ಶಿಕ್ಷಣ
Ambika-ಚಿತ್ರಕಲಾ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾರ್ಥಿಗಳಿಂದ ಗಣನೀಯ ಸಾಧನೆ; 13 ಮಂದಿ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ, 21 ವಿದ್ಯಾರ್ಥಿಗಳಿಗೆ ಪ್ರಥಮ ಶ್ರೇಣಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಭಾಗವಹಿಸಿ ವಿಶಿಷ್ಟ ಶ್ರೇಣಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಭಾಗವಹಿಸಿ ವಿಶಿಷ್ಟ ಶ್ರೇಣಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ.
ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿಸೆಂಬರ್ನಲ್ಲಿ ಈ ಪರೀಕ್ಷೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ.
ಪರೀಕ್ಷೆಯು ಕಿರಿಯ ದರ್ಜೆ ಹಾಗೂ ಹಿರಿಯ ದರ್ಜೆ ವಿಭಾಗಗಳಲ್ಲಿ ನಡೆದಿದ್ದು, ಅಂಬಿಕಾ ವಿದ್ಯಾಲಯದಿಂದ ಒಟ್ಟು 34 ವಿದ್ಯಾರ್ಥಿಗಳು ಭಾಗವಹಿಸಿ, 13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಿರಿಯ ದರ್ಜೆಯಲ್ಲಿ, ಏಳನೇ ತರಗತಿಯ ಪೃಥ್ವಿಕ್ ಟಿ, ಅಶ್ನಿತ್ ರಂಜನ್, ಆರ್ಯಮೋಹನ್, ಸನ್ಮಯ್ ಎನ್., ಸೌಪರ್ಣಿಕ ದಾನೆಗೊಂಡರ್, ಮನಿಷಾ ಕಜೆ ವಿಶಿಷ್ಟ ಶ್ರೇಣಿ ಪಡೆದರೆ, ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾದ ಬಿ. ತ್ರಿಶಾ, ಸಾನ್ವಿ ಆರ್, ಆರುಶ್ ರಾವ್, ಇಶಾನಿ ಭಟ್, ಸಾನ್ವಿ, ವಂಶಿಕ ಬಿ. ರೈ ಹಾಗೂ ಇಂಚರ ಎಸ್. ಮಯ್ಯ ಹಿರಿಯ ದರ್ಜೆಯಲ್ಲಿ ವಿಶಿಷ್ಟ ಶ್ರೇಣಿಗೆ ಭಾಜನರಾಗಿದ್ದಾರೆ.
ಉಳಿದಂತೆ ಕಿರಿಯ ದರ್ಜೆಯಲ್ಲಿ ಎಂಟು ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದರೆ, ಹಿರಿಯ ದರ್ಜೆಯಲ್ಲಿ ಹದಿಮೂರು ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಅಂಬಿಕಾ ವಿದ್ಯಾಲಯದ ಚಿತ್ರಕಲಾ ಶಿಕ್ಷಕಿ ಕೆ. ಜಯಲಕ್ಷ್ಮಿ ಮಾರ್ಗದರ್ಶನ ನೀಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘Power BI’ ಕಾರ್ಯಾಗಾರ; ದತ್ತಾಂಶವನ್ನು ವ್ಯವಹಾರಿಕ ಒಳನೋಟಗಳಾಗಿ ಪರಿವರ್ತಿಸುವ ಕೌಶಲ್ಯಕ್ಕೆ ಒತ್ತು
ದತ್ತಾಂಶವನ್ನು ಪರಿಣಾಮಕಾರಿ ರೀತಿಯಲ್ಲಿ ವಿಶ್ಲೇಷಿಸಿ, ಅದರಿಂದ ವ್ಯವಹಾರಿಕ ನಿರ್ಧಾರಗಳಿಗೆ ಅಗತ್ಯವಾದ ಒಳನೋಟಗಳನ್ನು ಪಡೆಯುವ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ‘Power BI – Transform Data into Insights for Smarter Business Decisions’ ಎಂಬ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಪುತ್ತೂರು, ಅ.8: ದತ್ತಾಂಶವನ್ನು ಪರಿಣಾಮಕಾರಿ ರೀತಿಯಲ್ಲಿ ವಿಶ್ಲೇಷಿಸಿ, ಅದರಿಂದ ವ್ಯವಹಾರಿಕ ನಿರ್ಧಾರಗಳಿಗೆ ಅಗತ್ಯವಾದ ಒಳನೋಟಗಳನ್ನು ಪಡೆಯುವ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ‘Power BI – Transform Data into Insights for Smarter Business Decisions’ ಎಂಬ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಕಾಲೇಜಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ಅ. 8ರಂದು ಕಾಲೇಜಿನ Biz Tech Lab ನಲ್ಲಿ ಕಾರ್ಯಾಗಾರ ನಡೆಯಿತು.
