ಬಂಟ್ವಾಳ
‘Bigg Boss-12’-‘ಬಿಗ್ ಬಾಸ್-12’ ಕಿರೀಟ ಗೆದ್ದ ಗಿಲ್ಲಿ ನಟ..! ‘ಅವಮಾನವನ್ನೇ ಬಹುಮಾನ’ವನ್ನಾಗಿಸಿಕೊಂಡ ‘ಕೋವಿಡ್’ ಪ್ರತಿಭೆ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ..! ಇಬ್ಬರು ಗೆದ್ದ ಬಹುಮಾನದ ಹಣವೆಷ್ಟು ಗೊತ್ತೇ..?
ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರ ರೋಚಕ ಪಯಣಕ್ಕೆ ತೆರೆ ಬಿದ್ದಿದೆ. ಆರಂಭದಿಂದಲೂ ತಮ್ಮ ವಿಶಿಷ್ಟ ವ್ಯಕ್ತಿತ್ವ ಮತ್ತು ಹಾಸ್ಯ ಪ್ರವೃತ್ತಿಯಿಂದ ಕೋಟ್ಯಂತರ ವೀಕ್ಷಕರ ಮನಗೆದ್ದಿದ್ದ ‘ಗಿಲ್ಲಿ ನಟ’ ಅವರು ನಿರೀಕ್ಷೆಯಂತೆಯೇ ಈ ಸೀಸನ್‌ನ ಮಹಾ ವಿಜೇತರಾಗಿ ಹೊರಹೊಮ್ಮಿದ್ದಾರೆ.
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರ ರೋಚಕ ಪಯಣಕ್ಕೆ ತೆರೆ ಬಿದ್ದಿದೆ. ಆರಂಭದಿಂದಲೂ ತಮ್ಮ ವಿಶಿಷ್ಟ ವ್ಯಕ್ತಿತ್ವ ಮತ್ತು ಹಾಸ್ಯ ಪ್ರವೃತ್ತಿಯಿಂದ ಕೋಟ್ಯಂತರ ವೀಕ್ಷಕರ ಮನಗೆದ್ದಿದ್ದ ‘ಗಿಲ್ಲಿ ನಟ’ ಅವರು ನಿರೀಕ್ಷೆಯಂತೆಯೇ ಈ ಸೀಸನ್‌ನ ಮಹಾ ವಿಜೇತರಾಗಿ ಹೊರಹೊಮ್ಮಿದ್ದಾರೆ.
ದಾಖಲೆಯ ಮತಗಳೊಂದಿಗೆ ಗೆಲುವು:
ಗಿಲ್ಲಿ ಅವರು ಬರೋಬ್ಬರಿ 37 ಕೋಟಿಗೂ ಅಧಿಕ ಮತಗಳನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಗೆಲುವಿನ ಸಂಭ್ರಮದ ಅಂಗವಾಗಿ ಅವರಿಗೆ 50 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಮಾರುತಿ ಕಂಪನಿಯ ಹೊಚ್ಚ ಹೊಸ ಕಾರನ್ನು ನೀಡಲಾಗಿದೆ. ವೇದಿಕೆಯ ಮೇಲೆ ಮಾತನಾಡಿದ ಗಿಲ್ಲಿ, “ನಿಮ್ಮ ಪ್ರೀತಿಯನ್ನು ಎಂದಿಗೂ ಮರೆಯಲ್ಲ, ನಾನು ಹೇಗಿದ್ದೇನೋ ಹಾಗೆಯೇ ಇರುತ್ತೇನೆ” ಎಂದು ಭಾವುಕರಾದರು. ಇದೇ ವೇಳೆ ಅವರ ಪೋಷಕರು ಕೂಡ ಕನ್ನಡಿಗರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದರು.
ರಕ್ಷಿತಾ ಶೆಟ್ಟಿಗೆ ರನ್ನರ್ ಅಪ್ ಪಟ್ಟ:
ಕೋವಿಡ್ ಸಂದರ್ಭ ಮುಂಬೈನಿಂದ ಬಂದು ಸಣ್ಣ ಪುಟ್ಟ ವಿಡಿಯೋ ಮಾಡುತ್ತಾ ತನ್ನ ತುಳು, ಹಿಂದಿ, ಕನ್ನಡ ಮಿಶ್ರಿತಾ ಮಾತಿನಿಂದಲೇ ಟ್ರೋಲ್ ಆಗುತ್ತಿದ್ದ ಪ್ರತಿಭೆ ರಕ್ಷಿತಾ ಶೆಟ್ಟಿ ಇಂದು ಕನ್ನಡಿಗರ ಹೃದಯ ಗೆದ್ದಿದ್ದಾರೆ.
ತಮ್ಮ ಚುರುಕುತನ ಮತ್ತು ಆಟದ ಮೂಲಕ ಗಮನ ಸೆಳೆದಿದ್ದ ಕರಾವಳಿಯ ಪ್ರತಿಭೆ ರಕ್ಷಿತಾ ಶೆಟ್ಟಿ ಅವರು ರನ್ನರ್ ಅಪ್ ಸ್ಥಾನವನ್ನು ಅಲಂಕರಿಸಿದ್ದಾರೆ. ಮೊದಲ ಸೀಸನ್‌ನಲ್ಲೇ ಫಿನಾಲೆ ತಲುಪಿದ ಸಾಧನೆ ಮಾಡಿದ ರಕ್ಷಿತಾ ಅವರಿಗೆ 25 ಲಕ್ಷ ರೂಪಾಯಿ ನಗದು ಬಹುಮಾನ ಲಭಿಸಿದೆ.
ಕಿಚ್ಚನಿಂದ ಅಚ್ಚರಿಯ ಉಡುಗೊರೆ:
ಈ ಬಾರಿಯ ಫಿನಾಲೆಯಲ್ಲಿ ಅಚ್ಚರಿಯ ಘಟನೆಯೊಂದು ಜರುಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಿರೂಪಕ ಕಿಚ್ಚ ಸುದೀಪ್ ಅವರು ವೈಯಕ್ತಿಕವಾಗಿ ಸ್ಪರ್ಧಿಯೊಬ್ಬರಿಗೆ ಬಹುಮಾನ ಘೋಷಿಸಿದ್ದಾರೆ. ಗಿಲ್ಲಿ ನಟ ಅವರಿಗೆ ಸುದೀಪ್ ಅವರು ತಮ್ಮ ಕಡೆಯಿಂದ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ಟಾಸ್ಕ್‌ನಲ್ಲಿ ಸೋಲು, ವ್ಯಕ್ತಿತ್ವದಲ್ಲಿ ಗೆದ್ದ ಗಿಲ್ಲಿ..
ಕಾವ್ಯ ಜತೆಗಿನ ಸ್ನೇಹ, ರಘು, ರಕ್ಷಿತಾ ಜತೆಗಿನ ಆತ್ಮೀಯತೆ, ಅಶ್ವಿನಿ ಜತೆಗಿನ ಸ್ನೇಹ-ಗಲಾಟೆ.. ಹೀಗೆ ಈ ಎಲ್ಲ ವಿಚಾರದಿಂದ ಗಿಲ್ಲಿ ಗಮನ ಸೆಳೆದಿರುವುದು ಹೆಚ್ಚು. ಗಿಲ್ಲಿ ಮನೆಯಲ್ಲಿ ಮೌನವಾಗಿದ್ದಕ್ಕಿಂತ, ಮಾತಿನಲ್ಲೇ ಲೀನವಾಗಿದ್ದೇ ಹೆಚ್ಚು. ಹಾಸ್ಯ ಗಿಲ್ಲಿಯ ವ್ಯಕ್ತಿತ್ವದ ಜತೆಯೇ ಬಂದಿದೆ. ಹಾಗಂತ ಗಿಲ್ಲಿ ಪ್ರತಿ ನಿತ್ಯ ಹಾಸ್ಯ ಮಾಡುತ್ತಲೇ ಇರಲಿಲ್ಲ. ನಾಮಿನೇಷನ್ ವಿಚಾರದಲ್ಲಿ ಪ್ರಬಲ ಕಾರಣಗಳನ್ನು ಕೊಟ್ಟು ಎದುರಾಳಿಯನ್ನು ಕಟ್ಟಿ ಹಾಕುವುದರಲ್ಲೂ ಗಿಲ್ಲಿ ಮುಂದಿದ್ದರು. ಆದರೆ ಎಲ್ಲದರಲ್ಲೂ ಗೆದ್ದ ಗಿಲ್ಲಿ, ಟಾಸ್ಕ್ ವಿಚಾರದಲ್ಲಿ ಮಾತ್ರ ಅಷ್ಟಕಷ್ಟೇ ಆಗಿಯೇ ಉಳಿದಿದ್ದಾರೆ. ಇಡೀ ಸೀಸನ್‌ನಲ್ಲಿ ಹತ್ತಾರು ಟಾಸ್ಕ್‌ಗಳನ್ನು ಆಡಿದ್ದಾರೆ. ಆದರೆ ಗೆದ್ದಿರುವುದು ಮಾತ್ರ ಕೆಲವು ಮಾತ್ರ. ಈ ಒಂದು ವಿಚಾರದಲ್ಲಿ ಗಿಲ್ಲಿ ಹಿಂದೆ ಉಳಿದಿದ್ದರು.
ಕಾವ್ಯ ಜತೆಗಿನ ಸ್ನೇಹ..
ಗಿಲ್ಲಿ ನಟ ಬಿಗ್ ಬಾಸ್ ಮನೆಯಲ್ಲಿ ಕಾವ್ಯ ಶೈವ ಅವರ ಜತೆ ಆತ್ಮೀಯವಾಗಿ ಕಾಣಿಸಿಕೊಂಡಿದ್ದರು. ಗಿಲ್ಲಿ ಎಡವಿದಾಗ ಕಾವ್ಯ ಜತೆಯಾಗಿದದ್ದು ಕಾವ್ಯ ಅವರು. ಜಂಟಿಯಾಗಿದ್ದ ಗಿಲ್ಲಿ – ಕಾವ್ಯ ಅವರ ಸ್ನೇಹ, ಮುನಿಸು ಕರುನಾಡಿನ ಮನಗೆದ್ದುಕೊಂಡಿತು. ಎಲ್ಲಿಯವರೆಗೆ ಅಂದರೆ ಸೋಶಿಯಲ್ ಮೀಡಿಯಾದಲ್ಲಿ ಕಾವ್ಯ – ಗಿಲ್ಲಿಗೆ ದೊಡ್ಡಮಟ್ಟದ ಬೆಂಬಲ ವ್ಯಕ್ತವಾಗಿತ್ತು. ಗಿಲ್ಲಿಯ ವ್ಯಕ್ತಿತ್ವ ತಿದ್ದುವಲ್ಲಿ ಕಾವ್ಯ ಅವರ ಕೊಡುಗೆಯೂ ದೊಡ್ಡಮಟ್ಟದಲ್ಲಿ ಇತ್ತು ಎಂದರೆ ತಪ್ಪಾಗದು. ಒಂದು ಹಂತದಲ್ಲಿ ಕಾವ್ಯ ಗಿಲ್ಲಿಯ ಜತೆ ಮಾತು ನಿಲ್ಲಿಸಿದ್ದರೂ ಅದು ಕೆಲವೇ ದಿನಕ್ಕೆ ಮಾತ್ರ ಸೀಮಿತವಾಗಿತ್ತು. ಒಟ್ಟಾರೆ ಗಿಲ್ಲಿ ಕಾವ್ಯ ಅವರ ಸ್ನೇಹ ಬಿಗ್ ಬಾಸ್ ಮನೆಯಲ್ಲಿ ಈ ವರ್ಷ ಗಮನ ಸೆಳೆದ ಅಂಶವಾಗಿತ್ತು.
ಈ ಹಿಂದೆ ಹಲವು ಶೋಗಳಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಡುತ್ತಿದ್ದ ಗಿಲ್ಲಿಗೆ, ಈ ಬಾರಿ ‘ವಿನ್ನರ್’ ಪಟ್ಟ ಒಲಿದಿರುವುದು ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಯ ಹೊರಗೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಗಿಲ್ಲಿ ಗೆಲುವನ್ನು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಹಬ್ಬದಂತೆ ಆಚರಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ‘ಗಿಲ್ಲಿ’ ಹೆಸರೇ ಟ್ರೆಂಡ್ ಆಗುತ್ತಿದೆ.
