣುಗಳು ಹಳದಿಯಾದಂತೆ ಕಂಡರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ.
- ನೆನಪಿಡಿ: ಅಂದಕ್ಕಿಂತ ಆರೋಗ್ಯ ಮುಖ್ಯ. ಸಣ್ಣ ನಿರ್ಲಕ್ಷ್ಯವು ದೊಡ್ಡ ಬೆಲೆ ತೆರುವಂತೆ ಮಾಡಬಹುದು. ಪಾರ್ಲರ್ನಲ್ಲಿ ನೈರ್ಮಲ್ಯದ ಬಗ್ಗೆ ಪ್ರಶ್ನಿಸಲು ಸಂಕೋಚ ಪಡಬೇಡಿ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಕ್ರೈಂ12 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ12 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು11 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ10 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಬಿಗ್ ನ್ಯೂಸ್12 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ6 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಸ್ಥಳೀಯ6 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಕ್ರೀಡೆ10 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















