ಅಪರಾಧ
SBI branch-ಬ್ಯಾಂಕ್‌ನಲ್ಲಿ ಇಟ್ಟಿದ್ದ ಚಿನ್ನವೇ ಅದಲು ಬದಲು? ಬೆಂಗಳೂರಿನ ದಂಪತಿಗೆ SBI ಶಾಖೆಯಲ್ಲಿ ಶಾಕ್..!
ಮೈಸೂರಿನ ಕೆನರಾ ಬ್ಯಾಂಕ್‌ನಲ್ಲಿ ಚಿನ್ನದ ವಂಚನೆ ಪ್ರಕರಣ ಮಾಸುವ ಮುನ್ನವೇ, ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಎಸ್‌ಬಿಐ (SBI) ಶಾಖೆಯೊಂದರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ. ಬ್ಯಾಂಕ್‌ನಲ್ಲಿ ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್ ಪರಿಶೀಲಿಸಿದಾಗ ಅದು ನಕಲಿ ಎಂದು ತಿಳಿದುಬಂದಿದ್ದು, ದಂಪತಿಗಳು ಕಂಗಾಲಾಗಿದ್ದಾರೆ.
ಬೆಂಗಳೂರು: ಮೈಸೂರಿನ ಕೆನರಾ ಬ್ಯಾಂಕ್‌ನಲ್ಲಿ ಚಿನ್ನದ ವಂಚನೆ ಪ್ರಕರಣ ಮಾಸುವ ಮುನ್ನವೇ, ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಎಸ್‌ಬಿಐ (SBI) ಶಾಖೆಯೊಂದರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ. ಬ್ಯಾಂಕ್‌ನಲ್ಲಿ ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್ ಪರಿಶೀಲಿಸಿದಾಗ ಅದು ನಕಲಿ ಎಂದು ತಿಳಿದುಬಂದಿದ್ದು, ದಂಪತಿಗಳು ಕಂಗಾಲಾಗಿದ್ದಾರೆ.
ಪ್ರಕರಣದ ವಿವರ:
ಮಹಾಲಕ್ಷ್ಮೀ ಲೇಔಟ್ ನಿವಾಸಿಗಳಾದ ಮುಕೇಶ್ ಮತ್ತು ಪೂರ್ಣಿಮಾ ದಂಪತಿ ಒಂದು ವರ್ಷದ ಹಿಂದೆ ಇದೇ ಬಡಾವಣೆಯ ಎಸ್‌ಬಿಐ ಶಾಖೆಯಲ್ಲಿ ಚಿನ್ನದ ಚೈನ್ ಅಡವಿಟ್ಟು 2 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ತಿಂಗಳು 11,700 ರೂ.ಗಳಂತೆ ಅಸಲು ಮತ್ತು ಬಡ್ಡಿಯನ್ನು ಪ್ರಾಮಾಣಿಕವಾಗಿ ಪಾವತಿಸುತ್ತಿದ್ದರು. ಸಾಲ ತೀರಿಸಿದ ನಂತರ ನಿನ್ನೆ ಅವರು ತಮ್ಮ ಚಿನ್ನದ ಚೈನನ್ನು ಬ್ಯಾಂಕ್‌ನಿಂದ ಮರಳಿ ಪಡೆದಿದ್ದಾರೆ.
ಮಾರ್ವಾಡಿ ಅಂಗಡಿಯಲ್ಲಿ ಬಯಲಾದ ಸತ್ಯ:
ಹಣದ ತುರ್ತು ಅಗತ್ಯವಿದ್ದ ಕಾರಣ, ದಂಪತಿಗಳು ಅದೇ ಚೈನನ್ನು ಅಡವಿಡಲು ಅಥವಾ ಮಾರಾಟ ಮಾಡಲು ಮಾರ್ವಾಡಿ ಅಂಗಡಿಗೆ ತೆರಳಿದ್ದಾರೆ. ಅಲ್ಲಿ ಪರಿಶೀಲಿಸಿದಾಗ ಅದು ‘ನಕಲಿ ಚಿನ್ನ’ ಎಂಬ ಕಹಿ ಸತ್ಯ ಹೊರಬಂದಿದೆ. ತಕ್ಷಣ ದಂಪತಿ ಬ್ಯಾಂಕ್‌ಗೆ ತೆರಳಿ ದೂರು ನೀಡಿದಾಗ, ಸಿಬ್ಬಂದಿ ಬೇಜವಾಬ್ದಾರಿಯ ಉತ್ತರ ನೀಡಿ ಆರೋಪವನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಸದ್ಯ ದಂಪತಿಗಳು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ವಿರುದ್ಧ ವಂಚನೆ ದೂರು ದಾಖಲಿಸಿದ್ದಾರೆ.
ಸ್ಥಳೀಯ
Satish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿ ಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನದ ಅರ್ಚಕನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿ ಎಂದು ಗುರುತಿಸಲಾಗಿದೆ.
ಭೂತ-ದೆವ್ವ ಬಿಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಸತೀಶ್ ಪಾತ್ರಿಯ ಮೇಲಿದೆ. ಈ ಸಂಬಂಧ ಸಂತ್ರಸ್ತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ ಎನ್ನಲಾಗಿದೆ. ಬಳಿಕ ಕಾರ್ಯಾಚರಣೆ ನಡೆಸಿದ ಕೊಪ್ಪ ಠಾಣೆ ಪೊಲೀಸರು, ಬೆಂಗಳೂರಿನ ಜೆ.ಪಿ. ನಗರದಲ್ಲಿ ಆತನನ್ನು ಬಂಧಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದಲ್ಲಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಾಟಮಂತ್ರ ನಿಷೇಧ ಕಾಯ್ದೆಯಡಿ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿಯೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಬಾಲಕಿಗೆ ಕೋಳಿ ರಕ್ತ ಕುಡಿಯಲು ಒತ್ತಾಯಿಸಿದ ಆರೋಪ
ಇದೇ ಆರೋಪಿಯ ವಿರುದ್ಧ ಈ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಕೋಳಿ ರಕ್ತ ಕುಡಿಯುವಂತೆ ಒತ್ತಾಯಿಸಿದ ಆರೋಪವೂ ಕೇಳಿಬಂದಿತ್ತು. ಈ ವಿಚಾರ ಬೆಳಕಿಗೆ ಬಂದ ಬಳಿಕ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿತ್ತು.
ಪೊಲೀಸ್ ಕಾನ್‌ಸ್ಟೇಬಲ್ ಅಮಾನತು
ಆರೋಪಿಯ ಬಂಧನ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸ್ ಇಲಾಖೆಯೊಳಗಿಂದಲೇ ಸೋರಿಕೆ ಮಾಡಲಾಗುತ್ತಿತ್ತು ಎಂಬ ಆರೋಪವೂ ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಎನ್.ಆರ್.ಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಕಾಂತೇಶ್, ತನಿಖೆಯ ವಿವಿಧ ಹಂತಗಳ ಮಾಹಿತಿಯನ್ನು ಸತೀಶ್ ಪಾತ್ರಿಗೆ ಮುಂಚಿತವಾಗಿ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ದಾಳಿ ನಡೆಸುವ ಮುನ್ನವೇ ಆರೋಪಿ ಸ್ಥಳ ಬದಲಿಸಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಮಾಹಿತಿ ಸೋರಿಕೆ ಆರೋಪದ ಮೇಲೆ ಕಾನ್‌ಸ್ಟೇಬಲ್ ಕಾಂತೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಸುಳ್ಯ
Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.
ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.
ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಪರಾಧ
Udupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉಡುಪಿ, ಅ.11: ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಎರಡು, ಕಾಪು, ಶಿರ್ವ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ಇನ್ನೂ ಎರಡು-ಮೂರು ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ದೂರುಗಳು ಲಭಿಸಿವೆ ಎಂದು ತಿಳಿದುಬಂದಿದೆ.
ಈ ಪ್ರಕರಣಗಳ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಸಂಬಂಧಪಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ತನಿಖೆಯ ಪ್ರಗತಿ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ವರದಿಗಳನ್ನು ಸಲ್ಲಿಸಲಾಗುತ್ತಿದೆ.
ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಈ ಹಿಂದೆ ಉಡುಪಿ ಜಿಲ್ಲಾ ಪೊಲೀಸರು ಹೇಮಂತ್ ಪೂಜಾರಿಗಾಗಿ ಬಾಂಗ್ಲಾದೇಶದ ಗಡಿಯವರೆಗೂ ಶೋಧ ನಡೆಸಿದ್ದರು. ಆದರೆ, ಆ ಕಾರ್ಯಾಚರಣೆಯಲ್ಲಿ ಆತನ ಪತ್ತೆಯಾಗಿರಲಿಲ್ಲ. ಇದೀಗ ಬೆದರಿಕೆ ಕರೆಗಳ ಪ್ರಕರಣಗಳಲ್ಲಿನ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ.
ಕಾಪು ಪೊಲೀಸರ ವಶಕ್ಕೆ ಅನುಜ್ ಪಾಟೀಲ್
ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಶಾರ್ಪ್ ಶೂಟರ್‌ಗಳನ್ನು ಕಳುಹಿಸಿದ್ದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಗ್ಯಾಂಗ್‌ಸ್ಟರ್, ಬಿಹಾರದ ನಳಂದ ಜಿಲ್ಲೆಯ ಅನುಜ್ ಪಾಟೀಲ್ (35)ನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಈ ಹಿಂದೆ ಬೈಂದೂರು ಹಾಗೂ ಹೆಬ್ರಿ ಪೊಲೀಸರು ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಕಾಪು ಪೊಲೀಸರು ವಶಕ್ಕೆ ಪಡೆದು, ಹೇಮಂತ್ ಪೂಜಾರಿಯೊಂದಿಗಿನ ಆತನ ಸಂಪರ್ಕ ಹಾಗೂ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬಂದಿರುವ ಬೆದರಿಕೆ ಕರೆಗಳ ಆಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕರೆಗಳನ್ನು ಹೇಮಂತ್ ಪೂಜಾರಿಯೇ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರಿನಲ್ಲಿ ಬೇರೆ ಯಾರಾದರೂ ಬೆದರಿಕೆ ಹಾಕುತ್ತಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.
ಪೊಲೀಸ್ ಆಯುಧ ಕಸಿದು ಗುಂಡು ಹಾರಿಸಲು ಯತ್ನಿಸಿದ್ದ ಆರೋಪ
2017ರಿಂದ ತಲೆಮರೆಸಿಕೊಂಡಿದ್ದ ಅನುಜ್ ಪಾಟೀಲ್ ಮುಂಬೈ ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ್ದಾಗಿವೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿತ್ತು.
ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ಕರೆತರುತ್ತಿದ್ದಾಗ, ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಮೂತ್ರ ವಿಸರ್ಜನೆಗೆಂದು ಪೊಲೀಸ್ ವಾಹನದಿಂದ ಕೆಳಗಿಳಿದಿದ್ದ ಅನುಜ್ ಪಾಟೀಲ್, ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್‌ಐ ವಿನಯ್ ಅವರ ಸೇವಾ ಆಯುಧವನ್ನು ಕಸಿದು ಗುಂಡು ಹಾರಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡ ಆತನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಚಿಕಿತ್ಸೆಯ ಬಳಿಕ ತನಿಖೆ ಮುಂದುವರಿಸಿರುವ ಪೊಲೀಸರು, ಬೈಂದೂರು ಮತ್ತು ಹೆಬ್ರಿ ಠಾಣೆಗಳ ನಂತರ ಇದೀಗ ಕಾಪು ಪೊಲೀಸರ ವಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅನುಜ್ ಪಾಟೀಲ್‌ನ ಅಪರಾಧ ಚಟುವಟಿಕೆಗಳು, ಹೇಮಂತ್ ಪೂಜಾರಿಯೊಂದಿಗಿನ ಸಂಪರ್ಕ ಹಾಗೂ ಬೆದರಿಕೆ ಕರೆಗಳ ಹಿಂದಿನ ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
-
ನಿಧನ ವಾರ್ತೆ11 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಸ್ಥಳೀಯ10 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು8 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ11 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ನಿಧನ ವಾರ್ತೆ5 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಬಿಗ್ ನ್ಯೂಸ್5 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ10 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಶಿಕ್ಷಣ5 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















