Connect with us

ಸ್ಥಳೀಯ

Kalleri-ಹಳೆನೇರೆಂಕಿ : ಕಲ್ಲೇರಿ ಶ್ರೀ ಕಲಾನಿಕೇತನ ಟ್ರಸ್ಟ್ ವತಿಯಿಂದ 9ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Published

on



Ad Widget

Ad Widget

Ad Widget

Ad Widget

ಹಳೆನೇರೆಂಕಿ ಗ್ರಾಮದ ಕಲ್ಲೇರಿ ಅಶ್ವತ್ಥ ಕಟ್ಟೆಯ ಬಳಿ ಶ್ರೀ ಕಲಾನಿಕೇತನ ಟ್ರಸ್ಟ್ (ರಿ.) ವತಿಯಿಂದ 9ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜ.11 ಭಾನುವಾರದಂದು ಸಂಭ್ರಮದಿಂದ ನೆರವೇರಿತು.

Ad Widget

Ad Widget

Ad Widget

Ad Widget

ಕಲ್ಲೇರಿ: ಹಳೆನೇರೆಂಕಿ ಗ್ರಾಮದ ಕಲ್ಲೇರಿ ಅಶ್ವತ್ಥ ಕಟ್ಟೆಯ ಬಳಿ ಶ್ರೀ ಕಲಾನಿಕೇತನ ಟ್ರಸ್ಟ್ (ರಿ.) ವತಿಯಿಂದ 9ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜ.11 ಭಾನುವಾರದಂದು ಸಂಭ್ರಮದಿಂದ ನೆರವೇರಿತು.

Ad Widget

Ad Widget

Ad Widget alt="Ad Widget"/>

Ad Widget

ಕೃಷ್ಣಪ್ರಸಾದ್ ನಾರ್ಣತ್ತಾಯ ಕಟ್ಟುಪುಣಿ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬಳಿಕ ಶಾರದಾ ನಗರದ ಶ್ರೀ ಶಾರದಾಂಬ ಭಜನಾ ಮಂಡಳಿಯ ಸದಸ್ಯರಿಂದ ವಿಶೇಷ ‘ಕುಣಿತ ಭಜನೆ’ ನಡೆಯಿತು. ಮಹಾಮಂಗಳಾರತಿ ನಡೆದ ಬಳಿಕ ಪ್ರಸಾದ ವಿತರಣೆ ಮಾಡಲಾಯಿತು.

Ad Widget

Ad Widget <> Ad Widget

ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ‘ಪುದರ್ ದೀತಿಜಿ!’ ಎಂಬ ತುಳು ನಾಟಕ ಪ್ರದರ್ಶನಗೊಂಡಿತು. ಕಾರ್ಯಕ್ರಮದ ಕೊನೆಯಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.



Ad Widget

Click to comment

Leave a Reply

ರಾಜಕೀಯ

Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget <> Ad Widget

ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.



Ad Widget

ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ

Ad Widget

Ad Widget

2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.

ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.

274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ

ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.

‘ಗ್ರಾಮಕ್ಕೊಂದು ಮಾನದಂಡ ಸಲ್ಲ’

ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.

2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.

ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.

‘ರಾಜ್ಯ ಸರಕಾರ ರೈತ ವಿರೋಧಿ’

ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.

Ad Widget
Continue Reading

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading