ಉಡುಪಿ
Pejawar Swamiji-ಬಾಂಗ್ಲಾ ಹಿಂದೂಗಳ ರಕ್ಷಣೆಗಾಗಿ ಜ.10ರಂದು ಮನೆ, ಮಠ, ಮಂದಿರಗಳಲ್ಲಿ ದೀಪ ಬೆಳಗಿಸಿ : ಪೇಜಾವರ ಶ್ರೀ ಕರೆ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ಭೀಕರ ದೌರ್ಜನ್ಯ ಮತ್ತು ಅಮಾನವೀಯ ಕೃತ್ಯಗಳ ಬಗ್ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, ಅಲ್ಲಿನ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶ್ರೀಗಳು ಪತ್ರ ಬರೆದಿದ್ದಾರೆ.
ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ಭೀಕರ ದೌರ್ಜನ್ಯ ಮತ್ತು ಅಮಾನವೀಯ ಕೃತ್ಯಗಳ ಬಗ್ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, ಅಲ್ಲಿನ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶ್ರೀಗಳು ಪತ್ರ ಬರೆದಿದ್ದಾರೆ.
ಭಾರತದ ಔದಾರ್ಯ ಮತ್ತು ಬಾಂಗ್ಲಾದ ಕ್ರೌರ್ಯ:
ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಮಂಡಳಿ ಸದಸ್ಯರೂ ಆಗಿರುವ ಶ್ರೀಪಾದರು ಪತ್ರದಲ್ಲಿ, “ಹಿಂದೂ ಸಮಾಜವು ಯಾವಾಗಲೂ ಶಾಂತಿ ಮತ್ತು ಸಹಬಾಳ್ವೆಯ ತತ್ವಗಳನ್ನು ಪಾಲಿಸುತ್ತಾ ಬಂದಿದೆ. ಯಾರ ಮೇಲೆಯೂ ಹಿಂಸೆಯನ್ನು ಅಸ್ತ್ರವಾಗಿ ಬಳಸಿ ನಾವೂ ಪಾರಮ್ಯ ಸಾಧಿಸಿಲ್ಲ. ಆದರೆ ಇಂದು ನೆರೆಯ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಕೊಲೆ ಮತ್ತು ದೌರ್ಜನ್ಯಗಳು ದುಃಖ ತರಿಸಿವೆ. ಭಾರತವು ರಾಜತಾಂತ್ರಿಕ ಬಿಕ್ಕಟ್ಟಿನ ಸಮಯದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ರಕ್ಷಣೆ ನೀಡಿ ತನ್ನ ಔದಾರ್ಯವನ್ನು ತೋರಿದೆ. ಆದರೆ ಅಲ್ಲಿನ ಹಿಂದೂಗಳು ಮಾತ್ರ ಇಂದು ತೀವ್ರ ಸಂಕಷ್ಟದಲ್ಲಿದ್ದಾರೆ,” ಎಂದು ವಿಷಾದಿಸಿದ್ದಾರೆ.
ರಾಜತಾಂತ್ರಿಕ ಕ್ರಮಕ್ಕೆ ಆಗ್ರಹ:
ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಜೀವ ಮತ್ತು ಆಸ್ತಿಯ ರಕ್ಷಣೆಗೆ ಹಾಗೂ ಅವರು ನೆಮ್ಮದಿಯಿಂದ ಬದುಕಲು ಸೂಕ್ತ ವ್ಯವಸ್ಥೆ ಮಾಡುವಂತೆ ಮಾಡಬೇಕು ಎಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.
ಜ. 10ರಂದು ವಿಶೇಷ ಪ್ರಾರ್ಥನೆಗೆ ಕರೆ:
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ ಕೊನೆಗೊಳ್ಳಲಿ ಮತ್ತು ಅಲ್ಲಿನ ಸಂತ್ರಸ್ತರಿಗೆ ದೈವಬಲ ಸಿಗಲಿ ಎಂದು ಪ್ರಾರ್ಥಿಸಲು ಜನೆವರಿ 10ರಂದು ವಿಶೇಷ ಅಭಿಯಾನಕ್ಕೆ ಶ್ರೀಗಳು ಕರೆ ನೀಡಿದ್ದಾರೆ. ಅಂದು ದೇಶದ ಪ್ರತಿಯೊಬ್ಬ ಹಿಂದೂಗಳೂ ತಮ್ಮ ಮನೆ, ಮಠ ಹಾಗೂ ಮಂದಿರಗಳಲ್ಲಿ ನಿತ್ಯ ಬೆಳಗುವ ದೀಪದ ಜೊತೆಗೆ, ಬಾಂಗ್ಲಾ ಹಿಂದೂಗಳ ರಕ್ಷಣೆಗಾಗಿ ಮತ್ತು ಜಗತ್ತಿನಲ್ಲಿ ಶಾಂತಿ ನೆಲೆಸಲಿ ಎಂದು ಒಂದು ಪ್ರತ್ಯೇಕ ದೀಪವನ್ನು ಬೆಳಗಿ ಪ್ರಾರ್ಥಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
-
ಮಂಗಳೂರು13 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
Uncategorized10 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಸ್ಥಳೀಯ17 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು20 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ12 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ14 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ19 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















