ಸುಳ್ಯ
Dhanwanthari Clinical Laboratory-ಬೆಳ್ಳಾರೆಯಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ನೂತನ ಶಾಖೆ ಜ.26ಕ್ಕೆ ಶುಭಾರಂಭ; ಪ್ರಾನ್ಸ್ ನಿಂದ ಆಮದಿತ ಅತ್ಯಾಧುನಿಕ ಪರೀಕ್ಷಾ ಮೆಷಿನ್ ಪ್ರಪ್ರಥಮವಾಗಿ ಕರ್ನಾಟಕದಲ್ಲಿ ಅಳವಡಿಕೆ
‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ಯ ನೂತನ ಶಾಖೆಯು ಸುಳ್ಯದ ಬೆಳ್ಳಾರೆಯ ಮುಖ್ಯ ರಸ್ತೆಯ ಅಮ್ಮು ರೈ ಕಾಂಪ್ಲೆಕ್ಸ್ನಲ್ಲಿ ಜನವರಿ 26ರಂದು ಲೋಕಾರ್ಪಣೆಗೊಳ್ಳಲಿದೆ. ಶುಭಾರಂಭ ಪ್ರಯುಕ್ತ ಮಧುಮೇಹ, ಹಿಮೋಗ್ಲೋಬಿನ್, ರಕ್ತದೊತ್ತಡ ಉಚಿತವಾಗಿ ಮಾಡಿಕೊಡಲಾಗವುದು ಹಾಗೂ ಎಲ್ಲಾ ರಕ್ತ ಪರೀಕ್ಷ ಪ್ಯಾಕೇಜ್ ಗಳಿಗೆ ಶೇಕಡಾ 10 ರಿಂದ 15 ರವರೆಗೆ ರಿಯಾಯಿತಿ ನೀಡಲಾಗುವುದು.
ಪುತ್ತೂರಿನಲ್ಲಿ ಕಳೆದ ಹಲವು ದಶಕಗಳಿಂದ ನಿಖರತೆ, ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆಗೆ ಹೆಸರಾಗಿರುವ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ಯ ನೂತನ ಶಾಖೆಯು ಸುಳ್ಯದ ಬೆಳ್ಳಾರೆಯ ಮುಖ್ಯ ರಸ್ತೆಯ ಅಮ್ಮು ರೈ ಕಾಂಪ್ಲೆಕ್ಸ್ನಲ್ಲಿ ಜನವರಿ 26ರಂದು ಲೋಕಾರ್ಪಣೆಗೊಳ್ಳಲಿದೆ.
ಶುಭಾರಂಭ ಪ್ರಯುಕ್ತ ಮಧುಮೇಹ, ಹಿಮೋಗ್ಲೋಬಿನ್, ರಕ್ತದೊತ್ತಡ ಉಚಿತವಾಗಿ ಮಾಡಿಕೊಡಲಾಗವುದು ಹಾಗೂ ಎಲ್ಲಾ ರಕ್ತ ಪರೀಕ್ಷ ಪ್ಯಾಕೇಜ್ ಗಳಿಗೆ ಶೇಕಡಾ 10 ರಿಂದ 15 ರವರೆಗೆ ರಿಯಾಯಿತಿ ನೀಡಲಾಗುವುದು.
ಕರ್ನಾಟಕದ ಪ್ರಪ್ರಥಮ ಅಳವಡಿಕೆ ಬೆಳ್ಳಾರೆಯಲ್ಲಿ
ಪ್ರಥಮ ಬಾರಿಗೆ ಫ್ರಾನ್ಸ್ ನಿಂದ ಆಮದಿತ ವಿಶ್ವದ ಏಕೈಕ 9 ಪಾರ್ಟ್ ಡಬಲ್ ಡಿಫರೆನ್ಸಿಯಲ್ ಸೆಲ್ ಕೌಂಟರ್
ESR(CORA Technology ಹೊಂದಿರುವಂತಹ )ನ ಜೊತೆಗೆ
Complete Blood Count & ESR ಕೇವಲ 1 ನಿಮಿಷದಲ್ಲಿ ವರದಿ ನೀಡಲಾಗುವುದು.
ಈ ಸೆಲ್ ಕೌಂಟರ್ ನ ಇತರ ವೈಷಿಷ್ಟತೆಗಳು
ಡಬಲ್ ಡಿಫರೆನ್ಸಿಯಲ್ ಕ್ಯಾನ್ಸರ್ ಪೇಷಂಟ್ ಗಳ ಸ್ಯಾಂಪಲ್ ಗಳಿಗಾಗಿ
ಮಲೇರಿಯಾ ಹಾಗೂ ಡೆಂಗ್ಯೂವಿನ ಶೀಘ್ರ ಪತ್ತೆಗಾಗಿ ಫ್ಲಾಗಿಂಗಳು.
ಕರ್ನಾಟಕದಲ್ಲಿ ಎರಡನೇ ಅಳವಡಿಕೆ
ಜಪಾನ್ ನಿಂದ ಆಮದಿತ ಸಂಪೂರ್ಣ ಸ್ವಯಂಚಾಲಿತ ಡೈರೆಕ್ಟ್ CLIA (Chemiluminescence immunoassay) ಹಾರ್ಮೋನ್ಸ್ & ಇಮ್ಯೂನೋ ಎಸ್ಸೇ ಅನಲೈಸರ್.
Thyroid Profile, Vit D, VIt B12, AMH, TROP I, Beta Hcg, FSH, LH, PRL, PSA, Ca 15.3, Ca 19.9, Ca 125, CEA ಹಾಗೂ ಇನ್ನಿತರ ಹಾರ್ಮೋನ್ಸ್ ತಪಾಸಣೆಗಳಿಗಾಗಿ ಈ ಯಂತ್ರವನ್ನು ಅಳವಡಿಸಲಾಗಿದೆ.
ಇಲ್ಲಿ 1086ಕ್ಕೂ ಹೆಚ್ಚು ವಿಧದ ತಪಾಸಣಾ ಸೌಲಭ್ಯಗಳೊಂದಿಗೆ 30 ಕ್ಕೂ ಅಧಿಕ ರಕ್ತಪರೀಕ್ಷೆ ಪ್ಯಾಕೇಜ್ ಗಳನ್ನು ಮಾಡಲಾಗುತ್ತದೆ.
ಅಲರ್ಜಿ ಪರೀಕ್ಷೆಗಳು
(ಐಜಿಜಿ ಪ್ರೊಫೈಲ್)
ತರಕಾರಿ, ಮೊಟ್ಟೆ, ಮೀನು, ಕೋಳಿ,ಮಾಂಸ, ಡ್ರೈಪುಟ್ಸ್, ಸಿರಿಧಾನ್ಯ, ಚಹಾ, ಕಾಫಿ, ಮಶೂಮ್ ಹೀಗೆ ಯಾವ ಆಹಾರಗಳಿಂದ ಅಲರ್ಜಿಯಾಗುತ್ತಿದೆ ಎಂಬುದನ್ನು ನಿಖರವಾಗಿ ತಿಳಿಯಲು ಕೇವಲ ಒಂದೇ ರಕ್ತ ಪರೀಕ್ಷೆಯ ಮೂಲಕ 286ಕ್ಕೂ ಹೆಚ್ಚು ವಿಧದ ಅಲರ್ಜಿ ಅಂಶಗಳ ಪರೀಕ್ಷೆ ಜೊತೆಗೆ ಸವಿವರವಾದ ರಿಪೋರ್ಟ್ ನ್ನು ಪಡೆಯಬಹುದು
(ಐಜಿಇ ಪ್ರೊಫೈಲ್)
ಸಸ್ಯಹಾರ, ಮಾಂಸಾಹಾರ, ಪ್ರಾಣಿ ಪಕ್ಷಿಗಳು, ಈಸ್ಟ್, ಕ್ರಿಮಿಕೀಟ, ಗಾಳಿ ಹೀಗೆ ಯಾವುದರಿಂದ ಅಲರ್ಜಿ ನಿಮ್ಮ ದೇಹಕ್ಕೆ ಆಗುತ್ತಿದೆ ಎಂಬುದನ್ನು ನಿಖರವಾಗಿ ತಿಳಿಯಲು ಕೇವಲ ಒಂದೇ ರಕ್ತ ಪರೀಕ್ಷೆಯಲ್ಲಿ 300ಕ್ಕೂ ಅಧಿಕ ವಿಧದ ಅಲರ್ಜಿ ಅಂಕಗಳ ಪರೀಕ್ಷೆ ಜೊತೆಗೆ ಸವಿವರವಾದ ರಿಪೋರ್ಟ್ ಪಡೆಯಬಹುದು ಇದರ ಸದುಪಯೋಗವನ್ನು ಸುಳ್ಯದ ಹಾಗೂ ಬೆಳ್ಳಾರೆಯ ಜನತೆ ಪಡೆದು ಕೊಳ್ಳಬಹುದು.
ಮನೆಬಾಗಿಲಿನಿಂದ ಸ್ಯಾಂಪಲ್ ಕಲೆಕ್ಷನ್
ಧ್ವನಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ವಿನೂತನ ಕೊಡುಗೆ ನಿಮ್ಮ ಮನೆಬಾಗಿಲಿನಿಂದ ರಕ್ತದ ಸ್ಯಾಂಪಲ್ ಕಲೆಕ್ಟ್ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಸಂಸ್ಥೆಯ ಮಾತೃ ಶಾಖೆ ಪುತ್ತೂರಿನಲ್ಲಿ ಮೆಟ್ರೋ ಸಿಟಿಗಳಲ್ಲಿ ಮಾತ್ರ ಲಭ್ಯವಿರುವ ವಿವಿಧ ರಕ್ತ ತಪಾಸಣೆಗಳ ನಿಖರವಾದ ವರದಿಯನ್ನು ತ್ವರಿತ ಸಮಯದಲ್ಲಿ ನೀಡಲಾಗುತ್ತದೆ ಎಂದು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಆಡಳಿತ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ತಿಳಿಸಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಬಿಗ್ ನ್ಯೂಸ್21 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ23 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ5 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ4 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ4 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ4 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ3 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು















