ಕ್ರೈಂ
Dharwad-ಧಾರವಾಡ: ಯುವತಿ ಕೊಲೆ ಮಾಡಿ ನಾಪತ್ತೆ ನಾಟಕವಾಡಿದ್ದ ‘ಭಾವಿ ಪತಿ’ ಅಂದರ್
ನಗರದ ಹೊರವಲಯದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಎಂಬುವವರ ಮೃತದೇಹ ಪತ್ತೆಯಾದ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಈ ಕೊಲೆಯನ್ನು ಆಕೆಯನ್ನು ಮದುವೆಯಾಗಬೇಕಿದ್ದ ಪ್ರೇಮಿ ಸಾಬೀರ್ ಮುಲ್ಲಾನೇ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಧಾರವಾಡ: ನಗರದ ಹೊರವಲಯದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಎಂಬುವವರ ಮೃತದೇಹ ಪತ್ತೆಯಾದ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಈ ಕೊಲೆಯನ್ನು ಆಕೆಯನ್ನು ಮದುವೆಯಾಗಬೇಕಿದ್ದ ಪ್ರೇಮಿ ಸಾಬೀರ್ ಮುಲ್ಲಾನೇ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಪ್ರಕರಣದ ಹಿನ್ನೆಲೆ:
ಸಾಬೀರ್ ಮತ್ತು ಝಕಿಯಾ ಇಬ್ಬರೂ ಒಂದೇ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಗ ಪ್ರೀತಿಸುತ್ತಿದ್ದರು. ಇವರ ಪ್ರೇಮಕ್ಕೆ ಮನೆಯವರೂ ಸಮ್ಮತಿಸಿದ್ದರು. ಮುಂದಿನ ತಿಂಗಳು ಇಬ್ಬರ ನಿಶ್ಚಿತಾರ್ಥಕ್ಕೂ ದಿನಾಂಕ ನಿಗದಿಯಾಗಿತ್ತು. ಆದರೆ ಸಾಬೀರ್‌ಗೆ ಇತರ ಹುಡುಗಿಯರ ಜೊತೆಗೂ ನಿಕಟ ಸಂಬಂಧವಿತ್ತು ಎನ್ನಲಾಗಿದೆ. ಈ ವಿಷಯವಾಗಿ ಝಕಿಯಾ ಆತನನ್ನು ಪ್ರಶ್ನಿಸಿದ್ದರಿಂದ ಇಬ್ಬರ ನಡುವೆ ತೀವ್ರ ಮನಸ್ತಾಪ ಉಂಟಾಗಿತ್ತು. ಇದೇ ದ್ವೇಷದಲ್ಲಿ ಸಾಬೀರ್, ಝಕಿಯಾಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ.
ಹಂತಕನ ‘ಓವರ್ ಆಕ್ಟಿಂಗ್’ ಪೊಲೀಸರಿಗೆ ತಂದ ಅನುಮಾನ:
ಕೊಲೆ ಮಾಡಿದ ಬಳಿಕ ಆರೋಪಿ ಸಾಬೀರ್ ಅಕ್ಷರಶಃ ಸಿನಿಮಾ ಮಾದರಿಯಲ್ಲಿ ನಾಟಕವಾಡಿದ್ದಾನೆ. ಮೊದಲು ಶಹರ ಪೊಲೀಸ್ ಠಾಣೆಗೆ ಹೋಗಿ ಝಕಿಯಾ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದ. ಅಷ್ಟೇ ಅಲ್ಲದೆ, ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೇ ಕರೆ ಮಾಡಿ ಕೊಲೆಯ ಮಾಹಿತಿ ನೀಡಿದ್ದನು. ಪೊಲೀಸರು ಸ್ಥಳಕ್ಕೆ ಬಂದಾಗಲೂ ಏನೂ ಅರಿಯದವನಂತೆ ಅಲ್ಲಿಯೇ ಇದ್ದು ಹುಡುಕಾಟಕ್ಕೆ ಸಹಾಯ ಮಾಡುವಂತೆ ನಟಿಸಿದ್ದನು.
ಆದರೆ, ಘಟನಾ ಸ್ಥಳದಲ್ಲಿ ಆತನ ವಿಚಿತ್ರ ವರ್ತನೆ ಮತ್ತು ತಾಂತ್ರಿಕ ತನಿಖೆಯ ಆಧಾರದ ಮೇಲೆ ಪೊಲೀಸರಿಗೆ ಸಂಶಯ ಮೂಡಿದೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ಮಾಡಿರುವುದಾಗಿ ಸಾಬೀರ್ ಒಪ್ಪಿಕೊಂಡಿದ್ದಾನೆ. ಜ. 20ರಂದೇ ಈ ಹತ್ಯೆ ನಡೆದಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕೃತ್ಯದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















