ಕಾರ್ಯಕ್ರಮಗಳು
Puttur-ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಕನಕಾಭಿಷೇಕ
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ಸಮಾಪ್ತಿ ಹಾಗೂ ಉತ್ತರಾಯಣ ಪುಣ್ಯಕಾಲದ ಆರಂಭದ ಶುಭ ಸಂದರ್ಭದಲ್ಲಿ, ಜನವರಿ 14 ರಂದು ಮಕರ ಸಂಕ್ರಮಣದಂದು ಸಂಪ್ರದಾಯಬದ್ಧ ‘ಕನಕಾಭಿಷೇಕ’ ಸೇವೆ ಅತ್ಯಂತ ವೈಭವದಿಂದ ನೆರವೇರಿತು. ಸಾವಿರಾರು ಭಕ್ತರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ಸಮಾಪ್ತಿ ಹಾಗೂ ಉತ್ತರಾಯಣ ಪುಣ್ಯಕಾಲದ ಆರಂಭದ ಶುಭ ಸಂದರ್ಭದಲ್ಲಿ, ಜನವರಿ 14 ರಂದು ಮಕರ ಸಂಕ್ರಮಣದಂದು ಸಂಪ್ರದಾಯಬದ್ಧ ‘ಕನಕಾಭಿಷೇಕ’ ಸೇವೆ ಅತ್ಯಂತ ವೈಭವದಿಂದ ನೆರವೇರಿತು. ಸಾವಿರಾರು ಭಕ್ತರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಭಕ್ತ ಸಾಗರದಲ್ಲಿ ಧನುಪೂಜೆ:
ಮಕರ ಸಂಕ್ರಮಣದ ಪ್ರಯುಕ್ತ ಬೆಳಿಗ್ಗೆ ದೇವಸ್ಥಾನದಲ್ಲಿ ನಡೆದ ಧನುಪೂಜೆಯಲ್ಲಿ ಭಕ್ತಸಾಗರವೇ ಹರಿದುಬಂದಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಪೂಜೆಯ ಪ್ರಸಾದ ವಿತರಣೆ ಹಾಗೂ ಲಘು ಉಪಹಾರದ ವ್ಯವಸ್ಥೆಯನ್ನು ದೇವಸ್ಥಾನ ಸಮಿತಿ ವತಿಯಿಂದ ಮಾಡಲಾಗಿತ್ತು.

ವೈಭವದ ಕನಕಾಭಿಷೇಕ:
ರಾತ್ರಿ ದೇವಳದ ಪ್ರಧಾನ ಅರ್ಚಕರಾದ ವಿ.ಎಸ್. ಭಟ್ ಅವರ ನೇತೃತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆಗಳು ನಡೆದವು. ನಂತರ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ, ಪೂರ್ವಶಿಷ್ಟ ಪದ್ಧತಿಯಂತೆ ಉಳ್ಳಾಲ್ತಿ ಅಮ್ಮನವರ ನಡೆಯಲ್ಲಿ ಶ್ರೀದೇವರಿಗೆ ಕನಕಾಭಿಷೇಕವನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಸೂತಕದ ಹಿನ್ನೆಲೆಯಲ್ಲಿ, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ಅವರು ಕನಕಾಭಿಷೇಕದ ವಿಧಿವಿಧಾನಗಳನ್ನು ನೆರವೇರಿಸಿದರು. ಇದಕ್ಕೂ ಮೊದಲು ರಾಧಾಕೃಷ್ಣ ನಂದಿಲ ಅವರ ಸೇವಾರ್ಥವಾಗಿ ಪಲ್ಲಕ್ಕಿ ಸೇವೆ ಜರುಗಿತು.

ಸುವಸ್ತುಗಳ ಸಮರ್ಪಣೆ:
ಕನಕಾಭಿಷೇಕಕ್ಕಾಗಿ ಹರಿವಾಣದಲ್ಲಿ ವೀಳ್ಯದೆಲೆ, ಅಡಿಕೆ, ಕಾಳುಮೆಣಸು, ಚಿನ್ನ ಮತ್ತು ಬೆಳ್ಳಿಯ ತುಣುಕುಗಳು ಹಾಗೂ ಚಾಲ್ತಿಯಲ್ಲಿರುವ ನಾಣ್ಯಗಳನ್ನು ಶಾಸ್ತ್ರೋಕ್ತವಾಗಿ ಜೋಡಿಸಲಾಗಿತ್ತು. ದೇವಳದ ಸಿಬ್ಬಂದಿ ಪದ್ಮನಾಭ ಅವರು ಈ ಸುವಸ್ತುಗಳನ್ನು ಅಚ್ಚುಕಟ್ಟಾಗಿ ಜೋಡಿಸುವ ಕೈಂಕರ್ಯವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ವೇ. ಮೂ. ವಸಂತ ಕೆದಿಲಾಯ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಳಿನಿ ಪಿ. ಶೆಟ್ಟಿ, ಮಹಾಬಲ ರೈ ವಳತ್ತಡ್ಕ, ಕೃಷ್ಣವೇಣಿ, ಸುಭಾಷ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ.ವಿ, ವಿನಯ ಸುವರ್ಣ, ಈಶ್ವರ ಬೇಡೆಕರ್, ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಸದಸ್ಯ ನಿಹಾಲ್ ಪಿ. ಶೆಟ್ಟಿ, ಶಾರದಾ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಶೆಟ್ಟಿ ಕೆದಂಬಾಡಿಗುತ್ತು ಸಹಿತ ಹಲವಾರು ಗಣ್ಯರು ಹಾಗೂ ಸಾವಿರಾರು ಭಕ್ತರು ಉಪಸ್ಥಿತರಿದ್ದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ವಿಟ್ಲದ ಎಂಆರ್‌ಎಫ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.
ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.
ಅಶೋಕ್ ರೈಗೆ ವಿಶೇಷ ಸನ್ಮಾನ
ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.
ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.
ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.
-
ನಿಧನ ವಾರ್ತೆ16 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್21 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ21 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ20 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ21 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ19 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
Uncategorized10 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ರಾಜಕೀಯ15 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















