ಮಂಗಳೂರು
ನಾಳೆ ಮಂಗಳೂರಿನಲ್ಲಿ ಪ್ರವಾಸೋದ್ಯಮ ಸಮಾವೇಶ : ಸಿಎಂ, ಡಿಸಿಎಂ ಭಾಗಿ : ವಾಹನ ಸಂಚಾರದಲ್ಲಿ ಬದಲಾವಣೆ
ಮಂಗಳೂರು ಜ. 09: ಜ.10ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಹಲವು ಗಣ್ಯರು ಮಂಗಳೂರು ಅತ್ತಾವರದಲ್ಲಿರುವ ಹೋಟೆಲ್ ಅವಾತಾರ್ ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭ, ನರಿಂಗಾನ ಹಾಗೂ ಅಂಬ್ಲಮೊಗರುಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸಿಎಂ, ಡಿಸಿಎಂ ಸಹಿತ ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸುಗಮ ಸಂಚಾರ ದೃಷ್ಟಿಯಿಂದ ತುರ್ತು ಸಂಧರ್ಭದಲ್ಲಿ ಹೊರತುಪಡಿಸಿ ಕೆಳಕಂಡ ಮಾರ್ಗದಲ್ಲಿ ಬಾರದೇ ಅದಷ್ಟು ಬದಲಿ ಮಾರ್ಗ ಉಪಯೋಗಿಸುವಂತೆ ಕೋರಿದೆ.
ಸಂಚಾರ ದಟ್ಟಣೆಯಾಗುವ ಮಾರ್ಗ:-
ಕೆಂಜಾರು ಜಂಕ್ಷನ್ – ಮರವೂರು – ಕಾವೂರು – ಬೋಂದೆಲ್ – ಪದವಿನಂಗಡಿ – ಮೇರಿಹಿಲ್ – ಯೆಯ್ಯಾಡಿ – ಕೆ.ಪಿ.ಟಿ.ವೃತ್ತ – ಬಟ್ಟಗುಡ್ಡೆ – ಕದ್ರಿ ಕಂಬಳ – ಭಾರತ್ ಬೀಡಿ ಜಂಕ್ಷನ್ – ಬಂಟ್ಸ್ ಹಾಸ್ಟೆಲ್ – ಪಿ.ವಿ.ಎಸ್ – ನವಭಾರತ್ ವೃತ್ತ – ಡಾ| ಅಂಬೇಡ್ಕರ್ ಜಂಕ್ಷನ್ – ಹಂಪನ್ ಕಟ್ಟೆ – ಕೈರಾಲಿ ಜಂಕ್ಷನ್ – ಅತ್ತಾವರ ಕಟ್ಟೆ – ಅವತಾರ್ ಹೋಟೆಲ್ ಎದುರಿನ ರಸ್ತೆ.
ಪದವು ಜಂಕ್ಷನ್ – ನಂತೂರು ವೃತ್ತ – ಪಂಪುವೆಲ್ – ಎಕ್ಕೂರು – ಜಪ್ಪಿನಮೊಗರು – ಕಲ್ಲಾಪು – ತೊಕ್ಕೊಟ್ಟು – ಕುತ್ತಾರ್ಪದವು – ದೇರಳಕಟ್ಟೆ – ನಾಟೆಕಲ್ – ಮಂಗಳಾಂತಿ – ಕಲ್ಕಟ – ಮಂಜನಾಡಿ – ನರಿಂಗಾನ.
ಕುತ್ತಾರ್ಪದವು – ಕೊರಗಜ್ಜನಕಟ್ಟೆ – ಉಳಿಯ – ಅಂಬ್ಲಮೊಗರು – ಮದಕ ಜಂಕ್ಷನ್
ಕೆಪಿ.ಟಿ.ಜಂಕ್ಷನ್ – ಕೊಟ್ಟಾರಚೌಕಿ – ಕೊಡಿಕಲ್ ಕ್ರಾಸ್ – ಕೂಳೂರು – ಕೆ.ಐ.ಓ.ಸಿ.ಎಲ್ ಜಂಕ್ಷನ್ – ತಣ್ಣೀರುಬಾವಿ – ಬ್ಲೂಪ್ಲ್ಯಾಗ್ ಬೀಚ್
ಮೇಲೆ ತಿಳಿಸಿರುವ ಮಾರ್ಗದಲ್ಲಿ ಸದರಿ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬಾರದು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಗಣ್ಯರು ಸಂಚರಿಸುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಯಾವುದೇ ವಾಹನಗಳು ಸಂಚರಿಸತಕ್ಕುದಲ್ಲ.
ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಿದೆ.
ಅಪರಾಧ
Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.
ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಡಿಆರ್ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.
ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ನಿಧನ ವಾರ್ತೆ
ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
-
ಸ್ಥಳೀಯ19 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಕಾರ್ಯಕ್ರಮಗಳು24 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ23 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ19 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ23 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಅಂತರ ರಾಜ್ಯ19 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ19 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು17 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ















