Connect with us

ಅಂತರ ರಾಜ್ಯ

Harsha Richaria-ಸನಾತನ ಧರ್ಮದ ಪ್ರಚಾರ ನಿಲ್ಲಿಸಿ ಮತ್ತೇ ಮೊಡೆಲಿಂಗ್ ಫೀಲ್ಡ್ ಗೆ ಹೋಗಲು ನಿರ್ಧರಿಸಿದ ಮಹಾಕುಂಭಮೇಳದ ವೈರಲ್ ಸುಂದರಿ ಹರ್ಷ ರಿಚಾರಿಯಾ

Published

on



Ad Widget

Ad Widget

Ad Widget

Ad Widget

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಸನಾತನ ಧರ್ಮದ ಪ್ರಚಾರದ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಭಾವಿ ಮಾಡೆಲ್ ಹಾಗೂ ವೃತ್ತಿಪರ ನಿರೂಪಕಿ ಹರ್ಷ ರಿಚಾರಿಯಾ ಅವರು ಅಚ್ಚರಿಯ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ತಾವು ಇನ್ನು ಮುಂದೆ ‘ಸನಾತನ ಧರ್ಮದ ಪ್ರಚಾರವನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಜಬಲ್ಪುರ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಸನಾತನ ಧರ್ಮದ ಪ್ರಚಾರದ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಭಾವಿ ಮಾಡೆಲ್ ಹಾಗೂ ವೃತ್ತಿಪರ ನಿರೂಪಕಿ ಹರ್ಷ ರಿಚಾರಿಯಾ ಅವರು ಅಚ್ಚರಿಯ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ತಾವು ಇನ್ನು ಮುಂದೆ ‘ಸನಾತನ ಧರ್ಮದ ಪ್ರಚಾರವನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಾನಸಿಕ ಒತ್ತಡದ ಆರೋಪ:
ಮಕರ ಸಂಕ್ರಾಂತಿಯ ಅಂಗವಾಗಿ ಜಬಲ್ಪುರದ ನರ್ಮದಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಬಳಿಕ ಮಾತನಾಡಿದ 31 ವರ್ಷದ ಹರ್ಷ, ತಮ್ಮ ನಿರ್ಧಾರದ ಹಿಂದಿನ ನೋವನ್ನು ಹಂಚಿಕೊಂಡಿದ್ದಾರೆ. “ಸಮಾಜದಲ್ಲಿ ಎಲ್ಲರೂ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡುತ್ತಾರೆ. ಆದರೆ ಈ ನಿಟ್ಟಿನಲ್ಲಿ ಕೆಲಸ ಮಾಡಲು ಮುಂದೆ ಬರುವ ಯುವಜನತೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿರಂತರ ಟೀಕೆಗಳು, ಮಾನಸಿಕ ಒತ್ತಡ ಮತ್ತು ವೈಯಕ್ತಿಕ ನಿಂದನೆಗಳಿಂದ ನಾನು ಬೇಸತ್ತಿದ್ದೇನೆ. ಈ ಕಾರಣಗಳು ನನ್ನನ್ನು ಧಾರ್ಮಿಕ ಮಾರ್ಗದಿಂದ ದೂರ ಸರಿದು ಮತ್ತೆ ಹಳೆಯ ವೃತ್ತಿ ಜೀವನಕ್ಕೆ ಮರಳುವಂತೆ ಮಾಡಿವೆ” ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ಜನವರಿ 18ಕ್ಕೆ ಅಧಿಕೃತ ಅಂತ್ಯ:
ತಮ್ಮ ಧಾರ್ಮಿಕ ಬದ್ಧತೆಯನ್ನು ಔಪಚಾರಿಕವಾಗಿ ಅಂತ್ಯಗೊಳಿಸುವ ಬಗ್ಗೆ ಮಾಹಿತಿ ನೀಡಿದ ಅವರು, “ಜನವರಿ 18 ರಂದು ಪ್ರಯಾಗ್‌ರಾಜ್‌ನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಹರ್ ಹರ್ ಮಹಾದೇವ್ ಜಪದೊಂದಿಗೆ ಈ ಹಾದಿಗೆ ವಿದಾಯ ಹೇಳಲಿದ್ದೇನೆ. ನಂತರ ನನ್ನ ಹಳೆಯ ವೃತ್ತಿ ಜೀವನಕ್ಕೆ (ನಿರೂಪಣೆ ಮತ್ತು ಮಾಡೆಲಿಂಗ್) ಮರಳಲಿದ್ದೇನೆ” ಎಂದು ಹೇಳಿದ್ದಾರೆ.



Ad Widget

ಪರೋಕ್ಷ ವಾಗ್ದಾಳಿ:
“ಅವರಿಗೆ ಹಿಂದೂ ರಾಷ್ಟ್ರ ಬೇಕು ನಿಜ, ಆದರೆ ಅದರ ಮುಂಚೂಣಿಯಲ್ಲಿ ತಾವೇ ಇರಬೇಕೆಂದು ಅವರು ಬಯಸುತ್ತಾರೆ. ಬೇರೆಯವರು ಆ ಸ್ಥಾನಕ್ಕೆ ಬರುವುದನ್ನು ಅವರು ಸಹಿಸುವುದಿಲ್ಲ” ಎಂದು ಯಾರ ಹೆಸರನ್ನೂ ಉಲ್ಲೇಖಿಸದೆ ಹರ್ಷ ಪರೋಕ್ಷವಾಗಿ ಕಿಡಿಕಾರಿದ್ದಾರೆ.

Ad Widget

Ad Widget

ಒಟ್ಟಿನಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವಿಚಾರಗಳ ಮೂಲಕ ಗುರುತಿಸಿಕೊಂಡಿದ್ದ ಹರ್ಷ ರಿಚಾರಿಯಾ ಅವರ ಈ ದಿಢೀರ್ ನಿರ್ಧಾರ ಅವರ ಅಭಿಮಾನಿಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

Ad Widget

ಅಂತರ ರಾಜ್ಯ

Rahul Gandhi-ಜಂತರ್ ಮಂತರ್‌ನಲ್ಲಿ ಪ್ರತಿಭಟಿಸಿದ ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಖಂಡನೆ

Published

on



Ad Widget

Ad Widget

Ad Widget

Ad Widget

ದೆಹಲಿಯ ಜಂತರ್ ಮಂತರ್‌ನಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಯುವಕರನ್ನು ಬಂಧಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ತಳ್ಳುವುದು ಹೇಡಿತನದ ಕೆಲಸ ಎಂದು ಅವರು ಟೀಕಿಸಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಯುವಕರನ್ನು ಬಂಧಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ತಳ್ಳುವುದು ಹೇಡಿತನದ ಕೆಲಸ ಎಂದು ಅವರು ಟೀಕಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೇಂದ್ರ ಸರ್ಕಾರವು ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳವಾಗಿ ಬಳಸುವುದಕ್ಕೆ ನಿರ್ಬಂಧಗಳನ್ನು ವಿಧಿಸಿರುವುದನ್ನು ವಿರೋಧಿಸಿದ ರಾಹುಲ್ ಗಾಂಧಿ, ಜಂತರ್ ಮಂತರ್ ಭಾರತದ ಜನರಿಗೆ ಸೇರಿದ್ದು, ಅದನ್ನು ಮತ್ತೆ ಜನರ ಪಾಲಿಗೆ ಮರಳಿ ಪಡೆಯುವುದಾಗಿ ಹೇಳಿದ್ದಾರೆ.

