ನಗರದ ಕ್ಲಾಕ್ ಟವರ್ ಬಳಿ […]" /> ನಗರದ ಕ್ಲಾಕ್ ಟವರ್ ಬಳಿ […]"> Lucky Scheme-ಕಾರು, ಪ್ಲ್ಯಾಟ್ ಆಮಿಷವೊಡ್ಡಿ 'ಲಕ್ಕಿ ಸ್ಕೀಮ್' ಹೆಸರಲ್ಲಿ ಬಹು ಕೋಟಿ ವಂಚನೆ; ನಕಲಿ ಕಂಪನಿಗಳಿಗೆ ಬೀಗ ಜಡಿಯಲು ಸಂತ್ರಸ್ತರ ಬೃಹತ್ ಆಕ್ರೋಶ! - Nikhara News | Kannada News Website
Connect with us

ಅಪರಾಧ

Lucky Scheme-ಕಾರು, ಪ್ಲ್ಯಾಟ್ ಆಮಿಷವೊಡ್ಡಿ ‘ಲಕ್ಕಿ ಸ್ಕೀಮ್’ ಹೆಸರಲ್ಲಿ ಬಹು ಕೋಟಿ ವಂಚನೆ; ನಕಲಿ ಕಂಪನಿಗಳಿಗೆ ಬೀಗ ಜಡಿಯಲು ಸಂತ್ರಸ್ತರ ಬೃಹತ್ ಆಕ್ರೋಶ!

Published

on

Ad Widget

Ad Widget

Ad Widget

Ad Widget

ಮನೆ, ಕಾರು ಮತ್ತು ಚಿನ್ನದ ಆಮಿಷವೊಡ್ಡಿ ಸಾರ್ವಜನಿಕರಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸುತ್ತಿರುವ ‘ಲಕ್ಕಿ ಸ್ಕೀಮ್’ ಕಂಪನಿಗಳನ್ನು ಕೂಡಲೇ ನಿಷೇಧಿಸಿ, ಅವುಗಳಿಗೆ ಬೀಗ ಜಡಿಯಬೇಕು ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ಮಿಯಾಝ್ ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮನೆ, ಕಾರು ಮತ್ತು ಚಿನ್ನದ ಆಮಿಷವೊಡ್ಡಿ ಸಾರ್ವಜನಿಕರಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸುತ್ತಿರುವ ‘ಲಕ್ಕಿ ಸ್ಕೀಮ್’ ಕಂಪನಿಗಳನ್ನು ಕೂಡಲೇ ನಿಷೇಧಿಸಿ, ಅವುಗಳಿಗೆ ಬೀಗ ಜಡಿಯಬೇಕು ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ಮಿಯಾಝ್ ಒತ್ತಾಯಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನಗರದ ಕ್ಲಾಕ್ ಟವರ್ ಬಳಿ ನಡೆದ ಸಂತ್ರಸ್ತರ ಬೃಹತ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಸುಮಾರು 100ಕ್ಕೂ ಹೆಚ್ಚು ನಕಲಿ ಕಂಪನಿಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (RBI) ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಹಣ ಸಂಗ್ರಹಿಸುತ್ತಿವೆ. ಈ ವಂಚನಾ ಜಾಲವು ದಕ್ಷಿಣ ಕನ್ನಡ ಜಿಲ್ಲೆಯಿಂದ ಈಗ ಇತರ ಜಿಲ್ಲೆಗಳಿಗೂ ವ್ಯಾಪಿಸಿದೆ ಎಂದು ಗಂಭೀರ ಆರೋಪ ಮಾಡಿದರು.

Ad Widget

Ad Widget <> Ad Widget

ಬಡವರ ಪ್ರಾಮಾಣಿಕತೆಗೆ ದ್ರೋಹ:
ಇದೇ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು, “ಬಡವರು ತಮ್ಮ ಮಕ್ಕಳ ವಿದ್ಯಾಭ್ಯಾಸ ಮತ್ತು ಹೆಣ್ಣು ಮಕ್ಕಳ ಮದುವೆಗಾಗಿ ಅತ್ಯಂತ ಕಷ್ಟಪಟ್ಟು ಕೂಡಿಟ್ಟ ಹಣವನ್ನು ಈ ಲಕ್ಕಿ ಸ್ಕೀಮ್ ಕಂಪನಿಗಳು ಲೂಟಿ ಮಾಡಿವೆ. ಪೊಲೀಸರು ಮತ್ತು ಲೀಡ್ ಬ್ಯಾಂಕ್ ಅಧಿಕಾರಿಗಳು ಮೊದಲೇ ಜಾಗರೂಕತೆ ವಹಿಸಿ ಕ್ರಮ ಕೈಗೊಂಡಿದ್ದರೆ, ಇಷ್ಟೊಂದು ದೊಡ್ಡ ಮಟ್ಟದ ವಂಚನೆ ನಡೆಯುತ್ತಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರ ಭಾಗಿ:
ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡ ಯೋಗೀಶ್ ಜಪ್ಪಿನಮೊಗರು, ಡಿವೈಎಫ್‌ಐ ಮುಖಂಡ ತಯ್ಯುಬ್ ಬೆಂಗ್ರೆ ಹಾಗೂ ಸಂತ್ರಸ್ತರ ವೇದಿಕೆಯ ಸಹ ಸಂಚಾಲಕ ಸಮದ್ ಕಾಟಿಪಳ್ಳ ಅವರು ಮಾತನಾಡುತ್ತಾ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

Ad Widget

Ad Widget

ಸಂತ್ರಸ್ತರ ವೇದಿಕೆಯ ಪ್ರಮುಖರಾದ ಪರ್ವೀಝ್ ಬಂದರ್, ಖಲೀಲ್ ಬೆಂಗ್ರೆ, ನಟೇಶ್, ರಾಮ್ ಸುರತ್ಕಲ್ ಸೇರಿದಂತೆ ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅನೇಕ ಸಂತ್ರಸ್ತರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಜನರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ತಮಗೆ ನ್ಯಾಯ ದೊರಕಿಸಿಕೊಡುವಂತೆ ಘೋಷಣೆಗಳನ್ನು ಕೂಗಿದರು.

Ad Widget
Click to comment

Leave a Reply

ಅಂತರ ರಾಜ್ಯ

Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ

Published

on

Ad Widget

Ad Widget

Ad Widget

Ad Widget

ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

Ad Widget

Ad Widget <> Ad Widget

ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್‌ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.

Ad Widget

Ad Widget

ರೈಲಿನಲ್ಲಿ ಬೆಂಕಿ ಹಚ್ಚುವುದು ಅಥವಾ ಸುಡುವ ವಸ್ತುಗಳ ಬಳಕೆಯಂತಹ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಪ್ರಯಾಣಿಕರು ತಕ್ಷಣ ದೂರು ನೀಡುವಂತೆ ರೈಲ್ವೆ ಸೂಚಿಸಿದೆ. ಇಂತಹ ಘಟನೆಗಳನ್ನು ‘ರೈಲ್ ಮದದ್’ ಪೋರ್ಟಲ್ ಮೂಲಕ ಅಥವಾ 139 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ವರದಿ ಮಾಡಬಹುದಾಗಿದೆ

Ad Widget
Continue Reading

ಸ್ಥಳೀಯ

Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ

Published

on

Ad Widget

Ad Widget

Ad Widget

Ad Widget

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget <> Ad Widget

ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.

Ad Widget

Ad Widget

ವಿಚಾರಣೆ ವೇಳೆ ಆರೋಪಿಗಳು ಕಳವು ಮಾಡಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 15.340 ಗ್ರಾಂ ತೂಕದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Ad Widget
Continue Reading

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!