Uncategorized
Mangalore Lit Fest : ಬ್ರಿಟಿಷ್ ಕನ್ನಡಕ ಕಳಚಿಡಿ, ಭಾರತೀಯ ದೃಷ್ಟಿಯಲ್ಲಿ ಇತಿಹಾಸ ನೋಡಿ: ಇತಿಹಾಸಜ್ಞೆ ಮೀನಾಕ್ಷಿ ಜೈನ್ ಕರೆ; 8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್

ಮಂಗಳೂರು: “ಭಾರತದ ಇತಿಹಾಸವು ಕೇವಲ ದಾಳಿಗಳ ಕಥೆಯಲ್ಲ, ಅದು ಜನಸಾಮಾನ್ಯರ ಅಚಲ ನಂಬಿಕೆ ಮತ್ತು ಸಂಸ್ಕೃತಿಯ ವಿಜಯಗಾಥೆ. ನಮ್ಮ ಇತಿಹಾಸವನ್ನು ನಾವು ಭಾರತೀಯ ಕಣ್ಣುಗಳಿಂದಲೇ ನೋಡಬೇಕೇ ಹೊರತು, ವಿದೇಶಿ ವಸಾಹತುಶಾಹಿ ದೃಷ್ಟಿಕೋನದಿಂದಲ್ಲ,” ಎಂದು ಖ್ಯಾತ ಇತಿಹಾಸಕಾರ್ತಿ, ಪದ್ಮಶ್ರೀ ಡಾ. ಮೀನಾಕ್ಷಿ ಜೈನ್ ಪ್ರತಿಪಾದಿಸಿದರು.
ನಗರದಲ್ಲಿ ನಡೆದ 8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್‌ನಲ್ಲಿ ಗೌರವ ಪ್ರಶಸ್ತಿ ಸ್ವೀಕರಿಸಿ, ‘ನಾಗರಿಕತೆಯೊಂದಿಗೆ ಮರುಸಂಪರ್ಕ’ ಎಂಬ ಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಕಾಶಿ-ಮಥುರಾ: ಅಳಿಸಲಾಗದ ಪುರಾವೆಗಳು
ಕಾಶಿ ವಿಶ್ವನಾಥ ದೇಗುಲದ ಕುರಿತು ಮಾತನಾಡಿದ ಅವರು, ಇತಿಹಾಸವನ್ನು ತಿರುಚುವ ಪ್ರಯತ್ನಗಳ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು:
ಪ್ರಾಚೀನತೆ: ಕಾಶಿಯ ಇತಿಹಾಸ 12ನೇ ಶತಮಾನದಿಂದ ಆರಂಭವಾಗುವುದಲ್ಲ, ಉಪನಿಷತ್ ಕಾಲದಿಂದಲೂ ಕಾಶಿ ಅಸ್ತಿತ್ವದಲ್ಲಿದೆ.ಗೋಡೆಗಳೇ ಸಾಕ್ಷಿ: ದೇಗುಲದ ಗೋಡೆಗಳ ಮೇಲೆಯೇ ಇತಿಹಾಸದ ಪುರಾವೆಗಳಿವೆ. 1936ರ ವಕ್ಫ್ ವಿವಾದದ ಸಂದರ್ಭದಲ್ಲೂ ಬ್ರಿಟಿಷ್ ಸರ್ಕಾರ ನಡೆಸಿದ ತನಿಖೆಯಲ್ಲಿ ಸುಮಾರು 4,000 ಪುಟಗಳ ದಾಖಲೆಗಳು ಸಂಗ್ರಹವಾಗಿದ್ದವು.
ಮಥುರಾದ ಸತ್ಯ: ಮಥುರಾದಲ್ಲಿ ದೇವಸ್ಥಾನಕ್ಕೆ ಸೇರಿದ 13.3 ಎಕರೆ ಜಮೀನಿನ ಪೈಕಿ ಮೂರು ಎಕರೆಯನ್ನು 1968ರಲ್ಲಿ ರಾಜಕೀಯ ಕಾರಣಗಳಿಗಾಗಿ ವಕ್ಫ್‌ಗೆ ನೀಡಲಾಗಿತ್ತು ಎಂದು ಅವರು ವಿಷಾದಿಸಿದರು.

ನಮ್ಮ ನಾಗರಿಕತೆ ಉಳಿಸಿದ್ದು ಜನಸಾಮಾನ್ಯರು
ವಿಶ್ವದ ಹಲವು ನಾಗರಿಕತೆಗಳು ಕಾಲಗರ್ಭದಲ್ಲಿ ಅಳಿದುಹೋದರೂ ಭಾರತೀಯ ನಾಗರಿಕತೆ ಇಂದಿಗೂ ಜೀವಂತವಾಗಿರುವುದಕ್ಕೆ ಕಾರಣ ಇಲ್ಲಿನ ಸಾಮಾನ್ಯ ಜನರ ಭಕ್ತಿ ಮತ್ತು ಆಚರಣೆಗಳು ಎಂದು ಮೀನಾಕ್ಷಿ ಜೈನ್ ಅಭಿಪ್ರಾಯಪಟ್ಟರು.
”ನಮ್ಮನ್ನು ಆಳಿದ ರಾಜರಿಗಿಂತಲೂ, ಧರ್ಮವನ್ನು ರಕ್ಷಿಸಿದವರು ಜನಸಾಮಾನ್ಯರು. ಸಾಂಚಿಯ ಸ್ತೂಪಗಳ ನಿರ್ಮಾಣದಲ್ಲಿ ರಾಜರ ಪಾತ್ರಕ್ಕಿಂತಲೂ ಸಾಮಾನ್ಯ ಮರಗೆಲಸದವರು, ಬಂಡಿ ಎಳೆಯುವವರು ನೀಡಿದ ದೇಣಿಗೆಯೇ ದೊಡ್ಡದು ಎಂಬುದಕ್ಕೆ ಶಾಸನಗಳೇ ಸಾಕ್ಷಿ.”
ಒಡೆದು ಆಳುವ ನೀತಿಗೆ ತಪರಾಕಿ
ಬ್ರಿಟಿಷರು ಭಾರತೀಯ ಇತಿಹಾಸವನ್ನು ‘ನಿರಂತರ ಸಂಘರ್ಷಗಳ ತಾಣ’ ಎಂಬಂತೆ ಬಿಂಬಿಸಿದ್ದಾರೆ ಎಂದು ಅವರು ಆಕ್ಷೇಪಿಸಿದರು. ಹಿಂದೂ, ಜೈನ ಮತ್ತು ಬೌದ್ಧ ಧರ್ಮಗಳ ನಡುವೆ ಸದಾ ಕಚ್ಚಾಟವಿತ್ತು ಎಂಬುದು ಸುಳ್ಳು ಇತಿಹಾಸ. ವಾಸ್ತವದಲ್ಲಿ ಈ ಎಲ್ಲಾ ಧರ್ಮಗಳು ಸಾವಿರಾರು ವರ್ಷಗಳಿಂದ ಸೌಹಾರ್ದತೆಯಿಂದಲೇ ಬಾಳಿವೆ. ನಮ್ಮನ್ನು ಒಡೆಯಲು ಹಣೆದ ಬ್ರಿಟಿಷ್ ತಂತ್ರಗಳನ್ನು ಪಠ್ಯಪುಸ್ತಕಗಳಿಂದ ತೆಗೆದುಹಾಕಬೇಕಾದ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.
ಬದಲಾದ ಕಾಲಘಟ್ಟ
2010ಕ್ಕಿಂತ ಮೊದಲು ಭಾರತದ ನೈಜ ಇತಿಹಾಸವನ್ನು ಪ್ರಕಟಿಸಲು ಪ್ರಕಾಶಕರು ಹಿಂಜರಿಯುತ್ತಿದ್ದರು. ಆದರೆ ಇಂದು ಕಾಲ ಬದಲಾಗಿದೆ. “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದನ್ನು ನನ್ನ ಜೀವಿತಾವಧಿಯಲ್ಲಿ ನೋಡುತ್ತೇನೆ ಎಂಬ ನಂಬಿಕೆ ಇರಲಿಲ್ಲ, ಆದರೆ 2025ರಲ್ಲಿ ಆ ಕನಸು ನನಸಾಗಿದೆ,” ಎಂದು ಅವರು ಭಾವುಕರಾಗಿ ನುಡಿದರು.
ಡಾ.ಮೀನಾಕ್ಷಿ ಜೈನ್ ಅವರ ಸಂವಾದವನ್ನು ಅಗ್ರಿಲೀಫ್ ಸಂಸ್ಥೆಯ ಚೀಫ್ ಆಫ್ ಸ್ಟಾಫ್ ಪೃಥ್ವಿ ಕಾರಿಂಜ ನಡೆಸಿಕೊಟ್ಟರು. ಅದಕ್ಕೂ ಮೊದಲು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿಯೂ ಡಾ.ಮೀನಾಕ್ಷಿ ಜೈನ್ ಉತ್ಸಾಹದಿಂದ ಭಾಗವಹಿಸಿ ಸರಸ್ವತಿ ರಥವನ್ನು ಎಳೆದರು. ನಂತರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶತಾವಧಾನಿ ಆರ್. ಗಣೇಶ್, ಮಿಥಿಕ್ ಸೊಸೈಟಿ ಗೌರವ ಕಾರ್ಯದರ್ಶಿ ಎಸ್. ರವಿ, ಭಾರತ್ ಫೌಂಡೇಷನ್ ಮ್ಯಾನೇಜಿಂಗ್ ಟ್ರಸ್ಟಿ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಸುನಿಲ್ ಕುಲಕರ್ಣಿ, ಸುಜಿತ್ ಪ್ರತಾಪ್, ದುರ್ಗಾ ರಾಮದಾಸ್ ಕಟೀಲ್ ಮತ್ತು ಶ್ರೀರಾಜ್ ಗುಡಿ ಇದ್ದರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಶಿಕ್ಷಣ15 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ8 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ13 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ8 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸ್ಥಳೀಯ13 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ13 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ13 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ14 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















