ಕ್ರೈಂ
Bengaluru-ಬೆಂಗಳೂರು: ದಕ್ಷಿಣ ಕನ್ನಡದ ಮಹಿಳಾ ಟೆಕ್ಕಿ ಬೆಂಕಿ ಅವಘಡ ಸಾವಿಗೆ ಹೊಸ ಟ್ವಿಸ್ಟ್ : ರೇಪ್ ಮಾಡಿ ಹತ್ಯೆ ಮಾಡಿದ್ದಪಿಯು ವಿದ್ಯಾರ್ಥಿ..!
ಅಪಾರ್ಟೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಕೇಸ್ ಗೆ ಹೊಸ ತಿರುವು ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ಕಿಟಕಿ ತೆರೆದುಕೊಂಡಿತ್ತು. ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿರಲಿಲ್ಲ. ಆಕೆಯ ಮೊಬೈಲ್ ನಾಪತ್ತೆಯಾಗಿದ್ದು, ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೇದಿಸಲು ಸಹಾಯಮಾಡಿತು.
ಅಪಾರ್ಟೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಕೇಸ್ ಗೆ ಹೊಸ ತಿರುವು ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ಕಿಟಕಿ ತೆರೆದುಕೊಂಡಿತ್ತು. ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿರಲಿಲ್ಲ. ಆಕೆಯ ಮೊಬೈಲ್ ನಾಪತ್ತೆಯಾಗಿದ್ದು, ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೇದಿಸಲು ಸಹಾಯಮಾಡಿತು.
ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ 18 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿ ಕರ್ನಲ್ ಕುರೈಯನ್ನು ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕತ್ತು ಹಿಸುಕಿ ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ.
ಕೊಡಗಿನ ಕರ್ನಲ್ ಕುರೈ ಎಂಬ ಆರೋಪಿ ಖಾಸಗಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ.
ದಕ್ಷಿಣ ಕನ್ನಡ ಮೂಲದ 34 ವರ್ಷದ ಶರ್ಮಿಳಾ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿದ್ದು, ಪ್ರತಿದಿನ ಇಬ್ಬರೂ ಮಾತನಾಡುತ್ತಿದ್ದು, ಇದರ ನಡುವೆ ಕುರೈಗೆ ಶರ್ಮಿಳನ ಮೇಲೆ ಒನ್ ಸೈಡ್ ಲವ್ ಆಗಿದೆ. ಕೊಲೆಯ ನಂತರ ಸಾಕ್ಷ್ಯಗಳನ್ನು ನಾಶಮಾಡಲು ಮತ್ತು ಕೊಲೆಯನ್ನು ಬೆಂಕಿ ಅಪಘಾತದ ಸಾವು ಎಂದು ಬಿಂಬಿಸಲು ಆತ ಪ್ರಯತ್ನಿಸಿದ್ದಾನೆ.
ಏನಿದು ಘಟನೆ?
ಜನವರಿ 3 ರಂದು ರಾತ್ರಿ 10.45 ರ ಸುಮಾರಿಗೆ ಅಪಾರ್ಟೆಂಟ್ ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಪೊಲೀಸರಿಗೆ ಕರೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ. ಆರಂಭದಲ್ಲಿ, ಮಹಿಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿತ್ತು. ರೂಮಿನ ಕಿಟಕಿ ತೆರೆದಿರುವುದು, ಫೋನ್ ನಾಪತ್ತೆಯಾಗಿರುವುದು ಹಾಗೂ ಬೆಂಕಿ ಹೊತ್ತುಕೊಳ್ಳಲು ಯಾವುದೇ ಮೂಲವಿಲ್ಲದಿರುವುದು ಪೊಲೀಸರಿಗೆ ಸವಾಲಾಗಿ ಮಾರ್ಪಟ್ಟಿತ್ತು.
