ಬಿಗ್ ನ್ಯೂಸ್
Prabhakar Bhat-ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿದ್ದ ಆರ್ಎಸ್ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರಿಗೆ ಕರ್ನಾಟಕ ಹೈಕೋರ್ಟ್ ದೊಡ್ಡ ಮಟ್ಟದ ಕಾನೂನು ಸಮಾಧಾನ ನೀಡಿದೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬೆಂಗಳೂರು/ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿದ್ದ ಆರ್ಎಸ್ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರಿಗೆ ಕರ್ನಾಟಕ ಹೈಕೋರ್ಟ್ ದೊಡ್ಡ ಮಟ್ಟದ ಕಾನೂನು ಸಮಾಧಾನ ನೀಡಿದೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪ್ರಕರಣದ ಹಿನ್ನೆಲೆ:
2025ರ ಮೇ 1ರಂದು ಬಜ್ಜೆಯಲ್ಲಿ ಹತ್ಯೆಯಾಗಿದ್ದ ಪುಳಿಮಜಲು ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್ಐ ಮಂಜುನಾಥ್ ಟಿ. ಅವರು ದೂರು ನೀಡಿದ್ದರು.
ಕಾನೂನು ಪ್ರಕ್ರಿಯೆ:
ಪೊಲೀಸರು ಡಾ. ಪ್ರಭಾಕರ ಭಟ್ ಅವರ ವಿರುದ್ಧ ಬಿಎನ್ಎಸ್ 2023ರ ಕಲಂ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಪೂರ್ಣಗೊಳಿಸಿ ಬಂಟ್ವಾಳದ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಹೈಕೋರ್ಟ್ ಮೆಟ್ಟಿಲೇರಿದ ಭಟ್:
ಬಂಟ್ವಾಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ಈ ವಿಚಾರಣೆಯನ್ನು ರದ್ದುಗೊಳಿಸಬೇಕೆಂದು ಕೋರಿ ಡಾ. ಪ್ರಭಾಕರ ಭಟ್ ಅವರು ಹೈಕೋರ್ಟ್ನಲ್ಲಿ ಕ್ರಿಮಿನಲ್ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠವು, ಪ್ರಕರಣದ ಮುಂದಿನ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸ್ಥಳೀಯ
Uppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಉಪ್ಪಿನಂಗಡಿ: ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ವಳಾಲು ಟೋಲ್ ಪ್ಲಾಝಾದಲ್ಲಿ ಈಗಾಗಲೇ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ಅಧಿಕೃತವಾಗಿ ಶುಲ್ಕ ವಸೂಲಿ ಆರಂಭವಾಗಲಿದೆ. ಶುಲ್ಕ ಸಂಗ್ರಹದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆ ಪಡೆದುಕೊಂಡಿದೆ. ವಾಹನಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳ ಫಲಕಗಳನ್ನೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿದೆ.
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಸುಮಾರು ಶೇ. 95ರಷ್ಟು ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ವಳಾಲಿನಲ್ಲಿ ಟೋಲ್ ಪ್ಲಾಝಾ ನಿರ್ಮಾಣವನ್ನು ಹೆದ್ದಾರಿ ಗುತ್ತಿಗೆ ಸಂಸ್ಥೆ ಕೆಎನ್ಆರ್ ಕನ್ಸ್ಟ್ರಕ್ಷನ್ ನಿರ್ವಹಿಸಿದೆ. ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಿಗೆ ತಲಾ ನಾಲ್ಕು ಲೇನ್ಗಳಿದ್ದು, ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸಂಚಾರಕ್ಕೆ ಪ್ರತ್ಯೇಕ ಲೇನ್ಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೆಲಮಂಗಲದಿಂದ ಸಕಲೇಶಪುರದವರೆಗೆ ಈಗಾಗಲೇ ಐದು ಟೋಲ್ ಪ್ಲಾಝಾಗಳಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಳಾಲು ಟೋಲ್ ಕೂಡ ಸೇರ್ಪಡೆಯಾಗಿದೆ.
ಟೋಲ್ ಶುಲ್ಕ ಎಷ್ಟು?
ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರು ವಾಹನಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಅದೇ ದಿನದೊಳಗೆ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಟೋಲ್ ಪ್ಲಾಝಾದ ಒಟ್ಟು ಎಂಟು ಲೇನ್ಗಳ ಪೈಕಿ ಆರು ಲೇನ್ಗಳನ್ನು (3+3) ಫಾಸ್ಟ್ಟ್ಯಾಗ್ ಹೊಂದಿರುವ ವಾಹನಗಳಿಗಾಗಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗಿದ್ದು, ಟೋಲ್ ಕೇಂದ್ರದ 20 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.
ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು
ಇದೇ ವೇಳೆ, ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಶೀಘ್ರದಲ್ಲೇ ಬಂದ್ ಆಗುವ ಸಾಧ್ಯತೆ ಇದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಮಿತಿ ಸಭೆಯಲ್ಲಿ ಟೋಲ್ ತೆರವಿಗೆ ಅನುಮತಿ ದೊರೆತಿದ್ದು, ಅಧಿಕೃತ ಆದೇಶ ಪ್ರಕಟವಾಗುವುದಷ್ಟೇ ಬಾಕಿ ಇದೆ.
ಬಿ.ಸಿ. ರೋಡ್ನಿಂದ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬ್ರಹ್ಮರಕೂಟ್ಲು ಟೋಲ್ ತೆರವುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 73ರ ಮಡಂತ್ಯಾರು ಸಮೀಪದ ಪಣಕಜೆ ಬಳಿ ಹೊಸ ಟೋಲ್ ಗೇಟ್ ನಿರ್ಮಾಣವಾಗಲಿದ್ದು, ಅದರೊಂದಿಗೆ ಬ್ರಹ್ಮರಕೂಟ್ಲು ಟೋಲ್ ವಿಲೀನಗೊಳ್ಳಲಿದೆ.
ಸುರತ್ಕಲ್ ಟೋಲ್ ಗೇಟ್ ತೆರವಿನ ಬಳಿಕ ಇದೀಗ ಬ್ರಹ್ಮರಕೂಟ್ಲು ಟೋಲ್ ಕೂಡ ತೆರವುಗೊಳ್ಳುವ ನಿರೀಕ್ಷೆ ಮೂಡಿದ್ದು, ಈ ಭಾಗದ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಗಲಿದೆ.
ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಿತಿಯು ಈ ವಿಚಾರವಾಗಿ ಕಳೆದ ನಾಲ್ಕು ತಿಂಗಳಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಅಂತಿಮವಾಗಿ ಟೋಲ್ ತೆರವಿಗೆ ಅನುಮತಿ ದೊರೆತಿದೆ. ಅಧಿಕೃತ ಆದೇಶದ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೆದ್ ಅಝ್ಮಿ ತಿಳಿಸಿದ್ದಾರೆ.
13 ವರ್ಷಗಳಿಂದ ಕಾರ್ಯಾಚರಣೆ
2013ರಲ್ಲಿ ಆರಂಭಗೊಂಡ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಕಳೆದ 13 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಂಗಳೂರು ಬಂದರು ಸಂಪರ್ಕ ಯೋಜನೆಯ ರಸ್ತೆಯ ನಿರ್ವಹಣೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಟೋಲ್ ಕೇಂದ್ರವನ್ನು ಆರಂಭಿಸಿತ್ತು. ಇದಕ್ಕೂ ಮೊದಲು ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿತ್ತು.
ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಅಂತರದ ಮಾನದಂಡ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಸಚಿವಾಲಯವು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಅಂತರ ರಾಜ್ಯ
Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.
ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.
ಏನೇನು ಪ್ರಸ್ತಾವಗಳಿವೆ?
- ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
- ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
- ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
- ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
- ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್ಗಳಲ್ಲಿ ಆರಂಭಿಸಲು ಸಲಹೆ.
- ಪೆಟ್ರೋಲ್ ಬಂಕ್ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
-
ಬಿಗ್ ನ್ಯೂಸ್12 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ11 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ನಿಧನ ವಾರ್ತೆ11 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ9 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ11 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸುಳ್ಯ6 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ9 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ12 hours agoDharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ















