Connect with us

ಅಪರಾಧ

DGP Ramachandra Rao-ಬೆಂಗಳೂರು: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವಿಡಿಯೋ ವೈರಲ್..!

Published

on

Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋ ಈಗ ಭಾರಿ ಸಂಚಲನ ಮೂಡಿಸಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (CRE Cell) ಡಿಜಿಪಿ ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆಗಿದ್ದ ‘ರಾಸಲೀಲೆ’ಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋ ಈಗ ಭಾರಿ ಸಂಚಲನ ಮೂಡಿಸಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (CRE Cell) ಡಿಜಿಪಿ ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆಗಿದ್ದ ‘ರಾಸಲೀಲೆ’ಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Ad Widget

Ad Widget alt="Ad Widget"/>

Ad Widget

ನಿವೃತ್ತಿಯ ಹೊತ್ತಲ್ಲಿ ಮುಜುಗರ:
ಇನ್ನೇನು ನಾಲ್ಕೈದು ತಿಂಗಳಲ್ಲಿ ಪೊಲೀಸ್ ಸೇವೆಯಿಂದ ನಿವೃತ್ತರಾಗಬೇಕಿದ್ದ ರಾಮಚಂದ್ರ ರಾವ್ ಅವರು, ರಹಸ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಚೇರಿಯಲ್ಲೇ ಮಹಿಳೆಯನ್ನು ತಬ್ಬಿಕೊಂಡಿರುವ ವಿಡಿಯೋ ಬಹಿರಂಗವಾಗಿದ್ದು, ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

Ad Widget

Ad Widget <> Ad Widget

ಸರ್ಕಾರದ ಕ್ರಮಕ್ಕೆ ಕಾಯುತ್ತಿರುವ ಜನ:
ಈ ವಿಡಿಯೋ ವಿಚಾರ ಈಗಾಗಲೇ ಸರ್ಕಾರದ ಗಮನಕ್ಕೆ ಬಂದಿದ್ದು, ಉನ್ನತ ಅಧಿಕಾರಿಯ ವಿರುದ್ಧ ಗೃಹ ಇಲಾಖೆ ಎಂತಹ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಹಳೆಯ ವಿವಾದಗಳ ನಂಟು:
ರಾಮಚಂದ್ರ ರಾವ್ ಈ ಹಿಂದೆಯೂ ವಿವಾದಕ್ಕೆ ಸಿಲುಕಿದ್ದರು. ಚಿನ್ನದ ಕಳ್ಳಸಾಗಣೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ತಮ್ಮ ಪುತ್ರಿ ರನ್ಯ ರಾವ್ ಅವರಿಗೆ, ನಿಯಮ ಮೀರಿ ವಿಮಾನ ನಿಲ್ದಾಣದಲ್ಲಿ ‘ವಿಐಪಿ’ ಸೌಲಭ್ಯ ಒದಗಿಸಿಕೊಟ್ಟ ಆರೋಪ ಇವರ ಮೇಲಿತ್ತು. ಇದೀಗ ಕಚೇರಿಯಲ್ಲೇ ನಡೆದ ಈ ಕೃತ್ಯ ಅವರ ವೃತ್ತಿಜೀವನದ ಮೇಲೆ ಕರಿನೆರಳು ಬೀರಿದೆ.

Click to comment

Leave a Reply

ಅಪರಾಧ

Mangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ

Published

on

Ad Widget

Ad Widget

Ad Widget

Ad Widget

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget

Ad Widget alt="Ad Widget"/>

Ad Widget

2026ರ ಮೇ 13ರಂದು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದ 13 ವರ್ಷದ ಬಾಲಕನಿಗೆ ಫಾದರ್ ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget <> Ad Widget

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನಿಖೆಯ ಹೊಣೆಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದರು. ಎಫ್‌ಐಆರ್ ದಾಖಲಾದ ಸಂದರ್ಭದಲ್ಲಿ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಬಂಧನ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಬಂಧನ
ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಫಾದರ್ ಸಿಪ್ರಿಯನ್ ಪಿಂಟೊ ವಿರುದ್ಧ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.

Ad Widget

Ad Widget

ಈ ಪ್ರಕರಣದಲ್ಲಿ ಅಕ್ಟೋಬರ್ 18ರಂದು ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಪೆರ್ಮನ್ನೂರು ಚರ್ಚ್‌ನ 13 ವರ್ಷದ ಬಾಲಕನ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದು, ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಪರಾಧ

Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ

Published

on

Ad Widget

Ad Widget

Ad Widget

Ad Widget

ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.

Ad Widget

Ad Widget <> Ad Widget

ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.

ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.

Ad Widget

Ad Widget

ಇದೇ ವರ್ಷದ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.

ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!