ಪೊಲೀಸರು ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಹಲವಾರು ಅನುಮಾನ ವ್ಯಕ್ತಪಡಿಸಿತು. ಶಾರ್ಟ್ ಸರ್ಕ್ಯೂಟ್ ಅಥವಾ ಅನಿಲ ಸ್ಪೋಟದಂತಹ ಯಾವುದೇ ಬೆಂಕಿಯ ಮೂಲವಿರಲಿಲ್ಲ. ಶವ ಪತ್ತೆಯಾದ ಕೋಣೆಯ ಕಿಟಕಿ ತೆರೆದಿದ್ದು, ಉಸಿರುಗಟ್ಟಿ ಸಾವು ಸಂಭವಿಸಿರುವ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕಿತು. ಜೊತೆಗೆ ಶವ ಆಕೆಯ ಮಲಗುವ ಕೋಣೆಯಲ್ಲಿ ಪತ್ತೆಯಾಗಿರಲಿಲ್ಲ ಬದಲಾಗಿ ಆಕೆಯ ಫ್ಲಾಟ್‌ಮೇಟ್‌ನ ಕೋಣೆಯಲ್ಲಿ ಕಂಡುಬಂದಿತ್ತು. ಘಟನೆ ನಡೆದಾಗ ಫ್ಲಾಟ್‌ಮೇಟ್ ಊರಿನಲ್ಲಿ ಇರಲಿಲ್ಲ. ಶರ್ಮಿಳಾ ಒಬ್ಬರೇ ಫ್ಲಾಟ್ ನಲ್ಲಿದ್ದರು.
ಜನವರಿ 3ರಂದು ಕರ್ನಲ್ ಕುರೈ, ಬಾಲ್ಕನಿ ಮೂಲಕ ಶರ್ಮಿಳಾಳ ಮನೆಯೊಳಗೆ ನುಗ್ಗಿದ್ದು, ಸಡನ್ ಆಗಿ ಹಿಂಬದಿಯಿಂದ ಶರ್ಮಿಳಾಳನ್ನ ಅಪ್ಪಿಕೊಂಡಿದ್ದ. ಆಗ ಶರ್ಮಿಳಾ ಕರ್ನಲ್ ಕುರೈನಿಂದ ಬಿಡಿಸಿಕೊಳ್ಳಲು ಯತ್ನಿಸಿದ್ದಾಳೆ. ಕುತ್ತಿಗೆ ಬಲವಾಗಿ ಹಿಸುಕಿದ ನಂತರ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಇದಲ್ಲದೆ, ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿತ್ತು. ಒಳಗಿನಿಂದ ಲಾಕ್ ಆಗಿದ್ದರಿಂದ ಆರೋಪಿ ಮನೆಗೆ ಹೇಗೆ ಪ್ರವೇಶಿಸಿದನೆಂದು ಪೊಲೀಸರಿಗೆ ಗೊಂದಲವಾಯಿತು. ಮೃತರ ಸ್ನೇಹಿತ ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು, ಹೀಗಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಂತ್ರಿಕ ಪುರಾವೆಗಳು ಮತ್ತು ಮೃತರ ಕಾಣೆಯಾದ ಮೊಬೈಲ್ ಫೋನ್ ಅನ್ನು ಪತ್ತೆಹಚ್ಚಿದ ನಂತರ, ಪೊಲೀಸರು ಕುರ್ರೆ ಎಂಬಾತನನ್ನ ಬಂಧಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಲೈಂಗಿಕ ಅನುಕೂಲ ಪಡೆಯುವ ಉದ್ದೇಶದಿಂದ ರಾತ್ರಿ 9 ಗಂಟೆಯ ಸುಮಾರಿಗೆ ಸೈಡಿಂಗ್ ಕಿಟಕಿಯ ಮೂಲಕ ಮನೆಗೆ ಪ್ರವೇಶಿಸಿದ್ದಾಗಿ ಅವನು ಬಹಿರಂಗಪಡಿಸಿದನು. ಮೃತಳು ಸಹಕರಿಸಲು ನಿರಾಕರಿಸಿದಾಗ, ಅವಳ ಮೇಲೆ ಅತ್ಯಾಚಾರ ಮಾಡಿದನೆಂದು ಆರೋಪಿಸಲಾಗಿದೆ. ಅವಳು ವಿರೋಧಿಸಿದಾಗ, ಅವನು ಬಲವಂತವಾಗಿ ಅವಳ ಬಾಯಿ ಮತ್ತು ಮೂಗನ್ನು ತನ್ನ ಕೈಗಳಿಂದ ಮುಚ್ಚಿದ್ದರಿಂದ ಆಕೆ ಪ್ರಜ್ಞೆ ಕಳೆದುಕೊಂಡಳು.
ಅವಳಿಗೆ ರಕ್ತಸ್ರಾವದ ಗಾಯಗಳೂ ಆಗಿದ್ದವು. ತಾನು ಸಿಕ್ಕಿಬೀಳುತ್ತೇನೆ ಎಂದು ಹೆದರಿದ ಕುರ್ಕಿ ಸಂತ್ರಸ್ತೆಯ ದೇಹ ಮತ್ತು ಕೋಣೆಯಲ್ಲಿದ್ದ ಇತರ ವಸ್ತುಗಳಿಗೆ ಬೆಂಕಿ ಹಚ್ಚುವ ಮೂಲಕ ಸಾಕ್ಷ್ಯವನ್ನು ನಾಶಮಾಡಲು ಪ್ರಯತ್ನಿಸಿದನು. ಆಕೆಯ ಮೊಬೈಲ್ ಫೋನ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದನು.
ಕ್ರೈಂ
Murder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಏಳು ಮಂದಿಯನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಬಳಿಕ ಮೃತದೇಹಗಳ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಆರೋಪಿ, ಸೆಲೋ ಟೇಪ್ ಸುತ್ತಿ ಗೋಣಿ ಚೀಲ ಹಾಗೂ ಬೆಡ್‌ಶೀಟ್‌ಗಳಲ್ಲಿ ಪ್ಯಾಕ್ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಮೃತದೇಹಗಳ ಮೇಲೆ ಖಾರದ ಪುಡಿ ಸಿಂಪಡಿಸಿ, ಒಣಮೆಣಸಿನಕಾಯಿಗಳನ್ನೂ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿರಾಡಿಘಾಟ್‌ನಲ್ಲಿ ಪತ್ತೆಯಾದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳ ಪರಿಶೀಲನೆ ವೇಳೆ ಒಣಮೆಣಸಿನಕಾಯಿ ಹಾಗೂ ಖಾರದ ಪುಡಿ ಪತ್ತೆಯಾಗಿದೆ. ಪ್ರಾಣಿ, ಪಕ್ಷಿಗಳು ಮೃತದೇಹಗಳನ್ನು ಕಿತ್ತು ತಿನ್ನದಂತೆ ತಡೆಯಲು ಹಾಗೂ ಪೊಲೀಸ್ ಶ್ವಾನಗಳಿಗೆ ಮೃತದೇಹಗಳ ಸುಳಿವು ಸಿಗದಂತೆ ಮಾಡಲು ಆರೋಪಿ ಈ ತಂತ್ರ ಅನುಸರಿಸಿದ್ದ ಎನ್ನಲಾಗಿದೆ. ಇದರಿಂದ ಪೊಲೀಸರಿಗೆ ತನ್ನನ್ನು ಪತ್ತೆಹಚ್ಚಲು ಕಷ್ಟವಾಗಬಹುದು ಎಂದು ಆತ ಭಾವಿಸಿದ್ದ ಎಂದು ಮೂಲಗಳು ತಿಳಿಸಿವೆ.
