Connect with us

ಸ್ಥಳೀಯ

S.D.M College-ಎಸ್.ಡಿ.ಎಂ ಕಾಲೇಜು : ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ; ಸಾಹಿತ್ಯ ಮಾನವೀಯ ಮೌಲ್ಯಗಳ ಸಾರುತ್ತದೆ- ಶ್ರೀಧರ್ ಭಟ್

Published

on



Ad Widget

Ad Widget

Ad Widget

Ad Widget

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ
ಹಿಂದಿ ವಿಭಾಗದ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾರ್ಗದರ್ಶನದಲ್ಲಿ ಆಯೋಜಿಸಿದ್ದ ‘ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ’ ವಿಚಾರದ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget

Ad Widget

ಉಜಿರೆ, ಜ.09 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ
ಹಿಂದಿ ವಿಭಾಗದ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾರ್ಗದರ್ಶನದಲ್ಲಿ ಆಯೋಜಿಸಿದ್ದ ‘ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ’ ವಿಚಾರದ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಆಡಳಿತ ಕುಲಸಚಿವ ಪ್ರೊ. ಶ್ರೀಧರ ಎನ್. ಭಟ್ ಮಾತನಾಡಿ, ಜಾತಿ ಧರ್ಮ, ಮಥ ಪಂಥಗಳನ್ನು ಮೀರಿ ನಿಲ್ಲುವ ನೌತಿಕ ಶಕ್ತಿ ಸಾಹಿತ್ಯಕಿದೆ. ಭಕ್ತಿ ಕಾಲದ ಹಿಂದಿ ಸಾಹಿತ್ಯದಲ್ಲಿ ಸಂತ ಕಬೀರ್, ಗುರು ನಾನಕ್, ತುಳಸಿ ದಾಸ್ ರಂತಹ ಮಹನೀಯರು ಧಾರ್ಮಿಕ ಶ್ರದ್ಧೆ, ಸಾಮಾಜಿಕ ಪ್ರಗತಿ ಮತ್ತು ಮಾನವೀಯ ಮೌಲ್ಯಗಳನ್ನು ಸಾರುವ ಚಿಂತನೆಯನ್ನು ಬೋಧಿಸುತ್ತದೆ ಎಂದರು.

Ad Widget

Ad Widget <> Ad Widget

ಮುಖ್ಯ ಅತಿಥಿಯಾಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಹರಿಹರದ ಎಸ್.ಜೆ.ವಿ.ಪಿ. ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ರಮೇಶ್ ಕೆ. ಪರ್ವತಿ ಮಾತನಾಡಿ, ಸಾಹಿತ್ಯಗಳು ಸಾಮಾಜಿಕ ಜಾಗೃತಿ ಮತ್ತು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು. ಮೈಸೂರಿನ ಸೇಂಟ್ ಫಿಲೋಮೆನಾ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ ಉಮೇಶ್ ಮಾತನಾಡಿದರು. ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.



Ad Widget

ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ನಡೆದ ಉದ್ಘಾಟನಾ ಸಭಾ ಕಾರ್ಯಕ್ರಮವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಷನ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಪ್ರೊ. ಶಶಿಶೇಖರ್ ಎನ್. ಕಾಕತ್ಕರ್   ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು.

Ad Widget

Ad Widget

ವಿಚಾರ ಸಂಕಿರಣದ ಮೊದಲಾರ್ಧದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯ ಕುರಿತು ಕೇರಳದ ಕಾಸರಗೋಡು ಕೇಂದ್ರ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ತಾರು ಎಸ್. ಪವಾರ  ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಸೋಲಾಪುರ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಸಂಶೋಧನಾ ನಿರ್ದೇಶಕ ಪ್ರೊ. ರವಿರಾಜ ಫುರಡೆ ‘ ಸಂತ ಕಬೀರರ ಸಾಹಿತ್ಯವು ಭಾರತೀಯ ಜನಜೀವನದ ಮೇಲೆ ಬೀರಿದ ಸಕಾರಾತ್ಮಕ ಪ್ರಭಾವ , ಮೂಡಬಿದ್ರೆಯ ಆಳ್ವಾಸ್  ಮಹಾವಿದ್ಯಾಲಯ ಹಿಂದಿ ವಿಭಾಗದ ಮುಖ್ಯಸ್ಥ ಡಾ. ದತ್ತಾತ್ರಯ ಹೆಗಡೆ ‘ವ್ಯಕ್ತಿತ್ವ ನಿರ್ಮಾಣದ ಮೂಲಗಳು – ಭಕ್ತಿಕಾವ್ಯ (ಕಬೀರರ ಪರಿಪ್ರೇಕ್ಷ್ಯದಲ್ಲಿ), ಸುಳ್ಳ್ಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥ ರಾಮಕೃಷ್ಣ ಕೆ. ಎಸ್. ‘ವೃಂದರ ದೋಹಾಗಳಲ್ಲಿ ಅಡಗಿರುವ ಜನಹಿತ ಹಾಗೂ ರಾಷ್ಟ್ರಹಿತದ ಭಾವನೆ – ಆಧುನಿಕ ಸಂದರ್ಭದಲ್ಲಿನ ಮಹತ್ವ ಕುರಿತು ವಿಚಾರ ಮಂಡನೆ ಮಾಡಿದರು.

ಇದೇ ವೇಳೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧಗಳ ಪ್ರಸ್ತುತಪಡಿಸಿದರು. ಇದರ
ಅಧ್ಯಕ್ಷತೆಯನ್ನು ಧಾರವಾಡದ ಕಿಟೆಲ್ ಕಲಾ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕವಿತಾ ಚಂದಗುಡೆ ನಡೆಸಿಕೊಟ್ಟರು.

ದ್ವಿತೀಯಾರ್ಧದಲ್ಲಿ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥ ಪ್ರೊ. ನಾಮದೇವ್ ಗೌಡ ‘ದಕ್ಷಿಣ ಭಾರತದ ಭಕ್ತಿಕಾವ್ಯ’ ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನಾ ಸಿ. ‘ಕಬೀರ ಮತ್ತು ತುಕಾರಾಮರ ದಾರ್ಶನಿಕ ವಿಚಾರಗಳು’ , ಧಾರವಾಡ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಹಿಂದಿ ವಿಭಾಗದ ಮುಖ್ಯಸ್ಥ ಡಾ. ರಾಜಕುಮಾರ್ ನಾಯಕ್ ‘ಕನ್ನಡ ಶರಣ ಸಾಹಿತ್ಯ ಮತ್ತು ಹಿಂದಿ ಭಕ್ತಿಕಾವ್ಯ’ , ಮಹಾರಾಷ್ಟ್ರದ ಸಿಂಹಗಡ ಕ್ಯಾಂಪಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರಫೀಕ್ ಎನ್. ನದಾಫ್ ‘ ಆಧ್ಯಾತ್ಮಿಕ ಮತ್ತು ಧಾರ್ಮಿಕ ಶಿಕ್ಷಣದಲ್ಲಿ ಭಕ್ತಿಕಾವ್ಯದ ಪಾತ್ರ’ ಕುರಿತು ವಿಚಾರವನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ನಂದ ಕುಮಾರಿ, ರಿಜಿಸ್ಟ್ರಾರ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ ಭಟ್‌, ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯ್ಕ್ ಹಾಗು ಐಕ್ಯುಎಸಿ ಸಂಯೋಜಕ ಗಜಾನನ ಭಟ್ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎನ್ ಸ್ವಾಗತಿಸಿ, ಉಪನ್ಯಾಸಕಿ ಶೃತಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಾಗುತ್ತಿರುವ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯು ಮೌಲ್ಯಯುತ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ವೈಚಾರಿಕ ಪ್ರಬುದ್ಧತೆಯನ್ನು ಹೆಚ್ಚಿಸಲು ಸಾಹಿತ್ಯಾದರಿತ ವಿಚಾರ ಮಂಥನ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಇಂದು ಕಾಲೇಜಿನಲ್ಲಿ ಹಿಂದಿ ಸಾಹಿತ್ಯದ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯುತ್ತಿದೆ. ಇದು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಹೊಸ ಬೆಳಕನ್ನು ಚೆಲ್ಲುವುದ ಜೊತೆಗೆ ಸಮಾಜ ಮತ್ತು ಸಮುದಾಯಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.
-ಪ್ರೋ. ವಿಶ್ವನಾಥ್ ಪಿ, ಪ್ರಾಂಶುಪಾಲರು    ಎಸ್.ಡಿ.ಎಂ (ಸ್ವಾಯತ್ತ) ಪದವಿ ಕಾಲೇಜು

ಕಾರ್ಯತಃ ಅರ್ಥಾತ್ ಧರ್ಮ ನಗರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಉಜಿರೆಯ ಈ  ಶಿಕ್ಷಣ ಸಂಸ್ಥೆಯಲ್ಲಿ ಭಕ್ತಿ ಕಾಲದ ಹಿಂದಿ ಸಾಹಿತ್ಯದ ಪ್ರಸ್ತುತತೆಯ ಕುರಿತು ಚರ್ಚೆ ನಡೆಯುತ್ತಿರುವುದು ನಿಜಕ್ಕೂ ವಿಶೇಷವಾಗಿದೆ. ಈ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ವಿಚಾರ ಗೋಷ್ಠಿಯೂ ವಿದ್ಯಾರ್ಥಿಗಳಿಗೆ ಧಾರ್ಮಿಕ ಪ್ರಬುದ್ಧತೆಯ ಜೊತೆಗೆ ಸಾಮಾಜಿಕ , ಶೈಕ್ಷಣಿಕ ಮತ್ತು ಮಾನವೀಯ ಮೌಲ್ಯಗಳ ಅರಿವನ್ನು ಮೂಡಿಸಿತ್ತದೆ. ಈ ಮೂಲಕ ಸಾಹಿತ್ಯದ ಒಲವನ್ನು ಮತ್ತಷ್ಟು ಹೆಚ್ಚಿಸಲಿದೆ.’
-ಡಾ. ಸುಭಾಷ್ ಜಿ. ರಾಣೆ, ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ    ನಿರ್ದೇಶಕ, ಚೆನೈ

Ad Widget
Click to comment

Leave a Reply

ರಾಜಕೀಯ

Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget <> Ad Widget

ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.



Ad Widget

ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ

Ad Widget

Ad Widget

2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.

ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.

274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ

ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.

‘ಗ್ರಾಮಕ್ಕೊಂದು ಮಾನದಂಡ ಸಲ್ಲ’

ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.

2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.

ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.

‘ರಾಜ್ಯ ಸರಕಾರ ರೈತ ವಿರೋಧಿ’

ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.

Ad Widget
Continue Reading

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading