ಮಂಗಳೂರು
Kapila Goshala-ಗೋ ಕಳ್ಳತನದ ದೂರು ಕೊಟ್ಟ ಕಪಿಲಾ ಗೋಶಾಲೆಯ ಪ್ರಕಾಶ್ ಶೆಟ್ಟಿಗೆ ಕೆಲವು ಸೂಚನೆಗಳನ್ನು ಕಡ್ಡಾಯ ಪಾಲಿಸಲು ನೊಟೀಸ್ ಕೊಟ್ಟ ಪೊಲೀಸ್ ಇಲಾಖೆ..! ಏನೇನಿದೆ ನೊಟೀಸ್ ನಲ್ಲಿ..?
ಕೆಂಜಾರು ಗ್ರಾಮದ ಕಪಿಲಾ ಪಾರ್ಕ್ ಗೋಶಾಲೆಯಲ್ಲಿ ನಡೆದಿದೆ ಎನ್ನಲಾದ ಗೋಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಪ್ರಕಾಶ್ ಶೆಟ್ಟಿ ಅವರಿಗೆ ಬಜಪೆ ಪೊಲೀಸ್ ಇಲಾಖೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ
ಮಂಗಳೂರು (ಬಜಪೆ): ಕೆಂಜಾರು ಗ್ರಾಮದ ಕಪಿಲಾ ಪಾರ್ಕ್ ಗೋಶಾಲೆಯಲ್ಲಿ ನಡೆದಿದೆ ಎನ್ನಲಾದ ಗೋಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಪ್ರಕಾಶ್ ಶೆಟ್ಟಿ ಅವರಿಗೆ ಬಜಪೆ ಪೊಲೀಸ್ ಇಲಾಖೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ.
ಸುಮಾರು 750ಕ್ಕೂ ಹೆಚ್ಚು ದನಗಳನ್ನು ಹೊಂದಿರುವ ಗೋಶಾಲೆಯಲ್ಲಿ ಭದ್ರತಾ ಲೋಪಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ಪೊಲೀಸರು ಈ ಸೂಚನೆಗಳನ್ನು ನೀಡಿದ್ದಾರೆ.
ದನಗಳನ್ನು ಮೇಯಲು ಬಿಟ್ಟಾಗ ಕಳ್ಳರು ಅವುಗಳನ್ನು ಕದ್ದು ಕಡಿದು ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತಿರುವ ಪೊಲೀಸರು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಕೆಳಗಿನ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಆದೇಶಿಸಿದ್ದಾರೆ.
ನೋಟಿಸ್ನಲ್ಲಿರುವ ಪ್ರಮುಖ ಅಂಶಗಳು:
ಸಿಸಿಟಿವಿ ಅಳವಡಿಕೆ ಕಡ್ಡಾಯ: ಗೋಶಾಲೆಯ ಸುತ್ತಮುತ್ತ ಹಾಗೂ ದನಗಳು ಮೇಯಲು ಹೋಗಿ ಬರುವ ದಾರಿಗಳಲ್ಲಿ ತಕ್ಷಣವೇ ಉತ್ತಮ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.
ಕೆಲಸಗಾರರ ಸಂಖ್ಯೆ ಹೆಚ್ಚಳ: 750ಕ್ಕೂ ಹೆಚ್ಚು ದನಗಳ ನಿರ್ವಹಣೆಗೆ ಪ್ರಸ್ತುತ ಕೇವಲ ಇಬ್ಬರು ಕೆಲಸಗಾರರಿರುವುದು ಕಂಡುಬಂದಿದೆ. ಇದು ಭದ್ರತೆಯ ದೃಷ್ಟಿಯಿಂದ ಸಾಕಾಗುವುದಿಲ್ಲ. ಆದ್ದರಿಂದ ಕನಿಷ್ಠ 7 ಜನರನ್ನು ತಕ್ಷಣವೇ ನೇಮಿಸಿಕೊಳ್ಳಬೇಕು.
ಮೇಯಿಸುವಾಗ ಎಚ್ಚರ: ದನಗಳನ್ನು ಮೇಯಲು ಬಿಟ್ಟಾಗ ಕನಿಷ್ಠ ಇಬ್ಬರು ಸಿಬ್ಬಂದಿ ದನಗಳು ವಾಪಸ್ ಗೋಶಾಲೆಗೆ ಬರುವವರೆಗೆ ಅವುಗಳ ಜೊತೆಗಿದ್ದು ಕಾಯುವಂತೆ ನೋಡಿಕೊಳ್ಳಬೇಕು.
ಕೋಮು ಸೌಹಾರ್ದತೆ ಕಾಪಾಡುವುದು: ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಹತ್ಯೆ ವಿಚಾರವಾಗಿ ಈಗಾಗಲೇ ಹಲವು ಬಾರಿ ಕೋಮು ಗಲಭೆಗಳು ಸಂಭವಿಸಿವೆ. ಆದ್ದರಿಂದ ಸಮಾಜದ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಮಾಲೀಕರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ದೂರು ನೀಡಿದ ಬೆನ್ನಲ್ಲೇ ಪೊಲೀಸರು ಗೋಶಾಲೆಯ ನಿರ್ವಹಣೆಯ ಬಗ್ಗೆಯೂ ಗಂಭೀರವಾಗಿ ಪರಿಗಣಿಸಿದ್ದು, ಈ ನೋಟಿಸ್ ಈಗ ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿದೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಸ್ಥಳೀಯ41 minutes agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ2 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ2 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ















