Connect with us

ಸ್ಥಳೀಯ

Beltangadi-ಪುತ್ತೂರು ಪೊಲೀಸರ ಮಿಂಚಿನ ಕಾರ್ಯಾಚರಣೆ: 53 ಲಕ್ಷ ಮೌಲ್ಯದ ಬೃಹತ್ ಗಾಂಜಾ ಬೇಟೆ, ಬೆಳ್ತಂಗಡಿಯ ಇಬ್ಬರು ಅರೆಸ್ಟ್!

Published

on

Ad Widget

Ad Widget

Ad Widget

Ad Widget

​ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕಂಕಣ ತೊಟ್ಟಿರುವ ಪುತ್ತೂರು ಪೊಲೀಸರು ಭಾನುವಾರ ಸಂಜೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 53 ಲಕ್ಷ ರೂಪಾಯಿ ಮೌಲ್ಯದ 106 ಕಿಲೋ ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ನಡೆದ ಈ ಸಿನಿಮೀಯ ಮಾದರಿಯ ದಾಳಿಯಲ್ಲಿ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕಂಕಣ ತೊಟ್ಟಿರುವ ಪುತ್ತೂರು ಪೊಲೀಸರು ಭಾನುವಾರ ಸಂಜೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 53 ಲಕ್ಷ ರೂಪಾಯಿ ಮೌಲ್ಯದ 106 ಕಿಲೋ ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ನಡೆದ ಈ ಸಿನಿಮೀಯ ಮಾದರಿಯ ದಾಳಿಯಲ್ಲಿ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

Ad Widget

Ad Widget alt="Ad Widget"/>

Ad Widget

​ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪುತ್ತೂರು ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರು ಮತ್ತು ತಂಡವು ರಸ್ತೆಯಲ್ಲಿ ಬರುತ್ತಿದ್ದ ಕಾರು ಮತ್ತು ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನವನ್ನು ತಡೆದು ನಿಲ್ಲಿಸಿತ್ತು. ಮೊದಲು ಕಾರಿನ ಚಾಲಕ ಬೆಳ್ತಂಗಡಿ ಮೂಲದ ರಫೀಕ್ (37) ಎಂಬಾತನನ್ನು ವಿಚಾರಿಸಿದಾಗ ಆತನ ವರ್ತನೆಯಲ್ಲಿ ಸಂಶಯ ಕಂಡುಬಂದಿತ್ತು. ತಕ್ಷಣ ಕಾರನ್ನು ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ.

Ad Widget

Ad Widget <> Ad Widget

ಇದರ ಬೆನ್ನಲ್ಲೇ ಗೂಡ್ಸ್ ವಾಹನವನ್ನು ತಪಾಸಣೆಗೊಳಪಡಿಸಿದಾಗ ಅದರ ಚಾಲಕ ಅಬ್ದುಲ್ ಸಾದಿಕ್ (37) ಎಂಬಾತನ ಅಕ್ರಮ ಬಯಲಾಗಿದ್ದು, ವಾಹನದಲ್ಲಿ ಬಚ್ಚಿಡಲಾಗಿದ್ದ ಒಟ್ಟು 73 ಕಟ್ಟುಗಳಲ್ಲಿದ್ದ 106 ಕೆಜಿಗೂ ಅಧಿಕ ತೂಕದ ಗಾಂಜಾ ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳು ಈ ಮಾದಕ ವಸ್ತುವನ್ನು ಕೇರಳ, ಮಂಗಳೂರು ಮತ್ತು ದಕ್ಷಿಣ ಕನ್ನಡದ ವಿವಿಧೆಡೆ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

Ad Widget

Ad Widget

ಸದ್ಯ ಆರೋಪಿಗಳಿಂದ ಗಾಂಜಾ ಸೇರಿದಂತೆ ಸಾಗಾಟಕ್ಕೆ ಬಳಸಿದ ಎರಡು ವಾಹನಗಳು ಮತ್ತು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎಸ್‌.ಐ ಗುಣಪಾಲ ಜೆ. ನೇತೃತ್ವದ ಪೊಲೀಸ್ ತಂಡದ ಈ ಸಾಹಸಮಯ ಕಾರ್ಯಾಚರಣೆಗೆ ಜಿಲ್ಲಾದ್ಯಂತ ಭಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಶಿಕ್ಷಣ

Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”

Published

on

Ad Widget

Ad Widget

Ad Widget

Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.

Ad Widget

Ad Widget alt="Ad Widget"/>

Ad Widget

2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.

Ad Widget

Ad Widget <> Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.

Ad Widget

Ad Widget

ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget
Continue Reading

ಅಪರಾಧ

Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?

Published

on

Ad Widget

Ad Widget

Ad Widget

Ad Widget

ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.

ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget

Ad Widget

ಅಪಘಾತದ ಕುರಿತು ಸಂಬಂಧಪಟ್ಟ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ವಾಹನ ಹಾಗೂ ಚಾಲಕನನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗಾಯಾಳುವಿನ ಆರೋಗ್ಯ ಸ್ಥಿತಿ, ಅಪಘಾತಕ್ಕೆ ನಿಖರ ಕಾರಣ ಹಾಗೂ ಕಾರು ಚಾಲಕನ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!