Connect with us

ಸ್ಥಳೀಯ

S.D.M College-ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಧಾರವಾಡ ಜಿಲ್ಲೆಯ ನವಲೂರಿನಲ್ಲಿ ಶ್ರೀ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ನಡೆದಂತಹ ಅಂತರ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

Ad Widget

Ad Widget

Ad Widget

Ad Widget

ಉಜಿರೆ, ಜ. 12 : ಧಾರವಾಡ ಜಿಲ್ಲೆಯ ನವಲೂರಿನಲ್ಲಿ ಶ್ರೀ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ನಡೆದಂತಹ ಅಂತರ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿ ಪ್ರಿಯಾಂಕ ಉತ್ತಮ ಅಟ್ಯಾಕರ್ , ವಿದ್ಯಾರ್ಥಿನಿ ಐಶ್ವರ್ಯ  ಬೆಸ್ಟ್ ಲಿಬ್ರೋ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು. ತಂಡದಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ, ಶ್ರಿಯಾ,  ಸಂಗೀತ , ಜಸ್ಲಿನ್, ಇಂಚರ, ಸಾಕ್ಷಿ, ಸ್ಮಿತಾ, ಲಾಸ್ಯ, ಅಪೂರ್ವ, ತನು ಮತ್ತು ಅಂಜಲಿ ಪಾಲ್ಗೊಂಡಿದ್ದರು. ತಂಡಕ್ಕೆ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್ ತರಬೇತಿಯನ್ನು ನೀಡಿದ್ದಾರೆ.

Ad Widget

Ad Widget <> Ad Widget

ವಿಜೇತ ತಂಡಕ್ಕೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕ ಮತ್ತು ವಾಲಿಬಾಲ್ ತರಬೇತುದಾರ ಸುದೀನ್ ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Ad Widget
Click to comment

Leave a Reply

ಅಪರಾಧ

Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?

Published

on

Ad Widget

Ad Widget

Ad Widget

Ad Widget

ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.

ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget

Ad Widget

ಅಪಘಾತದ ಕುರಿತು ಸಂಬಂಧಪಟ್ಟ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ವಾಹನ ಹಾಗೂ ಚಾಲಕನನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗಾಯಾಳುವಿನ ಆರೋಗ್ಯ ಸ್ಥಿತಿ, ಅಪಘಾತಕ್ಕೆ ನಿಖರ ಕಾರಣ ಹಾಗೂ ಕಾರು ಚಾಲಕನ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Ad Widget
Continue Reading

ಅಪರಾಧ

Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!

Published

on

Ad Widget

Ad Widget

Ad Widget

Ad Widget

ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.

ಅಲ್ಲದೆ, ಬಿಎನ್‌ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.

Ad Widget
Continue Reading

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!