ಆರೋಗ್ಯ
Egg-ದಿನಕ್ಕೆ ಎಷ್ಟು ಮೊಟ್ಟೆ ತಿಂದರೆ ಲಾಭ ಗೊತ್ತೇ? ಏಮ್ಸ್ ತಜ್ಞ ವೈದ್ಯರ ಮಹತ್ವದ ಮಾಹಿತಿ ಇಲ್ಲಿದೆ..
ಮೊಟ್ಟೆ ಪೌಷ್ಟಿಕಾಂಶಗಳ ಗಣಿ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಎಷ್ಟು ಪ್ರಮಾಣದಲ್ಲಿ ಮೊಟ್ಟೆ ಸೇವಿಸಬೇಕು ಮತ್ತು ಅದನ್ನು ಯಾವ ರೀತಿ ಸೇವಿಸುವುದು ಆರೋಗ್ಯಕ್ಕೆ ಉತ್ತಮ ಎಂಬ ಗೊಂದಲ ಅನೇಕರಲ್ಲಿದೆ. ಈ ಬಗ್ಗೆ ಹಾರ್ವರ್ಡ್ ಮತ್ತು ಸ್ಟ್ಯಾನ್‌ಫೋರ್ಡ್‌ನಲ್ಲಿ ತರಬೇತಿ ಪಡೆದಿರುವ ಏಮ್ಸ್‌ನ ಖ್ಯಾತ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಉಪಯುಕ್ತ ಮಾಹಿತಿ ಹಂಚಿಕೊಂಡಿದ್ದಾರೆ.
ನವದೆಹಲಿ: ಮೊಟ್ಟೆ ಪೌಷ್ಟಿಕಾಂಶಗಳ ಗಣಿ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಎಷ್ಟು ಪ್ರಮಾಣದಲ್ಲಿ ಮೊಟ್ಟೆ ಸೇವಿಸಬೇಕು ಮತ್ತು ಅದನ್ನು ಯಾವ ರೀತಿ ಸೇವಿಸುವುದು ಆರೋಗ್ಯಕ್ಕೆ ಉತ್ತಮ ಎಂಬ ಗೊಂದಲ ಅನೇಕರಲ್ಲಿದೆ. ಈ ಬಗ್ಗೆ ಹಾರ್ವರ್ಡ್ ಮತ್ತು ಸ್ಟ್ಯಾನ್‌ಫೋರ್ಡ್‌ನಲ್ಲಿ ತರಬೇತಿ ಪಡೆದಿರುವ ಏಮ್ಸ್‌ನ ಖ್ಯಾತ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಉಪಯುಕ್ತ ಮಾಹಿತಿ ಹಂಚಿಕೊಂಡಿದ್ದಾರೆ.
ದಿನಕ್ಕೆ ಎಷ್ಟು ಮೊಟ್ಟೆ ಸುರಕ್ಷಿತ?
ಡಾ. ಸೌರಭ್ ಸೇಠಿ ಅವರ ಪ್ರಕಾರ, ಒಬ್ಬ ವ್ಯಕ್ತಿ ದಿನಕ್ಕೆ 1 ರಿಂದ 2 ಮೊಟ್ಟೆಗಳನ್ನು ಸೇವಿಸುವುದು ಅತ್ಯಂತ ಸುರಕ್ಷಿತ. ಇದು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುವ ಜೊತೆಗೆ ಆರೋಗ್ಯವನ್ನು ವೃದ್ಧಿಸುತ್ತದೆ. ಅತಿಯಾದ ಸೇವನೆಯು ಲಾಭಕ್ಕಿಂತ ಹಾನಿಯೇ ಹೆಚ್ಚು ಎಂದು ಅವರು ಎಚ್ಚರಿಸಿದ್ದಾರೆ.
ಹಸಿ ಮೊಟ್ಟೆಗಿಂತ ಬೇಯಿಸಿದ ಮೊಟ್ಟೆಯೇ ಲೇಸು!
ಅನೇಕರು ಶಕ್ತಿಗಾಗಿ ಹಸಿ ಮೊಟ್ಟೆಯನ್ನು ಸೇವಿಸುತ್ತಾರೆ. ಆದರೆ ಇದು ಅಪಾಯಕಾರಿ ಎನ್ನುತ್ತಾರೆ ಡಾ. ಸೇಠಿ. ಹಸಿ ಮೊಟ್ಟೆಯಲ್ಲಿ ‘ಸಾಲ್ಮನೆಲ್ಲಾ’ ಎನ್ನುವ ಬ್ಯಾಕ್ಟೀರಿಯಾ ಸೋಂಕಿನ ಅಪಾಯವಿರುತ್ತದೆ. ಅಲ್ಲದೆ, ಹಸಿ ಮೊಟ್ಟೆಗಿಂತ ಬೇಯಿಸಿದ ಮೊಟ್ಟೆಯಲ್ಲಿರುವ ಪ್ರೋಟೀನ್ ಅನ್ನು ನಮ್ಮ ದೇಹವು ಸುಲಭವಾಗಿ ಮತ್ತು ಸಂಪೂರ್ಣವಾಗಿ ಹೀರಿಕೊಳ್ಳುತ್ತದೆ. ಆದ್ದರಿಂದ ಯಾವಾಗಲೂ ಬೇಯಿಸಿದ ಮೊಟ್ಟೆಗಳನ್ನೇ ಸೇವಿಸಿ.
ಮೊಟ್ಟೆಯಲ್ಲಿದೆ ಪೋಷಕಾಂಶಗಳ ಖಜಾನೆ:
ಮೊಟ್ಟೆಯು ಒಂದು ‘ಸೂಪರ್ ಫುಡ್’. ಇದರಲ್ಲಿ ಒಂಬತ್ತು ಅಗತ್ಯ ಅಮೈನೋ ಆಮ್ಲಗಳಿದ್ದು, ಇದು ಸ್ನಾಯುಗಳ ಬೆಳವಣಿಗೆಗೆ ಸಹಕಾರಿ. ಜಿಮ್‌ಗೆ ಹೋಗುವವರಿಗೆ ಇದು ಅತ್ಯುತ್ತಮ ಆಹಾರವಾಗಿದೆ. ಇದಲ್ಲದೆ ಮೊಟ್ಟೆಯಲ್ಲಿ:
ವಿಟಮಿನ್‌ಗಳು: ಎ, ಡಿ, ಇ, ಬಿ12 ಸಮೃದ್ಧವಾಗಿದೆ.
ಖನಿಜಗಳು: ಕಬ್ಬಿಣ, ಸೆಲೆನಿಯಮ್ ಮತ್ತು ರಂಜಕದ ಅಂಶಗಳಿವೆ.
ಆರೋಗ್ಯದ ಮೇಲಾಗುವ ಪ್ರಯೋಜನಗಳು:
ಕಣ್ಣಿನ ಆರೋಗ್ಯ: ಮೊಟ್ಟೆಯ ಹಳದಿ ಭಾಗದಲ್ಲಿರುವ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಎಂಬ ಉತ್ಕರ್ಷಣ ನಿರೋಧಕಗಳು ಕಣ್ಣಿನ ಪೊರೆ ಮತ್ತು ವಯಸ್ಸಿಗೆ ಸಂಬಂಧಿಸಿದ ದೃಷ್ಟಿ ದೋಷಗಳನ್ನು ತಡೆಯುತ್ತವೆ.
ಹೃದಯದ ಆರೋಗ್ಯ: ಸಂಶೋಧನೆಗಳ ಪ್ರಕಾರ, ಮೊಟ್ಟೆ ಸೇವನೆಯು ದೇಹದಲ್ಲಿ “ಒಳ್ಳೆಯ” ಕೊಲೆಸ್ಟ್ರಾಲ್ (HDL) ಅನ್ನು ಹೆಚ್ಚಿಸುತ್ತದೆ. ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ತೂಕ ನಿರ್ವಹಣೆ: ಸರಿಯಾದ ಪ್ರಮಾಣದ ಮೊಟ್ಟೆ ಸೇವನೆಯು ತೂಕ ಇಳಿಸಲು ಮತ್ತು ಸ್ನಾಯುಗಳ ಬಲವರ್ಧನೆಗೆ ಪೂರಕವಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಮೊಟ್ಟೆ ಆರೋಗ್ಯಕ್ಕೆ ವರದಾನ. ಆದರೆ ಅದನ್ನು ಮಿತವಾಗಿ ಮತ್ತು ಸರಿಯಾದ ರೀತಿಯಲ್ಲಿ (ಬೇಯಿಸಿ) ಸೇವಿಸುವುದು ಮುಖ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.
ಹೃದಯದ ಆರೋಗ್ಯಕ್ಕೆ ಉತ್ತಮ
ಮೊಟ್ಟೆಗಳು “ಉತ್ತಮ” ಕೊಲೆಸ್ಟ್ರಾಲ್ (HDL) ಅನ್ನು ಹೆಚ್ಚಿಸುತ್ತವೆ ಎಂದು ಸಂಶೋಧನೆ ಸೂಚಿಸುತ್ತದೆ. ಇದು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಮೊಟ್ಟೆ ತಿನ್ನುವುದು ಉತ್ತಮ. ಆದರೆ ಅತಿಯಾದ ಸೇವನೆ ಬೇಡ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized20 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್14 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು18 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ18 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized18 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ19 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ18 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್19 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















