Connect with us

ನಿಧನ ವಾರ್ತೆ

Suicide-ಆಕಸ್ಮಿಕ ಸ್ಪರ್ಶಕ್ಕೆ “ಲೈಂಗಿಕ ದೌರ್ಜನ್ಯ”ದ ಹಣೆಪಟ್ಟಿ: ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಕೇರಳದ ವ್ಯಕ್ತಿ

Published

on



Ad Widget

Ad Widget

Ad Widget

Ad Widget

ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಪಡೆಯುವ ಹಪಾಹಪಿ ಅಥವಾ ತಪ್ಪು ಗ್ರಹಿಕೆ ಹೇಗೆ ಒಬ್ಬ ಅಮಾಯಕನ ಪ್ರಾಣವನ್ನೇ ಬಲಿ ಪಡೆಯಬಹುದು ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ. ಬಸ್‌ನಲ್ಲಿ ಸಂಭವಿಸಿದ ಸಣ್ಣ ಸ್ಪರ್ಶವೊಂದನ್ನು “ಲೈಂಗಿಕ ದೌರ್ಜನ್ಯ” ಎಂದು ಬಿಂಬಿಸಿ ಮಹಿಳೆಯೊಬ್ಬರು ಹರಿಬಿಟ್ಟ ವಿಡಿಯೋದಿಂದಾಗಿ, ತೀವ್ರ ಅವಮಾನಕ್ಕೊಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget

Ad Widget

Ad Widget

Ad Widget

ಕೋಯಿಕ್ಕೋಡ್ (ಕೇರಳ): ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಪಡೆಯುವ ಹಪಾಹಪಿ ಅಥವಾ ತಪ್ಪು ಗ್ರಹಿಕೆ ಹೇಗೆ ಒಬ್ಬ ಅಮಾಯಕನ ಪ್ರಾಣವನ್ನೇ ಬಲಿ ಪಡೆಯಬಹುದು ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ. ಬಸ್‌ನಲ್ಲಿ ಸಂಭವಿಸಿದ ಸಣ್ಣ ಸ್ಪರ್ಶವೊಂದನ್ನು “ಲೈಂಗಿಕ ದೌರ್ಜನ್ಯ” ಎಂದು ಬಿಂಬಿಸಿ ಮಹಿಳೆಯೊಬ್ಬರು ಹರಿಬಿಟ್ಟ ವಿಡಿಯೋದಿಂದಾಗಿ, ತೀವ್ರ ಅವಮಾನಕ್ಕೊಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
ಕೇರಳದ ಕೋಯಿಕ್ಕೋಡ್ ನಿವಾಸಿ ಯು. ದೀಪಕ್ (42) ಎಂಬುವವರು ಜನವರಿ 18ರಂದು ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಶಿಮ್‌ಜಿತಾ ಎಂಬ ಮಹಿಳೆ ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ದೀಪಕ್ ಅವರು ತಮ್ಮನ್ನು ಅಸಭ್ಯವಾಗಿ ಮುಟ್ಟುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿದ್ದರು. ಈ ವಿಡಿಯೋವನ್ನು “ಲೈಂಗಿಕ ಗಡಿ ಉಲ್ಲಂಘನೆ” ಎಂಬ ಒಕ್ಕಣೆಯೊಂದಿಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

Ad Widget

Ad Widget <> Ad Widget

ಅಪರಾಧವೋ ಅಥವಾ ಆಕಸ್ಮಿಕವೋ?
ವೈರಲ್ ಆದ ವಿಡಿಯೋವನ್ನು ಗಮನಿಸಿದ ಅನೇಕ ನೆಟ್ಟಿಗರು, “ಬಸ್‌ನಲ್ಲಿ ಜನದಟ್ಟಣೆ ಇದ್ದ ಕಾರಣ ದೀಪಕ್ ಅವರ ಮೊಣಕೈ ಮಹಿಳೆಗೆ ಆಕಸ್ಮಿಕವಾಗಿ ತಗುಲಿದೆ. ಇದನ್ನು ಉದ್ದೇಶಪೂರ್ವಕ ದೌರ್ಜನ್ಯ ಎನ್ನಲಾಗದು” ಎಂದು ಅಭಿಪ್ರಾಯಪಟ್ಟಿದ್ದರು. ಆದರೆ ವಿಡಿಯೋ ವೈರಲ್ ಆಗಿ ಸಮಾಜದಲ್ಲಿ ಮಾನಹಾನಿಯಾದ ಕಾರಣ ದೀಪಕ್ ತೀವ್ರ ಮಾನಸಿಕ ಒತ್ತಡಕ್ಕೆ ಸಿಲುಕಿದ್ದರು. ಮನೆಯಿಂದ ಹೊರಬರಲಾರದೆ ಕೊರಗುತ್ತಿದ್ದ ಅವರು, ಕೊನೆಗೆ ಸಾವಿನ ಹಾದಿ ಹಿಡಿದಿದ್ದಾರೆ.



Ad Widget

ಸಾರ್ವಜನಿಕ ಆಕ್ರೋಶ:
ಈ ಸಾವು ಕೇರಳದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ಅವರು ಘಟನೆಯನ್ನು ಖಂಡಿಸಿದ್ದು, “ಕೇವಲ ಕಂಟೆಂಟ್ ಕ್ರಿಯೇಟ್ ಮಾಡಲು ಅಥವಾ ಸುಳ್ಳು ಆರೋಪದ ಮೂಲಕ ಅಮಾಯಕರ ಜೀವನ ಹಾಳಾಗುತ್ತಿದೆ. ಆರೋಪ ಮಾಡಿದ ಮಹಿಳೆಯ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಕೋಯಿಕ್ಕೋಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Click to comment

Leave a Reply

ನಿಧನ ವಾರ್ತೆ

Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು

Published

on



Ad Widget

Ad Widget

Ad Widget

Ad Widget

ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.

Ad Widget

Ad Widget

Ad Widget

Ad Widget

ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.

Ad Widget

Ad Widget <> Ad Widget

ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.



Ad Widget

ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Ad Widget

Ad Widget

ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

Ad Widget
Continue Reading

ನಿಧನ ವಾರ್ತೆ

Kasaragod-ಕಾಸರಗೋಡು: ಬೈಕ್‌-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ

Published

on



Ad Widget

Ad Widget

Ad Widget

Ad Widget

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್‌-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್‌-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget <> Ad Widget

ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.



Ad Widget

ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ನಿಧನ ವಾರ್ತೆ

Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.



Ad Widget

ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.

ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading