Connect with us

Uncategorized

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ – ಕಾಂಗ್ರೆಸ್ ಮಾಜಿ ನಾಯಕಿಗೆ ಉಪಾಧ್ಯಕ್ಷೆ ಪಟ್ಟ..!

Published

on

Ad Widget

Ad Widget

Ad Widget

Ad Widget

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು 2026ನೇ ಸಾಲಿನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. 2024ರ ಪಟ್ಟಿಗೆ ಹೋಲಿಸಿದರೆ ಈ ಬಾರಿ ಪದಾಧಿಕಾರಿಗಳ ಸಂಖ್ಯೆಯನ್ನು 20ರಿಂದ 23ಕ್ಕೆ ಏರಿಸಲಾಗಿದ್ದು, ಸಂಘಟನೆಯಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

Ad Widget

Ad Widget

Ad Widget

Ad Widget

ಹೆಚ್ಚಿದ ಉಪಾಧ್ಯಕ್ಷರ ಸಂಖ್ಯೆ:
ಹಿಂದಿನ ಪಟ್ಟಿಯಲ್ಲಿ ಏಳು ಮಂದಿ ಉಪಾಧ್ಯಕ್ಷರಿದ್ದರು, ಬಳಿಕ ಲೋಕಸಭಾ ಚುನಾವಣೆಯ ಬಳಿಕ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಪ್ರಸನ್ನ ಕುಮಾರ್ ಮಾರ್ತ ಅವರನ್ನು 8 ನೇ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈ ಬಾರಿ ಆ ಸಂಖ್ಯೆಯನ್ನು ಒಂಬತ್ತಕ್ಕೆ ಹೆಚ್ಚಿಸಲಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅವರಿಗೆ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಇವರು ಕಳೆದ ಲೋಕಸಭಾ ಚುನಾವಣೆಯ ಸಂದರ್ಭ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು.

Ad Widget

Ad Widget alt="Ad Widget"/>

Ad Widget
ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆಗೊಂಡಿರುವುದು

ಕವಿತಾ ಸನಿಲ್‌ ಅವರು ಮಂಗಳೂರಿನ ಪ್ರಭಾವಿ ಬಿಲ್ಲವ ನಾಯಕಿಯಾಗಿದ್ದು, ಕಾಂಗ್ರೆಸ್‌ ನಲ್ಲಿದ್ದಾಗ, ಸಿ ಎಂ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. 2024ರ ಏಫ್ರಿಲ್‌ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮ್ಮುಖ ಬಿಜೆಪಿ ಸೇರ್ಪಡೆಗೊಂಡಿದ್ದರು. ಆದಾಗಿ 21 ತಿಂಗಳ ಬಳಿಕ ಅವರಿಗೆ ಪಕ್ಷ ಹುದ್ದೆ ನೀಡಿದೆ.

Ad Widget

Ad Widget <> Ad Widget

ಕವಿತಾ ಸನಿಲ್

ಪ್ರಸನ್ನ ಮಾರ್ತಾ, ಕವಿತಾ ಸನಿಲ್ ಜತೆ ಜಯಂತ್ ಕೋಟ್ಯಾನ್ ಸುನೀಲ್ ಆಳ್ವ, ಜಿ. ಪೂಜಾ ಪ್ರಶಾಂತ್ ಪೈ, ರವೀಂದ್ರ ಶೆಟ್ಟಿ ಉಳಿದೊಟ್ಟು, ಶಾಂತಿಪ್ರಸಾದ್ ಹೆಗ್ಡೆ, ರಾಕೇಶ್ ರೈ ಕೆಡಂಜಿ ಹಾಗೂ ತಿಲಕ್ರಾಜ್ ಕೃಷ್ಣಾಪುರ ಅವರು ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ವಿಭಾಗದಲ್ಲಿ ಸ್ಥಿರತೆ:
ಪಕ್ಷದ ಪ್ರಮುಖ ಜವಾಬ್ದಾರಿಯಾದ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್ ಮತ್ತು ಎಂಎಲ್ಸಿ ಕಿಶೋರ್ ಕುಮಾರ್ ಪಿ. ಅವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಮೂಲಕ ಸಂಘಟನಾತ್ಮಕ ಸ್ಥಿರತೆಯನ್ನು ಕಾಯ್ದುಕೊಂಡಿದ್ದಾರೆ. ಕಿಶೋರ್‌ ಕುಮಾರ್‌ ಅವರು ವಿಧಾನ ಪರಿಷತ್‌ ಗೆ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ಹೊಸ ಆಯ್ಕೆ ನಡೆಯಬಹುದೆಂಬ ಲೆಕ್ಕಚಾರ ರಾಜಕೀಯ ವಲಯದಲ್ಲಿ ನಡೆಯುತಿತ್ತು.

Ad Widget

Ad Widget

ಕಾರ್ಯದರ್ಶಿಗಳ ಬದಲಾವಣೆ:
ಕಾರ್ಯದರ್ಶಿಗಳ ಹಂತದಲ್ಲಿ ವ್ಯಾಪಕ ಬದಲಾವಣೆ ಕಂಡುಬಂದಿದೆ. ಒಟ್ಟು 9 ಮಂದಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ ಧನಲಕ್ಷ್ಮಿ ಗಟ್ಟಿ, ಪುಷ್ಪ ಮೇದಪ್ಪ, ಸುಜಿತ್ ಪ್ರತಾಪ್ ಮತ್ತು ಶೋಭೇಂದ್ರ ಸಸಿಹಿತ್ಲು ಅವರು ಹೊಸದಾಗಿ ಆಯ್ಕೆಯಾಗಿದ್ದಾರೆ. ಹಳೆಯ ಪಟ್ಟಿಯಲ್ಲಿದ್ದ ವಿನಯ್ ಮುತ್ತುಮುಡಿ, ಸೀತಾರಾಂ ಬೆಲಾಲ್ ಮತ್ತು ಕವಿತಾ ದಿನೇಶ್ ಅವರು ಈ ಬಾರಿ ಸ್ಥಾನ ಕಳೆದುಕೊಂಡಿದ್ದಾರೆ. ದೇವಪ್ಪ ಪೂಜಾರಿ, ದಿನೇಶ್ ಅಮ್ಮೂರು, ಪೂರ್ಣಿಮಾ ಎಂ., ವಸಂತಿ ಮಚ್ಚಿನ ಮತ್ತು ವಿದ್ಯಾ ಗೌರಿ ಅವರು ಕಾರ್ಯದರ್ಶಿಗಳಾಗಿ ಮುಂದುವರಿದಿದ್ದಾರೆ.

ಇತರ ನೇಮಕಾತಿ:
ಸಂಜಯ್ ಪ್ರಭು ಅವರು ಜಿಲ್ಲಾ ಕೋಶಾಧಿಕಾರಿಯಾಗಿ ಮುಂದುವರಿದಿದ್ದಾರೆ. ಕಾರ್ಯಾಲಯ ಕಾರ್ಯದರ್ಶಿ ಜವಾಬ್ದಾರಿಯನ್ನು ಅರವಿಂದ ಶೇಣೈ ಅವರ ಬದಲಿಗೆ ಗುರುಚರಣ್ ಅವರಿಗೆ ವಹಿಸಲಾಗಿದೆ.

ಒಟ್ಟಾರೆ ಪಟ್ಟಿಯನ್ನು ಗಮನಿಸಿದರೆ, ಪಕ್ಷದ ಹಳೆಯ ಮತ್ತು ನಿಷ್ಠಾವಂತ ಕಾರ್ಯಕರ್ತರನ್ನು ಉಳಿಸಿಕೊಳ್ಳುವ ಜೊತೆಗೆ, ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದ ಪ್ರಭಾವಿ ನಾಯಕರಿಗೂ ಆದ್ಯತೆ ನೀಡಲಾಗಿದೆ. ಮಹಿಳಾ ಪದಾಧಿಕಾರಿಗಳ ಸಂಖ್ಯೆಯಲ್ಲಿನ ಹೆಚ್ಚಳವು ಮುಂದಿನ ಚುನಾವಣೆಗಳ ದೃಷ್ಟಿಯಿಂದ ಮಹಿಳಾ ಸಂಘಟನೆಯನ್ನು ಬಲಪಡಿಸುವ ಸೂಚನೆಯಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಮಾನ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಿರುವುದು ಈ ಪಟ್ಟಿಯಲ್ಲಿ ಎದ್ದು ಕಾಣುತ್ತಿದೆ.

Ad Widget
Click to comment

Leave a Reply

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!