Ad Widget

Ad Widget <> Ad Widget

ಸಿಜೆಪಿ ನಾಯಕರಿಗೆ ಐದು ದಿನಗಳ ನ್ಯಾಯಾಂಗ ಬಂಧನ
ಮಂಗಳವಾರ ಮುಂಜಾನೆ ಜಂತರ್ ಮಂತರ್ ಪ್ರದೇಶಕ್ಕೆ ತೆರಳಿ ತ್ರಿವರ್ಣ ಧ್ವಜ ಹಾರಿಸಿ ಘೋಷಣೆಗಳನ್ನು ಕೂಗಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಅಶುತೋಷ್ ರಂಕಾ, ಸೌರಭ್ ದಾಸ್ ಸೇರಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಬುಧವಾರ ನ್ಯಾಯಾಲಯವು ಬಂಧಿತರಿಗೆ ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.



Ad Widget

ಬಂಧನವನ್ನು ಖಂಡಿಸಿರುವ ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಧನ್ಯವಾದ ಅರ್ಪಿಸಿದ್ದಾರೆ.

Ad Widget

Ad Widget

ಸಂವಿಧಾನಿಕ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟ
ವಿದ್ಯಾರ್ಥಿಗಳು, ಯುವಕರು, ಪತ್ರಕರ್ತರು ಹಾಗೂ ಇಂಡಿಯಾ ಒಕ್ಕೂಟದ ಸದಸ್ಯರು ಪ್ರತ್ಯೇಕ ಬ್ಯಾನರ್‌ಗಳ ಅಡಿಯಲ್ಲಿ ಹೋರಾಟ ನಡೆಸುತ್ತಿದ್ದರೂ, ಅವರ ಉದ್ದೇಶ ಒಂದೇ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಂವಿಧಾನಿಕ ಹಕ್ಕುಗಳಿಗಾಗಿ ಆಗ್ರಹಿಸುತ್ತಿರುವ ನಾಗರಿಕರ ಹೋರಾಟ ಇದಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಹಿಂದೆ ಸಿಜೆಪಿ ನಾಯಕರಿಂದ ರಾಹುಲ್ ಗಾಂಧಿ ದೂರ ಉಳಿದಿದ್ದಾರೆ ಎಂಬ ಚರ್ಚೆಗಳು ನಡೆದಿದ್ದವು. ಇದೀಗ ಬಂಧಿತ ನಾಯಕರ ಪರವಾಗಿ ಧ್ವನಿ ಎತ್ತಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಈ ಬೆಳವಣಿಗೆಯನ್ನು ಸಿಜೆಪಿ ನಾಯಕರಿಗೆ ರಾಹುಲ್ ಗಾಂಧಿ ಬಹಿರಂಗ ಬೆಂಬಲ ಸೂಚಿಸಿರುವ ಕ್ರಮವಾಗಿ ವಿಶ್ಲೇಷಿಸಲಾಗುತ್ತಿದೆ.

Ad Widget
Continue Reading

ಅಂತರ ರಾಜ್ಯ

Murder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್‌ಗೆ ಗಲ್ಲು ಶಿಕ್ಷೆ..!

Published

on



Ad Widget

Ad Widget

Ad Widget

Ad Widget

ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರತ್‌ನ ‘ಬ್ಲೂ ಡ್ರಮ್ ಕೊಲೆ’ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಜಪೂತ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಅವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಪತಿ ಸೌರಭ್ ರಜಪೂತ್ ಅವರನ್ನು ಕೊಲೆ ಮಾಡಿ, ದೇಹವನ್ನು ತುಂಡುಗಳಾಗಿ ಕತ್ತರಿಸಿ ನೀಲಿ ಡ್ರಮ್‌ನಲ್ಲಿ ಸಿಮೆಂಟ್ ಮತ್ತು ಮರಳಿನೊಂದಿಗೆ ಮುಚ್ಚಿಟ್ಟಿದ್ದ ಪ್ರಕರಣದಲ್ಲಿ ಈ ತೀರ್ಪು ಹೊರಬಿದ್ದಿದೆ.

Ad Widget

Ad Widget

Ad Widget

Ad Widget

ಲಕ್ನೋ: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರತ್‌ನ ‘ಬ್ಲೂ ಡ್ರಮ್ ಕೊಲೆ’ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಜಪೂತ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಅವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಪತಿ ಸೌರಭ್ ರಜಪೂತ್ ಅವರನ್ನು ಕೊಲೆ ಮಾಡಿ, ದೇಹವನ್ನು ತುಂಡುಗಳಾಗಿ ಕತ್ತರಿಸಿ ನೀಲಿ ಡ್ರಮ್‌ನಲ್ಲಿ ಸಿಮೆಂಟ್ ಮತ್ತು ಮರಳಿನೊಂದಿಗೆ ಮುಚ್ಚಿಟ್ಟಿದ್ದ ಪ್ರಕರಣದಲ್ಲಿ ಈ ತೀರ್ಪು ಹೊರಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

ಏನಿದು ಬ್ಲೂ ಡ್ರಮ್ ಕೊಲೆ ಪ್ರಕರಣ?
2025ರ ಮಾರ್ಚ್‌ನಲ್ಲಿ ನಡೆದ ಈ ಭೀಕರ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಮರ್ಚೆಂಟ್ ನೇವಿ ಅಧಿಕಾರಿಯಾಗಿದ್ದ ಸೌರಭ್ ರಜಪೂತ್ ಅವರನ್ನು ಅವರ ಪತ್ನಿ ಮುಸ್ಕಾನ್, ತನ್ನ ಪ್ರಿಯಕರ ಸಾಹಿಲ್‌ನೊಂದಿಗೆ ಸೇರಿ ಹತ್ಯೆಗೈದ ಆರೋಪ ಎದುರಿಸಿದ್ದರು. ಬಳಿಕ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ ನೀಲಿ ಡ್ರಮ್‌ನಲ್ಲಿ ಇರಿಸಿ, ಸಿಮೆಂಟ್ ಮತ್ತು ಮರಳಿನಿಂದ ಮುಚ್ಚಿಟ್ಟಿದ್ದರು.

Ad Widget

Ad Widget <> Ad Widget

ಘಟನೆ ನಡೆದ ಸುಮಾರು 15 ದಿನಗಳ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಸುದೀರ್ಘ ವಿಚಾರಣೆಯ ನಂತರ ಸೆಪ್ಟೆಂಬರ್ 30ರಂದು ಮುಸ್ಕಾನ್ ಮತ್ತು ಸಾಹಿಲ್‌ರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿತ್ತು. ಇದೀಗ ಅಕ್ಟೋಬರ್ 14ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿರುವ ನ್ಯಾಯಾಲಯ, ಇಬ್ಬರಿಗೂ ಮರಣದಂಡನೆ ವಿಧಿಸಿದೆ.



Ad Widget

ಮಹಾಭಾರತ ಉಲ್ಲೇಖಿಸಿದ ನ್ಯಾಯಾಧೀಶರು
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅರವಿಂದ್ ಕುಮಾರ್ ಮಿಶ್ರಾ ಅವರು ಶಿಕ್ಷೆಯ ತೀರ್ಪು ಪ್ರಕಟಿಸಿದರು. ವಿಚಾರಣೆ ವೇಳೆ ಶಿಕ್ಷೆಯ ಮಹತ್ವವನ್ನು ವಿವರಿಸುವ ಸಂದರ್ಭದಲ್ಲಿ ನ್ಯಾಯಾಧೀಶರು ಮಹಾಭಾರತವನ್ನು ಉಲ್ಲೇಖಿಸಿದರು ಎಂದು ವರದಿಯಾಗಿದೆ.

Ad Widget

Ad Widget

ಶಿಕ್ಷೆಗೊಳಗಾದ ಇಬ್ಬರೂ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸೌರಭ್ ಅವರ ತಾಯಿ ರೇಣು ರಜಪೂತ್ ಹಾಗೂ ಸಹೋದರ ನ್ಯಾಯಾಲಯದ ಕೊಠಡಿಯಲ್ಲಿ ಉಪಸ್ಥಿತರಿದ್ದರು.

‘ನಮ್ಮ ಮಗನ ನೆನಪುಗಳು ಮನೆಯಲ್ಲೆಲ್ಲ ಇವೆ’
ತೀರ್ಪಿನ ಬಳಿಕ ಪ್ರತಿಕ್ರಿಯಿಸಿದ ಸೌರಭ್ ಅವರ ತಾಯಿ ರೇಣು ರಜಪೂತ್ ಭಾವುಕರಾದರು. “ಒಟ್ಟಿಗೆ ಬದುಕಲು ಇಷ್ಟವಿಲ್ಲದಿದ್ದರೆ ಬೇರ್ಪಡಿ. ಆದರೆ ಬೇರೊಬ್ಬರ ಮಗನ ಪ್ರಾಣವನ್ನು ತೆಗೆಯಬೇಡಿ. ನಮ್ಮ ಪಾಲಿಗೆ ನಮ್ಮ ಮಗು ಎಲ್ಲಿಗೂ ಹೋಗಿಲ್ಲ. ಅವನ ನೆನಪುಗಳು ಮನೆಯ ಪ್ರತಿಯೊಂದು ಮೂಲೆಯಲ್ಲೂ ಇವೆ” ಎಂದು ಅವರು ನೋವು ತೋಡಿಕೊಂಡರು.

ಇದಕ್ಕೂ ಮೊದಲು, ತಮ್ಮ ಮಗಳಿಗೆ ಮರಣದಂಡನೆ ವಿಧಿಸಿದರೂ ವಿರೋಧಿಸುವುದಿಲ್ಲ ಎಂದು ಮುಸ್ಕಾನ್ ಅವರ ಪೋಷಕರು ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ಸಲ್ಲಿಸಿದ್ದರು. ಸೌರಭ್ ಅವರ ಕುಟುಂಬವೂ ಇಬ್ಬರು ಆರೋಪಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನು ಕೋರಿತ್ತು.

ದೇಶಾದ್ಯಂತ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಿದ್ದಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ಪ್ರಕರಣದ ಅಂತಿಮ ಸ್ಥಿತಿಯನ್ನು ನಿರ್ಧರಿಸಲಿವೆ.

Ad Widget
Continue Reading

ಅಂತರ ರಾಜ್ಯ

Restaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್‌ಗೆ ₹1 ಲಕ್ಷ ದಂಡ..!

Published

on



Ad Widget

Ad Widget

Ad Widget

Ad Widget

ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್‌ನ ರೆಸ್ಟೋರೆಂಟ್‌ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ.

Ad Widget

Ad Widget

Ad Widget

Ad Widget

ಅಲಿಗಡ (ಉತ್ತರ ಪ್ರದೇಶ): ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್‌ನ ರೆಸ್ಟೋರೆಂಟ್‌ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಇದಲ್ಲದೆ, ದೂರುದಾರರಿಗೆ ಮಾನಸಿಕ ಕಿರುಕುಳಕ್ಕೆ ಪರಿಹಾರವಾಗಿ ₹1,000 ಹಾಗೂ ಮೊಕದ್ದಮೆ ವೆಚ್ಚವಾಗಿ ₹5,000 ಪಾವತಿಸುವಂತೆಯೂ ಆಯೋಗ ಆದೇಶಿಸಿದೆ. ಆದೇಶವನ್ನು 45 ದಿನಗಳೊಳಗೆ ಪಾಲಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ರೆಸ್ಟೋರೆಂಟ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.

Ad Widget

Ad Widget <> Ad Widget

₹18ರ ಬಾಟ್ಲಿಗೆ ₹20 ವಸೂಲಿ
ಅಲಿಗಡ ನಿವಾಸಿಯೊಬ್ಬರು 2026ರ ಮಾರ್ಚ್ 11ರಂದು ಹಥರಸ್‌ನ ಈ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದರು. ಊಟದ ವೇಳೆ ಕುಡಿಯಲು ನೀರು ಕೇಳಿದಾಗ, ₹18 ಎಂಆರ್‌ಪಿ ನಮೂದಿಸಿದ್ದ ನೀರಿನ ಬಾಟ್ಲಿಯನ್ನು ನೀಡಲಾಗಿತ್ತು. ಆದರೆ, ಬಿಲ್‌ನಲ್ಲಿ ₹20 ವಿಧಿಸಲಾಗಿತ್ತು. ಮುದ್ರಿತ ಬೆಲೆಗಿಂತ ₹2 ಹೆಚ್ಚುವರಿಯಾಗಿ ವಸೂಲಿ ಮಾಡಿರುವುದನ್ನು ಪ್ರಶ್ನಿಸಿ ಗ್ರಾಹಕರು ದೂರು ದಾಖಲಿಸಿದ್ದರು.



Ad Widget

ಈ ಘಟನೆಯಿಂದ ತಮಗೆ ಮಾನಸಿಕ ವೇದನೆ ಹಾಗೂ ಆರ್ಥಿಕ ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದ ಗ್ರಾಹಕರು, ₹10 ಲಕ್ಷ ಪರಿಹಾರ ಮತ್ತು ₹15,000 ಕಾನೂನು ವೆಚ್ಚ ನೀಡುವಂತೆ ಕೋರಿ ಆಯೋಗದ ಮೊರೆ ಹೋಗಿದ್ದರು. ರೆಸ್ಟೋರೆಂಟ್‌ನ ಸೇವಾ ನ್ಯೂನತೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದರು.

Ad Widget

Ad Widget

ನೋಟಿಸ್‌ಗೆ ಉತ್ತರಿಸದ ರೆಸ್ಟೋರೆಂಟ್
ಆಯೋಗದ ಅಧ್ಯಕ್ಷ ಹಸ್ಟೈನ್ ಖುರೇಷಿ ಮತ್ತು ಸದಸ್ಯೆ ಪೂರ್ಣಿಮಾ ಸಿಂಗ್ ರಜಪೂತ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ರೆಸ್ಟೋರೆಂಟ್‌ಗೆ ನೋಟಿಸ್ ಜಾರಿಗೊಳಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಮೇ 21ರಂದು ಆಯೋಗವು ಏಕಪಕ್ಷೀಯ ವಿಚಾರಣೆ ಮುಂದುವರಿಸಿತು.

ದೂರುದಾರರು ಸಲ್ಲಿಸಿದ್ದ ಮಾರ್ಚ್ 11ರ ಬಿಲ್ ಹಾಗೂ ₹18 ಎಂಆರ್‌ಪಿ ನಮೂದಿಸಿದ್ದ ನೀರಿನ ಬಾಟ್ಲಿಯ ಛಾಯಾಚಿತ್ರವನ್ನು ಪರಿಶೀಲಿಸಿದ ಆಯೋಗ, ₹20 ವಸೂಲಿ ಮಾಡಿರುವುದನ್ನು ದೃಢಪಡಿಸಿತು. ಇದು ಅನ್ಯಾಯದ ವ್ಯಾಪಾರ ಪದ್ಧತಿಯಾಗಿದೆ ಎಂದು ತೀರ್ಮಾನಿಸಿ ರೆಸ್ಟೋರೆಂಟ್‌ಗೆ ₹1 ಲಕ್ಷ ದಂಡ ಹಾಗೂ ದೂರುದಾರರಿಗೆ ಪರಿಹಾರ ಪಾವತಿಸುವಂತೆ ಆದೇಶಿಸಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading