ಶಿಕ್ಷಣ
Puttur-ಪುತ್ತೂರು: ಸಂತ ಫಿಲೋಮಿನಾ ಡೇಟಾಅನಲಿಟಿಕ್ಸ್ ಕೋರ್ಸ್‌ನ ಸಮಾರೋಪ ಸಮಾರಂಭ
ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗದ ವತಿಯಿಂದ ಐಬಿಎಂ ಹಾಗೂ ಐಸಿಟಿ ಅಕಾಡೆಮಿಯ ಸಹಯೋಗದೊಂದಿಗೆ ಪ್ರಾರಂಭಗೊಂಡ ಐದು ದಿನಗಳ “ಡೇಟಾ ಅನಲಿಟಿಕ್ಸ್ ಯುಸಿಂಗ್ ಪೈಥಾನ್” ಕೋರ್ಸ್‌ನ ಸಮಾರೋಪ ಕಾರ್ಯಕ್ರಮವನ್ನು ಕಾಲೇಜಿನ ಗಣಕವಿಜ್ಞಾನ ಪ್ರಯೋಗಾಲಯದಲ್ಲಿ ಆಯೋಜಿಸಲಾಯಿತು.
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗದ ವತಿಯಿಂದ ಐಬಿಎಂ ಹಾಗೂ ಐಸಿಟಿ ಅಕಾಡೆಮಿಯ ಸಹಯೋಗದೊಂದಿಗೆ ಪ್ರಾರಂಭಗೊಂಡ ಐದು ದಿನಗಳ “ಡೇಟಾ ಅನಲಿಟಿಕ್ಸ್ ಯುಸಿಂಗ್ ಪೈಥಾನ್” ಕೋರ್ಸ್‌ನ ಸಮಾರೋಪ ಕಾರ್ಯಕ್ರಮವನ್ನು ಕಾಲೇಜಿನ ಗಣಕವಿಜ್ಞಾನ ಪ್ರಯೋಗಾಲಯದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರು ವಿದ್ಯಾರ್ಥಿಗಳನ್ನುದ್ದೇಶಿಸಿ “ಇಂದಿನ ಡಿಜಿಟಲ್ ಯುಗದಲ್ಲಿ ಡೇಟಾವು ಅತ್ಯಂತ ಮಹತ್ವದ ಪಾತ್ರವಹಿಸುತ್ತದೆ. ಇಂದಿನ ಜ್ಞಾನಾಧಾರಿತ ಸಮಾಜದಲ್ಲಿ ಡೇಟಾ ಸಂಖ್ಯೆಗಳ ಹಾಗೂ ಪದಗಳ ಸಂಗ್ರಹವಲ್ಲ, ಅದು ನಿರ್ಧಾರಗಳ ಮೂಲ. ಡೇಟಾವನ್ನು ಅರ್ಥಪೂರ್ಣವಾಗಿ ದೃಶ್ಯ ರೂಪದಲ್ಲಿ ಪ್ರಸ್ತುತಪಡಿಸುವ ಸಾಮರ್ಥ್ಯ ಅತ್ಯಂತ ಅವಶ್ಯಕ ಕೌಶಲ್ಯವಾಗಿದೆ. ಈ ಕೋರ್ಸ್ ನಮ್ಮ ಸಂಸ್ಥೆಯ ಶೈಕ್ಷಣಿಕ ದೃಷ್ಟಿಕೋನವನ್ನು ಸ್ಪಷ್ಟಪಡಿಸುತ್ತದೆ ಹಾಗೂ ಪಠ್ಯ ಕ್ರಮದ ಹೊರತಾಗಿ ಕೈಗಾರಿಕಾ ಅಗತ್ಯಗಳಿಗೆ ಹೊಂದುವ ಮತ್ತು ವಿದ್ಯಾರ್ಥಿಗಳನ್ನು ಭವಿಷ್ಯಸಿದ್ಧರನ್ನಾಗಿಸುವ ಪ್ರಥಮ ಹೆಜ್ಜೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಸಾಮರ್ಥ್ಯ ಮಾತ್ರವಲ್ಲ, ವಿಶ್ಲೇಷಣಾತ್ಮಕ ಚಿಂತನೆ ಮತ್ತು ಸಮಸ್ಯೆ ಪರಿಹಾರ ಕೌಶಲ್ಯಗಳನ್ನೂ ವೃದ್ಧಿಸುತ್ತವೆ. ವಿದ್ಯಾರ್ಥಿಗಳು ಇಲ್ಲಿ ಪಡೆದ ಜ್ಞಾನವನ್ನು ಕೇವಲ ಪ್ರಮಾಣಪತ್ರದ ಮಟ್ಟಿಗೆ ಸೀಮಿತಗೊಳಿಸದೆ, ತಮ್ಮ ಕಲಿಕೆಯ ಪಯಣದಲ್ಲಿ ಪ್ರಾರಂಭವೆಂದು ತಿಳಿಯಬೇಕು. ನಮ್ಮ ವಿದ್ಯಾರ್ಥಿಗಳು ಡೇಟಾವನ್ನು ಪ್ರಶ್ನಿಸಿ, ವಿಶ್ಲೇಷಿಸಿ, ದೃಶ್ಯರೂಪಕ್ಕೆ ಪರಿವರ್ತಿಸಿ ಸಮಾಜಕ್ಕೆ ಅರ್ಥಪೂರ್ಣ ಪರಿಹಾರಗಳನ್ನು ನೀಡುವ ವೃತ್ತಿಪರರಾಗಿ ಬೆಳೆಯುವಂತಾಗಲಿ “ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಐಬಿಎಂ ಪ್ರಾಯೋಜಿತ ಡೇಟಾ ಅನಲಿಟಿಕ್ಸ್ ಕೋರ್ಸ್‌ನ ತರಬೇತುದಾರರಾದ ಸೈಯ್ಯದ್ ಖೈಸರ್‌ರವರು “ಪದವಿ ಅಧ್ಯಯನದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಥೆಯು ನಿಗದಿತ ಪಠ್ಯಕ್ರಮದ ಹೊರತಾಗಿ ಉದಯೋನ್ಮುಖ ತಂತ್ರಜ್ಞಾನಗಳೇ ಮುಂತಾದ ಹೊಸವಿಷಯಗಳ ಕಲಿಕೆಗೆ ಅವಕಾಶ ಮಾಡಿಕೊಡುತ್ತವೆ. ಈ ರೀತಿ ದೊರೆಯುವ ಅವಕಾಶಗಳನ್ನು ಸದ್ಬಗಳಕೆ ಮಾಡಿಕೊಂಡು ಪದವಿ ಪ್ರಮಾಣಪತ್ರದೊಡನೆ ಇತರೆ ಪ್ರಮಾಣಪತ್ರಗಳನ್ನೂ ಪಡೆದುಕೊಂಡಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಿಕೊಳ್ಳಬಹುದು. ನಿರಂತರ ಕಲಿಕೆ ಉನ್ನತಿಗೆ ದಾರಿ” ಎಂದು ಹೇಳಿ ಡೇಟಾ ಅನಲಿಟಕ್ಸ್ ಯುಸಿಂಗ್ ಪೈಥಾನ್ ಕೋರ್ಸ್ ಅನ್ನು ಆಯ್ಕೆಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾಲೇಜಿನ ಗಣಕವಿಜ್ಞಾನ ವಿಭಾಗದ ಡೀನ್ ಹಾಗೂ ಪರೀಕ್ಷಾಂಗ ಕುಲಸಚಿವರೂ ಆದ ಡಾ| ವಿನಯಚಂದ್ರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋರ್ಸ್ ನಲ್ಲಿ ಭಾಗವಹಿಸಿದ ತೃತೀಯ ಬಿಸಿಎ ವಿದ್ಯಾರ್ಥಿ ದರ್ಶನ್ ಹಾಗೂ ಸೃಜನಾ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಐಸಿಟಿ ಅಕಾಡೆಮಿಯ ಸಾಂಸ್ಥಿಕ ಸಂಯೋಜಯಕರೂ ಪರೀಕ್ಷಾಂಗ ಉಪಕುಲಸಚಿವರೂ ಆದ ಅಭಿಷೇಕ್ ಸುವರ್ಣ ವಂದಿಸಿದರು. ಕೋರ್ಸ್‌ನ ಪರಿವೀಕ್ಷಕರೂ ಗಣಕವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರೂ ಆದ ಸುರಕ್ಷಾ ಎಸ್ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ23 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು21 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ23 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ23 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ22 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ18 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ22 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ




