ಮಗಳಿಗೆ 10 ದಿನಗಳ ಪೊಲೀಸ್ ವಶ
ಸರಣಿ ಹತ್ಯೆ ಪ್ರಕರಣದಲ್ಲಿ ತಂದೆಗೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಮಗಳನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ ಪೊಲೀಸರು, 10 ದಿನಗಳ ವಶಕ್ಕೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಪೊಲೀಸ್ ವಶದಲ್ಲಿರುವ ಇಂದುಶೇಖರ್‌ನನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿಯ ಕಿರುಕುಳದ ಆರೋಪದ ಜೊತೆಗೆ ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆಸಿರುವ ಸಾಧ್ಯತೆಯ ಆಯಾಮದಲ್ಲಿಯೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಮನೆಗೆ ಲುಮಿನಾಲ್ ಪರೀಕ್ಷೆ
ಹತ್ಯೆಯಾದವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮತ್ತೊಂದೆಡೆ, ಆರೋಪಿಯ ಮನೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಹಾಗೂ ಸುಕೋ ತಂಡಗಳು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿವೆ.
ಆರೋಪಿ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಮನೆಯ ಹಾಲ್, ಸ್ನಾನಗೃಹ ಹಾಗೂ ರುಬ್ಬುವ ಕಲ್ಲಿನ ಮೇಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಣ್ಣಿಗೆ ಕಾಣದ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ತಜ್ಞರು ಮನೆಯಲ್ಲಿ ಲುಮಿನಾಲ್ ಪರೀಕ್ಷೆ ನಡೆಸಿದ್ದಾರೆ.
ಏನಿದು ಲುಮಿನಾಲ್ ಪರೀಕ್ಷೆ?
ಲುಮಿನಾಲ್ ಪರೀಕ್ಷೆಯು ಕಣ್ಣಿಗೆ ಕಾಣದ ರಕ್ತದ ಕಲೆಗಳನ್ನು ಪತ್ತೆಹಚ್ಚಲು ಬಳಸುವ ವೈಜ್ಞಾನಿಕ ವಿಧಾನವಾಗಿದೆ. ರಕ್ತವಿರುವ ಸ್ಥಳವನ್ನು ಸ್ವಚ್ಛಗೊಳಿಸಿದರೂ ರಕ್ತದಲ್ಲಿರುವ ಹಿಮೋಗ್ಲೋಬಿನ್‌ನ ಅಂಶಗಳು ಉಳಿದಿರಬಹುದು. ಅಂತಹ ಸ್ಥಳಗಳಿಗೆ ನಿರ್ದಿಷ್ಟ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದಾಗ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಳಕು ಕಾಣಿಸಿಕೊಳ್ಳುತ್ತದೆ. ಈ ಮೂಲಕ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿಯೂ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.
ಲುಮಿನಾಲ್ ಪರೀಕ್ಷೆ ವೇಳೆ ಸಂಗ್ರಹಿಸಿದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ
Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.
ಕ್ರೈಂ
Seven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಪತ್ನಿ ಹಾಗೂ ಆಕೆಯ ತವರು ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಲಾಗದೆ ಎಲ್ಲರನ್ನೂ ಮನೆಗೆ ಕರೆಸಿ ಹತ್ಯೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಆದರೆ, ಕೌಟುಂಬಿಕ ಕಲಹವೇ ಹತ್ಯೆಗಳಿಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆ ಉದ್ದೇಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಮೂರ್ನಾಲ್ಕು ಕೋಟಿ ಆಸ್ತಿಗಾಗಿ ಹತ್ಯೆ ಸಂಚು?
ಶ್ರೀರಾಂಪುರದಲ್ಲಿ ಅಜ್ಜಿಗೆ ಸೇರಿದ ಸುಮಾರು ₹3ರಿಂದ ₹4 ಕೋಟಿ ಮೌಲ್ಯದ ಆಸ್ತಿ ಇದೆ. ಈ ಆಸ್ತಿಯಲ್ಲಿ ಅತ್ತೆ, ಮಾವ ಸೇರಿದಂತೆ ಕುಟುಂಬದ ಇತರ ಸದಸ್ಯರಿಗೂ ಪಾಲು ನೀಡಬೇಕಾಗುತ್ತದೆ. ಎಲ್ಲರನ್ನೂ ಹತ್ಯೆ ಮಾಡಿದರೆ ಆಸ್ತಿಯನ್ನು ಯಾರೊಂದಿಗೂ ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಆರೋಪಿ ಇಂದುಶೇಖರ್ ತನ್ನ ಮಗಳಿಗೆ ಆಮಿಷವೊಡ್ಡಿ ಸಂಚಿನಲ್ಲಿ ಭಾಗಿಯಾಗಿಸಿದ್ದ ಎನ್ನಲಾಗಿದೆ.
ತಂದೆಯ ಮಾತು ನಂಬಿದ ಪಿಯುಸಿ ವಿದ್ಯಾರ್ಥಿನಿ ಹತ್ಯೆ ಕೃತ್ಯದಲ್ಲಿ ಸಹಕರಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ವಿಚಾರಣೆ ವೇಳೆ, ‘ತಂದೆ ಹೇಳಿದ ಕೆಲಸವನ್ನಷ್ಟೇ ಮಾಡುತ್ತಿದ್ದೆ. ಬೇರೆ ಏನೂ ಗೊತ್ತಿಲ್ಲ’ ಎಂದು ಆಕೆ ಹೇಳಿದ್ದಾಳೆ ಎನ್ನಲಾಗಿದೆ.
ವಿಚಾರಣೆಗೆ ತಂದೆ ಮತ್ತು ಮಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅಪ್ರಾಪ್ತ ವಯಸ್ಸಿನ ಕಾರಣ ಕಾನೂನು ರಕ್ಷಣೆ?
ಹತ್ಯೆ ನಡೆದ ಸಂದರ್ಭದಲ್ಲಿ ಆರೋಪಿಯ ಮಗಳಿಗೆ 17 ವರ್ಷ ವಯಸ್ಸಾಗಿತ್ತು. ನವೆಂಬರ್ 8ರಂದು ಆಕೆ 18 ವರ್ಷಕ್ಕೆ ಕಾಲಿಟ್ಟಿದ್ದಾಳೆ. ಕೃತ್ಯ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿದ್ದ ಕಾರಣ ಬಾಲ ನ್ಯಾಯ ಕಾಯ್ದೆಯಡಿ ಕಾನೂನು ರಕ್ಷಣೆ ದೊರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದ್ದಾರೆ.
ಮೃತದೇಹ ಸಾಗಣೆ, ಸಾಕ್ಷ್ಯ ನಾಶಕ್ಕೂ ಸಂಚು!
ಏಳು ಮಂದಿಯ ಹತ್ಯೆಯ ಬಳಿಕ ಮೃತದೇಹಗಳನ್ನು ಸಾಗಿಸುವುದು ಹಾಗೂ ಸಾಕ್ಷ್ಯಗಳನ್ನು ನಾಶಪಡಿಸುವುದಕ್ಕೂ ಆರೋಪಿ ಮೊದಲೇ ಯೋಜನೆ ರೂಪಿಸಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈಗಾಗಲೇ ಮೃತರ ಅಂತ್ಯಕ್ರಿಯೆ ನೆರವೇರಿಸಿರುವ ಕುಟುಂಬದವರು ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಏಳು ಮಂದಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹತ್ಯೆಗೆ ಬಳಸಿದ ವಿಧಾನ ಸೇರಿದಂತೆ ಹಲವು ಮಹತ್ವದ ಸಂಗತಿಗಳು ತಿಳಿದುಬರಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಸ್ತಿ ವಿವಾದವೂ ಹತ್ಯೆಗೆ ಪ್ರಮುಖ ಕಾರಣ: ಪೊಲೀಸ್ ಆಯುಕ್ತ
ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತನಾಡಿ, ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿಯ ವೈಯಕ್ತಿಕ ದ್ವೇಷದ ಜತೆಗೆ ಹಣಕಾಸಿನ ವಿಚಾರವೂ ಪ್ರಮುಖ ಕಾರಣವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ತನಿಖಾಧಿಕಾರಿಯೂ ಆಗಿರುವ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