ಬಿಗ್ ನ್ಯೂಸ್
Prabhakar Bhat-ಭರತ್ ಕುಮ್ಡೇಲ್ ಗೆ ಮೊದಲು ಎಸ್ಪಿ ಮಂಪರು ಪರೀಕ್ಷೆ ಮಾಡಿಕೊಳ್ಳಲಿ : ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆರೋಪಪಟ್ಟಿ ಕುರಿತು ಪ್ರತಿಕ್ರಿಯಿಸಿದ ಅವರು, ಒಟ್ಟು 17 ಪ್ರಕರಣಗಳ ಪೈಕಿ 15 ಪ್ರಕರಣಗಳು ಬಿದ್ದುಹೋಗಿವೆ. ಇನ್ನುಳಿದ ಎರಡು ಪ್ರಕರಣಗಳಿಗೆ ಗೂಂಡಾ ಕಾಯ್ದೆ ಅನ್ವಯಿಸುವುದು ಸರಿಯೇ ಎಂದು ಪ್ರಶ್ನಿಸಿದರು. ನ್ಯಾಯಾಲಯದ ಸೂಚನೆಗಳಿಗೂ ಪೊಲೀಸರಿಗೆ ಒಪ್ಪಿಗೆ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ತಮಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದ ಪ್ರಭಾಕರ್ ಭಟ್, ತಮ್ಮ ಮೇಲೂ ಗೂಂಡಾ ಕಾಯ್ದೆ ಜಾರಿಗೊಳಿಸುವ ಯೋಚನೆ ಇರಬಹುದೇ ಎಂಬ ಅನುಮಾನ ವ್ಯಕ್ತಪಡಿಸಿದರು. ದೇಶವಿರೋಧಿ ಅಥವಾ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಯಾರಾದರೂ ತೊಡಗಿದ್ದರೆ ಪ್ರಕರಣ ದಾಖಲಿಸಲಿ ಎಂದು ಹೇಳಿದರು.
“ಹಿಂದೂಗಳ ಮೇಲೆ ದಾಳಿ ಮಾಡುವುದು ಶಾಂತಿಯೇ? ಪೊಲೀಸರು ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆಯೇ? ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಅವರು ಹೇಳಿದರು. ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಪೊಲೀಸರಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದೂ ಅವರು ಹೇಳಿದರು.
“ನಾವು ಶಾಂತಿಯಿಂದ ಜೀವನ ನಡೆಸುತ್ತಿದ್ದೇವೆ. ಅವರ ಕ್ರಮಕ್ಕೆ ನಮ್ಮ ಸಣ್ಣ ಪ್ರತಿಕ್ರಿಯೆ” ಎಂದು ಪ್ರಭಾಕರ್ ಭಟ್ ಹೇಳಿದರು.
ಭರತ್ ಕುಮ್ಡೇಲ್ ಗೆ ಮಂಪರು ಪರೀಕ್ಷೆ
ಭರತ್ ಕುಮ್ಡೇಲ್ ಅವರಿಗೆ ಮಂಪರು ಪರೀಕ್ಷೆ ನಡೆಸುವ ಪ್ರಸ್ತಾಪದ ಬಗ್ಗೆಯೂ ಪ್ರಭಾಕರ್ ಭಟ್ ಪ್ರಶ್ನೆ ಎತ್ತಿದರು. “ಮಂಪರು ಪರೀಕ್ಷೆಗೆ ಏಕೆ ಒಪ್ಪಿಕೊಳ್ಳಬೇಕು? ಅದಕ್ಕೆ ಏನು ಆಧಾರವಿದೆ?” ಎಂದು ಪ್ರಶ್ನಿಸಿದ ಅವರು, ಮೊದಲು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರೇ ಮಂಪರು ಪರೀಕ್ಷೆಗೆ ಒಳಗಾಗಲಿ ಎಂದು ಹೇಳಿದರು.
ತಾವು ಭರತ್ ಕುಮ್ಡೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವುದನ್ನು ಉಲ್ಲೇಖಿಸಿದ ಅವರು, ಕೇವಲ ಫೋನ್‌ನಲ್ಲಿ ಮಾತನಾಡಿದ್ದಕ್ಕೆ ತಮ್ಮನ್ನು ವಿಚಾರಣೆಗೆ ಕರೆಯಲಾಗುತ್ತದೆಯೇ ಎಂದು ಪ್ರಶ್ನಿಸಿದರು. “ಮಾಧ್ಯಮದವರೂ ಫೋನ್ ಮಾಡುತ್ತೀರಿ; ನಿಮಗೂ ವಿಚಾರಣೆಗೆ ಕರೆಯುತ್ತಾರೆಯೇ?” ಎಂದು ಪ್ರಶ್ನಿಸಿದರು.
ಈ ಹಿಂದೆ ತಾವು ಜೈಲಿಗೆ ಹೋಗಿದ್ದು, ತಮ್ಮ ಪತ್ನಿಯನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದ ಅವರು, “ಇನ್ನು ಏನಿದ್ದರೂ ಗಲ್ಲಿಗೆ ಹಾಕುವುದು ಮಾತ್ರ ಬಾಕಿ. ತಾಕತ್ತಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ” ಎಂದು ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಗ್ ನ್ಯೂಸ್
Prabhakar Bhat-ನನ್ನ ಮೇಲೆ ಹಾಕಿದ ಕೇಸ್ ನನ್ನ ಕೂದಲಿಗೂ ಸಮ ಅಲ್ಲ : ಗುಡುಗಿದ ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ. ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ.
ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಈ ಕುರಿತು ಹೆಚ್ಚಿನ ವಿವರಣೆ ನೀಡುವುದಿಲ್ಲ. ಸಂಬಂಧಪಟ್ಟ ಊರಿಗೆ ಹೋದರೆ ಅಲ್ಲಿನವರೇ ವಿಚಾರವನ್ನು ಹೇಳುತ್ತಾರೆ ಎಂದರು.
“ವೈಯಕ್ತಿಕ ದ್ವೇಷವನ್ನು ಸಂಘಟನೆಯ ಮೇಲೆ ಹಾಕುವುದು ಏಕೆ? ಬೇರೆ ತಪ್ಪು ನಡೆದಿದ್ದರೆ ಪ್ರಕರಣ ದಾಖಲಿಸಿ” ಎಂದು ಅವರು ಹೇಳಿದರು.
ಹತ್ಯೆಯನ್ನು ತಾವು ಪ್ರತಿಪಾದಿಸುವುದಿಲ್ಲ ಎಂದ ಪ್ರಭಾಕರ್ ಭಟ್, ಪ್ರಕರಣದಲ್ಲಿ ಸಂಬಂಧವಿಲ್ಲದ ಭರತ್ ಕುಮ್ಡೇಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿದರು. ಭರತ್ ಕುಮ್ಡೇಲ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನೂ ಅವರು ಪ್ರಶ್ನಿಸಿದರು.
ಭರತ್ ಕುಮ್ಡೇಲ್ ಬಂಧನದ ಬಳಿಕ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಭರತ್ ಅವರ ಮಗುವಿಗೆ ಅನಾರೋಗ್ಯವಾದಾಗ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿಯ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದರು.
ಕುಟುಂಬಕ್ಕೆ ಸಹಾಯ ಮಾಡಿದವರ ಮೇಲೆಯೂ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಹೇಳಿದ ಅವರು, ಕಾನೂನು ಪ್ರಕ್ರಿಯೆ ಬಿಟ್ಟು ಗೃಹ ಸಚಿವರು ಅಥವಾ ಮುಖ್ಯಮಂತ್ರಿಗಳು ಹೇಳುತ್ತಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಬಾರದು ಎಂದು ಹೇಳಿದರು.
ತಮ್ಮ ಮೇಲೂ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಿದ ಪ್ರಭಾಕರ್ ಭಟ್, “ಇದು ನನಗೆ ದೊಡ್ಡ ವಿಷಯವಲ್ಲ. ಈ ಪ್ರಕರಣ ನನ್ನ ಕೂದಲಿಗೆ ಸಮ” ಎಂದು ಪ್ರತಿಕ್ರಿಯಿಸಿದರು.
ಭರತ್ ಕುಮ್ದೇಲ್ ಅವರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿರುವುದನ್ನು ಒಪ್ಪಿಕೊಂಡ ಅವರು, ʻʻನಾನು ಯಾರ ಹತ್ರ ಬೇಕಾದರೂ ಫೋನ್ ನಲ್ಲಿ ಮಾತನಾಡುತ್ತೇನೆ. ನನಗೆ ಅಂಬೇಡ್ಕರ್ ಕೊಟ್ಟ ಸಂವಿಧಾನ . ಭರತ್ ಜೊತೆ ನಾನು ಫೋನ್ ನಲ್ಲಿ ಮಾತನಾಡಿದ್ದೇನೆ. ನಾನು ಯಾರಿಗಾದರೂ ಹೊಡಿ ಅಥವಾ ಕೊಲ್ಲು ಎಂದು ಹೇಳಿದ್ದೇನಾ? ಅಂತಹ ಸಂಭಾಷಣೆ ಪೊಲೀಸರಿಗೆ ಸಿಕ್ಕಿದೆಯೇ?” ಎಂದು ಪ್ರಶ್ನಿಸಿದರು.
ಪೊಲೀಸರು ಈ ರೀತಿಯ ಕ್ರಮಗಳನ್ನು ಕೈಗೊಳ್ಳುವ ಮುನ್ನ ವಾಸ್ತವಾಂಶಗಳನ್ನು ಪರಿಶೀಲಿಸಬೇಕು. ಪೊಲೀಸರ ಈ ರೀತಿಯ ಹುಚ್ಚು ಸ್ವಲ್ಪ ಇಳಿಯಬೇಕು ಎಂದು ಅವರು ಆಗ್ರಹಿಸಿದರು.
ಬಿಗ್ ನ್ಯೂಸ್
Prabhakar Bhat-ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಆರೋಪಿತರ ಜೊತೆ ನಿರಂತರ ಫೋನ್ ಸಂಪರ್ಕ ಆರೋಪ – ವಿಚಾರಣೆಗೆ ಕಲ್ಲಡ್ಕ ಪ್ರಭಾಕರ ಭಟ್ ಗೆ ನೋಟೀಸ್
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದ್ದಾರೆ.
ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದ್ದಾರೆ.
2025ರ ಮೇ 25ರಂದು ಬಂಟ್ವಾಳ ತಾಲೂಕಿನ ಕುರಿಯಾಲ ಗ್ರಾಮದ ಇರಾಕೋಡಿ ಬಳಿ ಅಬ್ದುಲ್ ರಹ್ಮಾನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪಿಕಪ್ ವಾಹನದಿಂದ ಮರಳು ಇಳಿಸುತ್ತಿದ್ದ ವೇಳೆ ಅವರ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ಘಟನೆಯಲ್ಲಿ ರಹ್ಮಾನ್ ಅವರೊಂದಿಗೆ ಇದ್ದ ಕಲಂದರ್ ಶಾಫಿ ಅವರ ಮೇಲೂ ಗಂಭೀರ ಹಲ್ಲೆ ನಡೆದಿತ್ತು.
ಸುಹಾಸ್ ಶೆಟ್ಟಿ ಹತ್ಯೆಯಾದ ಕೆಲವೇ ದಿನಗಳ ಬಳಿಕ ಅಬ್ದುಲ್ ರಹ್ಮಾನ್ ಹತ್ಯೆ ನಡೆದಿದ್ದರಿಂದ, ಪ್ರಕರಣವು ಪ್ರತೀಕಾರದ ಹತ್ಯೆಯಾಗಿರಬಹುದೇ ಎಂಬ ಅನುಮಾನವೂ ವ್ಯಕ್ತವಾಗಿತ್ತು. ಈ ಘಟನೆ ರಾಜ್ಯಾದ್ಯಂತ ಗಮನ ಸೆಳೆದಿತ್ತು.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಹತ್ಯೆಯ ಸಂದರ್ಭದಲ್ಲಿ ಆರೋಪಿಗಳೊಂದಿಗೆ ಕಲ್ಲಡ್ಕ ಪ್ರಭಾಕರ್ ಭಟ್ ನಿರಂತರವಾಗಿ ಫೋನ್ ಸಂಪರ್ಕದಲ್ಲಿದ್ದರು ಎಂಬ ಅಂಶದ ಹಿನ್ನೆಲೆಯಲ್ಲಿ ಅವರ ಹೇಳಿಕೆ ಪಡೆಯಲು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಪ್ರತಿಕ್ರಿಯಿಸಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ. 54/2025ರ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆ ದಾಖಲಿಸುವುದು ಬಾಕಿಯಿದೆ. ಹೇಳಿಕೆ ಪಡೆಯುವ ಉದ್ದೇಶದಿಂದ ಸಾಕ್ಷಿದಾರರ ನೋಟಿಸ್ ಜಾರಿ ಮಾಡಲಾಗಿದೆ. ಅವರ ಹೇಳಿಕೆ ದಾಖಲಿಸಿಕೊಂಡ ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
-
ನಿಧನ ವಾರ್ತೆ22 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್17 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು14 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಅಪರಾಧ24 hours ago
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ
-
ಮಂಗಳೂರು17 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized22 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ20 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್16 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ


















