ಸ್ಥಳೀಯ
Ujire Gram Panchayat-ನಿಗದಿತ ಸಮಯದಲ್ಲಿ ಗ್ರಾಮ ಸಭೆ ನಡೆಸದಿದ್ದಕ್ಕೆ ಇಒ ಖಡಕ್ ಕ್ರಮ! ಉಜಿರೆ ಗ್ರಾ.ಪಂ.ಗೆ ದಂಡದ ಬರೆ
ನಿಗದಿತ ಸಮಯದೊಳಗೆ ಗ್ರಾಮ ಸಭೆಯನ್ನು, ವಾರ್ಡ್ ಸಭೆಯನ್ನು ಕರೆಯಲು ವಿಫಲರಾದ ಕಾರಣ ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಒಂದು ಸಾವಿರ ಹಾಗೂ ಎಲ್ಲ ಸದಸ್ಯರಿಗೆ ತಲಾ ನೂರು ರೂ. ದಂಡವಿಧಿಸಿದ ಅಪರೂಪದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಬೆಳ್ತಂಗಡಿ: ನಿಗದಿತ ಸಮಯದೊಳಗೆ ಗ್ರಾಮ ಸಭೆಯನ್ನು, ವಾರ್ಡ್ ಸಭೆಯನ್ನು ಕರೆಯಲು ವಿಫಲರಾದ ಕಾರಣ ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಒಂದು ಸಾವಿರ ಹಾಗೂ ಎಲ್ಲ ಸದಸ್ಯರಿಗೆ ತಲಾ ನೂರು ರೂ. ದಂಡವಿಧಿಸಿದ ಅಪರೂಪದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಉಜಿರೆ ಪಂಚಾಯಿತಿಯ ಗ್ರಾಮ ಸಭೆ 2025 ಜುಲೈ 8ಕ್ಕೆ ನಡೆದಿದ್ದು, ನಿಯಮಗಳ ಪ್ರಕಾರ ಆರು ತಿಂಗಳ ಒಳಗೆ ಗ್ರಾಮ ಸಭೆಯನ್ನು ನಡೆಸಬೇಕಾಗಿರುವುದು ಪಂಚಾಯಿತಿ ಅಧ್ಯಕ್ಷರ ಜವಾಬ್ದಾರಿಯಾಗಿತ್ತು. ಡಿ.17ರಂದು ಸಾಮಾನ್ಯ ಸಭೆ ನಡೆದಿದ್ದು, ಇದರಲ್ಲಿ ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳ ದಿನ ನಿಗದಿ ಮಾಡಿರುವುದಿಲ್ಲ ಎಂದು ಸಾಮಾಜಿಕ ಹೋರಾಟಗಾರ ಬಾಲಸುಬ್ರಹ್ಮಣ್ಯ ಭಟ್ ಬೋಳಂಬಿ ತಾಲೂಕು ಪಂಚಾಯಿತಿಗೆ ದೂರು ನೀಡಿದ್ದರು.
ಡಿ.22ರಂದು ಅಗತ್ಯ ಕ್ರಮಕೈಗೊಳ್ಳಲು ಉಜಿರೆ ಪಂಚಾಯಿತಿಗೆ ಸೂಚಿಸಿದ್ದು, ಜ.3ರಂದು ಈ ಬಗ್ಗೆ ವಿಶೇಷ ಸಭೆಯನ್ನು ನಡೆಸಲಾಗಿತ್ತು. ಇದರಲ್ಲಿ ಒಂದು ತಿಂಗಳ ಕಾಲಾವಕಾಶ ನೀಡುವಂತೆ ಪತ್ರ ಬದಿದ್ದರೂ, ಇದಕ್ಕೆ ನಿಯಮದಲ್ಲಿ ಅವಕಾಶವಿರುವುದಿಲ್ಲ. ನಿಯಮ ಉಲ್ಲಂಘಿಸಿದ ಕಾರಣ ಅಧ್ಯಕ್ಷರು ಹಾಗೂ 11ವಾರ್ಡ್ ಸದಸ್ಯರಿಂದ ದಂಡನೆಯನ್ನು ವಸೂಲು ಮಾಡಿ ಗ್ರಾಮ ಪಂಚಾಯಿತಿ ನಿಧಿಗೆ ಜಮೆ ಮಾಡಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್. ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಕಾರ್ಯಕ್ರಮಗಳು
Medland Cup-2026-ಮೆಡ್ಲ್ಯಾಂಡ್ ಆಸ್ಪತ್ರೆಯ ವಾರ್ಷಿಕ ಸಂಭ್ರಮ: ನ.29ರಂದು ‘ಮೆಡ್ಲ್ಯಾಂಡ್ ಕಪ್-2026’ ಕ್ರಿಕೆಟ್ ಪಂದ್ಯಾಟ
ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.
ಪುತ್ತೂರು: ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.

ಪುತ್ತೂರಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಎಂಟು ತಂಡಗಳು ಈ ಕ್ರೀಡಾಕೂಟದಲ್ಲಿ ಸೆಣಸಾಡಲಿವೆ. ಪುತ್ತೂರು ಪೊಲೀಸ್ ಎಲೆವೆನ್, ಫಾರೆಸ್ಟ್ ಎಲೆವೆನ್, ಮೆಡ್ಲ್ಯಾಂಡ್ ಫಾಲ್ಕನ್ಸ್, ಪುತ್ತೂರು ಬಾರ್ ಅಸೋಸಿಯೇಷನ್, ಮೆಸ್ಕಾಂ ಪುತ್ತೂರು ಪರ್ಲ್ಸ್, ಕ್ಯಾಂಪ್ಕೋ ಪುತ್ತೂರು, ಕೆಎಸ್ಆರ್ಟಿಸಿ ಪುತ್ತೂರು ಹಾಗೂ ಸಿಎಂಸಿ ಎಲೆವೆನ್ ಪುತ್ತೂರು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿವೆ.
ಆಸ್ಪತ್ರೆಯ ಒಂದು ವರ್ಷದ ವೈದ್ಯಕೀಯ ಸೇವೆಯ ಸಂಭ್ರಮವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ವಿವಿಧ ಇಲಾಖೆಗಳ ನಡುವೆ ಪರಸ್ಪರ ಬಾಂಧವ್ಯ ವೃದ್ಧಿಸುವುದರ ಜತೆಗೆ ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು ಹಾಗೂ ಸ್ನೇಹಭಾವವನ್ನು ಉತ್ತೇಜಿಸುವುದು ಪಂದ್ಯಾಟದ ಆಶಯವಾಗಿದೆ.
ಈ ಕುರಿತು ಮಾಹಿತಿ ನೀಡಿದ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಶಾಲ್ ಅವರು, ಆಸ್ಪತ್ರೆಯ ಪ್ರಥಮ ವರ್ಷದ ಸಂಭ್ರಮವನ್ನು ಕ್ರೀಡಾಕೂಟದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಬಿಗ್ ನ್ಯೂಸ್
Rain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ಪುತ್ತೂರು : ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಕೋಲಾರ ರಾಮನಗರ ಬೆಂಗಳೂರು ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ದ.ಕ. ಉಡುಪಿ ಉ.ಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆ ಬರುವ ಸಾಧ್ಯತೆ ಇದೆ. ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದ್ದರೂ ವಾತಾವರಣದ ಹ್ಯುಮಿಡಿಟಿ ಕಡಿಮೆ ಆದರೇ ಮಳೆ ಪ್ರಮಾಣ ಕಡಿಮೆ ಆಗಿ ಮೋಡದ ವಾತಾವರಣ ಮುಂದುವರೆಯಬಹುದು ಎನ್ನಲಾಗಿದೆ. ನವೆಂಬರ್ 28 ತನಕ ಸಂಜೆ ಮೋಡ – ಮಳೆಯ ಸಾಧ್ಯತೆ ಮುಂದುವರೆಯಬಹುದು ಎಂದು ಹವಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಮಲೆನಾಡಿನಲ್ಲಿ ಸಂಜೆಯ ಮೋಡ ಬರಲಿದ್ದು ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು – ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 27 ತನಕ ಸಂಜೆ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ರಾಮನಗರ ಚಾಮರಾಜನಗರ ಮೈಸೂರು ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ತುಮಕೂರು ಚಿತ್ರದುರ್ಗ ದಾವಣಗೆರೆ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ನ 28 ರಿಂದ ಮಳೆ ಪೂರ್ತಿ ಕಡಿಮೆ ಆಗಬಹುದು.
ಉತ್ತರ ಒಳನಾಡಿನಲ್ಲಿ ಮೋಡದ ವಾತಾವರಣ ಬರಬಹುದು.ಬಳ್ಳಾರಿ ರಾಯಚೂರು ಹಾವೇರಿ ಗದಗ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ತುಂತುರು/ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೋಡ ಮಧ್ಯ ಕರ್ನಾಟಕ ಚಲಿಸುವ ಕಾರಣ ಒಂದೆರಡು ದಿನ ಸಣ್ಣ ಮಳೆಯಾಗಲಿದ್ದು ನಂತರ ಚಳಿ ಮುಂದುವರೆಯಬಹುದು.
ಬಂಗಾಳಕೊಲ್ಲಿಯಿಂದ ಬೀಸುವ ಪೂರ್ವದ ಮಾರುತಗಳಿಂದ ತಮಿಳುನಾಡು ಕೇರಳ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು ಮುಂದಿನ 3-4 ದಿನ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಡಿಸೆಂಬರ್ ಮೊದಲ ವಾರ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವಾಗಿ ದಕ್ಷಿಣ ಶ್ರೀಲಂಕಾ ಮೂಲಕ ಅರಬ್ಬೀಸಮುದ್ರದತ್ತ ಚಲಿಸುವ ಸಾಧ್ಯತೆಯೂ ಇದೆ.
ದಕ್ಷಿಣ ಕನ್ನಡ
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ ಉದ್ಘಾಟನೆಗೊಂಡಿತು.
ಮಂಗಳೂರಿನ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಪುತ್ತೂರಿನಲ್ಲಿ ಅದ್ದೂರಿ ಹಾಗೂ ವಿಶಿಷ್ಟ ದೀಪೋತ್ಸವಕ್ಕೆ ಸಾಕ್ಷಿಯಾಗಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೀಪೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದ್ದು, ಪುತ್ತೂರಿನ ಭಕ್ತರನ್ನು ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ದೀಪೋತ್ಸವಕ್ಕೆ ಸಂಬಂಧಿಸಿದ ಎಲ್ಲ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿಗಳಾದ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಪಿ.ಎಲ್., ವಿಜಯ ಬ್ಯಾಂಕ್ನ ನಿವೃತ್ತ ಎಜಿಎಂ ಜಗಜೀವನದಾಸ್ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ನೋಣಾಲು ಹಾಗೂ ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಸ್ವಾಗತ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಸ್ತಾವನೆಗೈದು, ದೀಪೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ಸ್ವಯಂಸೇವಕರ ನಿಯೋಜನೆ ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಗಲಿರುವ ರಥದ ಕುರಿತು ಮಾಹಿತಿ ನೀಡಿದರು. ಕೋಶಾಧಿಕಾರಿ ಎಸ್. ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಶ್ ಬೆಜ್ಜಂಗಳ ಹಾಗೂ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಕರಿಸಿದರು.
-
ಕ್ರೈಂ23 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ17 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ23 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ21 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ18 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಬಿಗ್ ನ್ಯೂಸ್23 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕ್ರೀಡೆ22 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















