ಘಟನೆಯ ಹಿನ್ನೆಲೆ:ಕಳೆದ ನವೆಂಬರ್ 18, 2025ರಂದು ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ ಎಂಬುವವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಮೇಯಲು ಹೋದಾಗ ನಾಪತ್ತೆಯಾಗಿದ್ದವು. ಈ […]" /> ಘಟನೆಯ ಹಿನ್ನೆಲೆ:ಕಳೆದ ನವೆಂಬರ್ 18, 2025ರಂದು ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ ಎಂಬುವವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಮೇಯಲು ಹೋದಾಗ ನಾಪತ್ತೆಯಾಗಿದ್ದವು. ಈ […]"> ಪೆರುವಾಯಿಯಲ್ಲಿ ದನಗಳ ನಾಪತ್ತೆ ಕೇಸ್: ಎರಡು ತಿಂಗಳ ಬಳಿಕ ಉಳ್ಳಾಲದ ಖದೀಮ ಅಂದರ್! - Nikhara News | Kannada News Website
Connect with us

Uncategorized

ಪೆರುವಾಯಿಯಲ್ಲಿ ದನಗಳ ನಾಪತ್ತೆ ಕೇಸ್: ಎರಡು ತಿಂಗಳ ಬಳಿಕ ಉಳ್ಳಾಲದ ಖದೀಮ ಅಂದರ್!

Published

on

Ad Widget

Ad Widget

Ad Widget

Ad Widget
ಆರೋಪಿ : ಝುಲ್ಫಾನ್ ಮಾಲಿಕ್

ವಿಟ್ಲ: ದನಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಉಳ್ಳಾಲ ಮೂಲದ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget


ಉಳ್ಳಾಲ ಕೋಡಿ ನಿವಾಸಿ ಝುಲ್ಫಾನ್ ಮಾಲಿಕ್ (30) ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
ಕಳೆದ ನವೆಂಬರ್ 18, 2025ರಂದು ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ ಎಂಬುವವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಮೇಯಲು ಹೋದಾಗ ನಾಪತ್ತೆಯಾಗಿದ್ದವು. ಈ ಬಗ್ಗೆ ಗಣೇಶ್ ರೈ ಅವರು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ad Widget

Ad Widget <> Ad Widget

ಬಂಧನ:
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಚುರುಕುಗೊಳಿಸಿ, ಲಭ್ಯವಿರುವ ಮಾಹಿತಿ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಗುರುವಾರ (ಜ. 8) ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಕಳುವಾದ ದನಗಳ ಸಾಗಾಟಕ್ಕೆ ಈತನೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

“ದನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಇತರರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Click to comment

Leave a Reply

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!