Connect with us

ಬಿಗ್ ನ್ಯೂಸ್

ಸೇನಾ ನೇಮಕಾತಿಯಲ್ಲಿ ಅಮೂಲಾಗ್ರ ಪರಿವರ್ತನೆಗೆ ನಾಂದಿ ಹಾಡಲಿರುವ ಅಗ್ನಿಪಥ ಯೋಜನೆ ಜಾರಿಗೊಳಿಸಿದ ಕೇಂದ್ರ ಸರಕಾರ – ಯೋಜನೆ ಹಾಗೂ ಅದರ ಸಾಧಕ ಬಾಧಕಗಳ ಬಗ್ಗೆ ವಿಶ್ಲೇಷಣೆ

Published

on

Ad Widget

Ad Widget

Ad Widget

Ad Widget

ಭಾರತೀಯ ಸೇನೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಪರಿವರ್ತನೆ ಉಂಟು ಮಾಡುವ ಯೋಜನೆಯೊಂದನ್ನು ಕೇಂದ್ರ ಸರಕಾರ ಜೂ .14ರಂದು ಘೋಷಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ  ಮೋದಿ ಸರಕಾರವು  ಅಗ್ನಿಪಥ್  ಎಂಬ ಹೆಸರನ್ನಿಟ್ಟಿದೆ. ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗೆ 46,000 ಸೈನಿಕರನ್ನು ಸೇರಿಸಿಕೊಳ್ಳುವ ಮಹತ್ವದ ಯೋಜನೆ ಇದಾಗಿದ್ದು  ಇದರ ಬಗ್ಗೆ ದೇಶದಲ್ಲಿ ಪರ ವಿರೋಧದ ಚರ್ಚೆ ಆರಂಭಗೊಂಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಯೊಜನೆಯ ರೂಪುರೇಶೆಗಳ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ನಿನ್ನೆ ಪ್ರಕಟಿಸಿದರು.

Ad Widget

Ad Widget

Ad Widget

Ad Widget

ಪ್ರಧಾನಿ ನೇತೃತ್ವದ ಸಂಪುಟದ ಭದ್ರತಾ ಸಮಿತಿಯು ‘ಅಗ್ನಿಪಥ’ ಯೋಜನೆಗೆ ಮಂಗಳವಾರ ಅನುಮೋದನೆ ನೀಡಿತ್ತು ಆ ಬಳಿಕ ರಾಜನಾಥ್‌ ಸಿಂಗ್ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ  ದೇಶದಲ್ಲಿರುವ ‘ದೇಶಭಕ್ತ ಮತ್ತು ಸ್ಫೂರ್ತಿದಾಯಕ’ ಯುವ ಜನರಿಗೆ ದೇಶಕ್ಕಾಗಿ ನಾಲ್ಕು ವರ್ಷ ಸೇವೆ ಸಲ್ಲಿಸುವ ಅವಕಾಶವನ್ನು ಈ ಯೋಜನೆಯು ಒದಗಿಸಲಿದೆ ಎಂದು  ಹೇಳಿದರು.

Ad Widget

Ad Widget alt="Ad Widget"/>

Ad Widget

ಏನಿದು ಯೋಜನೆ ?

Ad Widget

Ad Widget <> Ad Widget

 ಈ ಯೋಜನೆಯ ಬಳಿಕ  ದೇಶದ ಸೇನೆಗೆ ಸೈನಿಕರ ನೇಮಕಾತಿಗೆ ಈ ವರೆಗೆ ಅನುಸರಿಸಿಕೊಂಡು ಬಂದ ವಿಧಾನವು ಇನ್ನು ಮುಂದೆ ಇರುವುದಿಲ್ಲ. ಹೊಸ ನೀತಿಯು 90 ದಿನಗಳೊಳಗೆ ಜಾರಿಗೆ ಬರಲಿದೆ.   ಮೊದಲ ವರ್ಷದಲ್ಲಿ 46 ಸಾವಿರ ಯುವಕರನ್ನು ಭರ್ತಿ ಮಾಡಿಕೊಳ್ಳುವ ಯೋಜನೆ ಹಾಕಿಕೊಳ್ಳಲಾಗಿದೆ.   ಅವರ ಸೇವಾವಧಿಯು ಒಟ್ಟು ನಾಲ್ಕು ವರ್ಷಗಳ ಕಾಲ ಇರಲಿದೆ. . 2023ರ ಜುಲೈ ಹೊತ್ತಿಗೆ ಮೊದಲ ತಂಡವು ಕರ್ತವ್ಯಕ್ಕೆ ಸೇರ್ಪಡೆಯಾಗಲಿದೆ.

ಅಗ್ನಿಪಥ ಯೋಜನೆಯಡಿಯಲ್ಲಿ ಸೇನೆಗೆ ಸೇರುವವರನ್ನು ‘ಅಗ್ನಿವೀರ’ ಎಂದು ಕರೆಯಲಾಗುತ್ತದೆ.  ಈ ಯೋಜನೆಯಡಿ ನೇಮಕಗೊಂಡವರಿಗೆ ಅಗತ್ಯವಿರುವ ಕೌಶಲ್ಯಗಳಲ್ಲಿ ಸಶಸ್ತ್ರ ಪಡೆಗಳಿಂದ ತರಬೇತಿ ನೀಡಲಾಗುತ್ತದೆ.  ಇವರ ನಾಲ್ಕು ವರ್ಷಗಳ ಕರ್ತವ್ಯದ ಅವಧಿ ಮುಗಿದ  ಬಳಿಕ, ಸೇನೆಯ ಅಗತ್ಯ ಮತ್ತು ಆಯಾ ಕಾಲಕ್ಕೆ ರೂಪಿಸಿಕೊಂಡ ನೀತಿಗಳಿಗೆ ಅನುಗುಣವಾಗಿ  ಸೇನೆಯ ಕಾಯಂ ನೇಮಕಾತಿಯಲ್ಲಿ ಭಾಗವಹಿಸುವ ಅವಕಾಶವನ್ನು ‘ಅಗ್ನಿವೀರ’ರಿಗೆ ನೀಡಲಾಗುವುದು. ಈ ಯೋಜನೆಯಡಿ ಸೇನೆಗೆ ಭರ್ತಿಯಾದ ಶೇಕಡಾ 25ರಷ್ಟು ಅಗ್ನಿ ವೀರರು  ಖಾಯಂ ಉದ್ಯೋಗಕ್ಕಾಗಿ 15 ವರ್ಷಗಳ ಹೆಚ್ಚುವರಿ ಅವಧಿಗೆ ಉಳಿಸಿಕೊಳ್ಳಲಾಗುವುದು. ಉಳಿದವರನ್ನು ಕಡ್ಡಾಯವಾಗಿ  ನಿವೃತ್ತಿಗೊಳಿಸಿ ಸೇವಾ ನಿಧಿಯನ್ನು ನೀಡಲಾಗುತ್ತದೆ  

Ad Widget

Ad Widget

ಅರ್ಹತೆ ಏನು?

*ಹದಿನೇಳೂವರೆ ವರ್ಷದಿಂದ 21 ವರ್ಷದೊಳಗಿನವರು ಅರ್ಹರು

*ಸೈನಿಕರ ನೇಮಕಾತಿಗೆ ಇದ್ದ ದೈಹಿಕ, ವೈದ್ಯಕೀಯ ಮತ್ತು ವೃತ್ತಿಪರ ಮಾನದಂಡಗಳು ಅಗ್ನಿಪಥ ಯೋಜನೆಗೂ ಅನ್ವಯ

ವೇತನ

*ಮೊದಲ ವರ್ಷದಲ್ಲಿ ಪ್ರತೀ ತಿಂಗಳು ₹30 ಸಾವಿರ ವೇತನ.

*ಎರಡನೇ ವರ್ಷ ₹33 ಸಾವಿರ, ಮೂರನೇ ವರ್ಷ ₹36,500 ಮತ್ತು ನಾಲ್ಕನೇ ವರ್ಷ ₹40 ಸಾವಿರ ವೇತನ

ಅಗ್ನಿವೀರರ ಪ್ರತಿ ತಿಂಗಳ ಮೊತ್ತದಲ್ಲಿ 30% ಹಣವು ಸಂಚಿತ ಖಾತೆಗೆ ಹೋಗಲಿದೆ. ಅಷ್ಟೇ ಮೊತ್ತದ ಹಣವನ್ನು ಸರಕಾರವು ಅಗ್ನಿವೀರರ ಸಂಚಿತ ಖಾತೆಗೆ ಹಾಕಲಿದೆ

*ನಾಲ್ಕು ವರ್ಷಗಳ ಕರ್ತವ್ಯದ ಬಳಿಕ ನಿವೃತ್ತಿಗೊಳ್ಳುವ ಅಗ್ನಿ ವೀರನಿಗೆ  ₹11.71 ಲಕ್ಷದ ನಿಧಿಯು ದೊರೆಯುತ್ತದೆ. ಅದರಲ್ಲಿ  ಅರ್ಧದಷ್ಟು ಹಣ ಪ್ರತಿ ತಿಂಗಳು ಅವರ ಖಾತೆಯಿಂದ ಕಡಿತ ಗೊಂಡು ಸಂಚಿತ ಖಾತೆಗೆ ಹೋದ ಹಣ . ಅಂದರೇ  ಅಗ್ನಿ ವೀರನಿಗೆ  ಸಿಗುವ  ₹11.71 ಲಕ್ಷದ ಹಣದಲ್ಲಿ ಅವನ ಪಾಲು 5.85 ಲಕ್ಷ ರೂಪಾಯಿ ಆಗಿರುತ್ತದೆ.

*ಗ್ರಾಚ್ಯುಟಿ ಮತ್ತು ಪಿಂಚಣಿ ಸೌಲಭ್ಯಗಳು ಇಲ್ಲ

ಈ ಯೋಜನೆಯಲ್ಲಿ ಸೇನೆಗೆ ಭರ್ತಿಯಾಗುವ ಅಗ್ನಿವೀರರಿಗೆ  ಆರ್ಮಿಯ ಖಾಯಂ ಯೋಧರಿಗೆ ಸಿಗುವ ಗ್ರಾಚ್ಯುಟಿ ಮತ್ತು ಪಿಂಚಣಿ ಸೌಲಭ್ಯಗಳು ದೊರಕುವುದಿಲ್ಲ

*ಸೇನೆಯಲ್ಲಿ ಇರುವ ಅವಧಿಗೆ ₹48 ಲಕ್ಷದ ವಿಮೆ ನೀಡಲಾಗುವುದು

ನೇಮಕಾತಿ ಪ್ರಕ್ರಿಯೆ :

ಅಖಿಲ ಭಾರತ ಮಟ್ಟದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯೆಗೆ   ಸಶಸ್ತ್ರ ಪಡೆಗಳು ಶೀಘ್ರದಲ್ಲೇ ವಿವಿಧ ಕ್ಯಾಂಪಸ್‌ಗಳಲ್ಲಿ ನೇಮಕಾತಿ ರ್ಯಾಲಿಗಳನ್ನು ಮತ್ತು ವಿಶೇಷ ರ್ಯಾಲಿಗಳನ್ನು ನಡೆಸುತ್ತವೆ. ಎಲ್ಲಾ ಮೂರು ಸೇವೆಗಳಿಗೆ ಆನ್‌ಲೈನ್ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ದಾಖಲಾತಿಯನ್ನು ಮಾಡಲಾಗುತ್ತದೆ. ಕೈಗಾರಿಕಾ ತರಬೇತಿ ಸಂಸ್ಥೆಗಳು ಮತ್ತು ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟಿನಂತಹ ಮಾನ್ಯತೆ ಪಡೆದ ತಾಂತ್ರಿಕ ಸಂಸ್ಥೆಗಳಲ್ಲಿ ವಿಶೇಷ ರ್ಯಾಲಿಗಳು ಮತ್ತು ಕ್ಯಾಂಪಸ್ ಸಂದರ್ಶನಗಳನ್ನು ಇದಕ್ಕಾಗಿ ನಡೆಸಲಾಗುತ್ತದೆ.

ಲಾಭಗಳು

ಸೈನಿಕರ ಸಂಬಳ ಮತ್ತು ಪಿಂಚಣಿಯಿಂದಾಗಿ ಸರ್ಕಾರದ ಮೇಲೆ ಬಿದ್ದಿರುವ ಹೊರೆ ಕಡಿಮೆ ಮಾಡಿಕೊಳ್ಳುವುದು

 ಸಶಸ್ತ್ರ ಪಡೆಗಳು ಹೆಚ್ಚು ತಾರುಣ್ಯಯುತವಾಗಿ ಇರುವಂತೆ ನೋಡಿಕೊಳ್ಳುವುದು

ಯುವಕರು  ಸೇರುವುದರಿಂದ ಸೇನೆಯ ತಾಂತ್ರಿಕ ಜ್ಙಾನ ಮತ್ತು ಸಾಮಾರ್ಥ್ಯ ಹೆಚ್ಚಾಗಲಿದೆ

ಸೇನೆಗೆ ಸೇರುವುದರಿಂದ ಯುವಕರಲ್ಲಿ ದೇಶದ ಬಗೆಗೆ  ಅಭಿಮಾನ ಜಾಗೃತವಾಗುತ್ತದೆ

ಯುವಕರಲ್ಲಿ ಶಿಸ್ತಿನ ಸಿಪಾಯಿಗಳಾಗುವದರಿಂದ ಅವರ ವೃತ್ತಿ ಜೀವನಕ್ಕೂ ಸಹಕಾರಿಯಾಗಲಿದ್ದು ಜತೆಗೆ ಅವರ ಉದ್ಯೋಗದಾತರಿಗೆ ಇದರ ಲಾಭ ದೊರಕಲಿದೆ

 ದೇಶದಲ್ಲಿ ನಿರುದ್ಯೋಗ ಪ್ರಮಾಣ ಅಧಿಕವಾಗಿದ್ದು ಯುವ ಜನತೆ ಉದ್ಯೋಗ ಸಿಗದೇ ಸರಕಾರದ ವಿರುದ್ದ ಆಕ್ರೋಶ ಹೊರ ಹಾಕುತ್ತಿದ್ದು ಅವರ ಮನ ತಣಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಒಂದು

ನಷ್ಟಗಳು :

 ಅಗ್ನಿವೀರರ ತರಭೇತಿ ಅವಧಿ ಖಾಯಂ ಯೋಧರ ತರಭೇತಿ ಅವಧಿ ತೀರ ಕಮ್ಮಿ ( ಖಾಯಂ ಯೋಧರಿಗೆ 2 ವರ್ಷಗಳ ತರಭೇತಿ ಸಿಕ್ಕರೆ ಅಗ್ನಿ ವೀರರಿಗೆ 6 ತಿಂಗಳ ತರಭೇತಿ ಅವಧಿ) ಇದು ಸೇನೆಯ ಒಟ್ಟಾರೆ  ಪ್ರದರ್ಶನದಲ್ಲಿ ಪರಿಣಾಮ ಬೀರಲಿದೆ. ಸೂಕ್ತ ತರಭೇತಿ ಇಲ್ಲದ ಸೈನಿಕರು ಉಪಾಕಾರಕ್ಕಿಂತ ಹೊರಯಾಗುವ ಸಾಧ್ಯತೆಯು ಇದೆ.

ನಾಲ್ಕು ವರ್ಷದ ಬಳಿಕ ಅಗ್ನಿ ವೀರರು ಸೇನೆಯಿಂದ ಹೊರ ಹೋಗುವುದರಿಂದ ಅನುಭವಿ ಸೈನಿಕರ, ಅಫೀಸರ್‌ ಗಳ ಕೊರತೆ ಮುಂದಿನ ದಿನಗಳಲ್ಲಿ  ಸೇನೆಯನ್ನು ಕಾಡುವ ಸಾಧ್ಯತೆ ಇದೆ.

ನಾಲ್ಕು ವರ್ಷದ ಸಿಮೀತ ಅವಧಿಯಾಗಿರುವುದರಿಂದ ಸೇನೆಯ ಇತರ ಸೈನಿಕರ ಜತೆ ಬಾಂಧವ್ಯ ಬೆಳೆಯುವುದು ಅಸಾಧ್ಯ.

ಇದು ಸೇನೆಯಲ್ಲಿ ಸುದೀರ್ಘ ಕಾಲ ಕೆಲಸ ಮಾಡಬೇಕು, ಅದನ್ನೆ ಖಾಯಂ ಉದ್ಯೋಗವಾಗಿಸಬೇಕು ಎಂದು ಬಯಸುವ ತರುಣರ ಆಶೆಗೆ ತಣ್ಣೀರು ಎರಚಬಹುದು.

ಆಗ್ನಿಪಥ್‌ ಯೋಜನೆಗೆ ಸೇರುವ ಕಟ್‌ ಅಪ್‌ ವಯಸ್ಸು 17 ರಿಂದ 21 ಆಗಿರುವುದರಿಂದ ಹಲವರು ಪಿಯುಸಿ ನಂತರ ಶಿಕ್ಷಣ ಮೊಟಕು ಗೊಳಿಸಿ ಸೇನೆ ಸೇರುವ ಸಾಧ್ಯತೆಯಿದ್ದು, ಅವರು  ವಾಪಸ್ಸು ಬರುವಾಗ ಸೂಕ್ತ ಶೈಕ್ಷಣಿಕ ಆರ್ಹತೆ ಇಲ್ಲದೇ ಹೊಸ ಉದ್ಯೋಗ ಪಡಕೊಳ್ಳಲು ಸಮಸ್ಯೆ ಎದುರಿಸಬಹುದು

ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳು

ಕಳೆದ 3 ವರ್ಷದಿಂದ ದೇಶದಲ್ಲಿ ಸೇನೆಗೆ ಹೊಸ ನೇಮಕಾತಿ ಆಗಿಲ್ಲ . ಹೀಗಾಗಿ ಸೇನೆಯಲ್ಲಿ 9362 ಸೇನಾ ಅಧಿಕಾರಿ ಹಾಗೂ 1,13, 362 ಯೋಧರ ಕೊರತೆಯಿದೆ.

ಬೊಕ್ಕಸಕ್ಕೆ ಹಣ ಉಳಿಸುವ ಗುರಿ

ಸದ್ಯ ಸೇನಾಧಿಕಾರಿಗಳು ಮತ್ತು ಯೋಧರಿಗೆ ನೀಡುವ ವೇತನ, ಪಿಂಚಣಿ, ತರಭೇತಿ ಸೇರಿದಂತೆ ವಿವಿಧ ಕಾರ್ಯಗಳಿಗಾಗಿ ಭಾರೀ ಪ್ರಮಾಣದ ಹಣ ಖರ್ಚಾಗುತ್ತಿದೆ. ಅದರಲ್ಲೂ ವನ್‌ ರ್ಯಾಂಕ್‌ ವನ್‌ ಪೆನ್ಷನ್‌ ಯೋಜನೆ ಜಾರಿಗೆ ತಂದ ಬಳಿಕವಂತು ದೊಡ್ಡ ಮೊತ್ತದ ಹಣ ಅದಕ್ಕೆ ವ್ಯಯವಾಗುತ್ತಿದೆ.

10 ವರ್ಷ ಸೇವೆ ಸಲ್ಲಿಸುವ ಓರ್ವ ಯೋಧನ  ಒಟ್ಟಾರೆ ಖರ್ಚು 5.12 ಕೋ ರೂ ಎಂದು ಅಂದಾಜಿಸಲಾಗಿದೆ. ಅದೇ ಯೋಧ 14 ವರ್ಷಗಳ ಕಾಲ ಸೇವೆ ಸಲ್ಲಿಸಿದರೇ ಆ ಮೊತ್ತ 6.93 ಕೋ ರೂ ಗೆ ಏರುತ್ತದೆ. ಅಗ್ನಿ ಪಥ ಯೋಜನೆ ಮೂಲಕ ಈ ವೆಚ್ಚ ಕಡಿತಗೊಳಿಸುವುದು ಪ್ರಮುಖ ಉದ್ದೇಶ . ಆದರೇ ಇದೇ ವೇಳೆ ಇದರಿಂದ ಸೇನೆಯ ಸಾಮಾರ್ಥಯ, ತಾಕತ್ತು ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕವು ಇದೆ

ನಾಲ್ಕು ವರ್ಷಗಳ ಸೇವೆಯ ಬಳಿಕ ಶಿಸ್ತುಬದ್ಧ, ಸ್ಫೂರ್ತಿದಾಯಕ ಮತ್ತು ಕುಶಲ ‘ಅಗ್ನಿವೀರ’ರನ್ನು ಮರಳಿ ಸಮಾಜಕ್ಕೆ ಕಳುಹಿಸಲಾಗುವುದು. ಇವರು ಸಮಾಜದ ಆಸ್ತಿಯಾಗಿ ರೂಪುಗೊಳ್ಳಲಿದ್ದಾರೆ ಎಂದು ಯೋಜನೆಯ ಘೋಷಣೆಯ ವೇಳೆ  ರಾಜನಾಥ್ ಹೇಳಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!