ವ್ಯವಹಾರ ಕ್ಷೇತ್ರದಲ್ಲಿ ದತ್ತಾಂಶ ಆಧಾರಿತ ನಿರ್ಧಾರಗಳ ಮಹತ್ವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ Power BI ಮೂಲಕ ದತ್ತಾಂಶ ವಿಶ್ಲೇಷಣೆ, ಡ್ಯಾಶ್ಬೋರ್ಡ್ ನಿರ್ಮಾಣ, ಡೇಟಾ ಮಾಡೆಲಿಂಗ್, DAX ಹಾಗೂ ದತ್ತಾಂಶದಿಂದ ಉಪಯುಕ್ತ ಒಳನೋಟಗಳನ್ನು ಪಡೆಯುವ ವಿಧಾನಗಳ ಕುರಿತು ಪ್ರಾಯೋಗಿಕ ಪರಿಚಯ ನೀಡಲಾಯಿತು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಫಿಲೋಮಿನಾ ಕಾಲೇಜಿನ ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಶೋಧನ್ ಪಿ.ಜಿ. ಭಾಗವಹಿಸಿ Power BIಯ ವಿವಿಧ ವೈಶಿಷ್ಟ್ಯಗಳು ಮತ್ತು ಅದರ ನೈಜ ವ್ಯವಹಾರಿಕ ಬಳಕೆಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಸಂವಾದಾತ್ಮಕ ಡ್ಯಾಶ್ಬೋರ್ಡ್ಗಳ ನಿರ್ಮಾಣ, ದತ್ತಾಂಶ ವಿಶ್ಲೇಷಣೆ ಮತ್ತು ಮಾಡೆಲಿಂಗ್, DAX ಮೂಲಕ ದತ್ತಾಂಶದಿಂದ ಒಳನೋಟಗಳನ್ನು ಪಡೆಯುವುದು ಹಾಗೂ ನೈಜ ವ್ಯವಹಾರಿಕ ಸಂದರ್ಭಗಳಲ್ಲಿ Power BI ಬಳಕೆಯ ಕುರಿತು ಪ್ರಾಯೋಗಿಕ ಚಟುವಟಿಕೆಗಳನ್ನು ನಡೆಸಲಾಯಿತು.
ಕಾರ್ಯಕ್ರಮದ ಸ್ವಾಗತ ಹಾಗೂ ಪ್ರಾಸ್ತಾವಿಕ ಮಾತುಗಳನ್ನು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥರಾದ ಡಾ. ರಾಧಾಕೃಷ್ಣ ಗೌಡ ವಿ. ನೆರವೇರಿಸಿದರು. ಅವರು Power BI ಸೇರಿದಂತೆ ದತ್ತಾಂಶ ವಿಶ್ಲೇಷಣಾ ಸಾಧನಗಳ ಅರಿವು ಇಂದಿನ ವ್ಯವಹಾರಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ವಹಿಸಿದ್ದರು. ಬೆಳಿಗ್ಗೆ 9.30ರಿಂದ ಸಂಜೆ 4.30ರವರೆಗೆ ನಡೆದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯ ಜೊತೆಗೆ ನೈಜ ವ್ಯವಹಾರಿಕ ದತ್ತಾಂಶವನ್ನು ಬಳಸಿಕೊಂಡು Power BIಯ ಪ್ರಾಯೋಗಿಕ ಅನ್ವಯಗಳ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ದತ್ತಾಂಶವನ್ನು ಅರ್ಥಪೂರ್ಣ ಮಾಹಿತಿಯಾಗಿ ಪರಿವರ್ತಿಸಿ, ಅದರ ಆಧಾರದ ಮೇಲೆ ಚುರುಕಾದ ಮತ್ತು ಪರಿಣಾಮಕಾರಿ ವ್ಯವಹಾರಿಕ ನಿರ್ಧಾರಗಳನ್ನು ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಉಪಯುಕ್ತವಾಗಿತ್ತು.
ಶಿಕ್ಷಣ
Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.
ಶಿಕ್ಷಣ
Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್ಜಿಎಫ್ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.
-
ರಾಜಕೀಯ20 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಅಪರಾಧ21 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಮಂಗಳೂರು21 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ಕಾರ್ಯಕ್ರಮಗಳು21 hours agoPiligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
-
ಅಪರಾಧ21 hours agoBantwal-ಬಂಟ್ವಾಳ: 18 ತಿಂಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ
-
ನಿಧನ ವಾರ್ತೆ3 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಅಂತರ ರಾಜ್ಯ3 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಪರಾಧ2 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ


















