ಉಡುಪಿ
Asia Cup-ಏಷ್ಯಾ ಕಪ್ ಭಾರತ ತಂಡಕ್ಕೆ ಕುಂದಾಪುರದ ಅಟೋ ಚಾಲಕರ ಪುತ್ರ ಆಯ್ಕೆ..!
ಕುಂದಾಪುರ ತಾಲೂಕಿನ ಕೆರಾಡಿ ಎಂಬ ಸಣ್ಣ ಗ್ರಾಮದ ಪ್ರತಿಭೆಯೊಂದು ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಸಜ್ಜಾಗಿದೆ. ಹುಟ್ಟಿನಿಂದಲೇ ಶ್ರವಣ ದೋಷ ಹೊಂದಿದ್ದರೂ, ಅದನ್ನು ಅಡ್ಡಿಯಾಗಿಸಿಕೊಳ್ಳದ 21 ವರ್ಷದ ಯುವಕ ಸನಿತ್ ಶೆಟ್ಟಿ, ಕಿವುಡರ ಏಷ್ಯಾ ಕಪ್ ಟಿ20 ಕ್ರಿಕೆಟ್ ಪಂದ್ಯಾವಳಿಗಾಗಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪುರ: ಕುಂದಾಪುರ ತಾಲೂಕಿನ ಕೆರಾಡಿ ಎಂಬ ಸಣ್ಣ ಗ್ರಾಮದ ಪ್ರತಿಭೆಯೊಂದು ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಸಜ್ಜಾಗಿದೆ. ಹುಟ್ಟಿನಿಂದಲೇ ಶ್ರವಣ ದೋಷ ಹೊಂದಿದ್ದರೂ, ಅದನ್ನು ಅಡ್ಡಿಯಾಗಿಸಿಕೊಳ್ಳದ 21 ವರ್ಷದ ಯುವಕ ಸನಿತ್ ಶೆಟ್ಟಿ, ಕಿವುಡರ ಏಷ್ಯಾ ಕಪ್ ಟಿ20 ಕ್ರಿಕೆಟ್ ಪಂದ್ಯಾವಳಿಗಾಗಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕದ ಏಕೈಕ ಪ್ರತಿನಿಧಿ:
ಫೆಬ್ರವರಿ 18ರಿಂದ 25ರವರೆಗೆ ಒಡಿಶಾದ ಕಟಕ್ನಲ್ಲಿ ನಡೆಯಲಿರುವ ಈ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಭಾರತ ತಂಡದಲ್ಲಿ ಸ್ಥಾನ ಪಡೆದ ಕರ್ನಾಟಕದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಸನಿತ್ ಪಾತ್ರರಾಗಿದ್ದಾರೆ. ಉತ್ತಮ ಬ್ಯಾಟರ್ ಹಾಗೂ ವೇಗದ ಬೌಲರ್ ಆಗಿರುವ ಇವರು, ಆಲ್-ರೌಂಡ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ.
ಕಡುಬಡತನದಲ್ಲೂ ಅರಳಿದ ಪ್ರತಿಭೆ:
ಸನಿತ್ ಅವರ ಈ ಸಾಧನೆಯ ಹಾದಿ ಸುಲಭದ್ದಾಗಿರಲಿಲ್ಲ. ರಿಕ್ಷಾ ಚಾಲಕರಾದ ಕೆರಾಡಿ ಸುರೇಂದ್ರ ಶೆಟ್ಟಿ ಮತ್ತು ಶ್ರೀಮತಿ ಶೆಟ್ಟಿ ದಂಪತಿಯ ಪುತ್ರನಾದ ಇವರು, ಬಡತನ ಮತ್ತು ಶ್ರವಣ ದೋಷದ ನಡುವೆಯೂ ಅದ್ಭುತ ಸಾಧನೆ ಮಾಡಿದ್ದಾರೆ. ಕುಂದಾಪುರ ಮತ್ತು ಮೂಡ್ಡಕಟ್ಟೆಯಲ್ಲಿ ಶಿಕ್ಷಣ ಪೂರೈಸಿರುವ ಸನಿತ್, ಸದ್ಯ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಹೆಚ್.ಆರ್ (HR) ಆಗಿ ಕೆಲಸ ಮಾಡುತ್ತಿದ್ದಾರೆ.
ಕ್ರಿಕೆಟ್ ಜರ್ನಿ:
ಸ್ಥಳೀಯ ‘ದುರ್ಗಾ ಕ್ರಿಕೆಟರ್ಸ್’ ತಂಡದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡುತ್ತಾ ಬೆಳೆದ ಸನಿತ್, ನಂತರ ನಿತಿನ್ ಸಾರಂಗ ಮತ್ತು ಮೊಹಮ್ಮದ್ ಅರ್ಮಾನ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದರು. ಈ ಹಿಂದೆ ಅವರು ಮಂಗಳೂರು ವಲಯದ ಅಂಡರ್-14 ಹಾಗೂ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೆ, ಕಿವುಡರ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ವಿಶೇಷ ಚೇತನ ಕ್ರಿಕೆಟ್ ಆಟಗಾರ ಪೃಥ್ವಿರಾಜ್ ಶೆಟ್ಟಿ ಹುಂಚಣಿ ಅವರ ಸಹಕಾರವೂ ಇವರಿಗಿದೆ.
ಸನಿತ್ ಶೆಟ್ಟಿ ಮಾತು:
“ಕರ್ನಾಟಕ ತಂಡದ ಪರ ಉತ್ತಮವಾಗಿ ಆಡಿದ್ದರಿಂದ ಭಾರತ ತಂಡಕ್ಕೆ ಆಯ್ಕೆಯಾಗುವ ಭರವಸೆ ಇತ್ತು. ಇಂದು ನನ್ನ ಕನಸು ನನಸಾಗಿದೆ. ಇಷ್ಟು ದಿನ ಪಟ್ಟ ಶ್ರಮಕ್ಕೆ ಫಲ ಸಿಕ್ಕಂತಾಗಿದೆ. ಈ ಯಶಸ್ಸಿಗೆ ಕಾರಣರಾದ ನನ್ನ ಹೆತ್ತವರು ಮತ್ತು ಗುರುಗಳಿಗೆ ಧನ್ಯವಾದ ಸಲ್ಲಿಸುತ್ತೇನೆ,” ಎಂದು ಸನಿತ್ ಸಂತಸ ಹಂಚಿಕೊಂಡಿದ್ದಾರೆ.
ಕುಂದಾಪುರದ ಈ ಯುವಕನ ಸಾಧನೆಗೆ ಈಗ ರಾಜ್ಯಾದ್ಯಂತ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಏಷ್ಯಾ ಕಪ್ನಲ್ಲಿ ಭಾರತದ ಪರ ಅವರು ಅದ್ಭುತ ಪ್ರದರ್ಶನ ನೀಡಲಿ ಎಂದು ಕನ್ನಡಿಗರು ಹಾರೈಸುತ್ತಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಅಪರಾಧ13 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್10 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ10 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು11 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಅಂತರ ರಾಜ್ಯ11 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ನಿಧನ ವಾರ್ತೆ7 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಸ್ಥಳೀಯ11 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು12 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















